Breaking News

Laxminews 24x7

ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಒಂಬತ್ತು ಗಂಟೆಯಿಂದ ನಿರಂತರವಾಗಿ ಶೋಧ ಮುಂದುವರಿದಿದೆ. ಕಾರ್ಯಕರ್ತರು ಶಾಸಕರ ಮನೆ ಮುಂದೆ ಜಮಾಯಿಸಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಕಾಂಗ್ರೆಸ್ನವರ ಮೇಲೆ ಮಾತ್ರ ದಾಳಿ ಆಗುತ್ತಿದೆ. ಬಿಜೆಪಿ ಅವರ ಮೇಲೆ ಯಾಕೆ ಇಡಿ ದಾಳಿ ಆಗಲ್ಲ ಅಂತ ಮಹಿಳಾ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. …

Read More »

‘ನನಗೂ ಒಳ್ಳೆಯ ಕಾಲ ಬರಲಿದೆ. ನಮ್ಮ ಅಧ್ಯಕ್ಷರನ್ನ ಭೇಟಿಯಾಗಲು ಬಂದಿದ್ದೆ.:ರಮೇಶ್​ ಜಾರಕಿಹೊಳಿ

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಜೆಡಿಎಸ್​ ಮತ್ತು ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರವನ್ನು ಕೆಳಗಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದ ರಮೇಶ್​ ಜಾರಕಿಹೊಳಿ ಇದೀಗ, ನನಗೂ ಒಳ್ಳೆಯ ಕಾಲ ಬರಲಿದೆ. ನಾನೀಗ ಪ್ರತಿ ದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ… ಎಂದಿದ್ದಾರೆ. ಬಿಎಸ್​ವೈ ಸಂಪುಟದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್​ ಜಾರಕಿಹೊಳಿ, ಸಚಿವ ಸ್ಥಾನ ಕಳೆದುಕೊಂಡರು. ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲೂ ಇವರಿಗೆ ಸ್ಥಾನ ಸಿಕ್ಕಿಲ್ಲ. ಇವರ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಅವಕಾಶ …

Read More »

ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್; ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆ ದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿಕೊಂಡಿದೆ. ಈ ಬಗ್ಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್​ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ. ಮೇಕೆದಾಟು ಯೋಜನೆ ವಿರೋಧಿಸಿ …

Read More »

ಟೀ ಶರ್ಟ್, ಬರ್ಮುಡಾ ಧರಿಸಿ ಮಧ್ಯರಾತ್ರಿ ಠಾಣೆಗೆ ಬಂದ ಪೊಲೀಸ್ ವರಿಷ್ಠಾಧಿಕಾರಿ; ಗುರುತು ತಿಳಿಯದೇ ಸಿಬ್ಬಂದಿ ತಬ್ಬಿಬ್ಬು

ತುಮಕೂರು: ಟೀ ಶರ್ಟ್, ಬರ್ಮುಡಾ ಧರಿಸಿ ಅಪರಿಚಿತ ದೂರುದಾರರಂತೆ ಪೊಲೀಸ್ ಠಾಣೆಗೆ ತೆರಳಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್, (Tumkur SP) ಠಾಣೆಯ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಹೊರವಲಯದ ಮಹಿಳಾ ಠಾಣೆ ಪರಿಶೀಲನೆ ನಡೆಸಿದ ಅವರ ವೇಶ ಭೂಷಣ ಗಮನಿಸಿ ದೂರುದಾರ ಎಂದೇ ಠಾಣೆಯ ಸಿಬ್ಬಂದಿ ಭಾವಿಸಿದ್ದರು. ಆದರೆ ಕೆಲಹೊತ್ತಿನ ಬಳಿಕ ಟೀ ಶರ್ಟ್ ಮತ್ತು ಬರ್ಮುಡಾ ಧರಿಸಿ ಬಂದವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಎಂದು ತಿಳಿದ ಪೊಲೀಸ್ …

Read More »

ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ.

ಬೆಂಗಳೂರು: ನೋಡುಗರ ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಅಹ್ಮದ್​ರ ಭವ್ಯ ಬಂಗಲೆ! ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಕಚೇರಿ, ಪ್ಲ್ಯಾಟ್​ಗಳು, ನಿವಾಸ ಸೇರಿ ಇತ್ತೀಚಿಗೆ ನಿರ್ಮಿಸಿದ್ದ ಐಷಾರಾಮಿ ಬಂಗಲೆ ಮೇಲೂ ಇಡಿ(ಜಾರಿ ನಿರ್ದೇಶನಾಲಯ) ದಾಳಿ ಮಾಡಿದೆ. ಈ ವೇಳೆ ಅವರ ಭವ್ಯ ಬಂಗಲೆಯ ಪೋಟೋಗಳು ವೈರಲ್​ ಆಗಿವೆ. ಕಂಟೊನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಇರುವ ಈ ಮನೆಯನ್ನು ಅರೇಬಿಯನ್‌ ಶೈಲಿಯಲ್ಲಿ ನಿರ್ಮಿಸಲಾಗಿದ್ದು, ಚಿನ್ನದ ಬಣ್ಣ …

Read More »

ಬಿಜೆಪಿಗೆ ಸೇರ್ಪಡೆಯಾದ ಬಿಎಸ್ ಪಿ ಶಾಸಕ ಎನ್.ಮಹೇಶ್: ಸಚಿವ ಸ್ಥಾನದ ಸುಳಿವು ನೀಡಿದ ಬಿಎಸ್ ವೈ

ಬೆಂಗಳೂರು: ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಹೇಶ್ ಚಳುವಳಿಯ ಹಿನ್ನೆಲೆಯಿಂದ ಬಂದವರು. ಅವರ ಸಂಘಟನಾ ಶಕ್ತಿ ಬಹು ದೊಡ್ಡದು. ಅವರು ಶಾಸಕರಾಗುವ ಮುನ್ನವೇ ದಲಿತರ ಹೃದಯ ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ …

Read More »

ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದವರಿಗೆ ಬಿಗ್ ಶಾಕ್: 1817 ಪೊಲೀಸ್ ಸಿಬ್ಬಂದಿ ಎತ್ತಂಗಡಿ

ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ. ಒಂದೇ ಕಡೆ ಇದ್ದು ಹಿಡಿತ ಸಾಧಿಸಿದವರನ್ನು ಎತ್ತಂಗಡಿ ಮಾಡಲಾಗಿದೆ. 1817 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. 127 ಪಿಎಸ್‌ಐ, 130 ಎಸ್‌ಎಸ್‌ಐ, 999 ಹೆಡ್ ಕಾನ್ಸ್ಟೇಬಲ್, 561 ಕಾನ್ಸ್ಟೇಬಲ್ ಸೇರಿದಂತೆ 1817 ಸಿಬ್ಬಂದಿಯನ್ನು …

Read More »

ಇನ್ನು ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ …

Read More »

ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ …

Read More »

ಶಾಸಕ ಜಮೀರ್ ಗೆ ಐಟಿ ಶಾಕ್ ಬೆನ್ನಲ್ಲೇ ಮಾಜಿ ಸಚಿವ ರೋಷನ್ ಬೇಗ್ ಗೆ ಇಡಿ ಬಿಗ್ ಶಾಕ್

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಾಜಿನಗರದ ರೋಷನ್ ಬೇಗ್ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಎಂಎ ಅವ್ಯವಹಾರ, ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಿ.ಆರ್.ಪಿ.ಎಫ್. ಭದ್ರತೆಯೊಂದಿಗೆ ಇಡಿ ದಾಳಿ ನಡೆಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬಿಜೆಪಿ ಮುಖಂಡ ರೋಷನ್ …

Read More »