Breaking News

Laxminews 24x7

ಅಂಬಾನಿ’, ‘ಆರ್‌ಎಸ್‌ಎಸ್-ಸಂಬಂಧಿತ ವ್ಯಕ್ತಿ’ಯಿಂದ ನನಗೆ 300 ಕೋಟಿ ರೂ. ಲಂಚದ ಆಮಿಷ ಒಡ್ಡಲಾಗಿತ್ತು: ಸತ್ಯಪಾಲ್ ಮಲಿಕ್

ನವದೆಹಲಿ: ತಾವು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ವೇಳೆ “ಅಂಬಾನಿ” ಮತ್ತು “ಆರ್ ಎಸ್‌ಎಸ್-ಸಂಬಂಧಿತ ವ್ಯಕ್ತಿ”ಗೆ ಸೇರಿದ ಎರಡು ಕಡತಗಳನ್ನು ಪಾಸ್ ಮಾಡಿದರೆ 300 ಕೋಟಿ ರೂಪಾಯಿ ಲಂಚ ನೀಡುವುದಾಗಿ ಹೇಳಿದ್ದರು. ಆದರೆ ನಾನು ಆ ಡೀಲ್ ರದ್ದುಗೊಳಿಸಿದೆ ಎಂದು ಕಣಿವೆ ರಾಜ್ಯದ ಮಾಜಿ ರಾಜ್ಯಪಾಲ ಹಾಗೂ ಹಾಲಿ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಗುರುವಾರ ಹೇಳಿದ್ದಾರೆ. ಡೀಲ್ ಮತ್ತು ಭ್ರಷ್ಟಾಚಾರದಲ್ಲಿ ರಾಜಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿರುವ ಮಲಿಕ್ ಅವರು, ತಮ್ಮ …

Read More »

ಗೂಂಡಾಗಿರಿ ಸಮರ್ಥನೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಹನಗಳ ಸಂಚಾರ ತಡೆದು ‌ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಕಾರರು, ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಮಂಗಳೂರಿನ ಮತೀಯ ಗೂಂಡಾಗಿರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು. ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಮಾತನಾಡಿ, …

Read More »

ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಧಾರವಾಡ: ಧಾರವಾಡ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಅಕ್ಟೋಬರ್ 24 ರಂದು ಮಧ್ಯಾಹ್ನ 12 ರಿಂದ 1.30 ಗಂಟೆಯ ವರೆಗೆ ಧಾರವಾಡ ನಗರದ ವಿವಿಧ 19 ಶಾಲಾ ಹಾಗೂ ಕಾಲೇಜುಗಳಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಾಲ್ಕು (4) ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಅಭ್ಯರ್ಥಿಗಳು ಮಾಸ್ಕ್ ಧರಿಸಿ, …

Read More »

ಡಿಕೆಶಿ ಹುಚ್ಚಾಸ್ಪತ್ರೆಗೆ ಸೇರಿದರೆ ಸರ್ಕಾರದಿಂದ ಉಚಿತ ಚಿಕಿತ್ಸೆ: ರಾಜೂ ಗೌಡ

ಹಾನಗಲ್ ನ ಗಡಿಯಂಕನಹಳ್ಳಿ ಫಾರ್ಮ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಹುಚ್ಚಾಸ್ಪತ್ರೆಗೆ ಭೇಟಿ ನೀಡ್ತೀವಿ ಅಂತ ಹೇಳಿದ್ದಾರೆ. ಅವರು ಭೇಟಿ ನೀಡಿದರೆ ಖಂಡಿತ ನಾವು ಹಣ್ಣು-ಹಂಪಲು ತಗೊಂಡು ನಾವು ಆರೋಗ್ಯ ವಿಚಾರಿಸಿ ಬರುತ್ತೇವೆ ಎಂದು ವ್ಯಂಗ್ಯವಾಡಿದರು. ಕೊರೊನಾಗೆ ಹೇಗೆ ಫ್ರೀ ಟ್ರೀಟ್ಮೆಂಟ್ ಕೊಟ್ಟಿದ್ರೋ ಅದೇ ರೀತಿ ಹುಚ್ಚಾಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸುವಂತೆ ಸಿಎಂಗೆ ಮನವರಿಕೆ, ಮನವಿ ಮಾಡುತ್ತೇವೆ. ಅಧ್ಯಕ್ಷರಾದ ಮೇಲೆ ಎಲ್ಲಾ ಚುನಾವಣೆ ಸೋತಿದ್ದಾರೆ. ಸೋತ …

Read More »

ಮಂಗಳೂರು; ಡಿಸಿಪಿ ವಾಹನದ ಮೇಲೆ ಲಾರಿ ಹತ್ತಿಸಿದ ಮರಳು ದಂಧೆಕೋರರು

ಮಂಗಳೂರು, ಅಕ್ಟೋಬರ್ 21; ಮಂಗಳೂರಿನಲ್ಲಿ ಮರಳು ಮಾಫಿಯಾ ಮತ್ತೆ ಹೆಡೆ ಎತ್ತಿದೆ. ಮರಳು ಲಾರಿಯನ್ನು ಹಿಡಿಯಲು ಹೋದ ಮಂಗಳೂರು ಡಿಸಿಪಿ ಕಾರಿನ ಮೇಲೆಯೇ ದಂಧೆಕೋರರು ಮರಳು ಲಾರಿ ಹತ್ತಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ಜಿಲ್ಲೆಯಲ್ಲಿ ಮರಳು ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದ್ದು, ದಂಧೆಕೋರರಿಗೆ ಲಗಾಮು ಇಲ್ಲದಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮರಳು ಮಾಫಿಯಾ ಬಾಲ ಬಿಚ್ಚಿದೆ. ಸಿಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ಅವಧಿ ಮುಗಿದರೂ ಮರಳು ದಂಧೆಕೋರರು …

Read More »

ಆರ್ಥರ್ ರಸ್ತೆ ಜೈಲಿನಲ್ಲಿ ಕಿಂಗ್ ಖಾನ್- ಆರ್ಯನ್ ಖಾನ್ ಮೊದಲ ಭೇಟಿ!

ಮುಂಬೈ ಅಕ್ಟೋಬರ್ 21: ಮುಂಬೈ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಖಾನ್‌ಗೆ ಅ.20ರಂದು ಜಾಮೀನು ಸಿಗದೆ ಮತ್ತೆ ಜೈಲುಪಾಲಾಗಿದ್ದಾರೆ. ಅಕ್ಟೋಬರ್ 8 ರಿಂದ ಜೈಲಿನಲ್ಲಿರುವ ತನ್ನ ಮಗ ಆರ್ಯನ್ ಖಾನ್ ಕಾಣಲು ಶಾರುಖ್ ಖಾನ್ ಇಂದು ಮುಂಬೈನ ಆರ್ಥರ್ ರಸ್ತೆ ಜೈಲಿಗೆ ಭೇಟಿ ನೀಡಿದರು. ಅಕ್ಟೋಬರ್ 2 ರಂದು ಮುಂಬೈನ ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ನಡೆಸಿದ ಬಳಿಕ …

Read More »

ಉಪಚುನಾವಣೆಗೂ ಮುನ್ನವೇ 2ಎ ಮೀಸಲಾತಿ ವರದಿ ಪಡೆಯಿರಿ: ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೆ ಮುನ್ನವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನವೇ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದು ರಾಜಕೀಯ ಒತ್ತಡ ಅಲ್ಲ. ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಹಾನಗಲ್ …

Read More »

ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ

ಸಿಂದಗಿ: ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಕೈಗೆ ಬಂದ ಬೆಳೆಗಳು ಒಣಗುತ್ತಿವೆ. ವಿದ್ಯುತ್ ನೀಡಿ ಇಲ್ಲವೆ, ಕ್ರೀಮಿನಾಶಕ ಸೇವಿಸಿ ಕಚೇರಿ ಎದುರು ಸಾಯುತ್ತೇವೆ ಎಂದು ತಾಲೂಕಿನ ಬ್ಯಾಕೋಡ, ಬನ್ನೆಟ್ಟಿ ಪಿ.ಎ. ಗ್ರಾಮದ ರೈತರು ಹೆಸ್ಕಾಂ ಕಚೇರಿಗೆ ಬೀಗ ಜಡಿದು, ಕೈಯಲ್ಲಿ ಕ್ರೀಮಿನಾಶಕ ಬಾಟಲ್ ಹಿಡಿದು ಗುರುವಾರ ಪಟ್ಟಣದ ಹೆಸ್ಕಾಂ ಉಪವಿಭಾಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಬಸವೇಶ್ವರ ವೃತ್ತದ ಮಾರ್ಗವಾಗಿ …

Read More »

ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ.

ಬೆಂಗಳೂರು: ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಕೆ. ಸುಧಾಕರ್ ಅಧಿಕಾರದ …

Read More »

ಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹಠಾತ್ ಬದಲಾವಣೆ, ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷ

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಗೂಳಪ್ಪ ಹೊಸಮನಿ ಅವರನ್ನು ಅಧ್ಯಕ್ಷಸ್ಥಾನದಿಂದ ಕಿತ್ತು ಹಾಕಲಾಗಿದ್ದು, ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷರಾಗಿದ್ದಾರೆ. ಮುಂದಿನ 3 ವರ್ಷಗಳವರೆಗೆ ಸಂಜಯ ಬೆಳಗಾಂವ್ಕರ್ ಬುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಗೂಳಪ್ಪ ಹೊಸಮನಿ ಅವರ ಬಗ್ಗೆ ಬೆಳಗಾವಿಯ ಬಿಜೆಪಿಯ ಇಬ್ಬರು ಶಾಸಕರೂ ತೀವ್ರ ಅಸಮಾಧಾನ ಹೊಂದಿದ್ದರು. ಇದೀಗ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಅಧ್ಯಕ್ಷರು ಯಾವ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದಾರೆ ಕಾದು ನೋಡಬೇಕಿದೆ.

Read More »