ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …
Read More »ಲಾಕ್‌ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್‌ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …
Read More »ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್‌ನ ಪೋರಬಂದರ್ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …
Read More »ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ.
ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …
Read More »ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ.
ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ. 52 ವರ್ಷದ ವಿಜಯಶ್ರೀ ನಾಗನೂರೆ ಸೋಂಕಿಗೆ ಬಲಿಯಾದ ಅಧಿಕಾರಿ. ಇವರು ಬೆಳಗಾವಿ ನಗರದ ಯಮನಾಪುರ ನಿವಾಸಿ. ವಿಜಯಶ್ರೀ ನಾಗನೂರೆಗೆ ಮೇ 3 ರಂದು ಕೊರೊನಾ ಸೋಂಕು ದೃಢವಾಗಿತ್ತು. ಕಳೆದ ಹನ್ನೆರಡು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 15) ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ವಿಜಯಶ್ರೀ ಸದ್ಯ …
Read More »BIG NEWS: 2 ತಿಂಗಳು ಕರುನಾಡಿಗೆ ಬೀಳುತ್ತಾ ಬೀಗ.?
ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ 2 ತಿಂಗಳ ಕಾಲ ಲಾಕ್ ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ನಡೆಯಲಿರುವ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಲಿದೆ. ಕೊರೊನಾ ನಿಯಂತ್ರಣಕ್ಕೆ 6-8 ವಾರಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಜಾರಿ ಅಗತ್ಯವಿದೆ ಎಂದು ಐಸಿಎಂಆರ್ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಟಾಸ್ಕ್ ಫೋರ್ಸ್ …
Read More »ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನೇ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸೇರಿದ್ದು ಎನ್ನಲಾದ ಸಿಡಿ, ರಮೇಶ್ ರಾಜಕೀಯ ಜೀವನದಲ್ಲೇ ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿ ವಿವಾದದ ಬಳಿಕ ರಮೇಶ್ ತಮ್ಮ ಖಾತೆಗೆ ರಾಜೀನಾಮೆ ನೀಡಿದ್ದು ಮಾತ್ರವಲ್ಲದೇ ಜಿಲ್ಲಾ ಉಸ್ತುವಾರಿ ಸ್ಥಾನದಿಂದಲೂ ಕೆಳಗಿಳಿದಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಕೆಳಗೆ ಇಳಿದಿದ್ದರೂ ಸಹ ರಮೇಶ್ ಜಾರಕಿಹೊಳಿ ಖದರ್ ಕಡಿಮೆಯಾದಂತೆ ಕಾಣುತ್ತಿಲ್ಲ. ಗೋಕಾಕ್ನ ಗೃಹ ಕಚೇರಿಗೆ ಜಿಲ್ಲಾಧಿಕಾರಿ ಹಾಗೂ ಡಿಹೆಚ್ಓರನ್ನ ಕರೆಸಿಕೊಂಡ …
Read More »ಕೊಪ್ಪಳ ಜಿಲ್ಲೆ 5 ದಿನ ಕಂಪ್ಲೀಟ್ ಲಾಕ್ ಡೌನ್
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿದೆ. ಆದರೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮೇ 17ರಿಂದ ಐದು ದಿನ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಅಗತ್ಯ …
Read More »ಸರಕಾರ ತಪಾಸಣೆ ಕಡಿಮೆಗೊಳಿಸಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ ಎನ್ನುತ್ತಿದೆ: ಎಂ.ಬಿ.ಪಾಟೀಲ್ ಆರೋಪ
ಬೆಂಗಳೂರು, ಮೇ 15: ರಾಜ್ಯದಲ್ಲಿ ಕೊರೋನ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರಕಾರ ಮೌಖಿಕ ಆದೇಶದ ಮೂಲಕ ತಪಾಸಣೆಗಳನ್ನು ಕಡಿಮೆಗೊಳಿಸಲಾಗಿದೆ. ಕರ್ನಾಟಕದಲ್ಲಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಅಂಕಿ ಅಂಶಗಳ ತೋರಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯದ ಸ್ಥಿತಿಯನ್ನು ತೀರ ಗಂಭೀರವಾಗಿಸುವತ್ತ ಸರಕಾರದ ಮುನ್ನಡೆದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಪ್ರಕರಣಗಳು …
Read More »ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬದ ಎಲ್ಲರಿಗೂ ಕೊರೊನಾ ಸೋಂಕು
ಮೈಸೂರು, : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದು, ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ …
Read More »
Laxmi News 24×7