Breaking News

Laxminews 24x7

ಬೆಳಗಾವಿ :ಚಿನ್ನ ಎಗರಿಸಿದ ಪ್ರಕರಣದ ಕಿಂಗ್ ಪಿನ್ ಕಿರಣ್ ಮೇಲೆ ಮತ್ತೊಂದು ದೂರು ದಾಖಲು

ಬೆಳಗಾವಿ: ಪೊಲೀಸ್ ಎಂದು ನಕಲಿ ಗುರುತಿನ ಚೀಟಿ ಇಟ್ಟುಕೊಂಡು ತಿರುಗಾಡುತ್ತಿದ್ದ ಕಿರಣ ವೀರನಗೌಡ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ಸಿಐಡಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯ ಚಿನ್ನ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಕಿರಣ ವೀರನಗೌಡ ಖೊಟ್ಟಿ ದಾಖಲೆ ಸೃಷ್ಟಿಸಿ ಪೊಲೀಸ್ ಆಗಿರುವ ಬಗ್ಗೆ ನಕಲಿ ಗುರುತಿನ ಚೀಟಿ ಇಟ್ಟುಕೊಂಡಿದ್ದನು ಎಂದು ದೂರು ದಾಖಲಾಗಿದೆ.   ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯಲ್ಲಿ ತಿರುಗಾಡುವಾಗ …

Read More »

ಪುಣೆಯ ಕಾರ್ಖಾನೆಯಲ್ಲಿ ಬೆಂಕಿ ಅವಘಡಕ್ಕೆ 18 ಮಂದಿ ಬಲಿ

ಪುಣೆ: ಇಲ್ಲಿನ ಮುಲ್ಶಿ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಢದಲ್ಲಿ 15 ಮಂದಿ ಮಹಿಳೆಯರು ಸೇರಿ 18 ಜನರು ಮೃತಪಟ್ಟಿದ್ದಾರೆ. ಪಿರಂಗುಟ್ ಗ್ರಾಮದಲ್ಲಿರುವ ‘ಎಸ್‌ವಿಎಸ್‌ ಅಕ್ವಾ ಟೆಕ್ನಾಲಜೀಸ್’ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸುಮಾರು 20 ಮಂದಿ ಪಾರಾಗಿದ್ದಾರೆ. ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಂಕಿಯಿಂದಾಗಿ ವಾತಾವರಣವನ್ನು ದಟ್ಟ ಹೊಗೆ ಆವರಿಸಿತ್ತು. ಸ್ಥಳಕ್ಕೆ ಪುಣೆ ಜಿಲ್ಲಾಧಿಕಾರಿ …

Read More »

ರಾಜಕೀಯ ಮಾತು ನಿಲ್ಲಿಸಿ ಕೆಲಸ ಮಾಡಿ: ಸ್ವಪಕ್ಷಿಯರ ಮೇಲೆ ಬಿಎಸ್‌ವೈ ಸಿಡಿಮಿಡಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸ್ವಪಕ್ಷೀಯರ ಮೇಲೆಯೇ ಸಿಡಿಮಿಡಿಗೊಂಡಿದ್ದಾರೆ. ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು …

Read More »

ಸಿಎಂ ಯಡಿಯೂರಪ್ಪ ಕಿಡಿ ಕಾರಿರುವ ‘ಮಠ’ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್

ಬೆಂಗಳೂರು : ಫೇಸ್ ಬುಕ್ ಲೈವ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಯಡಿಯೂರಪ್ಪ ಕಿಡಿ ಕಾರಿರುವ ‘ಮಠ’ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್. ಇಂದು ಅವರು, ಮಹಾಮಾರಿ ಕೋವಿಡ್ ವೈರಸ್​ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ‘ಯಡಿಯೂರಪ್ಪ ಇಂದು ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರು ಅವರ ಮಗನ, ವಂಶದ ಸೇವೆ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಸಾವಿರಾರು ಜನರು ಸತ್ತಿದ್ದಾರೆ. ನಿಮಗೆ …

Read More »

ವಧು ಯಾಮಿಯನ್ನ ರಾಧೆ ಮಾಗೆ ಹೋಲಿಸಿದ ನಟ – ಚಪ್ಪಲಿ ಕೇಳಿದ ಕಂಗನಾ

ಮುಂಬೈ: ವಧು ಯಾಮಿ ಗೌತಮಿಯನ್ನ ರಾಧೆ ಮಾಗೆ ನಟ ವಿಕ್ರಾಂತ್ ಮೆಸ್ಸಿ ಹೋಲಿಕೆ ಮಾಡಿದ್ದಕ್ಕೆ ನಟಿ ಕಂಗನಾ ರಣಾವತ್ ಕೆಂಡಾಮಂಡಲವಾಗಿದ್ದಾರೆ. ನಟನ ಕಮೆಂಟ್ ಗೆ ರಿಪ್ಲೈ ಮಾಡಿರುವ ಕಂಗನಾ, ನನ್ನ ಚಪ್ಪಲಿ ಕೊಡು ಎಂದು ಕಮೆಂಟ್ ಮಾಡಿದ್ದಾರೆ. ಜೂನ್ 4ರಂದು ಯಾಮಿ ಹಿಮಾಚಲ ಪ್ರದೇಶದಲ್ಲಿ ಉರಿ ಚಿತ್ರದ ನಿರ್ದೇಶಕ, ರೈಟರ್ ಆದಿತ್ಯ ಅವರ ಜೊತೆ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದರು. ಕೊರೊನಾ ಹಿನ್ನೆಲೆ ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿತ್ತು. ಫೋಟೋಗಳು …

Read More »

ರಾಜ್ಯಗಳಿಗೂ ಕೇಂದ್ರದಿಂದಲೇ ಪೂರೈಕೆ: ಪ್ರಧಾನಿ ಮೋದಿ

ನವದೆಹಲಿ: ಲಸಿಕೆ ವಿತರಣೆ ಸಂಬಂಧ ಮತ್ತೊಂದು ಮಹತ್ವದ ಹೆಜ್ಜೆ ಇಡುವ ಮೂಲಕ ಲಸಿಕೆ ವಿರುದ್ಧ ನಡೆಯುತ್ತಿರುವ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ಜೂ. 21ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಮಹತ್ವದ ನಿರ್ಧಾರದ ಕುರಿತು ತಿಳಿಸಿದ್ದು, ಈ ಮೊದಲು ಲಸಿಕೆ ವಿತರಣೆ ಸಂಬಂಧ ರಾಜ್ಯಗಳಿಗೆ ಶೇ. 50 ಜವಾಬ್ದಾರಿ ವಹಿಸಲಾಗಿತ್ತು. ಆದರೆ ಲಸಿಕೆ …

Read More »

ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಣೆಯ ಸಾಧ್ಯತೆ : ಬಿ.ಸಿ.ಪಾಟೀಲ

ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಈ ರೀತಿಯ ಘೋಷಣೆಯ ಸಾಧ್ಯತೆ ಕುರಿತು ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳಗಾವಿ ದೊಡ್ಡ …

Read More »

ಕೊರೊನಾ ಸೋಂಕಿಗೆ ಕಣ್ಮರೆಯಾದ ವಿದ್ಯಾಧರ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ

ಬೆಳಗಾವಿ: ಕವಲೆದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಷ ಬ್ರ ಡಾ.ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕೊರೊನಾ ಸೊಂಕಿಗೆ ತುತ್ತಾಗಿದ್ದು, ಇಹಲೋಕತ್ಯಜಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಆಧ್ಯಾತ್ಮ ಪರಂಪರೆ ಜಗತ್ತಿನಲ್ಲಿಯೇ ಅನನ್ಯವಾದದ್ದು. ಮಠ-ಮಂದಿರಗಳು, ಸ್ವಾಮಿಗಳು ಈ ನಾಡಿನ ಜೀವ-ಜೀವಾಳ. ಅದರಲ್ಲೂ ವಿದ್ಯದ ಸ್ವಾಮಿಗಳು ಅಂದರೆ ಕವಲೆದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಷ ಬ್ರ …

Read More »

ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 11,958 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 27,07,481 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 340 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,920 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 27,299 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,36,716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,38,824 ಸಕ್ರಿಯ ಪ್ರಕರಣಗಳು ಇವೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಳಿಮುಖವಾಗಿದೆ. 199 ಮಂದಿ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 1992 ಜನರಿಗೆ …

Read More »

ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ : ಬಿ ಸಿ ಪಾಟೀಲ್

ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದಕ್ಕೂ ಮುನ್ನ ಈ ವಿಷಯ …

Read More »