Breaking News

Laxminews 24x7

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದು ಬಿಡಬೇಕು ಎಂದು ಸಚಿವ ಎಂ.ಬಿ ಪಾಟೀಲ್‌  ಒತ್ತಾಯಿಸಿದರು. ವಿಜಯಪುರದ  ಆಲಮಟ್ಟಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಮಂತರು ಗ್ಯಾರಂಟಿ  ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎನ್ನುವ ಡಿಕೆ ಸುರೇಶ್‌ ಹೇಳಿಕೆಯನ್ನ ಸಮರ್ಥಿಸಿಕೊಂಡರು. ಸ್ವಯಂ ಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ ಯೋಜನೆ ಲಾಭ ಪಡೆಯೋದು ಬಿಡಬೇಕು ಅಂತ ನಾನೂ ಒತ್ತಾಯಿಸುತ್ತೇನೆ ಎಂದರು. ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು. ಅರ್ಹ ಬಿಪಿಎಲ್ ಕುಟುಂಬದವರು ಗ್ಯಾರಂಟಿ …

Read More »

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

ಮೈಸೂರು: ಹಳೇ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ  ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸೋದರ ಮಾವ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನಲೆ ನೀನು ಓದಬಾರದು ಅಂತ ಹಲ್ಲೆ ಮಾಡಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ …

Read More »

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

ಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದಿಂದಾಗಿಮಧ್ಯ ಪ್ರಾಚ್ಯದಲ್ಲಿ ಸಿಲುಕಿರೋ ಕರ್ನಾಟಕದವರ ರಕ್ಷಣೆಗೆ ಕರ್ನಾಟಕ ಸರ್ಕಾರ ಕ್ರಮವಹಿಸಿದೆ ಅಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ  ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರು ಆತಂಕವಾಗೋದು ಬೇಡ. ರಾಜ್ಯ ಸರ್ಕಾರ ಕೇಂದ್ರ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದೆ. ಎಲ್ಲರ ರಕ್ಷಣೆಗೂ ಕ್ರಮ ತೆಗೆದುಕೊಳ್ಳಲಿದೆ ಎಂದು ಅಭಯ ನೀಡಿದರು. ಶನಿವಾರದಿಂದಲೇ ಸಹಾಯವಾಣಿ ಪ್ರಾರಂಭ ಮಾಡಲಾಗಿದೆ. ಈವರೆಗೂ 109 ಜನ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಈಗಾಗಲೇ …

Read More »

ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಕೇಸ್ – ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಅಮಾನತು

ಹಾವೇರಿ: ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪತೋರಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ  ಅಮಾನತುಗೊಳಿಸಿದೆ. ಶನಿವಾರ  ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೇಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ `ಪಬ್ಲಿಕ್ ಟಿವಿ’ ಸುದ್ದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಶಿಕ್ಷಣ ಇಲಾಖೆ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ …

Read More »

ಚನ್ನಮ್ಮ ಸಮಾಧಿ ಉದ್ಘಾಟನೆ ವಿವಾದ: ಮಾ.9ರಂದು ಬೈಲಹೊಂಗಲ ಬಂದ್

ಬೈಲಹೊಂಗಲ: ‘ವೀರರಾಣಿ ಕಿತ್ತೂರು ಚನ್ನಮ್ಮ ನವಿಕೃತ ಸಮಾಧಿ ಸ್ಥಳ ಹಾಗೂ ಉದ್ಯಾನವನ್ನು ಯಾರಿಗೂ ತಿಳಿಸದೆ ತರಾತುರಿಯಲ್ಲಿ ಉದ್ಘಾಟನೆ ಮಾಡಿರುವ ಶಾಸಕ ಮಹಾಂತೇಶ ಕೌಜಲಗಿ ಅವರ ನಡೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆ, ರೈತ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನಾಡಿನ ಹಿರಿಯರು, ಮುಖಂಡರ ನೇತೃತ್ವದಲ್ಲಿ ಮಾ.9ರಂದು ಬೈಲಹೊಂಗಲ ಸಂಪೂರ್ಣ ಬಂದ್ ಕರೆ ನೀಡಲಾಗಿದೆ’ ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು. ನಗರದ ವಿದ್ಯಾನಗರದ ಅವರ ಗೃಹ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿ …

Read More »

ನಿಪ್ಪಾಣಿ: ಸರ್ಕಾರಿ ಕಚೇರಿಗಳಿಗೆ ಬೇಕಿದೆ ಸ್ವಂತ ಕಟ್ಟಡ!

ನಿಪ್ಪಾಣಿ: ಗಡಿಭಾಗದ ನಿಪ್ಪಾಣಿಯು ತಾಲ್ಲೂಕು ಕೇಂದ್ರವಾಗಿ ರಚನೆಯಾಗಿ ಎಂಟು ವರ್ಷವಾಗಿದೆ. ಆದರೆ, ಕೆಲವೇ ಇಲಾಖೆಗಳ ಕಚೇರಿಗಳಷ್ಟೇ ಕಾರ್ಯಾರಂಭ ಮಾಡಿವೆ. ವಿವಿಧ ಇಲಾಖೆಗಳ ಕಚೇರಿಗಳು ಇನ್ನೂ ಬಾರದ್ದರಿಂದ ಜನರ ಪರದಾಟ ಮುಂದುವರಿದಿದೆ. ಸರ್ಕಾರಿ ಕೆಲಸಗಳು, ದಾಖಲೆಗಾಗಿ ಹಳೇ ತಾಲ್ಲೂಕಾದ ಚಿಕ್ಕೋಡಿಗೆ ಅಲೆದಾಡಬೇಕಿದೆ. ಈಗ ನಿಪ್ಪಾಣಿಯಲ್ಲಿ ಕೆಲಸ ಮಾಡುತ್ತಿರುವ ವಿವಿಧ ಇಲಾಖೆಗಳ ಕಚೇರಿಗಳಿಗೆ ಸ್ವಂತ ಕಟ್ಟಡ ಇಲ್ಲದ್ದರಿಂದ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ಅಲ್ಲಿ ಹೇಳಿಕೊಳ್ಳುವಂಥ ಸೌಕರ್ಯಗಳಿಲ್ಲ. ಮೂರು ದಶಕಗಳಿಂದ ಪ್ರವಾಸಿ ಮಂದಿರದಲ್ಲಿದ್ದ ಉಪ …

Read More »

ಬೆಳಗಾವಿ: ಸರ್ಕಾರಿ ಕಟ್ಟಡಗಳು ಹಾವು, ಚೇಳುಗಳಿಗೆ ಮೀಸಲು

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಹಲವು ಸರ್ಕಾರಿ ಕಟ್ಟಡಗಳು ಖಾಲಿ ಬಿದ್ದಿವೆ. ಮಾತ್ರವಲ್ಲ; ಹಲವು ಕಟ್ಟಡಗಳು ಹೊಸದಾಗಿ ನಿರ್ಮಿಸಿದ್ದರೂ ಉದ್ಘಾಟನೆ ಕಾಣದೇ ಜೇಡು ತಿನ್ನುತ್ತಿವೆ. ಇದಕ್ಕೆ ತದ್ವಿರುದ್ಧವಾಗಿ ಸರ್ಕಾರಿ ಕಚೇರಿಗಳು, ಶಾಲೆಗಳು, ಗ್ರಂಥಾಲಯ, ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಸರ್ಕಾರ ಒಂದೆಡೆ ತನ್ನದೇ ಕಟ್ಟಡಗಳನ್ನು ಪಾಳುಗೆಡವಿ ಇನ್ನೊಂದೆಡೆ ಬಾಡಿಗೆ ಕಟ್ಟಡಗಳನ್ನು ಆಶ್ರಯಿಸುತ್ತಿದೆ. ಒಂದೆಡೆ ವ್ಯರ್ಥ, ಇನ್ನೊಂದೆಡೆ ದುಂದುವೆಚ್ಚಕ್ಕೆ ಅಧಿಕಾರಿಗಳು ಕಾರಣವಾಗಿದ್ದಾರೆ. ಬೆಳಗಾವಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿದ ಕಲಾ ಮಂದಿರ ಉದ್ಘಾಟನೆಯಾಗಿ …

Read More »

ಭಾವಪೂರ್ಣ ಶ್ರದ್ಧಾಂಜಲಿ

ಶ್ರೀಮಠದ ಹಿರಿಯ ಸ್ವಾಮಿಜಿಗಳು, ಸುಕ್ಷೇತ್ರ ತವಗಮಠ) ಗೋಕಾಕ ತಾಲೂಕಿನ ಸುಕ್ಷೇತ್ರ ತವಗ ಮಠದ ಬ್ರಹ್ಮಶ್ರೀ ಶ್ರೀ ಸಿದ್ದಲಿಂಗಯ್ಯ ತವಗಮಠ ಮಹಾಸ್ವಾಮಿಜಿಗಳು ಇಂದು ಸೋಮವಾರ ದಿ. 2.3.2026.ರಂದು ಬೆಳಗಿನ ಜಾವ ಹೃದಯಾಘಾತ ದಿಂದ ಲಿಂಗಕ್ಯರಾಗಿದ್ದು ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಶ್ರೀಮಠದ ಅಪಾರ ಭಕ್ತಾಧಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಭಗವಂತನಲ್ಲಿ ಪ್ರಾರ್ಥನೆ..

Read More »

ಮದ್ಯ ಮಾರಾಟ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ: ಹೋಳಿ ಹಾಗೂ ರಂಗಪಂಚಮಿ ಹಬ್ಬ-2026 ರ ಅಂಗವಾಗಿ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (1) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಅನುಬಂಧದಲ್ಲಿ ನಮೂದಿಸಲಾದ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಬೇರೆ ಬೇರೆ ದಿವಸಗಳಂದು ರಂಗಪಂಚಮಿಯನ್ನು ಆಚರಿಸಲಾಗುತ್ತದೆ. …

Read More »

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ: ಕೇಸ್ ದಾಖಲಿಸಿದ ಮಾರಿಹಾಳ ಠಾಣೆ ಪೊಲೀಸರು

ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣದ ದಾಖಲಿಸಿ ಬೆಳಗಾವಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.‌ ಭರತ ರತ್ನಾಜಿ ಮುತಗೇಕರ (29) ಎಂಬುವರು ಮುತಗಾ ಗ್ರಾಮ ಬಳಿಯ ಭಾರತ ಪೆಟ್ರೋಲ್ ಪಂಪ್ ಸಮೀಪ ಇರುವ ಬೆಳಗಾವಿ-ಬಾಗಲಕೋಟ ರಸ್ತೆ ಪಕ್ಕದ ಖುಲ್ಲಾ ಜಾಗೆಯಲ್ಲಿ ಅಕ್ರಮವಾಗಿ ಸರಾಯಿ ಸೇವನೆ ಮಾಡುವ ವೇಳೆ ಮಾರಿಹಾಳ ಪೊಲೀಸರು ದಾಳಿ ಮಾಡಿ, ಆರೋಪಿತನಿಂದ ಒರಿಜಿನಲ್ ಚಾಯಿಸ್ ವಿಸ್ಕಿ ಹಾಗೂ ಗ್ಲಾಸ್‌ ಜಪ್ತ …

Read More »