ಬೆಳಗಾವಿ: ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಮಹತ್ವದ ಹೆಜ್ಜೆ ಇಟ್ಟಿರುವ ಜಿಲ್ಲಾಡಳಿತ, ಇದೇ ಮೊದಲ ಬಾರಿಗೆ ಆದಾಯ ಹಂಚಿಕೆ (Profit Sharing) ಸೂತ್ರದಡಿ ಕಬ್ಬಿನ ಬೆಲೆ ನಿಗದಿಪಡಿಸಲು ನಿರ್ಧರಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಈ ನೂತನ ಸೂತ್ರವನ್ನು ರೂಪಿಸಲಾಗಿದೆ. ರೈತರ ಬೇಡಿಕೆಗಳಿಗೆ ಪೂರಕವಾಗಿರುವ ಈ ಸೂತ್ರಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರು ಕೂಡ ಸಹಮತ ಸೂಚಿಸಿರುವುದು ವಿಶೇಷವಾಗಿದೆ. ಈ ಹಿಂದೆ …
Read More »ಡಿ. 2ರಿಂದ ಬೆಳಗಾವಿ ಅಧಿವೇಶನ: ₹20 ಸಾವಿರ ಕೋಟಿ ವೆಚ್ಚದ ರಸ್ತೆ, ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಪುಟ ಅಸ್ತು
ರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಕರ್ನಾಟಕ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ರಾಜ್ಯದ ವಿವಿಧೆಡೆ ರಸ್ತೆ, ಸೇತುವೆ ಹಾಗೂ ಕಟ್ಟಡ ಕಾಮಗಾರಿಗಳ ಅಭಿವೃದ್ಧಿಗೆ ಒಟ್ಟು ₹20 ಸಾವಿರ ಕೋಟಿ ವೆಚ್ಚ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಕುರಿತು ಮಾಹಿತಿ ನೀಡಿದರು. ರಾಜ್ಯದ ವಿವಿಧ ರಾಜ್ಯ …
Read More »ಯುವತಿಗೆ ಮತ್ತು ಬರಿಸಿ ರೇಪ್ ಆರೋಪ – ಯುವಕ ಸಮೀರ್ ಬಂಧನ
ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬಳು ಅಪರಿಚಿತನೊಬ್ಬನ ಸ್ನೇಹ ಬೆಳೆಸಿ ಅತ್ಯಾಚಾರಕ್ಕೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೋರಮಂಗಲದ ಪಬ್ ಒಂದರಲ್ಲಿ ಸಿಗರೇಟ್ ಸೇದಲು ಸಮೀರ್ ಎಂಬಾತನ ಬಳಿ ಯುವತಿ ಲೈಟರ್ ಕೇಳಿದ್ದಾಳೆ. ಈ ವೇಳೆ ಇಬ್ಬರ ನಡುವೆ ಪರಿಚಯವಾಗಿ, ಆರೋಪಿ ತನ್ನ ಮಾತಿನಿಂದ ಯುವತಿಯನ್ನ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದನು ನಂತರ ಮಡಿವಾಳದ ಹೋಟೆಲ್ ರೂಮ್ಗೆ ಯುವತಿಯನ್ನ ಆಹ್ವಾನಿಸಿ, ಇಬ್ಬರೂ ಒಟ್ಟಿಗೆ ಮದ್ಯ ಸೇವಿಸಿದ್ದಾರೆ. ಯುವತಿಗೆ ನಶೆ ಏರಿದ …
Read More »ನವೆಂಬರ್ನಲ್ಲೇ 99 ಅಡಿಗೆ ಕುಸಿದ ಕೆಆರ್ಎಸ್ ನೀರಿನ ಮಟ್ಟ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ನೀರಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ನವೆಂಬರ್ ಆರಂಭದಲ್ಲೇ 99 ಅಡಿಗೆ ಕುಸಿದಿದ್ದು, ಬೇಸಿಗೆ ಸಮೀಪಿಸುವ ಮುನ್ನವೇ ಜಲಕಂಟಕ ಎದುರಾಗುವ ಆತಂಕ ಸೃಷ್ಟಿಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಡ್ಯಾಂನಲ್ಲಿ ಕೇವಲ ಒಂದು ವಾರದ ಅವಧಿಯಲ್ಲೇ ಬರೋಬ್ಬರಿ 5 ಅಡಿ ನೀರು ಖಾಲಿಯಾಗಿದೆ. ಕಳೆದ ವಾರ 104 …
Read More »ಕಾಫಿನಾಡ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ – ಈ ಬಾರಿ ಭಕ್ತರಿಗೆ ಹೊಸ ರೂಲ್ಸ್
ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಬಿಂಡಿಗ- ಮಲ್ಲೇನಹಳ್ಳಿ ಗ್ರಾಮದ ಶಕ್ತಿದೇವತೆ ದೇವೀರಮ್ಮನ ಜಾತ್ರಾ ಮಹೋತ್ಸವಕ್ಕೆ ಈ ಬಾರಿ ಜಿಲ್ಲಾಡಳಿತ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಹೊಸ ನಿಯಮಗಳನ್ನ ಜಾರಿಗೆ ತಂದಿದೆ. ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಮುದ್ರ ಮಟ್ಟದಿಂದ ಸುಮಾರು 3,800 ಅಡಿ ಎತ್ತರದ ಕಿರಿದಾದ ದುರ್ಗಮ ಹಾದಿಯ ಬೆಟ್ಟದ ತುದಿಯಲ್ಲಿರೋ ಜಗನ್ಮಾತೆ ದೇವಿರಮ್ಮ ಲಕ್ಷಾಂತರ …
Read More »ಹಳ್ಳಿಗರೆಂದರೆ ಗುಗ್ಗುಗಳಲ್ಲ ಪ್ರಿಯಾಂಕ್ ಖರ್ಗೆಗೆ ಹೆಚ್ಡಿಕೆ ಖಡಕ್ ತಿರುಗೇಟು
ಬೆಂಗಳೂರು: ಹಳ್ಳಿಗರೆಂದರೆ ಗುಗ್ಗುಗಳಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ. ಸ್ಟಿಂಗ್ ಆಪರೇಷನ್ ಕುರಿತ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಅವರು, ಹೆಚ್.ಡಿ.ಕುಮಾರಸ್ವಾಮಿ ಹಳ್ಳಿ ಗುಗ್ಗುನಾ? ನಾವೇನು ಬಿಗ್ ಬಾಸ್ ನಡೆಸ್ತಿದ್ದೀವಾ, ತನಿಖೆಯನ್ನು ಲೈವ್ ಸ್ಟ್ರೀಮ್ ಮಾಡಲು ಆಗುತ್ತಾ? ತನಿಖೆ ಮಕ್ಕಳ ಆಟವಲ್ಲ, ಅವರಿಂದ ನನಗೆ ಪ್ರಮಾಣಪತ್ರ ಅಗತ್ಯವಿಲ್ಲ, ಕಲಿಯುವುದು …
Read More »ಸವದತ್ತಿ ಗುಡ್ಡದಲ್ಲಿ ಹುಂಡಿ ಎಣಿಕೆ – ಮನೆಯಲ್ಲಿನ ತಿಗಣೆ ಓಡಿಸುವಂತೆ ಭಕ್ತನ ವಿಚಿತ್ರ ಪತ್ರ ಪತ್ತೆ
ಬೆಳಗಾವಿ: ಉತ್ತರ ಕರ್ನಾಟಕದ ಆರಾಧ್ಯ ದೇವತೆ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟು 2 ಕೋಟಿ 69 ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ. ಇದರ ಜೊತೆಗೆ ಹುಂಡಿಯಲ್ಲಿ ಭಕ್ತನೊಬ್ಬ ಬರೆದಿದ್ದ ವಿಚಿತ್ರ ಬೇಡಿಕೆಯ ಪತ್ರ ಎಲ್ಲರ ಗಮನ ಸೆಳೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇವಸ್ಥಾನದ ಹುಂಡಿಯಲ್ಲಿ 2.34 ಕೋಟಿ ನಗದು ಕಾಣಿಕೆ ಸಂಗ್ರಹವಾಗಿದೆ. ಇದರ ಜೊತೆಗೆ 26.95 ಲಕ್ಷ ಮೌಲ್ಯದ ಚಿನ್ನಾಭರಣ …
Read More »ಹುಟ್ಟುಹಬ್ಬದಂದೇ ನಾಲೆ ಬಳಿ ದ್ವಿತೀಯ ಪಿಯು ವಿದ್ಯಾರ್ಥಿ ನಿಗೂಢ ನಾಪತ್ತೆ
ಮಂಡ್ಯ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲೆ ಬಳಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಸಮೀಪದ ವರುಣಾ ನಾಲೆ ಬಳಿ ನಡೆದಿದೆ. ಮೈಸೂರು ಮೂಲದ ವೈಭವ್ (17) ನಾಪತ್ತೆಯಾದ ವಿದ್ಯಾರ್ಥಿ. ಈತ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ನಿನ್ನೆ ವೈಭವ್ನ ಹುಟ್ಟುಹಬ್ಬ ಇದ್ದಿದ್ದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಆದರೆ, ಮನೆಯಿಂದ ಬೈಕ್ನಲ್ಲಿ ಹೊರಟಿದ್ದ ವೈಭವ್ ಬೆಳಗೊಳ ಸಮೀಪದ …
Read More »ಜೈಲಿನ ಕೈದಿಗಳಿಗೆ ರಾಜಾತಿಥ್ಯದ ವಿಡಿಯೋ ವೈರಲ್ ಪ್ರಕರಣ – ಧನ್ವೀರ್ಗೆ ಮತ್ತೊಂದು ಸಂಕಷ್ಟ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಡಿಯೋ ವೈರಲ್ ಪ್ರಕರಣದಲ್ಲಿ ನಟ ಧನ್ವೀರ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ವಿಡಿಯೋ ವೈರಲ್ ಮಾಡುವಲ್ಲಿ ಧನ್ವೀರ್ ಅವರ ಮೊಬೈಲ್ ಬಳಕೆಯಾಗಿದೆ ಎಂಬುದಕ್ಕೆ ಸಾಕ್ಷ್ಯ ಲಭ್ಯವಾಗಿದೆ. ಈ ಸಂಬಂಧ ಸಿಸಿಬಿ ಪೊಲೀಸರಿಗೆ ಮೊಬೈಲ್ ರಿಟ್ರೀವ್ ವರದಿ ಕೈ ಸೇರಿದೆ. ವಿಡಿಯೋ ವೈರಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಧನ್ವೀರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಅವರ …
Read More »ಅಂಜನಾದ್ರಿ ದೇವಸ್ಥಾನ ಸುಪರ್ದಿ ಜಟಾಪಟಿ – ಕೊಪ್ಪಳ ಡಿಸಿ, ಅರ್ಚಕ ಸೇರಿ ಟ್ರಸ್ಟಿಗಳಿಗೆ ನೋಟಿಸ್
ಕೊಪ್ಪಳ: ಹನುಮ ಜನ್ಮಸ್ಥಳ ಅಂಜನಾದ್ರಿ ದೇವಸ್ಥಾನದ ಆಡಳಿತ ಹಾಗೂ ಪೂಜಾ ಹಕ್ಕಿನ ವಿಚಾರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಎಂಟ್ರಿಯಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ವಿದ್ಯಾದಾಸ ಬಾಬಾಗೆ ಸೇರಿ ಟ್ರಸ್ಟಿಗಳಿಗೆ ನೋಟಿಸ್ ನೀಡಿ, ನವೆಂಬರ್ 11ರಂದು ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಿದೆ. ಹೈಕೋರ್ಟ್ ಆದೇಶ, ಜಿಲ್ಲಾಡಳಿತದ ಕ್ರಮ ಹಾಗೂ ವಿದ್ಯಾದಾಸ ಬಾಬಾ ಅವರ ನ್ಯಾಯಾಂಗ ನಿಂದನೆ ಅರ್ಜಿ, ಹೀಗೆ ಅಂಜನಾದ್ರಿ ವಿವಾದ ಮತ್ತೆ ಕಾನೂನು ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಹನುಮ ಜನ್ಮಸ್ಥಳವೆಂದೇ ಪ್ರಸಿದ್ಧಿ …
Read More »
Laxmi News 24×7