Breaking News

Laxminews 24x7

ತ್ರಿವೇಣಿ ಸಂಗಮದಲ್ಲಿ ಫೋನ್‌ಗೂ ಕುಂಭಸ್ನಾನ ಮಾಡಿಸಿದ ಭೂಪ..!

ಉತ್ತರ ಪ್ರದೇಶದ:  ತ್ರಿವೇಣಿ ಸಂಗಮದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಮಹಾ ಕುಂಭಮೇಳ ಇಡೀ ಜಗತ್ತಿನ ಗಮನ ಸೆಳೆದಿದೆ. 144 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಈಗಾಗಲೇ 50 ಕೋಟಿ ಭಕ್ತರು ಬಂದು, ಪವಿತ್ರ ಸ್ನಾನ ಮಾಡಿದ್ದಾರೆ. ಈ ಶುಭ ಘಳಿಗೆಯಲ್ಲೇ ಭಕ್ತನೊಬ್ಬ ತನ್ನ ಮೊಬೈಲ್ ಫೋನ್‌ಗೂ ಪವಿತ್ರ ಸ್ನಾನ ಮಾಡಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಹಿಂದೂಗಳ ಪವಿತ್ರ ಆಚರಣೆ ಆಗಿರುವ ಮಹಾ ಕುಂಭಮೇಳ ಪ್ರಪಂಚದ ಮೂಲೆ ಮೂಲೆಯಲ್ಲಿ ಸದ್ದು ಮಾಡುತ್ತಿದೆ. …

Read More »

ಫಾಸ್ಟ್​ಟ್ಯಾಗ್ ಹೊಸ ರೂಲ್ಸ್; ದುಪ್ಪಟ್ಟು ಹಣ ಪಾವತಿ..! ಏನಿದು ಹೊಸ ನಿಯಮ..?

ಬೆಂಗಳೂರು: ಫಾಸ್ಟ್‌ಟ್ಯಾಗ್‌ನ ಹೊಸ ನಿಯಮಾವಳಿಗಳು  ಇಂದಿನಿಂದ ಫೆ. 17 ಜಾರಿಗೆ ಬಂದಿವೆ. ಇದರ ಅಡಿಯಲ್ಲಿ, ಕಡಿಮೆ ಬ್ಯಾಲೆನ್ಸ್, ಪಾವತಿ ವಿಳಂಬ ಅಥವಾ ಫಾಸ್ಟ್‌ಟ್ಯಾಗ್ ಅನ್ನು ಕಪ್ಪುಪಟ್ಟಿಗೆ  ಸೇರಿಸಿದರೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ. ಸರ್ಕಾರ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಹನವು ಟೋಲ್ ದಾಟುವ ಮೊದಲು 60 ನಿಮಿಷಗಳಿಗಿಂತ ಹೆಚ್ಚು ಕಾಲ ಮತ್ತು ಟೋಲ್ ದಾಟಿದ ನಂತರ 10 ನಿಮಿಷಗಳ ಕಾಲ ಫಾಸ್ಟ್‌ಟ್ಯಾಗ್ ನಿಷ್ಕ್ರಿಯವಾಗಿದ್ದರೆ, ವಹಿವಾಟನ್ನು ತಿರಸ್ಕರಿಸಲಾಗುತ್ತದೆ. ಇದು ದೋಷ ಕೋಡ್ …

Read More »

ತಾಯಿ, ಹೆಂಡತಿ,ಮಗನಿಗೆ ವಿಷಕೊಟ್ಟು ಕೊನೆಗೆ ತಾನು ನೇಣಿಗೆ ಶರಾಣಾದ ವ್ಯಕ್ತಿ.

ಮೈಸೂರ: ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕೊಲೆ ಹಾಗೂ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ತಾಯಿ, ಪತ್ನಿ ಹಾಗೂ ಮಗನಿಗೆ ವಿಷವುಣಿಸಿದ ಗಂಡಸು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿ ಬಳಿಕ …

Read More »

ಕೋಳಿ ಫಾರಂನಲ್ಲಿ ಇತ್ತು ಅಸಲಿ ಗನ್ ; ಕಳ್ಳ-ಪೊಲೀಸ್ ಆಟ ಆಡಲು ಹೋಗಿ 3 ವರ್ಷದ ಮಗು ಗುಂಡೇಟಿಗೆ ಬಲಿ.

ಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಕರೆದೊಯ್ದರೂ ಫಲಿಸದ ಚಿಕಿತ್ಸೆ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. …

Read More »

ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಎಗರಿಸಿದ್ದ ಖದಿಮರು ಪೊಲೀಸರ ವಶಕ್ಕೆ.

ದಾವಣಗೆರೆ: ಆರೋಪಿಗಳು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ ಶಶಿಕಲಾ ಎಂಬವರ ಹಣಕಾಸಿನ ಸಮಸ್ಯೆ ಅರಿತು ಪೂಜೆ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಹೋಗಿದ್ದರು. ಸಂಜೆ 4 ರಿಂದ 6 ಗಂಟೆ ವೇಳೆಗೆ ಪೂಜೆ ಮಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಪೂಜೆ ವೇಳೆ ಚಿನ್ನಾಭರಣ ಹಾಗೂ ನಗದು ಇಡುವಂತೆ ಹೇಳಿದ್ದರು. ಅವರು ಹೇಳಿದಂತೆ ಶಶಿಕಲಾ ಹಾಗೂ ಆಕೆಯ ಕುಟುಂಬಸ್ಥರು ಪೂಜೆ ವೇಳೆ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಇರಿಸಿದ್ದರು. ಈ ವೇಳೆ …

Read More »

ದಿನ ಬೆಳಗಾದರೆ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ; ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ  ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನ ಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾರವಾಗಿಯೇ ಪ್ರತಿಕ್ರಿಯಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಉತ್ತರಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ವಿಧಾನಸಭೆ, …

Read More »

ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ 19.30 ಲಕ್ಷ ಮಂಗಮಾಯ..!

ಮೈಸೂರು:ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಫಾರ್ಮಾಕ್ಯೂಟಿಕಲ್ಸ್ ಒಂದರಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದ ಮುರುಗೇಶ್ ಎಂಬುವರ ಖಾತೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಐಸಿಐಸಿಐ ಬ್ಯಾಂಕ್ ನಲ್ಲಿ ಹೊಂದಿದ್ದ ಒಂದು ಖಾತೆಯಿಂದ 17 ಲಕ್ಷ ಮತ್ತೊಂದು ಖಾತೆಯಿಂದ 2.30 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದ ಮುರುಗೇಶ್ …

Read More »

ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ; ಬಿ.ವೈ. ವಿಜಯೇಂದ್ರ

ತುಮಕೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರಕಾರದ ನಿರ್ಧಾರ ಕುರಿತಂತೆ ಉತ್ತರ ನೀಡಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ, 400 ಕೋಟಿ ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರಕಾರದ ನಿರ್ಧಾರ ಶೋಭೆ ತರುವುದಿಲ್ಲ ಇದರಿಂದ ಒಳಿತಾಗುವುದಿಲ್ಲ …

Read More »

‘ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ’ ಎಲ್ಲ ದರ ಏರಿಸಿದೆ ; ಬಸವರಾಜ ಬೊಮ್ಮಾಯಿ ಕಿಡಿ

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮೆಟ್ರೋ‌ ದರ ಏರಿಕೆ ಮಾಡಿದ್ದು ಕೇಂದ್ರ ಸರಕಾರ ಅಲ್ಲ, ರಾಜ್ಯ ರ್ಕಾರವೇ ದರ ಏರಿಕೆಗೆ ಪ್ರಸ್ತಾಪ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಮೆಟ್ರೋ ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಈ‌ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಇರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿ …

Read More »

‘ಸತ್ಯ ಮರೆಮಾಚಲು ಮೋದಿ ಸರ್ಕಾರ ಯತ್ನ’: ಖರ್ಗೆ ಗರಂ

ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಆಘಾತ ತಂದ ಘಟನೆಯಾಗಿದೆ ಎಂದು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗ  ಎಂದು ಕಿಡಿಕಾರಿದ್ದಾರೆ. ದೆಹಲಿ ಕಾಲ್ತುಳಿತ ಕ್ಕೆ ‘ಸಂಪೂರ್ಣ ಅವ್ಯವಸ್ಥೆ’ ಕಾರಣ ಎಂದು ಗರಂ ಆದ್ರು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ದೆಹಲಿ ರೈಲು ನಿಲ್ದಾಣದಲ್ಲಿ “ಅತ್ಯಂತ ದುಃಖಕರ” ಮತ್ತು “ಹೃದಯ ವಿದ್ರಾವಕ” ಘಟನೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸಾವಿನ ಪ್ರಕರಣದಲ್ಲಿ …

Read More »