Breaking News
Home / Laxminews 24x7 (page 3740)

Laxminews 24x7

ಡ್ಯೂಟಿ ಸಮಯದಲ್ಲೇ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ

ಬೆಂಗಳೂರು: ಡ್ಯೂಟಿ ಸಮಯದಲ್ಲೇ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಹಾಸನದಿಂದ ಪುತ್ತೂರಿಗೆ ಹೊರಟಿದ್ದರು. ಈ ವೇಳೆ ಟಿಕೆಟ್ ನೀಡುವ ನೆಪದಲ್ಲಿ ಕಂಡಕ್ಟರ್ ಮಹಿಳೆಯ ಪಕ್ಕದಲ್ಲಿ ಬಂತು ಕೂತಿದ್ದನು. ನಂತರ ಪಕ್ಕದಲ್ಲಿ ಕೂತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸುವುದಕ್ಕೆ ಶುರುಮಾಡಿದ್ದನು. ಮಹಿಳೆ ಎಷ್ಟೇ ವಿರೋಧ …

Read More »

ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ :ಶಾಸಕ ಉಮೇಶ್ ಕತ್ತಿ ತರಾಟೆ

ಚಿಕ್ಕೋಡಿ: ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರರನ್ನು ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತರಾಟೆಗೆ ತೆಗೆದುಕೊಂಡಿದ್ದರು. ಬೆಳಗಾವಿ ಜಿಲ್ಲೆ ಹುಕ್ಕೇರಿ ಬಸ್ ನಿಲ್ದಾಣಕ್ಕೆ ಶಾಸಕ ಉಮೇಶ್ ಕತ್ತಿ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ವ್ಯವಸ್ಥೆ ನೋಡಿ ಗರಂ ಆದ ಶಾಸಕ ಕತ್ತಿ ಅಧಿಕಾರಿಗಳನ್ನ ಹಾಗೂ ಸ್ವಚ್ಛತೆ ಮಾಡುತ್ತಿದ್ದ ಕಾರ್ಮಿಕರನ್ನ ತರಾಟೆಗೆ ತೆಗೆದುಕೊಂಡರು ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರನನ್ನ …

Read More »

ಜವಾರಿ ಊಟ, ಹಳ್ಳಿ ನೋಟ”……….

ಚಿಕ್ಕೋಡಿ(ಬೆಳಗಾವಿ): ದೇಶಿ ಸಂಸ್ಕೃತಿ ಮರೆಯಾಗುತ್ತಿರುವ ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ವತಿಯಿಂದ “ಜವಾರಿ ಊಟ, ಹಳ್ಳಿ ನೋಟ” ಎಂಬ ವಿನೂತನ ಕಾರ್ಯಕ್ರಮವನ್ನು ರವಿವಾರ ಆಯೋಜಿಸಲಾಗಿತ್ತು. ಈ ಕಾರ್ಯಕ್ರ್ರಮದಲ್ಲಿ ಹಳ್ಳಿ ಸೊಗಡನ್ನ ಅನುಭವಿಸುವ ನಿಟ್ಟಿನಲ್ಲಿ ಮಹಿಳೆಯರು ಇಳಕಲ್ ಸೀರೆ ಹಾಗೂ ಪುರುಷರು ಹಳೆ ಕಾಲದ ಉಡುಪು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ಪುರುಷರು …

Read More »

ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನದ ಸೇನೆಯ ಹಾಡಿಗೆ ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಕೊನೆಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಹುಬ್ಬಳ್ಳಿ:ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನದ ಸೇನೆಯ ಹಾಡಿಗೆ ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಕೊನೆಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಮೂರನೇ ಜೆಎಂಎಫ್‍ಸಿ ನ್ಯಾಯಾಧೀಶರ ಮುಂದೆ ಹಾಜರಾದ ಮೂವರು ಆರೋಪಿಗಳಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಭಾನುವಾರ ಪೊಲೀಸರು ಸಿಆರ್ ಪಿ 169 ಬಾಂಡ್ ಮೇಲೆ ಬಿಡುಗಡೆ ಮಾಡಿದರು. ತದನಂತರ ಹಿಂದೂಪರ ಸಂಘಟನೆಗಳು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ …

Read More »

 ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ.

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಮೋಷನ್ ಪೋಸ್ಟರ್ ಸಖತ್ ಸದ್ದು ಮಾಡಿದ್ದು, ಈಗ ಚಿತ್ರ ತಂಡ ಟೀಸರ್ ರಿಲೀಸ್ ಮಾಡಲು ರೆಡಿಯಾಗಿದೆ. ಹೌದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನೀರಿಕ್ಷಿತ ಚಿತ್ರ ಕೋಟಿಗೊಬ್ಬ-3 ಚಿತ್ರದ ಟೀಸರ್ ಅನ್ನು ಫೆಬ್ರವರಿ 21 ರಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಶಿವರಾತ್ರಿ ಹಬ್ಬಕ್ಕೆ ಕಿಚ್ಚನ ಅಭಿಮಾನಿಗಳಿಗೆ ಬಂಪರ್ …

Read More »

ದೇವಸ್ಥಾನ ನಿರ್ಮಾಣಕ್ಕಾಗಿ ಸರ್ಕಾರಿ ಶಾಲಾ ಕಟ್ಟಡ ಧ್ವಂಸ

ಯಾದಗಿರಿ: ದೇವಸ್ಥಾನ ನಿರ್ಮಾಣಕ್ಕಾಗಿ ಸರ್ಕಾರಿ ಶಾಲಾ ಕಟ್ಟಡ ಧ್ವಂಸ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರಾಮನಾಯಕನ ತಾಂಡದಲ್ಲಿ ನಡೆದಿದೆ. ರಾಮನಾಯಕ ತಾಂಡದಲ್ಲಿ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆ ಕಟ್ಟಡವನ್ನು ದೇವಸ್ಥಾನ ಕಟ್ಟುವ ಸಲುವಾಗಿ ಕೆಡವಿ ಹಾಕಲಾಗಿದೆ. ಆದರೆ ಸರ್ಕಾರದ ಕಟ್ಟಡ ಕೆಡವಲು ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ ಈ ಕೃತ್ಯ ನಡೆಸಲಾಗಿದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ. ಹೊಸ ಕಟ್ಟಡಕ್ಕೆ ಶಾಲೆಯನ್ನು ವರ್ಗಾಯಿಸದ ಮೇಲೆ …

Read More »

ಅಭಿಮಾನಿಯನ್ನು ತಳ್ಳಿದ ವ್ಯಕ್ತಿಯೊಬ್ಬರಿಗೆ ತಲೆ ಮೇಲೆ ದರ್ಶನ್ ಬಾರಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 43 ನೇ ಹುಟ್ಟುಹಬ್ಬವನ್ನು ಅಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಅಭಿಮಾನಿಯನ್ನು ತಳ್ಳಿದ ವ್ಯಕ್ತಿಯೊಬ್ಬರಿಗೆ ತಲೆ ಮೇಲೆ ದರ್ಶನ್ ಬಾರಿಸಿದ ವಿಡಿಯೋವೊಂದು ವೈರಲ್ ಆಗಿದೆ. ದರ್ಶನ್ ಅವರ ಹುಟ್ಟುಹಬ್ಬವನ್ನು ಅವರು ಅಭಿಮಾನಿಗಳು ಪ್ರತೀ ವರ್ಷ ಹಬ್ಬದಂತೆ ಆಚರಣೆ ಮಾಡುತ್ತಾರೆ. ಇಂದು ಕೂಡ ದರ್ಶನ್ ಅವರಿಗೇ ಶುಭಾಶಯ ಕೋರಲು ಅವರ ಸಾವಿರಾರು ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸಿದ್ದರು. ಈ ವೇಳೆ …

Read More »

ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ವಿಧಾನಸೌಧದ ಸುತ್ತಮುತ್ತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಕೆಲ ಸಂಘಟನೆಗಳು ಅಧಿವೇಶನ ಸಮಯದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮತ್ತು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ …

Read More »

ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಭಾರೀ ತಯಾರಿ

ಬೆಂಗಳೂರು, ಫೆ.17-ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಭಾರೀ ತಯಾರಿ ನಡೆಸಿರುವ ಕಾಂಗ್ರೆಸ್ ನಾಳೆ ಮತ್ತೊಮ್ಮೆ ಶಾಸಕಾಂಗ ಸಭೆಯನ್ನು ಕರೆದಿದೆ. ಈ ಅಧಿವೇಶನದ ವೇಳೆ ಒಟ್ಟು ಮೂರು ಶಾಸಕಾಂಗ ಸಭೆಗಳು ನಡೆದಂತಾಗುತ್ತದೆ.ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ನಿನ್ನೆ ಸಂಜೆ ಖಾಸಗಿ ಹೊಟೇಲ್‍ನಲ್ಲಿ ಶಾಸಕಾಂಗ ಸಭೆ ನಡೆಸಲಾಯಿತು.ಇಂದು ಬೆಳಗ್ಗೆ ಮತ್ತೊಮ್ಮೆ ಸಭೆ ಸೇರಿ ಒಟ್ಟಾಗಿ ಅಧಿವೇಶನಕ್ಕೆ ತೆರಳಿದರು. ರಾಜ್ಯಪಾಲರ ಭಾಷಣದಲ್ಲಿ ಪೌರತ್ವ ತಿದ್ದುಪಡಿ ವಿಷಯ ಕುರಿತಂತೆ ಪ್ರಸ್ತಾಪವಾದರೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. …

Read More »

ಶಿಕ್ಷಣರಂಗದಪ್ರಗತಿಯಲ್ಲಿಶಾಸಕಬಾಲಚಂದ್ರಜಾರಕಿಹೊಳಿಕೊಡುಗೆಅನನ್ಯ :bಅಶೋಕನಾಯಿಕ

ಗೋಕಾಕ : ಶಿಕ್ಷಣ ರಂಗದ ಪ್ರಗತಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕೊಡುಗೆ ಅನನ್ಯವಾಗಿದೆ. ಮೂಡಲಗಿ ವಲಯದ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯಲು ಇವರ ಪ್ರೇರಣೆಯೇ ಕಾರಣವಾಗಿದೆ ಎಂದು ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ಮೂಡಲಗಿ ಶೈಕ್ಷಣಿಕ ವಲಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಯುವ ಪೂರ್ವ ಸಿದ್ಧತಾ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು …

Read More »