Breaking News
Home / Laxminews 24x7 (page 3748)

Laxminews 24x7

ಭಾರತೀಯ ಕಲೆ ಸಂಸ್ಕೃತಿ ಅಳಿಸಿ ಹೋಗಬಾರದು,:ಶಶಿಕಲಾ ಜೊಲ್ಲೆ

ಜೋಯಿಡಾ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿದ್ದ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಉದ್ಘಾಟಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಭಾರತೀಯ ಕಲೆ ಸಂಸ್ಕೃತಿ ಅಳಿಸಿ ಹೋಗಬಾರದು, ಅದು ಮುಂದಿನ ಪೀಳಿಗೆಗೆ …

Read More »

ದೇಶಾದ್ಯಂತ ಕಿಚ್ಚು ಹಚ್ಚಿದ್ದ ಎನ್‌ಆರ್‌ಸಿ  ಬಗ್ಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು, ಎನ್‌ಆರ್‌ಸಿಯನ್ನು ದೇಶಾದ್ಯಂತ ಜಾರಿಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ

ಬೆಂಗಳೂರು, ಫೆ.4-ದೇಶಾದ್ಯಂತ ಕಿಚ್ಚು ಹಚ್ಚಿದ್ದ ಎನ್‌ಆರ್‌ಸಿ  ಬಗ್ಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು, ಎನ್‌ಆರ್‌ಸಿಯನ್ನು ದೇಶಾದ್ಯಂತ ಜಾರಿಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದೆ. ಲೋಕಸಭೆಯಲ್ಲಿ ಸಂಸದರು ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ನ್ಯಾಷನಲ್ ರಿಜಿಸ್ಟರ್ ಆಫ್ ಇಂಡಿಯನ್ ಸಿಟಿಜನ್ (ಎನ್‍ಆರ್‍ಐಸಿ)ಯನ್ನು ರಾಷ್ಟ್ರವ್ಯಾಪಿ ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ. ಈ ಮೊದಲು ಪೌರತ್ವ ತಿದ್ದುಪಡಿ …

Read More »

ಲಕ್ಷ್ಮಣ ಸವದಿಯನ್ನು ಸಂಪುಟಕ್ಕೆ ತೆಗೆದುಕೊಂಡಿದ್ದರ ಹಿಂದೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳಿವೆ……..

ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ನಡೆಸಬಾರದು. ಇಷ್ಟವೋ ಕಷ್ಟವೋ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ಪ್ರತಿಯೊಬ್ಬರೂ ಪಾಲನೆ ಮಾಡಲೇಬೇಕು. ಲಕ್ಷ್ಮಣ ಸವದಿಯನ್ನು ಸಂಪುಟಕ್ಕೆ ತೆಗೆದುಕೊಂಡಿದ್ದರ ಹಿಂದೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳಿವೆ ಬೆಂಗಳೂರು, ಫೆ.4- ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ನಡೆಸಬಾರದು. ವರಿಷ್ಠರು ತೆಗೆದುಕೊಂಡ ತೀರ್ಮಾನವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಯಾರೊಬ್ಬರೂ ಪ್ರತ್ಯೇಕ ಸಭೆ ನಡೆಸಬಾರದೆಂದು ಬಿಜೆಪಿ ದೆಹಲಿ ವರಿಷ್ಠರು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.  ಸಚಿವ ಸ್ಥಾನ ಆಕಾಂಕ್ಷಿಗಳು ನಿನ್ನೆ ಶಾಸಕರ …

Read More »

ಚೀನಾ-ಬೆಂಗಳೂರು ನಡುವೆ ವಿಮಾನ ಸಂಚಾರ ಬಂದ್..!

ಬೆಂಗಳೂರು, ಫೆ.4-ಕೊರೋನಾ ವೈರಸ್ ಭೀತಿಯಿಂದಾಗಿ ಚೀನಾ-ಬೆಂಗಳೂರು ನಡುವೆ ಸಂಚರಿಸುವ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಉಳಿದಂತೆ ಹಾಂಕಾಂಗ್, ಥೈಲ್ಯಾಂಡ್, ಸಿಂಗಪೂರ್ ನಡುವಿನ ಸಂಚಾರ ಮುಂದುವರೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹುತೇಕ ಕೊರೋನಾ ವೈರಸ್ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸುವುದನ್ನು ಕಡಿಮೆ ಮಾಡಲಾಗಿದೆ. ಕಳೆದ ವಾರದವರೆಗೂ ಚೀನಾದಿಂದ ವಿಮಾನಗಳು ಭಾರತಕ್ಕೆ ಆಗಮಿಸುತ್ತಿದ್ದವು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚೀನಾದಿಂದ ನೇರವಾಗಿ ವಿಮಾನಗಳು ಸಂಚರಿಸುತ್ತಿದ್ದವು. ಆದರೆ ಕೊರೋನಾ ವೈರಸ್‍ನ ಹರಡುವಿಕೆ ಹೆಚ್ಚಾಗಿದ್ದರಿಂದಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ.ಚೀನಾದಿಂದ …

Read More »

ವಿಧಾನಸಭೆಯಿಂದ ವಿಧಾನ ಪರಿಷತ್‍ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಳೆ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಂಗಳೂರು, ಫೆ.4- ವಿಧಾನಸಭೆಯಿಂದ ವಿಧಾನ ಪರಿಷತ್‍ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಳೆ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಗುರುವಾರ ಕಡೆ ದಿನವಾಗಿದ್ದು, ಬಿಜೆಪಿಯಿಂದ ಸವದಿ ನಾಳೆ ಪಕ್ಷದ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಸೋಮವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. 17ರಂದು ಅಗತ್ಯವಿದ್ದರೆ ಚುನಾವಣೆ ನಡೆಯಲಿದೆ. ಈಗಿರುವ ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಬಿಜೆಪಿಗೆ ಒಂದು …

Read More »

ಆಟಕ್ಕುಂಟು-ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ? ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ. ಕಾಲಾಯ ತಸ್ಮೈಯ್ ನಮಃ. :ಆನಂದ್ ಮಾಮನಿ

ಬೆಂಗಳೂರು, ಫೆ.4- ಆಟಕ್ಕುಂಟು-ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ? ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ. ಕಾಲಾಯ ತಸ್ಮೈಯ್ ನಮಃ. ಬೆಳಗಾವಿ ಜಿಲ್ಲೆ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಮಾಮನಿ ಮಾಡಿರುವ ಟ್ವೀಟ್ ಇದು. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಿ ಕೆಲವರಿಗೆ ಮಣೆ ಹಾಕುತ್ತಿರುವುದಕ್ಕೆ ಅಸಮಾಧಾನ ವ್ಯಕ್ತವಾಗುತ್ತಿದೆ.mla# ಇದೇ ಸಂದರ್ಭದಲ್ಲಿ ಆನಂದ್ ಮಾಮನಿ ಮಾಡಿರುವ ಈ ಟ್ವೀಟ್ ಸಾಕಷ್ಟು ಗೂಡಾರ್ಥವನ್ನು ನೀಡಿದೆ. ಸಾಮಾನ್ಯವಾಗಿ ಎಂದೂ ಬಹಿರಂಗವಾಗಿ ಮಾತನಾಡದೆ ಪಕ್ಷದ ಚೌಕಟ್ಟಿನಲ್ಲೇ ಇರುವ ಆನಂದ್ …

Read More »

ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು

ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು ನೀವು ಹೇಳಿದ್ದಕ್ಕೆ ನಾನು ಮಂತ್ರಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಆರ್.ಶಂಕರ್, ಅವರ ಪತ್ನಿ ಹಾಗೂ ಪುತ್ರ ಯಡಿಯೂರಪ್ಪನವರ ನಿವಾಸಕ್ಕೆ ಬಂದು ತಮಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕೆಂದು ಮನವಿ   ಬೆಂಗಳೂರು, ಫೆ.4- ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮೇಲೆ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ. ಡಾಲರ್ಸ್ …

Read More »

ಬಿಜೆಪಿ ಎಂಪಿಗಳಿಗೆ ಕೇಂದ್ರ ಸರ್ಕಾರದಲ್ಲಿ ಮಾತನಾಡುವ ಧಮ್ ಇಲ್ಲ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ

ಬಂಗಾರಪೇಟೆ, ಫೆ.4- ದೇಶದಲ್ಲಿ ಕೇಂದ್ರ ಸರ್ಕಾರ ಸರಿಯಾಗಿ ಬೆಂಬಲ ನೀಡುತ್ತಿಲ್ಲ. ಬಿಜೆಪಿ ಎಂಪಿಗಳಿಗೆ ಕೇಂದ್ರ ಸರ್ಕಾರದಲ್ಲಿ ಮಾತನಾಡುವ ಧಮ್ ಇಲ್ಲ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಟೀಕಿಸಿದರು. ಕಾಮಸಮುದ್ರಂನಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗಂಗಮ್ಮ ದೇವಸ್ಥಾನಕ್ಕೆ ಭೇಟಿ ನೀಡುವ ಮುಂಚೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಕೇಂದ್ರ ಬಡ್ಜೆಟ್ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಬಿಜೆಪಿ ಸದಸ್ಯರ ವಿರುದ್ದ ಅಸಮಧಾನ ಹೊರಹಾಕಿದರು. ರಾಜ್ಯದಲ್ಲಿ 25 ಅಭ್ಯರ್ಥಿಗಳನ್ನು …

Read More »

ಸಂಸದ ಅನಂತ್‍ಕುಮಾರ್ ಹೆಗ್ಡೆ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಶಿಸ್ತುಕ್ರಮ ಜರುಗಿಸುವುದು ಖಚಿತ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟಿಲ್

ನವದೆಹಲಿ, ಫೆ.4- ರಾಷ್ಟ್ರಪಿತ ಮಹಾತ್ಮಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಅನಂತ್‍ಕುಮಾರ್ ಹೆಗ್ಡೆ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಶಿಸ್ತುಕ್ರಮ ಜರುಗಿಸುವುದು ಖಚಿತ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟಿಲ್ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮಗಾಂಧಿ ಹಾಗೂ ಸ್ವತಂತ್ರ ಹೋರಾಟಗಾರರ ವಿರುದ್ಧ ಇಂತಹ ಹೇಳಿಕೆಯನ್ನು ಯಾರೊಬ್ಬರೂ ನೀಡಬಾರದು. ಹೆಗ್ಡೆ ಅವರ ಹೇಳಿಕೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಶಿಸ್ತುಕ್ರಮ ಖಚಿತ ಎಂಬ ಸುಳಿವು ನೀಡಿದರು. ಅವರಿಗೆ ಕ್ಷಮೆ …

Read More »

ಯಡಿಯೂರಪಪ್ಪಾ ಜಿ ಯವರ ಮಹತ್ವಾಕಾಂಕ್ಷೆ ಭಾಗ್ಯಲಕ್ಷೀ ಯೋಜನೆಯ ಮೂರು ಫಲಾನುಭವಿಗಳಿಗೆ ಭಾಗ್ಯಲಕ್ಷೀ ಬಾಂಡ್ ವಿತರಿಸಿದರು.

ಹದಿನಾಳ ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹದಿನಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಅಪೆಂಡಿಕ್ಸ-ಇ ಗ್ರಾಮ ಪರಿಮಿತಿ ಯೋಜನೆಯಡಿ ಹದಿನಾಳ ಅಪ್ಪಾಚಿವಾಡಿಯಿಂದ ರಾ.ಹೆ -4 ಕೂಡು ರಸ್ತೆ ಕಿ.ಮೀ ನಂ.1 20 ರಿಂದ 2.50 ವರೆಗೆ ಹಾಗೂ ಭಾವೇಶ್ವರಿ ಮಂದಿರದಿಂದ ನಾಗನಾಥವಾಡಿ ವರೆಗೆ ಸುಮಾರು 1 ಕೋಟಿ 92 ಲಕ್ಷ ರೂಗಳ ಮೊತ್ತದಲ್ಲಿ ರಸ್ತೆ ಅಗಲೀಕರಣ ಹಾಗೂ ಸುಧಾರಣೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ …

Read More »