Breaking News

Laxminews 24x7

ಸೋಮವಾರದಿಂದ ಲಾಕ್‍ಡೌನ್ 4.0 ಫಿಕ್ಸ್- ಲಾಕ್‍ಡೌನ್‍ನಲ್ಲಿ ಏನಿರುತ್ತೆ?………..

ನವದೆಹಲಿ: ಮೂರನೇ ಹಂತದ ಲಾಕ್‍ಡೌನ್ ಅಂತ್ಯಕ್ಕೆ ಇನ್ನೂ ಎರಡು ದಿನ ಮಾತ್ರ ಬಾಕಿ ಇದೆ. ಈ ನಡುವೆ ನಾಲ್ಕನೇ ಹಂತದ ಲಾಕ್‍ಡೌನ್ ಹೇಗಿರಲಿದೆ ಅನ್ನೋ ಚರ್ಚೆ ನಡೆದಿದೆ. ಲಾಕ್‍ಡೌನ್ 4.0 ವಿಭಿನ್ನವಾಗಿ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕುತೂಹಲ ಹೆಚ್ಚಿಸಿದ್ದರು. ಹೀಗಾಗಿ ಲಾಕ್‍ಡೌನ್‍ನಿಂದ ಹೆಚ್ಚಿನ ನಿರೀಕ್ಷೆಯಲ್ಲಿ ದೇಶದ ಜನರಿದ್ದಾರೆ. ನಾಲ್ಕನೇ ಹಂತದ ಲಾಕ್‍ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪರಿಷ್ಕೃತ ಮಾರ್ಗಸೂಚಿಗಳು ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಏನಿರಬಹುದು..? * …

Read More »

ಕೊರೊನಾ ಮುಕ್ತವಾಯ್ತು ಮೈಸೂರು – ನಿಟ್ಟುಸಿರು ಬಿಟ್ಟ ಜನತೆ

ಮೈಸೂರು: ನಂಜನಗೂಡು ಮೂಲಕ ದೇಶವ್ಯಾಪಿ ಸುದ್ದಿಯಾಗಿದ್ದ ಮೈಸೂರು ಈಗ ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಪತ್ತೆಯಾಗಿದ್ದ 90 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಎಲ್ಲರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಅತೀವ ಟೆನ್ಷನ್ ನಲ್ಲಿದ್ದ ಮೈಸೂರು ರಿಲ್ಯಾಕ್ಸ್ ಮೂಡ್ ಗೆ ಬಂದಿದೆ. ಇಬ್ಬರು ಕೊರೊನಾ ಸೋಂಕಿತರು ಇಂದು ಡಿಜ್ಚಾರ್ಜ್ ಆಗಿದ್ದಾರೆ. ಆ ಮೂಲಕ ನಾವು ಕೊರೊನಾ ಮುಕ್ತ ಮೈಸೂರು ಆಗಿದ್ದೇವೆ. ಮಾರ್ಚ್ 21 ರಿಂದ ಇಲ್ಲಿಯವರೆಗೆ ಇದ್ದ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ …

Read More »

ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ………..

ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆ ಗುಡ್‍ನ್ಯೂಸ್ ಕೊಟ್ಟಿದ್ದು, ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ ಮಾಡಲಾಗಿದೆ. 6 ತಿಂಗಳಿಗೆ ಬಿಯರ್ ಬಾಟಲ್‍ಗಳ ಎಕ್ಸ್‌ಪೈರಿ ಡೇಟ್ ಮುಗಿಯುವ ಹಿನ್ನೆಲೆ ಮದ್ಯದಂಗಡಿಗಳಲ್ಲಿ ಇರುವ ಬಿಯರ್ ಸ್ಟಾಕ್ ಕ್ಲಿಯರೆನ್ಸ್ ಗಾಗಿ ಅಬಕಾರಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ಮೇ 17ರವರೆಗೂ ಮಾತ್ರ ಹೆಚ್ಚುವರಿ 1 ಗಂಟೆ ಅನುಮತಿ ನೀಡಲಾಗಿದೆ. ಇದರಿಂದಾಗಿ ಎಂಆರ್‌ಪಿ, ಎಂಎಸ್‍ಐಎಲ್‍ಗಳಿಗೆ ಅಷ್ಟೇ ಅಲ್ಲದೆ ಕ್ಲಬ್, ಲಾಡ್ಜ್, ಬಾರ್‌ಗಳ …

Read More »

ಜನಸಾಮಾನ್ಯರಿಗೆ ಕೊರೊನಾ ಭೀತಿ- ‘ಕೈ’ ನಾಯಕರಿಗೆ ಚುನಾವಣೆ ಧ್ಯಾನ……..

ಚಿತ್ರದುರ್ಗ: ಇಡೀ ದೇಶವೇ ಕೊರೊನಾ ಸಂಕಷ್ಟದಿಂದಾಗಿ ತಲ್ಲಣಗೊಂಡಿದೆ. ಆದರೆ ಚಿತ್ರದುರ್ಗ ಜಿಲ್ಲಾಪಂಚಾಯತಿ ಅಧ್ಯಕ್ಷಗಾದಿಯ ಅಧಿಕಾರದ ಗದ್ದುಗೆಗಾಗಿ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಚಿತ್ರದುರ್ಗದಲ್ಲಿ ಬೃಹತ್ ಸಭೆ ನಡೆಸಿದ್ದಾರೆ. ಎಂಎಲ್‍ಸಿ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಜಿ.ಪಂ.ಸದಸ್ಯರ ಸಭೆ ನಡೆದಿದ್ದೂ, ಮೇ 22ಕ್ಕೆ ಜಿ.ಪಂ ಅಧ್ಯಕ್ಷರ ಆಯ್ಕೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇಂದು ಚಿತ್ರದುರ್ಗದ ಹೊರವಲಯದ ದೊಡ್ಡಸಿದ್ದವನಹಳ್ಳಿ ಬಳಿ ಇರುವ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರದ ರವಿಕುಮಾರ್ ತೋಟದಲ್ಲಿ 200ಕ್ಕೂ …

Read More »

ಮತ್ಸ್ಯ ಸಂಪದ ಯೋಜನೆ ಪ್ರಕಟ – ಮೀನುಗಾರಿಕೆಗೆ 20 ಸಾವಿರ ಕೋಟಿ ಪ್ಯಾಕೇಜ್……..

ನವದೆಹಲಿ: ಮೊದಲ ದಿನ ಉದ್ಯಮಗಳಿಗೆ, ಎರಡನೇ ದಿನ ಕಾರ್ಮಿಕರಿಗೆ ಪ್ಯಾಕೇಜ್ ಪ್ರಕಟಿಸಿದ್ದ ಕೇಂದ್ರ ಸರ್ಕಾರ ಇಂದು ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಪೂರಕ ಚಟುವಟಿಕೆಗಳನ್ನು ಮೇಲಕ್ಕೆ ಎತ್ತಲು ವಿಶೇಷ ಪ್ಯಾಕೇಜ್ ಪ್ರಕಟಿಸಿದೆ. ಈಗಾಗಲೇ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಒಟ್ಟು 18,700 ಕೋಟಿ ರೂ. ಹಣವನ್ನು ರೈತರಿಗೆ ನೀಡಲಾಗಿದೆ. ಫಸಲ್ ಭೀಮಾ ಯೋಜನೆಯ ಅಡಿ ಒಟ್ಟು 6,400 ರೂ. ಹಣವನ್ನು ಪಾವತಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ …

Read More »

ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ.

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ. ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಅನೇಕ ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2:10ಕ್ಕೆ ಮೃತಪಟ್ಟಿದ್ದು, ಅಂತ್ಯಕ್ರಿಯೆ ರಾಮನಗರ ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ನೆರವೇರಿತು. ಕಿರಿಯ ಮಗ ರಿಕಿ ರೈ ತಂದೆ ಮುತ್ತಪ್ಪ ರೈ …

Read More »

ಒಂದು ಡೆಸ್ಕ್‌ನಲ್ಲಿ 3 ಮಂದಿ – 2 ಪಾಳಿಯಲ್ಲಿ ಶಾಲೆ : ಸುತ್ತೋಲೆಯಲ್ಲಿ ಏನಿದೆ?

ಬೆಂಗಳೂರು: 2020-21 ನೇ ಸಾಲಿನ ಶೈಕ್ಷಣಿಕ ವರ್ಷ ಹತ್ತಿರ ಬರುತ್ತಿದ್ದು ಕೋವಿಡ್ 19 ಸೋಂಕು ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಲೆಯ ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಖಾಸಗಿ ಅನುದಾನಿತ ಶಾಲೆಗಳಿಗೆ ಅನ್ವಯ ಆಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಶಾಲೆಗಳು ಯಾವಾಗದಿಂದ ಆರಂಭವಾಗಲಿದೆ ಎನ್ನುವುದು ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಶಾಲೆಗಳು …

Read More »

ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ.

ಬೆಂಗಳೂರು: ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಿಯಲ್ ಸ್ಟಾರ್, ಸರ್ಕಾರವು ಬಿಪಿಎಲ್, ರಸ್ತೆ ಬದಿಯ ವ್ಯಾಪಾರಸ್ಥರು, ಕಟ್ಟಡ-ವಲಸೆ ಕೂಲಿ ಕಾರ್ಮಿಕರು, ವಿಕಲಾಂಗಚೇತನರು, ವಯೋವೃದ್ಧರು, ಆಟೋ-ಕ್ಯಾಬ್ ಚಾಲಕರು ಇತರೆ ಎಲ್ಲ ವರ್ಗದ ಜನರ ಸಂಪೂರ್ಣ ಮಾಹಿತಿಗಳನ್ನು ಪಾರದರ್ಶಕವಾಗಿ ಸಂಗ್ರಹಿಸಬೇಕು. ಈ ಮೂಲಕ ಅಗತ್ಯವಸ್ತುಗಳು ತಲುಪ ಬೇಕಾದವರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಾಜಕೀಯ …

Read More »

ದೇಶದಲ್ಲೇ ಮೊದಲ ಬಾರಿಗೆ ಸಟ್ರಕ್ ವಾಹನದ ಮೂಲಕ ಔಷಧಿ ಸಿಂಪಡಣೆ ಕಾರ್ಯಕ್ಕೆ ಚಾಲನೆ

ಬೆಂಗಳೂರು, – ಸಾಂಕ್ರಾಮಿಕ ರೋಗಗಳು ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ವ್ಯಾಪ್ತಿಯಲ್ಲಿ ಸಟ್ರಕ್ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಭಾರತದಲ್ಲೇ ಮೊದಲು ಎನಿಸಿದ ಈ ವಾಹನದ ಮೂಲಕ ಸುಮಾರು 30 ರಿಂದ 45 ಅಡಿ ಅಂತರದವರೆಗೆ ರಾಸಾಯನಿಕಗಳನ್ನು ಬಳಸಿ ಸಿಂಪಡಣೆ ಮಾಡಿ ಸಾಂಕ್ರಾಮಿಕ ರೋಗ ಹಬ್ಬುವುದನ್ನು ತಡೆಗಟ್ಟಬಹುದಾಗಿದೆ. ಮಹಾಲಕ್ಷ್ಮಿ ಲೇಔಟ್‍ನ ಶಾಸಕರೂ ಆಗಿರುವ ಆಹಾರ …

Read More »

ಬಸ್, ರೈಲು, ವಿಮಾನ ಸಂಚಾರ ಯಾವಾಗ ಆರಂಭವಾಗುತ್ತೆ..? ಇಲ್ಲಿದೆ ಅಪ್ಡೇಟ್

ನವದೆಹಲಿ, -ಡೆಡ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ನಾಲ್ಕನೇ ಹಂತದ ಲಾಕ್‍ಡೌನ್ ಮೇ 18 ಜಾರಿಗೆ ಬರಲಿದೆ. ಇದೇ ವೇಳೆ ಆಯ್ದ ನಗರಗಳಲ್ಲಿ ಬಸ್ ಮತ್ತು ವಿಮಾನಗಳ ಸಂಚಾರಕ್ಕೆ ಅತಿ ಶೀಘ್ರದಲ್ಲೇ ಅವಕಾಶ ಲಭಿಸುವ ಸಾಧ್ಯತೆ ಇದೆ. ಶ್ರಮಿಕ್ ಎಕ್ಸ್‍ಪ್ರೆಸ್, ವಿಶೇಷ ರೈಲುಗಳನ್ನು ಹೊರತುಪಡಿಸಿ, ಉಳಿದೆಲ್ಲ ರೈಲುಗಳ ಸಂಚಾರವನ್ನು ಜೂ.30ರವರೆಗೆ ಭಾರತೀಯ ರೈಲ್ವೆ ರದ್ದುಗೊಳಿಸಿದೆ. ಆದರೆ ಕೆಲವು ನಗರಗಳು ಮತ್ತು ಪ್ರದೇಶಗಳಲ್ಲಿ ಬಸ್ ಮತ್ತು ವಿಮಾನಗಳ ಸಂಚಾರಕ್ಕೆ ಅವಕಾಶ …

Read More »