Breaking News

Laxminews 24x7

ಕೊರೊನಾ ವಾರಿಯರ್ಸ್ ಗೆ ಸೇನೆಯಿಂದ ಸೆಲ್ಯೂಟ್ ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಗೌರವ ವಂದನೆ

  ನವದೆಹಲಿ: ಕೊರೊನಾ ವಿರುದ್ಧ ಹಗಲು-ರಾತ್ರಿ ಎನ್ನದೇ ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ದೇಶಾದ್ಯಂತ ಸೇನೆಯಿಂದ ಗೌವರ ಸಲ್ಲಿಸಲಾಗುತ್ತಿದೆ. ಬೆಂಗಳೂರು, ಗೋವಾ, ಕೇರಳ, ಹರ್ಯಾಣ, ಪಂಜಾಬ್, ನವದೆಹಲಿ ರಾಜ್ ಪಥ, ಲೇ ಲಡಾಕ್ ಸೇರಿದಂತೆ ದೇಶಾದ್ಯಂತ ಭೂಸೇನೆ, ನೌಕಾ ಸೇನೆ, ವಾಯುಸೇನೆಯಿಂದ ದಣಿವರಿಯದೇ ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಸ್ ಗೆ ಹೆಲಿಕಾಪ್ಟರ್ ಮೂಲಕ ಹೂವಿನ ಮಳೆಗರೆದು ಗೌರವ ವಂದನೆ ಸಲ್ಲಿಸಲಾಯಿತು. ದೇಶಾದ್ಯಾಂತ ಇರುವ ಕೊವಿಡ್-19 ಆಸ್ಪತ್ರೆಗಳ ಮೇಲೆ ಶ್ರೀನಗರದಿಂದ ತಿರುವನಂತಪುರಂವರೆಗೆ …

Read More »

ಇನ್ನೂ ಎರಡು ತಿಂಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದಿತ್ತು: ಶಾಸಕ ಎನ್.ಮಹೇಶ್

ಚಾಮರಾಜನಗರ: ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದು, ಈ ಮಧ್ಯೆ ಕೊಳ್ಳೆಗಾಲ ಶಾಸಕ ಎನ್ ಮಹೇಶ್ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇನ್ನೂ ಎರಡು ತಿಂಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದಿತ್ತು. ಹಳ್ಳಿಗಳಿಗೆ ಒಂದು ಬಾರಿ ಭೇಟಿ ಕೊಟ್ಟು ನೋಡಿ, ಎಷ್ಟೋ ಜನ ಆರೋಗ್ಯ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಎಣ್ಣೆ ಹಾಕುವುದಿಲ್ಲ ಎಂದರೆ ಸತ್ತು ಹೋಗುತ್ತಾರೆ, ನರ ದೌರ್ಬಲ್ಯ ಬರುತ್ತೆ …

Read More »

ಬಿಲ್ಡಿಂಗ್‍ನ ತುತ್ತತುದಿಯಲ್ಲಿ ನಿಂತು ಸ್ಟಾರ್ ನಟನ ತಂಗಿಯ ಲಿಪ್‍ಲಾಕ್………..

ಮುಂಬೈ: ಬಾಲಿವುಡ್ ಹಿರಿಯ ನಟ ಜಾಕಿ ಶ್ರಾಫ್ ಪುತ್ರಿ, ಟೈಗರ್ ಶ್ರಾಫ್ ಸೋದರಿ ಕೃಷ್ಣಾ ಶ್ರಾಫ್ ತನ್ನ ಗೆಳೆಯನ ಜೊತೆ ಲಿಪ್ ಲಾಕ್ ಮಾಡಿರುವ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಿನಂತೆ ಹರಿದಾಡುತ್ತಿವೆ. ಸೋದರ ಜಾಕಿ ಶ್ರಾಫ್ ಸಿಂಗಲ್ ಆಗಿದ್ದರೂ ಸೋದರಿ ಕೃಷ್ಣಾ ಗೆಳೆಯನ ಜೊತೆ ಕೊರೊನಾ ಹಾಲಿಡೇಯನ್ನ ಎಂಜಾಯ್ ಮಾಡ್ತಿದ್ದಾರೆ. ಟೈಗರ್ ಶ್ರಾಫ್ ಮತ್ತು ದಿಶಾ ಪಟಾಣಿ ನಡುವೆ ಲವ್ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದರೂ, …

Read More »

ಮೈಸೂರು ನಗರಕ್ಕಿಲ್ಲ ರಿಲೀಫ್ಮೇ 17ರ ವರೆಗೆ ಲಾಕ್‍ಡೌನ್ ಮುಂದುವರಿಸುವ ನಿರ್ಧಾರ ……..

ಮೈಸೂರು: ಬೆಳಗ್ಗೆಯಷ್ಟೇ ರಾಜ್ಯ ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ಜನ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮೈಸೂರು ನಗರದ ಜನರಿಗೆ ಇದೀಗ ಮತ್ತೆ ಆತಂಕ ಎದುರಾಗಿದ್ದು, ಮೇ 17ರ ವರೆಗೆ ಲಾಕ್‍ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮೇ 4ರಿಂದ 17 ರವರೆಗೆ ಲಾಕ್ ಡೌನ್ ಮುಂದುವರಿಯಲಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 12 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 12 ರಿಂದ ಸಂಜೆ 7ರ ವರೆಗೆ ಅಗತ್ಯ …

Read More »

ರಾಜ್ಯದಲ್ಲಿ ಸೋಮವಾರದಿಂದ ಎಣ್ಣೆ ಮಾರಾಟಕ್ಕೆ ಅನುಮತಿ…..ಷರತ್ತುಗಳು ಏನು?

ಬೆಂಗಳೂರು: ಲಾಕ್‍ಡೌನ್ ನಡುವೆ ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್‍ನ್ಯೂಸ್ ನೀಡಿದೆ. ಸೋಮವಾರದಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ರಾಜ್ಯದಲ್ಲಿ ಸೋಮವಾರದಿಂದ ಎಣ್ಣೆ ಮಾರಾಟಕ್ಕೆ ಅನುಮತಿ ನೀಡಿ ಅಬಕಾರಿ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಶನಿವಾರ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ರೆಡ್‍ಝೋನ್ ಸೇರಿದಂತೆ ಉಳಿದ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ …

Read More »

ಮೆಜಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವ ದೃಶ್ಯಗಳು

ಬೆಂಗಳೂರು: ಇಕ್ಕಟಿನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳನ್ನು ತವರು ಜಿಲ್ಲೆಗಳಿಗೆ ಕಳಿಸಲು ರಾಜ್ಯ ಸರ್ಕಾರ ಸಾರಿಗೆ ವ್ಯವಸ್ಥೆಯನ್ನ ಮಾಡಿದೆ. ಆದರೆ ಪ್ರಯಾಣಿಕರು ಮಾತ್ರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಮೆಜಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವುದು, ನಿಂತುಕೊಂಡಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು. ಅನೇಕರು ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿ ಕುಳಿತಿದ್ದರು ಹಾಗೂ ಓಡಾಡುತ್ತಿದ್ದರು. ಸರ್ಕಾರ ಇಷ್ಟೇಲ್ಲ ಅನುಕೂಲ ಒದಗಿಸಿದರೂ ಸಾರ್ವಜನಿಕರು ಸಾಮಾಜಿಕ …

Read More »

ಕೊರೊನಾ ಜಾಗೃತಿಗಾಗಿ ಯೋಗರಾಜ್ ಭಟ್ಟರು ಹಾಡು …..ಒಂದಾದ ಯೋಗರಾಜ್ ಭಟ್, ಅರ್ಜುನ್ ಜನ್ಯ, ವಿಜಯ್ ಪ್ರಕಾಶ್

ಬೆಂಗಳೂರು: ಯೋಗರಾಜ್ ಭಟ್ಟರು ತಮ್ಮ ವಿಭಿನ್ನ ಸಾಹಿತ್ಯ, ನಿರ್ದೇಶನದ ಮೂಲಕವೇ ಪ್ರಸಿದ್ಧರು. ಅವರ ಸಾಹಿತ್ಯ ಯುವ ಸಮೂಹಕ್ಕೆ ಅಪ್ಯಾಯಮಾನ. ಹಲವು ವಿಶಿಷ್ಠ ಗೀತೆಗಳ ಮೂಲಕ ಯುವ ಸಮೂಹಕ್ಕೆ ಭಟ್ಟರು ಹುಚ್ಚು ಹಿಡಿಸುತ್ತಾರೆ. ಅದೇ ರೀತಿ ಇದೀಗ ಕೊರೊನಾ ಜಾಗೃತಿ ಗೀತೆಯನ್ನು ಕಟ್ಟಿಕೊಟ್ಟಿದ್ದಾರೆ. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕುರಿತು ಈಗಾಗಲೇ ಹಲವು ಗಾಯಕರು ಹಾಗೂ ಬರಹಗಾರರು ಹಾಡು ರಚಿಸಿದ್ದು, ಇದೀಗ ಯೋಗರಾಜ್ ಭಟ್ಟರು ಹಾಡು ರಚಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ …

Read More »

ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ

ಉಡುಪಿ: ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ. ಉಡುಪಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಾರ ಯಶವಂತ ಕಾಮತ್ ಮನೆ ತೆಂಗಿನ ತೋಟದ ಮರವೊಂದಕ್ಕೆ ಸಿಡಿಲು ಬಡಿದಿದೆ. ಪರಿಣಾಮ ಹಸಿ ತೆಂಗಿನ ಮರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇನ್ನು ಮರಕ್ಕೆ ಬೆಂಕಿ ಹತ್ತಿರುವ ಫೋಟೋ ಮತ್ತು ವಿಡಿಯೋಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಉಡುಪಿಯ ಕುಂದಾಪುರ, ಕಾರ್ಕಳ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ …

Read More »

ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಲಾಕ್‍ಡೌನ್3 ಘೋಷಣೆಯಾಗಿರುವುರಿಂದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡು ಊರಿಗೆ ಹೋಗಲು ಪರದಾಡುತ್ತಿರುವ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತಿತರರಿಗೆ ಅನುಕೂಲವಾಗುವಂತೆ ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಒಂದು ದಿನ, ಒಂದು ಕಡೆಗೆ ಹೋಗಲು ಮಾತ್ರ ಈ ಪಾಸ್ ಬಳಸಬಹುದು. ಅಂತರ್ ಜಿಲ್ಲೆಗಳಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ. ಪಾಸ್ ಬೇಕಾದವರು ತಮ್ಮ …

Read More »

ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ…..

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ಹೋಗಲು ರಾಜ್ಯ ಸರ್ಕಾರ ಶನಿವಾರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದೆ. ಉಡುಪಿಯನ್ನು ಹೊರತುಪಡಿಸಿ ರಾಜ್ಯದ 12 ಹಸಿರು ವಲಯ ಜಿಲ್ಲೆಗಳಲ್ಲಿ ಸೋಮವಾರದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಜಿಲ್ಲೆಯ ಒಳಗೆ ಮಾತ್ರ ಬಸ್‍ಗಳು ಸಂಚರಿಸಲಿವೆ. ಅಂತರ್ ಜಿಲ್ಲೆಯ ಬಸ್ ಸಂಚಾರ ಇರುವುದಿಲ್ಲ. ಹಾವೇರಿ, ಯಾದಗಿರಿ, …

Read More »