Breaking News

Laxminews 24x7

ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ

ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Read More »

ಐಎಂಎ ವಂಚನೆ ಪ್ರಕರಣ: ಬಿಡಿಎ ಕುಮಾರ್‌ ವಿರುದ್ಧ ಆರೋಪಪಟ್ಟಿ

ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ₹ 5 ಕೋಟಿ ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಹಿಂದಿನ ಕಾರ್ಯನಿರ್ವಾಹಕ ಎಂಜಿನಿಯರ್‌ ಪಿ.ಡಿ. ಕುಮಾರ್‌ ಅಲಿಯಾಸ್‌ ಬಿಡಿಎ ಕುಮಾರ್ ಸೇರಿದಂತೆ ಆರು ಜನರ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಐಎಂಎ ಮುಖ್ಯ ಕಾನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಮನ್ಸೂರ್ ಖಾನ್‌, …

Read More »

ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ.: ಬಾಲಚಂದ್ರ ಜಾರಕಿಹೊಳಿ,

ಬೆಂಗಳೂರು: ರಾಸಲೀಲೆ ಸಿಡಿ ಕೇಸ್ ನಲ್ಲಿ ಐವರನ್ನು ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದು, ಆದಷ್ಟು ಬೇಗನೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಸೋಮವಾರದ ನಂತರ ಇಬ್ಬರು ಇಲ್ಲವೇ ಮೂವರ ವಿರುದ್ಧ ದೂರು ನೀಡುತ್ತೇವೆ. ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ. ತಿಮಿಂಗಿಲಗಳಿಗೆ ಸಹಕಾರ ನೀಡಿದವರನ್ನು …

Read More »

ಗೌರವಕ್ಕೆ ಧಕ್ಕೆಯಾಗಿರಬಹುದು, ನಮ್ಮೊಂದಿಗೆ ಬೆಂಬಲಿಗರಿದ್ದಾರೆ: ಸತೀಶ ಜಾರಕಿಹೊಳಿ

ಬೆಳಗಾವಿ: ‘ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್‌ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್‌ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಎಸ್‌ಐಟಿ ರಚನೆ ಬಗ್ಗೆ ಜೆಡಿಎಸ್ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ಮುಖಂಡರು ವ್ಯಕ್ತಪಡಿಸಿರುವ ಅಭಿಪ್ರಾಯ …

Read More »

ವಿಡಿಯೋದಲ್ಲಿರುವುದು ರಮೇಶ್‌ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಎಸ್‌ಐಟಿ ತನಿಖೆಗೆ ವಹಿಸಿರುವ ಸಿಡಿ ಪ್ರಕರಣದ ವಿಡಿಯೋದಲ್ಲಿರುವುದು ರಮೇಶ್‌ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಡಿಯೋದಲ್ಲಿ ಯಾರಿದ್ದಾರೆ ಎನ್ನುವುದಕ್ಕಿಂತ ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು ಹಾಗೂ ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದು ಹೇಳಿರುವುದು ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು ಎಂದು …

Read More »

ಆ. 1ರಂದು ನೀಟ್‌ ಪರೀಕ್ಷೆ : ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ(NEET) ದಿನಾಂಕ ಪ್ರಕಟಿಸಲಾಗಿದೆ. ಆಗಸ್ಟ್ 1 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಾಹಿತಿ ನೀಡಿದೆ. ಹಿಂದಿ, ಇಂಗ್ಲಿಷ್ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಬಿಬಿಎಸ್, ಬಿಎಎಂಎಸ್, ಬಿಡಿಎಸ್, ಬಿಎಂಎಸ್ ಸೇರಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆಸಲಾಗುವುದು.

Read More »

ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್‌ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?

ಬೆಂಗಳೂರು : ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಿದೆ. ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ. ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್‌ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು

Read More »

ಲಂಚ ಪಡೆಯುತ್ತಿದ್ದ ಚಳ್ಳಕೆರೆ ತಾ.ಪಂ ಇಒ ಎಸಿಬಿ‌ ಬಲೆಗೆ

ಚಿತ್ರದುರ್ಗ: ಪಿಡಿಒ ಒಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಚಳ್ಳಕೆರೆ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶ್ರೀಧರ್ ಐ ಬಾರಿಕೇರ್ ಎಸಿಬಿ‌ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಬೆಳಗೆರೆ ಪಿಡಿಒ ಗುಂಡಪ್ಪ ಅವರಿಂದ ಕಾರ್ಯಯೋಜಿತ ಮಂಜೂರಾತಿಗಾಗಿ ತಾಲೂಕು ಪಂಚಾಯತಿ ಬಳಿ 20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿ ವಶಕ್ಕೆ ಪಡೆದಿದ್ದಾರೆ. ಎಸಿಬಿ ಎಸ್ಪಿ ಜಯಪ್ರಕಾಶ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಡಿವೈಎಸ್ಪಿ ಬಸವರಾಜ್ ಮಗುದಮ್, ಪಿಐಗಳಾದ ಪ್ರವೀಣ್ …

Read More »

‘ಜೀವದ ಮೇಲೆ’ ನಿಮಗೆ ಪ್ರೀತಿ ಇದ್ದರೇ.. ಇಂಥ ‘ದುಸ್ಸಾಹಸ’ಕ್ಕೆ ಕೈ ಹಾಕಬೇಡಿ.!

ಪಣಜಿ : ಸಂಚರಿಸುವಂತ ರೈಲು ಹತ್ತಲು ಹೋಗಿ ಅನೇಕರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಿದ್ದೂ ಇಂತಹ ದುಸ್ಸಾಹಸಕ್ಕೆ ಕೈಹಾಕಬೇಡಿ ಎಂಬುದಾಗಿ ಎಚ್ಚರಿಸಿದ್ರೂ.. ಪ್ರಯಾಣಿಕರು ಮಾತ್ರ ಡೋಂಟ್ ಕೇರ್. ಹೀಗೆ ಚಲಿಸುತ್ತಿದ್ದಂತ ರೈಲು ಹತ್ತಿದ್ದರಿಂದ ಏನ್ ಆಯ್ತು ಅಂತ, ಈ ಸುದ್ದಿ ಓದಿ.. ‘ ಗೋವಾದ ವಾಸ್ಕೋಡಿಗಾಮಾ ರೈಲು ನಿಲ್ದಾಣದಲ್ಲಿ, ರೈಲು ನಿಂತಿದ್ದರೂ, ಹತ್ತದಿದ್ದಂತ ಪ್ರಯಾಣಿಕನೊಬ್ಬ, ಚಲಿಸಲು ಆರಂಭಿಸಿದಂತ ರೈಲು ಹತ್ತೋದಕ್ಕೆ ಪ್ರಯತ್ನ ಪಟ್ಟಿದ್ದಾನೆ. ಓಡಿ ಹೋಗಿ ಹತ್ತೋದಕ್ಕೆ ಪ್ರಯತ್ನಿಸಿದಾಗ ನಿಯಂತ್ರಣ …

Read More »

ಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್ ಸಂಚಾರವನ್ನು ಮಾರ್ಚ್ 14ರಿಂದ ಆರಂಭ

ಮೈಸೂರು, ಮಾರ್ಚ್ 12; ಐಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್ ಸಂಚಾರವನ್ನು ಮಾರ್ಚ್ 14ರಿಂದ ಆರಂಭಿಸಲಾಗುತ್ತದೆ ಎಂದು ಐಆರ್‌ಸಿಟಿಸಿ ಹೇಳಿದೆ. 2020ರಲ್ಲಿ ಕೆಎಸ್‌ಟಿಡಿಸಿಯಿಂದ ರೈಲಿನ ನಿರ್ವಹಣೆಯನ್ನು ಐಆರ್‌ಸಿಟಿಸಿ ಪಡೆದಿದೆ. 6 ರಾತ್ರಿ 7 ಹಗಲುಗಳ ಪ್ರವಾಸಿ ಪ್ಯಾಕೇಜ್‌ ಪ್ರಯಾಣ ಮೊದಲು ಆರಂಭವಾಗಲಿದೆ. ಬೆಂಗಳೂರು ನಗರದಿಂದ ಆರಂಭವಾಗುವ ಪ್ರಯಾಣ ಬೆಂಗಳೂರಿನಲ್ಲಿಯೇ ಕೊನೆಗೊಳ್ಳಲಿದೆ. ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ಪ್ಯಾಕೇಜ್‌ಗಳ ದರಗಳು ಲಭ್ಯವಿದೆ.   ಬಂಡೀಪುರ, ಮೈಸೂರು, ಹಳೆಬೀಡು, ಚಿಕ್ಕಮಗಳೂರು, ಹಂಪಿ, ಐಹೊಳೆ, ಪಟ್ಟದಕಲ್ಲು ಮತ್ತು …

Read More »