Breaking News

Laxminews 24x7

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ.

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿಸಾರ್ವಜನಿಕರಿಗೆ ಆಹಾರ ಭದ್ರತೆ ಒದಗಿಸಲು ಕೇಂದ್ರ ಸರಕಾರ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ. ಪಡಿತರ ಚೀಟಿದಾರರು ಓಟಿಪಿ ಅಥವಾ ಬಯೋ ಮೆಟ್ರಿಕ್‌ ಮೂಲಕ ಪಡಿತರವನ್ನು ಪಡೆಯಬಹುದು. ಜಿಲ್ಲೆಗೆ ಹೆಚ್ಚುವರಿ 12,857 ಮೆ. ಟನ್‌ ಅಕ್ಕಿ ಹಾಗೂ 3806 ಮೆ. ಟನ್‌ ತೊಗರಿಬೇಳೆ ಹಂಚಿಕೆಯಾಗಿದೆ. ಈ ಆಹಾರಧಾನ್ಯವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ …

Read More »

ಸರಳವಾಗಿ ಗೃಹಪ್ರವೇಶ ಮಾಡಿ 500 ಬಡವರಿಗೆ ರೇಷನ್ ಕಿಟ್ ವಿತರಿಸಿದ ಉದ್ಯಮಿ..!

ಸರಳವಾಗಿ ಗೃಹಪ್ರವೇಶ ಮಾಡಿ 500 ಬಡವರಿಗೆ ರೇಷನ್ ಕಿಟ್ ವಿತರಿಸಿದ ಉದ್ಯಮಿ..! ರೋಹಿತ್ ರಾವಳ್ ಅವರು ಬೆಳಗಾವಿ ನಗರದ 500 ಬಡವರಿಗೆ ಉಚಿತ ಪಡಿತರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ಬೆಳಗಾವಿ(ಮೇ.01): ಕೊರೋನಾ ಹರಡುವ ಭೀತಿಯಿಂದ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದ್ದು, ಬಡವರ ಕಷ್ಟ ಹೇಳತೀರದಾಗಿದೆ. ದಿನಗೂಲಿ ಆದಾಯದಲ್ಲೇ ಜೀವನ ಸಾಗಿಸುತ್ತಿದ್ದ ಬಡಪಾಯಿಗಳ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ‌. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ 72 ಕೊರೋನಾ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಆತಂಕ …

Read More »

ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇಕಠಿಣ ರೂಲ್ಸ್……….

ಬೆಂಗಳೂರು: ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದರೆ ಲಾಕ್‍ಡೌನ್ ಮೂರರಲ್ಲಿ ಹೆಚ್ಚುವರಿ ನಿರ್ಬಂಧಗಳಿದ್ದು, ಈ ಬಾರಿ ಸಾರ್ವಜನಿಕ ಪ್ರದೇಶಗಳಲ್ಲೂ ರೂಲ್ಸ್ ಜಾರಿ ಮಾಡಲಾಗಿದೆ. ಕೊರೊನಾದ ಮೂರನೇ ಲಾಕ್‍ಡೌನ್‍ನಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಕಠಿಣ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಬೇಕಾಬಿಟ್ಟಿ ಓಡಾಡುವಂತಿಲ್ಲ. ಓಡಾಡಿದರೆ ಮಾಸ್ಕ್ ಧರಿಸಿರಲೇಬೇಕು, ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡಿರಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ …

Read More »

ತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ.

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಪ್ಪತ್ತ ಮಲ್ಲಯ್ಯನ ದೇವಸ್ಥಾನದ ಬಳಿಯ ಕೆಪಿಟಿಸಿಎಲ್ ವಿಂಡ್ ಪ್ಯಾನ್ ಬಳಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಸಂಪತ್ತು ಸೇರಿದಂತೆ ಪ್ರಾಣಿ ಪಕ್ಷಿಗಳು ಬೆಂಕಿಗೆ ಆಹುತಿಯಾಗಿದೆ. ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆಗೆ ಬೆಂಕಿ ಕಾಣಿಸಿಕೊಂಡಿತ್ತು. ಇದು ವಿಂಡ್ ಫ್ಯಾನ್ ಶಾರ್ಟ್ ಸರ್ಕ್ಯೂಟ್‍ನಿಂದ ಆಗಿದೆಯಾ? …

Read More »

ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್- ಎಚ್‍ಡಿಕೆ ಆರೋಪ……

ಕೋಲಾರ: ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್ಲ. ಜನ ಸಾಮಾನ್ಯರ ನೋವಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೋಲಾರದಲ್ಲಿ ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದರು. ಮುಳಬಾಗಿಲಿನ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಅವರು ತಾಲೂಕಿನಲ್ಲಿ 46 ಸಾವಿರ ಆಹಾರದ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮುಂಬೈನಿಂದ ಮಂಡ್ಯಗೆ …

Read More »

ರಾಯಚೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಶಿವಮೊಗ್ಗ, ಮೈಸೂರು ಸೇರಿದಂತೆ 28 ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭ

ಬೆಂಗಳೂರು: ಮಹಾಮಾರಿ ಕೊರೊನಾ ಕಂಟ್ರೋಲ್‍ಗೆ ಇನ್ನೂ 2 ವಾರ ಲಾಕ್‍ಡೌನ್ ವಿಸ್ತರಣೆಯಾಗಿದೆ. ದೇಶಾದ್ಯಂತ ಮೇ 17ವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಇದೇ ವೇಳೆ ವಲಸೆ ಕಾರ್ಮಿಕರು, ತುರ್ತು ಪ್ರಯಾಣಿಕರಿಗೆ ಗುಡ್‍ನ್ಯೂಸ್ ಜೊತೆಗೆ ಕೇಂದ್ರ ಸರ್ಕಾರ ಶಾಕ್ ಕೂಡ ಕೊಟ್ಟಿದೆ. ಕೊರೊನಾ ತೊಲಗಿಸಲು ಕೇಂದ್ರ ಸರ್ಕಾರ 4 ಝೋನ್‍ಗಳಾಗಿ ವಿಂಗಡಣೆ ಮಾಡಿದೆ. ಕಂಟೈನ್‍ಮೆಂಟ್, ರೆಡ್, ಆರೆಂಜ್, ಗ್ರೀನ್ ಝೋನ್ ಅಂತ ವಿಂಗಡಣೆ ಮಾಡಿದ್ದು, ಕೇಂದ್ರ ಸರ್ಕಾರದಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ವಲಸೆ …

Read More »

ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್‍ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ.

ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್‍ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ. ಶುಕ್ರವಾರ ರಾತ್ರಿ ವೇಳೆ ಗಾಳಿಯ ರಭಸಕ್ಕೆ ಹಾರಿ ಬಂದ ಟಿನ್‍ಗಳು ನಗರದ ಸಿಯತಲಾಬ್ ನಿವಾಸಿ ರತ್ನಾಬಾಯಿ ಮನೆ ಮೇಲೆ ಬಿದ್ದಿವೆ. ರಸ್ತೆ, ಮನೆಗಳ ಮೇಲೆ ಬಿದ್ದಿರುವ ಟಿನ್ ಗಳಿಂದ ತಳ್ಳೋ ಬಂಡಿ, ಬೈಕ್‍ಗಳು ಜಖಂಗೊಂಡಿವೆ. ಅಷ್ಟೇ ಅಲ್ಲದೇ ರಾತ್ರಿ ಮಳೆ ಜೋರಾಗಿದ್ದರಿಂದ ನಿವಾಸಿಗಳು ಮನೆಯಿಂದ ಹೊರಗಡೆಯಿರಲಿಲ್ಲ. ಹೀಗಾಗಿ ಪ್ರಾಣಾಪಾಯದಿಂದ …

Read More »

ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

ಕಾಸರಗೋಡು: ದುರಂತವೊಂದರಲ್ಲಿದರಲ್ಲಿ , ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ. ಮೃತರನ್ನು ನೂರುದ್ದೀನ್ ಅವರ ಮಗ ಬಶೀರ್ (4), ನಾಸಿರ್ ಅವರ ಪುತ್ರ ಅಜ್ನಾಸ್ (5) ಮತ್ತು ಸಮೀರ್ ಅವರ ಪುತ್ರ ನಿಷಾದ್ (6) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮಕ್ಕಳು ಆಟವಾಡಲು ಕೆರೆಗೆ ಇಳಿದಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. …

Read More »

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೇಟ್‌ನಲ್ಲಿ ಮಿಡ್ ನೈಟ್ ನಡೆಯುತ್ತಿರುವ ಮಾರ್ಕೆಟ್ ನಲ್ಲಿ ಜನವೋ ಜನ…..

ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ‌. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …

Read More »

ರಾಕಿಂಗ್ ದಂಪತಿಯ ಕ್ಯೂಟ್ ಫ್ಯಾಮಿಲಿ ಫೋಟೋ……….

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಕಪಲ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ರಾಕಿಂಗ್ ದಂಪತಿಯ ಕುಟುಂಬದ ಫೋಟೋ ವೈರಲ್ ಆಗುತ್ತಿದೆ. ಯಶ್, ರಾಧಿಕಾ ಪಂಡಿತ್, ಐರಾ ಮತ್ತು ಜೂನಿಯರ್ ಯಶ್ ನಾಲ್ವರು ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋವನ್ನು ಅಭಿಮಾನಿಗಳು ಇನ್‍ಸ್ಟಾಗ್ರಾಂ, ಫೇಸ್‍ಬುಕ್ ಮತ್ತು ಟ್ವಿಟ್ಟರಿನಲ್ಲಿ ಶೇರ್ ಮಾಡುತ್ತಿದ್ದಾರೆ. ಫೋಟೋದಲ್ಲಿ ಎಲ್ಲರೂ ಬ್ಲಾಕ್ …

Read More »