Breaking News

Laxminews 24x7

COVID-19: ಕೊರೋನಾ ಬಳಿಕ ಡಿಸ್ಚಾರ್ಜ್​ ಆದವರಿಗೆ ತಲಾ 2 ಸಾವಿರ ಘೋಷಿಸಿದ ಆಂಧ್ರ ಸರ್ಕಾರ

ಅಮರಾವತಿ(ಏ.28): ಕೊರೋನಾ ವೈರಸ್​ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರಿಗೆ ತಲಾ 2 ಸಾವಿರ ನೀಡುವುದಾಗಿ ಮುಖ್ಯಮಂತ್ರಿ ಜಗನ್​​ ಮೋಹನ್​​ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಘೋಷಿಸಿದೆ. ಸೋಂಕಿತರು ದೇಹದಲ್ಲಿನ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಅಗತ್ಯವಾದ ಆಹಾರ ಖರೀದಿಸಲು ಈ ಹಣ ನೀಡಲಾಗುವುದು ಎಂದು ಜಗನ್​​ ಹೊರಡಿಸಿದ ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ. ಆಂಧ್ರಪ್ರದೇಶದಲ್ಲಿ ನಿನ್ನೆಯವರೆಗೂ 1177 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ 235 ಜನರು ಗುಣಮುಖರಾಗಿದ್ದಾರೆ. ಈವರೆಗೂ 31 ಜನರು ರಾಜ್ಯದಲ್ಲಿ …

Read More »

ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ.

ಬೆಂಗಳೂರು: ಉಗ್ರಂ ಖ್ಯಾತಿಯ ಶ್ರೀಮುರಳಿ ಮನೆಯಲ್ಲಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ. ಲಾಕ್‍ಡೌನ್ ದಿನಗಳು ಹಲವು ನಟ, ನಟಿಯರಿಗೆ ಸಂತಸ ನೀಡಿದ್ದು, ಕುಟುಂಬದೊಂದಿಗೆ ಕಾಲ ಕಳೆಯಲು ಅವಕಾಶ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಾಲಿವುಡ್, ಸ್ಯಾಂಡಲ್‍ವುಡ್ ಸೇರಿದಂತೆ ಬಹುತೇಕ ನಟರು ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಹತ್ತು ಹಲವು, ಚಟುವಟಿಕೆಗಳು ತಮ್ಮ ಹವ್ಯಾಸಗಳು ಸೇರಿದಂತೆ ಮನೆಗೆಲಸಗಳನ್ನೂ ಅಷ್ಟೇ …

Read More »

ಕೋವಿಡ್-19 ಪರೀಕ್ಷಿಸಲು ಚೀನಾದಿಂದ ಖರೀದಿಸಿದ್ದ ಕಿಟ್ ಗಳು ಕಳಪೆ: (ಐಸಿಎಂಆರ್) ಸೂಚಿಸಿದೆ.

ನವದೆಹಲಿ: ಕೋವಿಡ್-19 ಪರೀಕ್ಷಿಸಲು ಚೀನಾದಿಂದ ಖರೀದಿಸಿದ್ದ ಕಿಟ್ ಗಳು ಕಳಪೆಯಾಗಿದ್ದು ಅವುಗಳನ್ನು ಬಳಸಬೇಡಿ ಎಂದು ರಾಜ್ಯ ಸರ್ಕಾರಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸೂಚಿಸಿದೆ. ಕಳಪೆ ಗುಣಮಟ್ಟದ ಕಿಟ್ ಗಳ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ಪೂರೈಸಿದ ಕಂಪನಿಗಳಿಗೆ ವಾಪಸ್ ಕಳುಹಿಸಿ ಎಂದು ಪತ್ರ ಬರೆದಿದೆ. ಚೀನಾದ ಗುವಾಂಗ್ಜೌ ವೊಂಡ್‍ಪೋ ಬಯೋಟೆಕ್ ಮತ್ತು ಲಿವ್ ಝೊನ್ ಡಯಾಗ್ನಿಸ್ಟಿಕ್ಸ್ ಕಂಪನಿಗಳಿಂದ ಭಾರತದ 5 ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ …

Read More »

ಮಂಡ್ಯ ಜಿಲ್ಲೆ ನಾಗಮಂಗಲದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರೋದು ಖಾತ್ರಿ ಆಗುತ್ತಿದ್ದಂತೆ ಉಡುಪಿ ಜಿಲ್ಲೆಯ ತೆಕ್ಕಟ್ಟೆಯ ಪೆಟ್ರೋಲ್ ಪಂಪನ್ನು ಸೀಲ್ ಮಾಡಲಾಗಿದೆ.

ಉಡುಪಿ: ಮಂಡ್ಯ ಜಿಲ್ಲೆ ನಾಗಮಂಗಲದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರೋದು ಖಾತ್ರಿ ಆಗುತ್ತಿದ್ದಂತೆ ಉಡುಪಿ ಜಿಲ್ಲೆಯ ತೆಕ್ಕಟ್ಟೆಯ ಪೆಟ್ರೋಲ್ ಪಂಪನ್ನು ಸೀಲ್ ಮಾಡಲಾಗಿದೆ. ಖರ್ಜೂರ ತುಂಬಿದ ಗೂಡ್ಸ್ ಲಾರಿ ಹತ್ತಿಕೊಂಡು ಮುಂಬೈನಿಂದ ಮಂಡ್ಯಕ್ಕೆ ಪ್ರಯಾಣಿಸಿದ ವ್ಯಕ್ತಿಗೆ ಕೊರೊನಾ ಆವರಿಸಿತ್ತು. ಆತ ದಾರಿ ನಡುವೆ ಉಡುಪಿಯ ತೆಕ್ಕಟ್ಟೆಯ ಶಿವಪ್ರಸಾದ್ ಪೆಟ್ರೋಲ್ ಸ್ಟೇಷನ್ ನಲ್ಲಿ ಸ್ನಾನ ಮಾಡಿ ಊಟ ಮಾಡಿ ಕೊಂಚ ವಿರಮಿಸಿದ್ದ. ಹೀಗಾಗಿ ಉಡುಪಿಯ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತೆಕ್ಕಟ್ಟೆ ಶಿವಪ್ರಸಾದ್ …

Read More »

ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆ………….

ಚಿಕ್ಕಮಗಳೂರು: ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚೇಗು ಗ್ರಾಮದ ನಿವಾಸಿ ಮಂಜಯ್ಯ (58) ಮೃತ ದುರ್ದೈವಿ. ಲಕ್ಷ್ಮಣ ಕೊಲೆಗೈದ ಆರೋಪಿ. ಸೋಮವಾರ ರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟದ ವಿಚಾರವಾಗಿ ಮಂಜಯ್ಯ ಹಾಗೂ ಲಕ್ಷ್ಮಣ ಸಹೋದರರ ನಡುವೆ ಕಳೆದ ಕೆಲವು ದಿನಗಳಿಂದ ಜಗಳ ನಡೆದಿತ್ತು. ಈ ವಿಚಾರವಾಗಿ ಸೋಮವಾರವೂ ಸಹೋದರರು ಪರಸ್ಪರ ಗಲಾಟೆ …

Read More »

ನಿರಾಶ್ರಿತರು, ಕೂಲಿ ಕಾರ್ಮಿಕರಿಗೆ ಶೇವಿಂಗ್ ಕಿಟ್ ವಿತರಿಸಿದಸಮಾಜಸೇವಕ, ನಿತ್ಯಾನಂದ

ಉಡುಪಿ: ಕಳೆದ ಒಂದು ತಿಂಗಳಿಂದ ಉಡುಪಿಯಲ್ಲಿ ಸೆಲೂನ್‍ಗಳು ಬಂದ್ ಆಗಿರುವುದರಿಂದ ಹೇರ್ ಕಟ್ಟಿಂಗ್, ಶೇವಿಂಗ್ ಮಾಡದೆ ಜನಕ್ಕೆ ಕಿರಿಕಿರಿಯಾಗುತ್ತಿದೆ. ಮನೆಯಲ್ಲಿ ಲಾಕ್ ಆಗಿರೋರು ತಮ್ಮ ಹೇರ್ ಕಟ್ಟಿಂಗ್ ತಾವೇ ಮಾಡಿಕೊಳ್ತಾ ಇದ್ದಾರೆ. ಹೊರ ಜಿಲ್ಲೆಯಿಂದ ಬಂದು ಉಡುಪಿಯ ನಿರಾಶ್ರಿತರ ಕೇಂದ್ರದಲ್ಲಿ ಇರುವವರು ಕಟ್ಟಿಂಗ್, ಶೇವಿಂಗ್ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರ ಸಂಕಷ್ಟವನ್ನು ಅರಿತುಕೊಂಡ ಉಡುಪಿಯ ಸಮಾಜಸೇವಕ, ನಿತ್ಯಾನಂದ ಒಳಕಾಡು ಶೇವಿಂಗ್ ಕಿಟ್ ಗಳನ್ನು ಉಚಿತವಾಗಿ ವಿತರಿಸಿದ್ದಾರೆ. ಉಡುಪಿಯ ಇಂದಿರಾ ಕ್ಯಾಂಟೀನ್, …

Read More »

ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್………….

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಳೆಯಿಂದ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಅನುಮತಿ ಸಿಗಲಿದೆ. ಕ್ರಷರ್ ವ್ಯವಹಾರ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಬ್‍ರಿಜಿಸ್ಟ್ರಾರ್ ಚೇರಿಗೆ ಬರುವ ಮುನ್ನ ಕಚೇರಿಗೆ ಕರೆ ಮಾಡಿ ಅಧಿಕಾರಿಗಳಿಗೆ ಸಮಯ ಕೇಳಿ ಬರಬೇಕಾಗುತ್ತದೆ.ಕಚೇರಿಗೆ ಬರುವವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಕಂದಾಯ ಸಚಿವ ಅಶೋಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಅಗತ್ಯ ಸೇವೆ ಜೊತೆ ಆರ್ಥಿಕ …

Read More »

ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆ- ಇಬ್ಬರ ಬಂಧನ…….

ಉಡುಪಿ: ಜಿಲ್ಲೆಯಲ್ಲಿ ಮತ್ತೊಮ್ಮೆ ಕೊರೊನಾ ವಾರಿಯರ್ಸ್ ಮೇಲೆ ಬೆದರಿಕೆ ಪ್ರಕರಣ ಮರುಕಳಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯನ್ನ ಬೆದರಿಸಿದ ಘಟನೆ ನಡೆದಿದೆ. ಕೊರೊನಾ ಲಾಕ್‍ಡೌನ್ ನಡುವೆ ಬೆಂಗಳೂರಿಂದ ಬಂದಿರುವ ಯುವಕ ಸಂದೀಪ್ ಮೇಸ್ತ ಎಂಬಾತನಿಗೆ ಆಶಾ ಕಾರ್ಯಕರ್ತೆ ಲಕ್ಷ್ಮೀ ಹೋಂ ಕ್ವಾರಂಟೈನ್ ವಿಧಿಸಿದ್ದರು. ಆದರೆ ಸಂದೀಪ್ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುತ್ತಿದ್ದ. ಹೀಗಾಗಿ ಸಂದೀಪ್ ನನ್ನ ಮನೆಯಲ್ಲಿರುವಂತೆ ಸೂಚನೆ ನೀಡಿದ್ದೇ ತಡ ಸಂದೀಪ್ ಹಾಗೂ ಆತನ ಗೆಳೆಯ …

Read More »

ಲಾಕ್‍ಡೌನ್ ನಿರ್ಧಾರ ರಾಜ್ಯಗಳಿಗೆ ಬಿಟ್ಟರೆ ಬಿಎಸ್‍ವೈ ಪ್ಲಾನ್ ಏನು?

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಹಿನ್ನೆಲೆ ಮೇ 3ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಆ ಬಳಿಕ ಕೇಂದ್ರ ಸರ್ಕಾರವು ಲಾಕ್‍ಡೌನ್ ನಿರ್ಧಾರವನ್ನು ರಾಜ್ಯಗಳಿಗೆ ಬಿಟ್ಟರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದಿನ ನಡೆ ಏನು ಎಂಬ ಚರ್ಚೆ ಶುರುವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಕೂಡ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದರ ಆಧಾರದ ಮೇಲೆ ಸಿಎಂ ನಿರ್ಧಾರ …

Read More »

ಕಳ್ಳಬಟ್ಟಿ ಅಡ್ಡೆಗಳ ಮೇಲೆ ದಾಳಿ- ಸಾವಿರ ಲೀಟರ್ ಕಳ್ಳಬಟ್ಟಿ ನಾಶ……….

ಬಾಗಲಕೋಟೆ: ಒಂದೇ ದಿನ 3 ವಿವಿಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಜಿಲ್ಲಾ ಅಬಕಾರಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 1 ಸಾವಿರ ಲೀಟರ್ ಗೂ ಅಧಿಕ ಕಳ್ಳಬಟ್ಟಿ ನಾಶಪಡಿಸಿದ್ದಾರೆ. ತಾಲೂಕಿನ ನಾಯನೇಗಲಿ, ಸೀತಿಮನಿ ತಾಂಡಾದಲ್ಲಿನ ಅಡ್ಡೆಗಳ ಮೇಲೆ ದಾಳಿ ವೇಳೆ 800 ಲೀಟರ್ ಬೆಲ್ಲದ ಕೊಳೆ, ಬೀಳಗಿ ತಾಲೂಕಿನ ಬಿಸನಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಸುಮಾರು 200 ಲೀಟರ್ ಬೆಲ್ಲದ ಕೊಳೆ ಪತ್ತೆಯಾಗಿದೆ. ಒಟ್ಟು …

Read More »