Breaking News

Laxminews 24x7

ನರ ರೋಗದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್……..

ಮಂಗಳೂರು: ಕೊರೊನಾ ಸೋಂಕಿತ ವೃದ್ಧೆಯ ಸಾವಿನ ಬಳಿಕ ಕೊರೊನಾ ಹಾಟ್‍ಸ್ಪಾಟ್ ಆಗಿ ಬದಲಾಗಿರುವ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ತಗಲಿದೆ. ವೃದ್ಧೆಯ ಪಕ್ಕದ ಬೆಡ್ ನಲ್ಲಿದ್ದ 80 ವರ್ಷದ ತಾಯಿ ಮತ್ತು ಆಕೆಯ ಆರೈಕೆಗೆ ಬಂದಿದ್ದ 45 ವರ್ಷದ ಮಗನಿಗೆ ಸೋಂಕು ಕಾಣಿಸಿಕೊಂಡಿದೆ. ಇವರು ಮಂಗಳೂರಿನ ಶಕ್ತಿನಗರದ ನಿವಾಸಿಗಳಾಗಿದ್ದು, ಆ ಏರಿಯಾವನ್ನು ಕಂಪ್ಲೀಟ್ ಸೀಲ್‍ಡೌನ್ ಮಾಡಲಾಗಿದೆ. ನರ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಫಸ್ಟ್ …

Read More »

ಕೊರೋನಾದಿಂದ ಬಚಾವಾದ ಚೀನಾ, ವಿಶ್ವದಾದ್ಯಂತ ನಿಲ್ಲದ ಮರಣಮೃದಂಗ..!

ವಾಷ್ಟಿಂಗ್ಟನ್/ಬೀಜಿಂಗ್, ಏ.27- ಇಡೀ ವಿಶ್ವಕ್ಕೆ ಕಿಲ್ಲರ್ ಕೊರೊನಾವನ್ನು ಕೊಡುಗೆಯಾಗಿ ನೀಡಿ ಎರಡು ಲಕ್ಷಕ್ಕೂ ಅಧಿಕ ಸಾವಿಗೆ ಕಾರಣವಾದ ಚೀನಾ ಈಗ ಕೋವಿಡ್-19 ವೈರಾಸ್‍ನಿಂದ ಬಚಾವ್ ಆಗಿದೆ. ಆದರೆ ಡೆಡ್ಲಿ ಕೊರೊನಾ ಇಡೀ ಜಗತ್ತಿಗೆ ಕಾಡುತ್ತಿರುವ ಮಹಾಮಾರಿಯಾಗಿ ಪರಿಣಮಿಸಿದೆ. ಕೊರೊನಾ ವೈರಾಣುವಿನ ಉಗಮ ಬಿಂದು ವುಹಾನ್ ನಗರಿ ಸೋಂಕಿನಿಂದ ಸಂಪೂರ್ಣ ಮುಕ್ತವಾಗಿದ್ದು, ಅಲ್ಲಿ ಕಟ್ಟಕಡೆಯ ಸೋಂಕಿನ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆದರೆ ಪ್ರಪಂಚದ 250ಕ್ಕೂ ಹೆಚ್ಚು ದೇಶಗಳು .ಈ ಹೆಮ್ಮಾರಿಯ …

Read More »

ಕೊರೊನಾದಿಂದ ಕಂಗೆಟ್ಟ ವಲಯಗಳಿಗೆ 6 ತಿಂಗಳು ಜಿಎಸ್‍ಟಿ ರಿಲೀಫ್..?!

ನವದೆಹಲಿ, ಏ.27-ಕೊರೊನಾದಿಂದ ದೇಶದಲ್ಲಿ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇನ್ನೊಂದೆಡ ಆರ್ಥಿಕ ಚಟುವಟಿಕೆಗೆ ಭಾರೀ ಹೊಡೆತ ಬಿದ್ದಿದೆ. ಇದರಿಂದ ಎಲ್ಲಾ ಕ್ಷೇತ್ರಗಳು ಕಂಗೆಟ್ಟಿವೆ. ಪ್ರಸ್ತುತ ಆರ್ಥಿಕ ಸಂಕಷ್ಟ ಸ್ಥಿತಿಯನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ವಲಯಗಳಿಗೆ ಆರು ತಿಂಗಳ ಮಟ್ಟಿಗೆ ಸರಕುಗಳು ಮತ್ತು ಸೇವಾ ತೆರಿಗೆಗಳು (ಜಿಎಸ್‍ಟಿ) ವಿನಾಯಿತಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ರಿಯಲ್ ಎಸ್ಟೇಟ್‍ಗಳು, ಏರ್‍ಲೈನ್ಸ್ …

Read More »

ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ: ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ ಕೈರಾನ್ ಸಾವನ್ನಪ್ಪಿದ ವಿದ್ಯಾರ್ಥಿ. ಉತ್ತರ ಕನ್ನಡ ಜಿಲ್ಲೆಯ ಮೂಲದವನಾದ ಸುದೀಪ್, ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದನು. ವಿದ್ಯಾಭ್ಯಾಸಕ್ಕಾಗಿ ಧಾರವಾಡದ ಹೊಯ್ಸಳ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದನು. ಲಾಕ್‍ಡೌನ್ ಪರಿಣಾಮ ಮದ್ಯ ಸಿಗದ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಜೊತೆ …

Read More »

ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು.

ಹುಬ್ಬಳ್ಳಿ: ಲಾಕ್‍ಡೌನ್ ಹಾಗೂ ರಂಜಾನ್ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಮಿಟ್ ಆನ್ ಮಿಲ್ಸ್ (ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ) ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ವೇಳೆಯಲ್ಲಿ ಜನರು ಮನೆಯಿಂದ ಹೊರಬರದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೆ ಇದು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಜನರ ಮಾಂಸಕ್ಕೆ …

Read More »

ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆ……….update……

ಬೆಂಗಳೂರು: ಇಂದು 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಓರ್ವ ರೋಗಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿದ್ದು, ಸಾವಿನ ಸಂಖ್ಯೆ 20ಕ್ಕೆ ತಲುಪಿದೆ. ಇದುವರೆಗೂ ಕೊರೊನಾದಿಂದ 193 ಮಂದಿ ಗುಣಮುಖರಾಗಿದ್ದಾರೆ. ಇಂದು ಒಟ್ಟು 11 ಮಂದಿ ಆಸತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ರಾಜ್ಯದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಮಂಡ್ಯ 2, ದಕ್ಷಿಣ ಕನ್ನಡ 2, ವಿಜ …

Read More »

ಸಂಕಷ್ಟಕ್ಕೆ ಸಿಲುಕಿದ ರೈತ ಕುಟುಂಬ – ಜಮೀನಿನಲ್ಲೇ ಕೊಳೆಯುತ್ತಿದೆ ಚೆಂಡು ಹೂವು……..

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕಾರಣದಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರು, ನಿರ್ಗತಿಕರು ಹಾಗೂ ರೈತರ ಬದುಕು ಅಸ್ತವ್ಯಸ್ತವಾಗಿದೆ. ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಲಕ್ಕೂರು ಗ್ರಾಮದ ರೈತ ಕೆಂಪರಾಜು ಅವರು ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದಾರೆ. ಈ ಗುತ್ತೆಗೆ ಪಡೆದ ಜಮೀನಿನಲ್ಲಿ ಚೆಂಡು ಹೂವು ಬೆಳೆದು, ಸರಿಯಾದ ಮಾರುಕಟ್ಟೆ ಇಲ್ಲದೇ …

Read More »

ಮೇ 15ರವರೆಗೂ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ರಾಜ್ಯಗಳ ಬೇಡಿಕೆ ಏನು?

ನವದೆಹಲಿ: ಲಾಕ್‍ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದು ಸಭೆ ಬಳಿಕ ಲಾಕ್‍ಡೌನ್ ಮುಂದುವರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ. ಮತ್ತಷ್ಟು ವಿನಾಯ್ತಿಗಳೊಂದಿಗೆ ಮೇ 15ರವರೆಗೂ ಲಾಕ್‍ಡೌನ್ ಮುಂದುವರಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬರಬೇಕಿದೆ. ಈ ವಾರದ ಅಂತ್ಯದಲ್ಲಿ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಐದನೇ ಬಾರಿ ಮಾತನಾಡಿಲಿದ್ದು, ಈ …

Read More »

ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ……..

ಹುಬ್ಬಳ್ಳಿ: ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಆರೋಗ್ಯ ತಪಾಸಣೆಯನ್ನು ನಗರದ ಕಿಮ್ಸ್ ನ ಪಿಎಂಎಸ್‍ಎಸ್ ವೈ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಡಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪತ್ರಕರ್ತರಿಗೆ ಕೋವಿಡ್ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಟ್ಟದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಗಂಟಲು ದ್ರವ ಸಂಗ್ರಹಿಸಲಾಯಿತು. ರಾಜ್ಯದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, …

Read More »

ಜೀವ ಮತ್ತು ಜೀವನ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ: ಲಕ್ಷ್ಮಣ್ ಸವದಿ

ರಾಯಚೂರು: ಜನಪ್ರತಿನಿಧಿಗಳು ಜಾತಿ, ರಾಜಕೀಯ ಬಿಟ್ಟು ನಿಜವಾಗಿ ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕಿದೆ. ಎಲ್ಲವೂ ಸರ್ಕಾರದಿಂದ ಸಾಧ್ಯವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಜೀವ ಮತ್ತು ಜೀವನ ಉಳಿಸಲು ಹಾಗೂ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕರೆ ನೀಡಿದ್ದಾರೆ. ರಾಯಚೂರು ಜಲ್ಲೆಯಲ್ಲಿ ಡಿಸಿಎಂ ಅಕಾಲಿಕ ಮಳೆಯಿಂದಾಗಿ ಹಾನಿಯಾದ ಬೆಳೆ ವೀಕ್ಷಣೆ ಮಾಡಿದರೆ. ಬಳಿಕ ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಹಸಿರು …

Read More »