Breaking News
Home / Laxminews 24x7 (page 3840)

Laxminews 24x7

ಯಮಕನಮರಡಿ ವೈ.ವಿ.ಎಸ್ ಶಾಲಾ ಆವರಣದಲ್ಲಿ ನೃತ್ಯೋತ್ಸವ…..

ಯಮಕನಮರಡಿ ವೈ.ವಿ.ಎಸ್ ಶಾಲಾ ಆವರಣದಲ್ಲಿ ಯ.ವಿ ಸಂಘದ ಪೂರ್ವ-ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವತಿಯಿಂದ ನಡೆದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಾಗೂ ಅವರು ಅತ್ಯಂತ ಗೌರವದಿಂದ ಮಾಡಿದ ಸನ್ಮಾನವನ್ನು ಪ್ರೀತಿಯಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ. ಬಿ. ಹಂಜಿ, ಉಪಾಧ್ಯಕ್ಷರಾದ ಶ್ರೀ ರಾಮಗೊಂಡಾ …

Read More »

ಹಾಸ್ಟೆಲ್‍ಗಳಿಗೆ ಕಳಪೆ ಮಟ್ಟದ ಆಹಾರ ಸಾಮಾಗ್ರಿ ವಿತರಿಸುವವರ ವಿರುದ್ಧ ಸೂಕ್ತ ಕ್ರಮ -ಸಿಇಒ ಡಾ.ಪಿ.ರಾಜಾ

ಕಲಬುರಗಿ,ಜ.20.(ಕ.ವಾ.)- ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಮಟ್ಟದ ಆಹಾರ ನೀಡುತ್ತಿರುವ ಕುರಿತು ದೂರುಗಳು ಬಂದಿದ್ದು, ಅಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡುವ ಮೂಲಕ ಸಂಪೂರ್ಣ ವರದಿ ನೀಡಬೇಕು. ಅಲ್ಲದೇ ಕಳಪೆ ಮಟ್ಟದ ಆಹಾರ ಸಾಮಾಗ್ರಿ ಒದಗಿಸುತ್ತಿರುವ ಏಜೆಂಟ್‍ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಪಿ.ರಾಜಾ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ನಗರದ ಜಿಲ್ಲಾ …

Read More »

ಜನ ಸಂಪರ್ಕ ಸಭೆ 20-01-2020 ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ರವಿ ಡಿ ಚೆನ್ನಣ್ಣನವರ್,

ಜನ ಸಂಪರ್ಕ ಸಭೆ 20-01-2020 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ರವಿ ಡಿ ಚೆನ್ನಣ್ಣನವರ್, ಐ.ಪಿ.ಎಸ್, ರವರು ಇಂದು ನಂದಗುಡಿಯಲ್ಲಿ ಜನ ಸಂಪರ್ಕ ಸಭೆ ನಡೆಸಿದರು ಸಾರ್ವಜನಿಕರು ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ಟ್ರಾಫಿಕ್ ಸಮಸ್ಯೆ ಮತ್ತು ಗಾಂಜಾ ಹಾವಳಿ ಬಗ್ಗೆ ದೂರಿದರು ಸ್ಥಳದಲ್ಲೇ ಉಪಸ್ಥಿತರಿದ್ದ ಪಿ.ಎಸ್.ಐ ಮತ್ತು ಸಿ.ಪಿ.ಐ ರವರಿಂದ ಸಮಸ್ಯೆಯ ಪರಿಹಾರದ ಬಗ್ಗೆ ಸಾರ್ವಜನಿಕರಿಗೆ ಭರವಸೆ ನೀಡಿದರು, ಹಾಗೆಯೇ ಜಿಲ್ಲೆಯ ಹೆಚ್ಚುವರಿ ಅಧೀಕ್ಷಕರಾದ …

Read More »

 ಸೊಲ್ಲಾಪುರದ ಮಹಾನಗರದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ

”ಟಿಇಟಿ ತಪ್ಪಾಗಿ ಪ್ರಕಟವಾದ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆಗಳು” ಸೊಲ್ಲಾಪುರದ ಮತ್ತೆ ಮಹಾನಗರದಲ್ಲಿ ಕನ್ನಡಿಗರಿಗೆ ಅವಮಾನ 1 ರಲ್ಲಿ 30 ಅಂಕ ಮತ್ತು ಪೇಪರ್ 2 ರಲ್ಲಿ 30 ಅಂಕ ಹೀಗೆ ಒಟ್ಟು 60 ಅಂಕಗಳ ಕನ್ನಡ ಭಾಷೆಯ ಪ್ರಶ್ನೆಗಳು ತಪ್ಪಾಗಿ ಪ್ರಕಟಗೊಂಡಿದ್ದು ರಿಂದ ಮರುಪರೀಕ್ಷೆ ಹೌದು ಮಹಾರಾಷ್ಟ್ರ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹುದ್ದೆಗಾಗಿ ರವಿವಾರ ನಡೆದ ಶಿಕ್ಷಕರ ಅಹ೯ತಾ ಪರೀಕ್ಷೆ (ಟಿಇಟಿ) ಯಲ್ಲಿ ಪೇಪರ್ 1ಯಲ್ಲಿ ಪೇಪರ್ …

Read More »

ಆಟೋ ಚಾಲಕನ ಮಾಹಿತಿ ಮೇರೆಗೆ ಮೂರು ವಿಶೇಷ ತಂಡ ಟೋಪಿವಾಲನಿಗಾಗಿ ಮಂಗಳೂರು ಪೊಲೀಸರು ವ್ಯಾಪಕ ಶೋಧ

ಬೆಂಗಳೂರು,ಜ.21-ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಪರಾರಿಯಾಗಿರುವ ಟೋಪಿವಾಲನಿಗಾಗಿ ಮಂಗಳೂರು ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಡಾ.ಹರ್ಷ ಅವರು ಆರೋಪಿಯ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಈ ತಂಡಗಳು ನಿನ್ನೆಯಿಂದಲೇ ಆರೋಪಿಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿವೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ನಂತರ ಮಂಗಳೂರು ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಬಿಳಿ ಶರ್ಟ್ , ಕಪ್ಪು ಬಣ್ಣದ ಪ್ಯಾಂಟ್ ತೊಟ್ಟು ಮುಖ ಕಾಣದ ಹಾಗೆ ಟೋಪಿಯನ್ನು …

Read More »

ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ.

ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಸಮೀಪ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಬಸ್ ಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಗೈಲ್ಲ. ಐಮಂಗಲ ಗೇಟ್​​ ಬಳಿ ಬಸ್​ ಬರುತ್ತಿರುವಾಗ …

Read More »

ಬೆಳಗಾವಿ ಜಿಲ್ಲೆಯ ಮುತ್ಯಾನಟ್ಟಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ 6 ತಿಂಗಳುಗಳಿಂದವೈದ್ಯಾಧಿಕಾರಿಗೈರು

ಬೆಳಗಾವಿ ಜಿಲ್ಲೆಯ ಮುತ್ಯಾನಟ್ಟಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ 6 ತಿಂಗಳುಗಳಿಂದ ಹೆಚ್ಚಾಗಿ ಗೈರು ಇರುವ ವೈದ್ಯಾಧಿಕಾರಿ ಸುಜಾತಾ ಕಿನಗಿ ನಿರ್ಲಕ್ಷ್ಯತನದಿಂದ ಯಡವಟ್ಟು ಮಾಡಿಕೊಂಡಿದ್ದಾರೆ.   ಬೆಳಗಾವಿ ಜಿಲ್ಲೆಯ ಮುತ್ಯಾನಟ್ಟಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ 6 ತಿಂಗಳುಗಳಿಂದ ಹೆಚ್ಚಾಗಿ ಗೈರು ಇರುವ ವೈದ್ಯಾಧಿಕಾರಿ ಸುಜಾತಾ ಕಿನಗಿ ನಿರ್ಲಕ್ಷ್ಯತನದಿಂದ ಯಡವಟ್ಟು ಮಾಡಿಕೊಂಡಿದ್ದಾರೆ. ಅದೆನಪ್ಪ ಅಂದರೆ ಸರ್ಕಾರಿ ಹುದ್ದೆಗೆ ವೈದ್ಯಕೀಯ ಪ್ರಮಾಣ ಪತ್ರ ತರಲು ಒಬ್ಬ ಸ್ಥಳಿಯ ಯುವಕ …

Read More »

ಸಿದ್ದರಾಮಯ್ಯರನ್ನು ಮೂಲೆ ಗುಂಪು ಮಾಡಲು ಕಾಂಗ್ರೆಸ್‌ನಲ್ಲಿ ಮಾಸ್ಟರ್ ಪ್ಲಾನ್

ಬೆಂಗಳೂರು, ಜ.21-ಸಮನ್ವಯ ಸಮಿತಿ ರಚನೆ, ಕಾರ್ಯಾಧ್ಯಕ್ಷರ ನೇಮಕಕ್ಕೆ ವಿರೋಧ, ಶಾಸಕಾಂಗ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನ ಬೇರೆ ಬೇರೆ ಮಾಡುವುದು ಸೇರಿದಂತೆ ಹಲವಾರು ಗೊಂದಲಗಳನ್ನು ಸೃಷ್ಟಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೂಲೆ ಗುಂಪು ಮಾಡುವ ಪ್ರಯತ್ನ ಕಾಂಗ್ರೆಸ್‍ನಲ್ಲಿ ವ್ಯಾಪಕವಾಗಿ ನಡೆದಿದೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿ ಮುಂದುವರೆಯಲು ಆಸಕ್ತಿ ಹೊಂದಿದ್ದಾರೆ. ವಿಪಕ್ಷ ಸ್ಥಾನ ಮತ್ತು ಶಾಸಕಾಂಗ ಪಕ್ಷ ನಾಯಕ ಸ್ಥಾನ ಎರಡೂ ಒಬ್ಬ …

Read More »

ಸಿದ್ದರಾಮಯ್ಯಗೆ ಎಚ್.ಕೆ.ಪಾಟೀಲ್ ಟಾಂಗ್, ಸಿಎಲ್‍ಪಿ-ವಿಪಕ್ಷ ನಾಯಕ ಸ್ಥಾನ ಬೇರ್ಪಡಿಸಲು ಸಲಹೆ

ಬೆಂಗಳೂರು, ಜ.21- ಶಾಸಕಾಂಗ ಪಕ್ಷದ ಹಾಗೂ ವಿರೋಧ ಪಕ್ಷದ ನಾಯಕ ಈ ಎರಡೂ ಸ್ಥಾನಗಳನ್ನು ಪ್ರತ್ಯೇಕಗೊಳಿಸಬೇಕೆಂದು ಹೇಳುವ ಮೂಲಕ ಮಾಜಿ ಸಚಿವ ಎಚ್.ಕೆ.ಪಾಟೀಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಯುಪಿಎ ಅವಧಿಯಿಂದಲೂ ಸಂಸತ್‍ನಲ್ಲಿ ವಿಪಕ್ಷ ನಾಯಕ ಸ್ಥಾನ ಮತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿವೆ. ಮಹಾರಾಷ್ಟ್ರದಲ್ಲಿ ಇದೇ ರೀತಿ ಎರಡು ಹುದ್ದೆಗಳನ್ನು ಬೇರ್ಪಡಿಸಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಎರಡು ಹುದ್ದೆಗಳು …

Read More »

9 ನೂತನ ಶಾಸಕರಿಗೆ ಸಚಿವ ಸ್ಥಾನದ ಪಟ್ಟಿ ರೆಡಿ, ಖಾತೆ ಹಂಚಿಕೆ ಬಾಕಿ..!

ಬೆಂಗಳೂರು,ಜ.20- ಅಮಿತ್ ಷಾ ಸಿದ್ಧಪಡಿಸಿ ದ್ದಾರೆ ಎನ್ನಲಾದ ಸಚಿವರ ಪಟ್ಟಿ ಅಂತಿಮಗೊಂಡರೆ ಉಪಚುನಾವಣೆಯಲ್ಲಿ ಗೆದ್ದ 7 ಶಾಸಕರ ಜೊತೆಗೆ 2018ರ ಚುನಾವಣೆಯಲ್ಲಿ ಗೆದ್ದಿದ್ದ ಪಕ್ಷದ ಇಬ್ಬರು ಶಾಸಕರು ಯಡಿಯೂರಪ್ಪ ನವರ ಸಂಪುಟ ಸೇರ್ಪಡೆಯಾಗುವುದು ಖಚಿತವಾಗಿದ್ದು, ಅವರಿಗೆ ಯಾವ ಖಾತೆ ನೀಡಬೇಕೆಂಬು ದನ್ನೂ ಕೂಡ ಷಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ 11 ಮಂದಿ ನೂತನ ಶಾಸಕರು ಯಾವಾಗ ಸಚಿವ ಸಂಪುಟ ವಿಸ್ತರಣೆಯಾಗಿ ತಮಗೆ ಸಚಿವ ಹುದ್ದೆ ನೀಡುತ್ತಾರೊ ಎಂದು ಕಾಯುತ್ತಿದ್ದಾರೆ. …

Read More »