ಮಂಡ್ಯ: ತಾನೇ ಸಾಕಿದ್ದ ಹಸು ಮುಂದೊಂದ್ದು ದಿನ ತನ್ನನ್ನೇ ಕೊಲ್ಲಬಹುದು ಎಂದು ಆ ಬಾಲಕ ಕನಸ್ಸಿನಲ್ಲೂ ಯೋಚಿಸಿರಲಿಲ್ಲ. ಆದರೆ ವಿಧಿಲಿಖಿತ ಅದೇ ಆಗಿತ್ತು. ಆ ಹಸುವಿನಿಂದಲೇ ಬಾಲಕ ಪ್ರಾಣಬಿಟ್ಟಿದ್ದಾನೆ. ಇಂತಹದ್ದೊಂದು ಮನಕಲಕುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಯತ್ತಂಬಾಡಿ ಗ್ರಾಮದಲ್ಲಿ ಸಂಭವಿಸಿದ್ದು, 13 ವರ್ಷದ ಬಾಲಕ ಮಾದೇಶ್ (13) ಬಲಿಯಾಗಿದ್ದಾನೆ. ಸೋಮವಾರ ರಾತ್ರಿ ಹಸುವಿಗೆ ಹುಲ್ಲು ಹಾಕಲು ಹೋಗಿದ್ದ ಮಾದೇಶ್ಗೆ ಕೊಂಬಿನಿಂದ ತಿವಿದಿದೆ. ಮಾರಣಾಂತಿಕವಾಗಿ ಗಾಯಗೊಂಡ ಬಾಲಕ …
Read More »ಮಹೇಶ ಫೌಂಡೇಶನ್ ನೂತನ ವೆಬ್‌ಸೈಟ್ ಗೆ ಚಾಲನೆ ನೀಡಿದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಮಹೇಶ ಫೌಂಡೇಶನ ಸಂಸ್ಥೆಯ ‘ಪ್ರಯತ್ನ’ ಎಂಬ ನೂತನ ವೆಬ್‌ಸೈಟ್ ಅನ್ನು ಸತೀಶ ಶುಗರ್ಸ್ ನಿರ್ದೇಶಕರಾದ ರಾಹುಲ್ ಹಾಗೂ ಪ್ರಿಯಾಂಕ್ ಜಾರಕಿಹೊಳಿ ಬಿಡುಗಡೆಗೊಳಿಸಿದರು. ಇಲ್ಲಿನ ಕಣಬರ್ಗಿ ಮಹೇಶ ಪೌಂಡೇಶನ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಯುವ ದಿನಾಚರಣೆ, ಸ್ವಾಮಿ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂತನ ವೆಬ್ ಸೈಟ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ರಾಹುಲ್ ಜಾರಕಿಹೊಳಿ, ಸಮಾಜದ ಸೌಲಭ್ಯ ವಂಚಿತ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ …
Read More »ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ …
Read More »BIG BREAKING : ನಾಳೆ 3.50ಕ್ಕೆ ನೂತನ ಸಚಿವರ ಪ್ರಮಾಣವಚನ : 8 ಶಾಸಕರು ಸಂಪುಟ ಸೇರ್ಪಡೆ – ಸಿಎಂ ಯಡಿಯೂರಪ್ಪ
ಬೆಂಗಳೂರು : 7 ರಿಂದ 8 ಶಾಸಕರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳುವ ಬಗ್ಗೆ ನಾಳೆ 3.50 ಗಂಟೆಗೆ ತೀರ್ಮಾನ ಕೈಗೊಳ್ಳಲಾಗುವುದು. ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಒಬ್ಬರನ್ನು ಕೈಬಿಡುವ ಚರ್ಚೆ ಕೂಡ ನಡೆದಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ನಾಳೆ ಸಂಜೆ 3.50ಕ್ಕೆ ನೂತನ ಸಚಿವರು ಸಂಪುಟ ಸೇರ್ವಡೆಗೊಳ್ಳಲಿದ್ದಾರೆ. 7 ರಿಂದ …
Read More »ಬಳೋಬಾಳ : 27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ
ಬಳೋಬಾಳ : 27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಸೋಮವಾರದಂದು ಅಡಿಗಲ್ಲು ಸಮಾರಂಭ ನೆರವೇರಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಬಳೋಬಾಳ ಪಶು ಚಿಕಿತ್ಸಾಲಯ ಹೊಸ ಕಟ್ಟಡಕ್ಕೆ 27 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಉತ್ತಮ ಗುಣಮಟ್ಟದ ಕಾಮಗಾರಿ ನಿಗದಿತ …
Read More »ಎಫ್‌ಐಆರ್ ದಾಖಲಿಸಲು ₹ 1 ಲಕ್ಷ ಲಂಚ: ಬೈಯಪ್ಪನಹಳ್ಳಿ ಠಾಣೆ ಪಿಎಸ್‌ಐ ಸೌಮ್ಯಾ ಬಂಧನ
ಬೆಂಗಳೂರು: ಪ್ರಕರಣವೊಂದರಲ್ಲಿ ಎಫ್‌ಐಆರ್ ದಾಖಲಿಸಲು ದೂರುದಾರರಿಂದ ₹ 1 ಲಕ್ಷ ಲಂಚ ಪಡೆಯುತ್ತಿದ್ದ ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸೌಮ್ಯಾ ಮತ್ತು ಹೆಡ್ ಕಾನ್ ಸ್ಟೆಬಲ್ ಜೆ.ಪಿ. ರೆಡ್ಡಿ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಎಸಿಬಿ ಕಾರ್ಯಾಚರಣೆ ವೇಳೆ …
Read More »ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ: ಗೋವಿಂದ ಕಾರಜೋಳ
ಬಾಗಲಕೋಟೆ: ರಾಮಕೃಷ್ಣ ಹೆಗಡೆ ಅವರ ದೂರದೃಷ್ಠಿಯ ಫಲವಾಗಿ ಇಡೀ ದೇಶಕ್ಕೆ ಮಾದರಿಯಾದ ಪಂಚಾಯತ್ ರಾಜ್ ವ್ಯವಸ್ಥೆ ನಮ್ಮ ರಾಜ್ಯದಲ್ಲಿತ್ತು. ಆದರೆ ವೀರಪ್ಪ ಮೋಯ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ಪಂಚಾಯತ್ ವ್ಯವಸ್ಥೆಯ ಅರಿವಿಲ್ಲದೆ ಅವಿವೇಕಿತನದ ನಿರ್ಧಾರದಿಂದ ಈ ವ್ಯವಸ್ಥೆಯೇ ಕುಲಗೆಟ್ಟಿತು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಗೊಳಿಸಲು ಚರ್ಚೆ ನಡೆಸುತ್ತಿದ್ದು, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ನಗರದಲ್ಲಿ ಬುಧವಾರ ಜಿಲ್ಲಾ …
Read More »ಅಭಿಮಾನಿಯ ಮನದಾಸೆ ಈಡೇರಿಸಿದ ಪವರ್ ಸ್ಟಾರ್ ಪುನೀತ್
ಡಾ.ರಾಜ್‌ಕುಮಾರ್ ಕುಟುಂಬದವರನ್ನು ಸುಮ್ಮನೆ ‘ದೊಡ್ಮನೆಯರು’ ಎನ್ನುವುದಿಲ್ಲ. ಅವರ ವಿಶಾಲ ಮನೋಭಾವಕ್ಕೆ ಅನ್ವರ್ಥವಾಗಿ ಆ ಹೆಸರು ಬಂದಿದೆ. ಶಿವಣ್ಣ, ಬೀದಿ ಬದಿಯಲ್ಲಿ ಚಹ ಕುಡಿದ, ಉಪ್ಪಿಟ್ಟು ತಿಂದ, ಅಭಿಮಾನಿಗಳಿಗೆ ಸಹಾಯ ಮಾಡಿದ ಸುದ್ದಿಗಳು, ಚಿತ್ರಗಳು ನೋಡಿಯೇ ಇರುತ್ತೀರಾ. ಪುನೀತ್ ರಾಜ್‌ಕುಮಾರ್ ಸಹ ಸರಳತೆಯಲ್ಲಿ ಅಣ್ಣನಂತೆಯೇ. ಇತ್ತೀಚೆಗಷ್ಟೆ ತಮ್ಮ ಕಚೇರಿಯ ಉದ್ಯೋಗಿಯೊಬ್ಬರ ಮದುವೆಗಾಗಿ ಕರಾವಳಿಗೆ ಬಂದಿದ್ದ ಪುನೀತ್ ರಾಜ್‌ಕುಮಾರ್, ಇದೀಗ ಮತ್ತೊಮ್ಮೆ ತಮ್ಮ ವಿಶಾಲ ಹೃದಯಕ್ಕೆ, ಮನುಷ್ಯ ಪ್ರೀತಿಗೆ ಉದಾಹರಣೆಯೊಂದನ್ನು ನೀಡಿದ್ದಾರೆ. ಅಭಿಮಾನಿಯೊಬ್ಬ …
Read More »ಕತ್ರಿನಾ ಕೈಫ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ತಮಿಳಿನ ಸ್ಟಾರ್ ನಟ
ನಟಿ ಕತ್ರಿನಾ ಕೈಫ್ ಈ ಹಿಂದೆ ಕೆಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಬಾಲಿವುಡ್ ನಲ್ಲಿ ಸ್ಥಾನ ಭದ್ರವಾದ ಬಳಿಕ ಅವರು ದಕ್ಷಿಣದತ್ತ ತಲೆ ಹಾಕಿಲ್ಲ. ಆದರೆ ಹೊಸ ಸಿನಿಮಾ ಒಂದರಲ್ಲಿ ನಟಿ ಕತ್ರಿನಾ ಕೈಫ್ ಜೊತೆಗೆ ದಕ್ಷಿಣದ ಖ್ಯಾತ ನಟನೊಬ್ಬ ತೆರೆ ಹಂಚಿಕೊಳ್ಳಲಿದ್ದಾರೆ. ನಟ ವಿಜಯ್ ಸೇತುಪತಿ ಹಿಂದಿ ಸಿನಿಮಾದಲ್ಲಿ ಕತ್ರಿನಾ ಕೈಫ್ ಜೊತೆಗೆ ನಟಿಸಲಿದ್ದಾರೆ. ‘ಅಂಧಾದುನ್’ ಎಂಬ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ಶ್ರೀರಾಮ್ ರಾಘವ್ …
Read More »ಭಂಡಾರ ಆಸ್ಪತ್ರೆಯ ಬೆಂಕಿ ಅವಘಢದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಹಾರಾಷ್ಟ್ರದ ಭಂಡಾರಾದಲ್ಲಿ ಸಂಭವಿಸಿದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನೂ ಘೋಷಿಸಲಾಗಿದೆ. ಪಿಎಂ ಮೋದಿ ಈ ಹಿಂದೆ ಟ್ವೀಟ್ ಮಾಡಿ ‘ಮಹಾರಾಷ್ಟ್ರದ ಭಂಡಾರಾದಲ್ಲಿ ನಾವು ಅಮೂಲ್ಯ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ. …
Read More »
Laxmi News 24×7