Breaking News

Laxminews 24x7

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

ಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ. ಅದೊಂದು ಕುಟುಂಬದ ಟ್ರಸ್ಟ್​, ಕಳ್ಳರ ಕೂಟ. ಹೀಗಾಗಿ ಉಚ್ಚಾಟನೆ ಎಂಬ ಪ್ರಶ್ನೆಯೇ ಬರುವುದಿಲ್ಲ. ಆದ್ದರಿಂದ ಈ ಬಗ್ಗೆ ನಾನು ಮಾತನಾಡಿಲ್ಲ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪರೋಕ್ಷವಾಗಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಹರಿಹಾಯ್ದರು. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಇಂದು ದಿ.ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ …

Read More »

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, ರೈತರೇ ನಮ್ಮ ಆಸ್ತಿ ಎಂದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ     ಘೋಡಗೇರಿ (ತಾ. ಹುಕ್ಕೇರಿ)- ‌ನಮ್ಮ ವಿರೋಧಿಗಳು ಸಾವಿರ ಸಲ ಟೀಕಿಸಲಿ, ಬೈಯಲಿ.‌ ಅಂತಹ ಯಾವುದೇ ಟೀಕೆ- ಟಿಪ್ಪಣಿಗಳಿಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಅವುಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಯಾರನ್ನೂ ಟೀಕಿಸುವುದಿಲ್ಲ. ಮತ್ತೊಬ್ಬರನ್ನು ಬೈಯುವಂತಹ ಸಂಸ್ಕೃತಿಯೂ …

Read More »

ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ: ಸೆ.28 ರಿಂದ ಹುಬ್ಬಳ್ಳಿ – ಕೊಲ್ಲಂ ವಿಶೇಷ ರೈಲು ಸೇವೆ ಆರಂಭ

ನವದೆಹಲಿ/ಹುಬ್ಬಳ್ಳಿ: ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೆಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗಲು ವಿಶೇಷ ರೈಲು ಸಂಚಾರ ಆರಂಭಿಸಲಾಗುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರ ಪ್ರಯತ್ನದ ಫಲವಾಗಿ ಹುಬ್ಬಳ್ಳಿಯಿಂದ ಕೊಲ್ಲಂವರೆಗೆ 22 ಕೋಚ್‌ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟಂಬರ್‌ 28 ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಯಾವ ಮಾರ್ಗದಲ್ಲಿ ರೈಲು ಸಂಚಾರ: ರಾಜ್ಯದ ಹುಬ್ಬಳ್ಳಿ, …

Read More »

ಕಾಂತಾರ ಚಾಪ್ಟರ್​ 1′ ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ರಿಷಬ್ ಶೆಟ್ಟಿ ದಂಪತಿ​

ಬೈಂದೂರು(ಉಡುಪಿ): ಕಾಂತಾರ ಚಾಪ್ಟರ್​ 1 ಟ್ರೈಲರ್​ ಬಿಡುಗಡೆಯಾಗಿದ್ದು ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ರಿಷಬ್ ಶೆಟ್ಟಿ ಪತ್ನಿ ಸಹಿತ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಸಿನಿಮಾದ ಯಶಸ್ಸಿಗಾಗಿ ಪ್ರಾರ್ಥಿಸಿದರು. ತಮ್ಮ ಪ್ರತಿ ಸಿನಿಮಾ ಬಿಡುಗಡೆಗೂ ಮುನ್ನ ರಿಷಬ್​ ಅವರು ತಾಯಿ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಇನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ …

Read More »

ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷ ಗಡಿಪಾರು ಮಾಡಿ ಆದೇಶಿಸಲಾಗಿದೆ.

ಬೆಳ್ತಂಗಡಿ (ದಕ್ಷಿಣ ಕನ್ನಡ) : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಹೋರಾಟಗಾರ, ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿಯ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದು, ಇದರ ಪರಿಶೀಲನೆ ನಡೆಸಿ ಈ ವರದಿಯ ಆಧಾರ ಹಿನ್ನೆಲೆಯಲ್ಲಿ ಸೆ.18ರಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ …

Read More »

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ತಾಂತ್ರಿಕ ಸಮಸ್ಯೆ, ಗೊಂದಲಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಿಪಡಿಸುತ್ತೇನೆ- ಸಚಿವ ತಂಗಡಗಿ

ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಆರಂಭದಲ್ಲಿ ವಿಘ್ನ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಅಂದುಕೊಂಡಷ್ಟು ವೇಗವಾಗಿ ಸಮೀಕ್ಷೆ ಕಾರ್ಯ ನಡೆಸಲು ಅಡ್ಡಿಯಾಗಿದೆ. ಅಲ್ಲದೆ ಸಮೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಸಂಬಂಧ ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುತ್ತೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಮೈಸೂರು ದಸರಾ 2025: ಆಹಾರ ಮೇಳದಲ್ಲಿ ಆದಿವಾಸಿಗಳ ವಿಶೇಷ ಬಂಬೂ ಬಿರಿಯಾನಿ

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಆಹಾರ ಮೇಳ ಆಯೋಜಿಸಿದ್ದು, ಬಂಬೂ ಬಿರಿಯಾನಿ ಜನರನ್ನು ಸೆಳೆಯುತ್ತಿದೆ. ಮೇಳಕ್ಕೆ ಬರುತ್ತಿರುವವರು ಬಂಬೂ ಬಿರಿಯಾನಿ ಸ್ಟಾಲ್​ ಮುಂದೆ ಸಾಲುಗಟ್ಟುತ್ತಿದ್ದಾರೆ. ಬಂಬೂ ಬಿರಿಯಾನಿ ಹೇಗೆ ತಯಾರಾಗುತ್ತದೆ, ಇದರಲ್ಲಿರುವ ಔಷಧೀಯ ಗುಣಗಳು ಯಾವುವು ಎಂಬ ಬಗ್ಗೆ ಆದಿವಾಸಿ ಕೃಷ್ಣಪ್ಪ ಅವರು ಈಟಿವಿ ಭಾರತ್​ಗೆ ವಿವರಿಸಿದರು. ಮೈಸೂರು ದಸರಾ ಎಂದರೆ ಜಂಬೂ ಸವಾರಿ, ದಸರಾ ದೀಪಲಂಕಾರ ನೋಡಿಕೊಂಡು ಜನರು ದಸರಾ ಆಹಾರ ಮೇಳಕ್ಕೆ ಬಂದು ಇಲ್ಲಿನ ವಿಶೇಷ ಆಹಾರಗಳನ್ನು …

Read More »

ಕನ್ನಡ ಖ್ಯಾತ ಕಾದಂಬರಿಕಾರ ಎಸ್​ ಎಲ್​ ಭೈರಪ್ಪ ನಿಧರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ಕನ್ನಡ ಸಾಹಿತ್ಯಲೋಕದ ಹಿರಿಯ ಸಾಹಿತಿ, ಕಾದಂಬರಿಕಾರ, ತತ್ವಜ್ಞಾನಿ, ಪದ್ಮಭೂಷಣ, ಸರಸ್ವತಿ ಸಮ್ಮಾನ್​ ಪುರಸ್ಕೃತರಾದ ಎಸ್ ಎಲ್‌ ಭೈರಪ್ಪ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.   ಹೃದಯಸ್ತಂಭನದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ 2:38ಕ್ಕೆ ಅವರು ನಿಧನರಾದರು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶೈಲಾ ಹೆಚ್​ ಎನ್​ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.   ಭೈರಪ್ಪ ಅವರು ತಮ್ಮ ಜನಪ್ರಿಯ ಕಾದಂಬರಿಗಳಾದ …

Read More »

ಪ್ರಗತಿಪರ ಯುವ ರೈತನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದ ಸಚಿವ ಶಿವಾನಂದ ಪಾಟೀಲ

ಪ್ರಗತಿಪರ ಯುವ ರೈತನನ್ನು ಸನ್ಮಾನಿಸಿ ಪ್ರೋತ್ಸಾಹಿಸಿದ ಸಚಿವ ಶಿವಾನಂದ ಪಾಟೀಲ ವರ್ಷಪೂರ್ತಿ ಹಣ್ಣು ಬಿಡುವ ಥೈಲ್ಯಾಂಡ್ ಮಾವು ಬೆಳೆದ ಸಾವಯವ ರೈತ ಕಗ್ಗೋಡ ಪದವೀಧರ ಯುವರೈತ ನವೀನ ಸಾಧನೆಗೆ ಸಚಿವರಿಂದ ಮೆಚ್ಚುಗೆ ವಿಜಯಪುರ ಜಿಲ್ಲೆಯ ಪದವೀಧರ ಯುವ ಪ್ರಗತಿಪರ ರೈತರೊಬ್ಬರು ಥೈಲ್ಯಾಂಡ್ ಮೂಲದ ಮಾವು ಬೆಳೆದು ಯಶಸ್ಸು ಸಾಧಿಸಿದ್ದಾರೆ. ಹಣ್ಣಿನ ಸ್ವಾದ ಸವಿದ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಪ್ರಗತಿಪರ ಯುವರೈತ …

Read More »

ಸರಕಾರ ಆರಂಭಿಸಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯ ಎಲ್ಲ ಉಪಜಾತಿಗಳು ಧರ್ಮದ ಕಾಲಂನಲ್ಲಿ ಬೌದ್ಧ ಹಾಗೂ ಜಾತಿಯ ಕಾಲಂನಲ್ಲಿ ಪರಿಶಿಷ್ಟ ಜಾತಿ ಎಂದು ಬರೆಸಬೇಕು ಎಂದು ಭಾರತೀಯ ಭೌದ್ಧ ಮಹಾಸಭಾದ ಅಧ್ಯಕ್ಷ ಎಸ್.ಆರ್. ಕೋಕಾಟೆ ಹೇಳಿದರು.

ಬೆಳಗಾವಿ :ಸರಕಾರ ಆರಂಭಿಸಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯ ಎಲ್ಲ ಉಪಜಾತಿಗಳು ಧರ್ಮದ ಕಾಲಂನಲ್ಲಿ ಬೌದ್ಧ ಹಾಗೂ ಜಾತಿಯ ಕಾಲಂನಲ್ಲಿ ಪರಿಶಿಷ್ಟ ಜಾತಿ ಎಂದು ಬರೆಸಬೇಕು ಎಂದು ಭಾರತೀಯ ಭೌದ್ಧ ಮಹಾಸಭಾದ ಅಧ್ಯಕ್ಷ ಎಸ್.ಆರ್. ಕೋಕಾಟೆ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರದಿಂದ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ‌ಆರಂಭವಾಗಿದೆ. ಜಾತಿ ಸಮೀಕ್ಷೆ ಮಾಡುವ ಮುನ್ನ ಮೊದಲ ಬಾರಿಗೆ ಬೌದ್ಧ ಧರ್ಮದ ಬಗ್ಗೆ ಉಲ್ಲೇಖ ಮಾಡಿರುವುದು ಸ್ವಾಗತಾರ್ಹ. …

Read More »