Breaking News

Laxminews 24x7

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್​ಪೋರ್ಟ್​ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More »

ಸವುಳು- ಜವಳಿಗೆ: ಪ್ಯಾಕೇಜ್‌ ನೀಡಿ

ಅಥಣಿ: ಒಂದು ಕಾಲದಲ್ಲಿ ಫಲವತ್ತಾದ ಭೂಮಿಯಾಗಿದ್ದ ಅಥಣಿ ತಾಲ್ಲೂಕು ಈಗ ಸವುಳು- ಜವಳ ಮಣ್ಣಾಗಿದೆ. ಕೆಲವೆಡೆ ದ್ರಾಕ್ಷಿಯ ಹೊರತಾಗಿ ಮತ್ಯಾವ ಬೆಳೆಯನ್ನೂ ಬೆಳೆಯಲು ಈ ಮಣ್ಣು ಯೋಗ್ಯವಾಗಿಲ್ಲ. ಇಂಥ ಮಣ್ಣಿಗೆ ಮತ್ತೆ ಮರುಜೀವ ನೀಡುವ ಯೋಜನೆ ರಾಜ್ಯ ಸರ್ಕಾರದಲ್ಲಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಕಾರ್ಯಗತವಾಗಿಲ್ಲ. ಅಥಣಿ ತಾಲ್ಲೂಕನ್ನು ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಪರಿಗಣಿಸಬೇಕು ಎಂಬುದು ಜನರ ಆಗ್ರಹ. ಸವುಳು-ಜವುಳು ಜಮೀನಿಗೆ ಹಿಪ್ಪರಗಿ ಅಣೆಕಟ್ಟೆ ಕಾರಣವೆಂದು ಕೆಲ ರೈತರು ಹೇಳುತ್ತಾರೆ. …

Read More »

ಕಾಗವಾಡ ತಾಲ್ಲೂಕಿಗೆ ಬೇಕಿದೆ ವಿಶೇಷ ಅನುದಾನ

ಕಾಗವಾಡ: ಕಾಗವಾಡ ಹೊಸ ತಾಲ್ಲೂಕೆಂದು ಘೋಷಣೆಯಾಗಿ ಎಂಟು ವರ್ಷ ಕಳೆದಿದೆ ಆದರೆ ಈವರೆಗೂ ಎಲ್ಲ ಇಲಾಖೆಗಳ ಕಚೇರಿ ಬಂದಿಲ್ಲ. ಇನ್ನೂ ಕೆಲವೇ ಕಚೇರಿಗಳೂ ಬಾಡಿಗೆ ಕಟ್ಟಡಗಳಲ್ಲಿ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ವಿವಿಧ ಕೆಲಸಗಳ ಅಂಗವಾಗಿ ಅಲ್ಲಿಗೆ ಬರುವವರು ತೊಂದರೆ ಅನುಭವಿಸುವಂತಾಗಿದೆ. ಈ ಬಜೆಟ್‌ನಲ್ಲಿ ತಾಲ್ಲೂಕಿಗೆ ಅನುದಾನ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಇಲ್ಲಿ ತಹಶೀಲ್ದಾರ್‌ ಕಚೇರಿಯೂ ಆರಂಭಗೊಂಡಿದೆ. ಆದರೆ ಈ ಕಚೇರಿಗೆ ಸಂಬಂಧಿಸಿದ ಹಲವು ಶಾಖೆಗಳು ಅಥಣಿಯಲ್ಲೇ ಕಾರ್ಯನಿರ್ವಹಿಸುತ್ತಿವೆ. ಜನ …

Read More »

ಪ್ರವಾಹ ಪೀಡನೆಯಿಂದ ಮುಕ್ತಿ ಕೊಡಿ

ಮೂಡಲಗಿ: ಘಟಪ್ರಭಾ ನದಿಗೆ ಮಸಗುಪ್ಪಿ ಬಳಿಯಲ್ಲಿ ನಿರ್ಮಿಸಿರುವ ಸೇತುವೆಗೆ 200ಮೀ. ರವರೆಗೆ ಉದ್ದವಾದ ಒಡ್ಡವಿದ್ದು (ಅಪ್ರೋಚಿಂಗ ರೋಡ್‌) ಇದರಿಂದ ಪ್ರವಾಹ ಬಂದಾಗ ಸಂಚಾರ ನಿಲ್ಲುವುದು ಮತ್ತು ನದಿ ನೀರಿನ ವಿಸ್ತಾರ ಅಧಿಕವಾಗಿ ಸಾವಿರಾರು ಎಕರೆಯಷ್ಟು ಬೆಳೆ ಹಾನಿಯಾಗುತ್ತದೆ. ನೂರಾರು ಮನೆಗಳು ಜಲಾವೃತಗೊಳ್ಳುತ್ತವೆ. ಸೇತುವೆಯನ್ನು ವಿಸ್ತರಿಸಿ ಕಮಾನುಗಳನ್ನು ನಿರ್ಮಿಸಿದರೆ ಪ್ರವಾಹದಿಂದಾಗುವ ಹಾನಿ ಮುಕ್ತಗೊಳಿಸಲು ಸಾಧ್ಯ. ಇವೆಲ್ಲವನ್ನು ಪ್ರಸಕ್ತ ಆಯವ್ಯಯದಲ್ಲಿ ಪರಿಗಣಿಸಬೇಕಾಗಿದೆ. ಘಟಪ್ರಭಾ ನದಿಗೆ ಪ್ರವಾಹ ಬಂದಾಗೊಮ್ಮೆ ಸುಣಧೋಳಿ ಮತ್ತು ಅವರಾದಿ ಬ್ರಿಡ್ಜ್‌ …

Read More »

ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,934 ಪೌರಕಾರ್ಮಿಕರಿಗೆ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಸ್ವಚ್ಛತಾ ಯೋಧರಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿ ಪಾಲಿಕೆಯ ಮೇಲಿದೆ. ಇವರ ಆರೋಗ್ಯ ತಪಾಸಣೆಯನ್ನು ಪಾಲಿಕೆಯಿಂದ ಆಗಾಗ್ಗೆ ನಿರ್ವಹಿಸಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಬಾಲಸುಂದರ್ ತಿಳಿಸಿದರು. ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 49 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ …

Read More »

2ನೇ ಮಗು ಪಡೆದರೆ ₹25 ಸಾವಿರ ಪ್ರೋತ್ಸಾಹಧನ: ನಾಯ್ಡು

ಅಮರಾವತಿ: ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ಹೆಚ್ಚಿಸಲು ಎರಡನೇ ಮಗು ಪಡೆಯುವ ದಂಪತಿಗೆ ₹25 ಸಾವಿರ ‘ಜನನ ಪ್ರೋತ್ಸಾಹಧನ’ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಗುರುವಾರ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು, ‘ರಾಜ್ಯದಲ್ಲಿ ಪ್ರಸ್ತುತ ಒಟ್ಟು ಫಲವಂತಿಕೆ ದರ 1.5ರಷ್ಟಿದ್ದು, ಇದು ನಿಗದಿತ ಮಟ್ಟಕ್ಕಿಂತ ಕಡಿಮೆಯಿದೆ. ಇದನ್ನು 2.1ಕ್ಕೆ ಏರಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ. ‘ನಾವು ಹೊಸ ವಿಧಾನವನ್ನು ಪರಿಶೀಲಿಸುತ್ತಿದ್ದೇವೆ. ಎರಡನೇ ಮಗು ಅಥವಾ …

Read More »

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

ಕೋಲಾರ: ‌ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಬೆವರಿಳಿಸಿದ ಪ್ರಸಂಗ ನಡೆಯಿತು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಬೇಸಿಗೆ ಶುರುವಾಗಿದ್ದು, ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾದರೆ, ಜನರಿಂದ ದೂರುಗಳು ಬಂದರೆ ಸುಮ್ಮನಿರಲ್ಲ. ನೆಪ ಹೇಳದೆ ಕೆಲಸ ಮಾಡಿ …

Read More »

ಸಚಿವ ದಿನೇಶ್ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಎಐಸಿಸಿ ನೀಡಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಪುದುಚೇರಿ ವಿಧಾನಸಭೆ ಚುನಾವಣೆ 2026ಕ್ಕೆ ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಮಾರ್ಚ್ 10ರ …

Read More »

ಮಕ್ಕಳ ಹಕ್ಕುಗಳ ರಕ್ಷಣೆ ಪೊಲೀಸರ ಆದ್ಯ ಕರ್ತವ್ಯ; ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಲು ಪೊಲೀಸರಿಗೆ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕರೆ

ಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ ಸಕಾಲದಲ್ಲಿ ನ್ಯಾಯ ಒದಗಿಸುವುದು ಪೊಲೀಸರ ಆದ್ಯ ಕರ್ತವ್ಯವಾಗಿದೆ, ಇದನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಬೆಂಗಳೂರು, ಗೃಹ ಇಲಾಖೆ, ಬೆಂಗಳೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು, ಇವರ ಸಹಯೋಗದಲ್ಲಿ ವಿಕಾಸ ಸೌಧದ ಸಭಾಂಗಣದಲ್ಲಿ …

Read More »

ಗೃಹಲಕ್ಷ್ಮಿ’ಯರಿಗೆ ಮತ್ತೊಂದು ಗುಡ್ ನ್ಯೂಸ್: ನಗದು ಜತೆಗೆ ಸೀರೆ ವಿತರಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಮಾಸಿಕ ತಲಾ ಎರಡು ಸಾವಿರ ರೂಪಾಯಿ ವರ್ಗಾವಣೆ ಮಾಡಲಾಗುತ್ತಿದೆ. ಈ ಯೋಜನೆ ಫಲಾನುಭವಿ ಮಹಿಳೆಯರಿಗೆ ವರ್ಷಕ್ಕೆ ಎರಡು ಸೀರೆಗಳನ್ನು ನೀಡುವ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬಜೆಟ್ ಮಂಡಿಸಲಿದ್ದು, ಬಜೆಟ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಹಕಾರ ಸಂಘಗಳ ಮೂಲಕ ಸೀರೆ ವಿತರಣೆ ಮಾಡುವ ಯೋಜನೆ …

Read More »