ಬೆಂಗಳೂರು : ಲ್ಯಾಪ್ಟಾಪ್ ಕಳ್ಳತನವಾಗಿದೆ ಎಂದು ದೂರು ನೀಡಿದ ಯುವತಿಯನ್ನು ಚಾಮರಾಜಪೇಟೆ ಸಬ್ಇನ್ಸ್ಪೆಕ್ಟರ್ ವಿಶ್ವನಾಥ್ ಆತ್ಯಾಚಾರ ಮಾಡಿದ ಆರೋಪದಡಿ ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಅಮಾನತುಗೊಳಿಸಿದ್ದಾರೆ. ಕಳೆದ ಆಗಸ್ಟ್ 8ರಂದು ಲಾಪ್ ಟ್ಯಾಪ್ ಕಳ್ಳತನವಾಗಿದೆ ಎಂದು ಆರೋಪಿಸಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ಯುವತಿಯೊಬ್ಬರು ದೂರು ನೀಡಿದ್ದರು. ಸಬ್ಇನ್ಸ್ಪೆಕ್ಟರ್ ವಿಶ್ವನಾಥ್ ಎಂಬುವರು ತನಿಖೆ ಕೈಗೊಂಡು, ತನಿಖೆ ಸೋಗಿನಲ್ಲಿ ಪ್ರತಿ ದಿನ ನನಗೆ ಕರೆ ಮಾಡಿ ಚಾಟ್ ಮಾಡುತ್ತಿದ್ದರು. 12 …
Read More »ಕಾಲೇಜಿನಲ್ಲಿ ಒಬ್ಬಳೇ ವಿದ್ಯಾರ್ಥಿನಿ ಆಗಮಿಸಿದ್ದಳು: ಪಾಠ ಮಾಡಿದ ಶಿಕ್ಷಕ
ರಾಯಚೂರು : ಇಂದಿನಿಂದ ರಾಜ್ಯದಲ್ಲಿ ಕಾಲೇಜುಗಳು ಮತ್ತೆ ತೆರೆದಿವೆ. ಆದರೆ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿಲ್ಲ. ಕಾಲೇಜುಗಳು ಆರಂಭವಾದರೂ ವಿದ್ಯಾರ್ಥಿಗಳು ಕ್ಲಾಸ್ ಬಂದಿಲ್ಲ. ರಾಯಚೂರಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಬ್ಬಳೇ ವಿದ್ಯಾರ್ಥಿನಿ ಆಗಮಿಸಿದ್ದು, ಆಕೆಗೆ ಉಪನ್ಯಾಸಕರು ಪಾಠ ಮಾಡಿದ್ದಾರೆ. ಒಬ್ಬ ಬಿ.ಕಾಂ. ವಿದ್ಯಾರ್ಥಿನಿಗೆ ಶಿಕ್ಷಕರು ಪಾಠ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಕುಳಿತ ವಿದ್ಯಾರ್ಥಿನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಉಪನ್ಯಾಸಕರು ಸಹ ಮಾಸ್ಕ್ ಹಾಕಿಕೊಂಡು ಕೋವಿಡ್ ನಿಯಮ ಪಾಲಿಸಿ ಬೋಧನೆ ಮಾಡಿದ್ದಾರೆ. ಈ ಕಾಲೇಜಿನಲ್ಲಿ …
Read More »ಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ
ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …
Read More »ಬಿ.ವೈ.ವಿಜಯೇಂದ್ರ ಅವರನ್ನು ಕೆಲವು ಮಾಧ್ಯಮಗಳು ವೈಭವೀಕರಿಸುವ ಪ್ರಯತ್ನ ನಡೆಸುತ್ತಿವೆ.:ಈಶ್ವರಪ್ಪ
ಶಿವಮೊಗ್ಗ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಲವು ಮಾಧ್ಯಮಗಳು ವೈಭವೀಕರಿಸುವ ಪ್ರಯತ್ನ ನಡೆಸುತ್ತಿವೆ. ಇದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಶಿರಾ ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರ ಪ್ರಯತ್ನದಿಂದ ಗೆಲುವು ಸಾಧ್ಯವಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ವೈಭವೀಕರಿಸುವ ಪ್ರಯತ್ನ ನಡೆಯಿತು. ಬಿಜೆಪಿ ಯಾವುದೇ ಒಬ್ಬ ವ್ಯಕ್ತಿಯ ಪ್ರಯತ್ನದಿಂದ ಚುನಾವಣೆ ಗೆಲ್ಲಲ್ಲ. ಸಂಘಟನೆಯ ಪ್ರಯತ್ನದಿಂದ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದು …
Read More »ನನಗಾದ ಅನ್ಯಾಯಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ: ಅಖಂಡಶ್ರೀನಿವಾಸ್
ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮೆನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಸಂಪತ್ ರಾಜ್, ತಡರಾತ್ರಿ ಬೆಂಗಳೂರಿನ ತನ್ನ ಸ್ನೇಹಿತನ ಮನೆಗೆ ಬಂದಿದ್ದರು. ಈ ವೇಳೆ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ತನ್ನ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆಯೇ ಸಂಪತ್ ರಾಜ್ …
Read More »ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯ
ತುಮಕೂರು: ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ. ಇದರ ಬದಲು ಎಲ್ಲಾ ಸಮಾಜ ಜಾತಿಯಲ್ಲಿ ಇದ್ದಂತಹ ಹಿಂದುಳಿದವರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತುಕೊಡುವ ಕೆಲಸ ಸರ್ಕಾರ ಮಾಡಿದರೆ …
Read More »ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಆರಂಭಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಿಗೆ ಅಲೆದಾಡುವ ಸ್ಥಿತಿ
ಬೆಳಗಾವಿ: ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಆರಂಭವಾಗಿದ್ದು, ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಆದರೆ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನೆಗೆಟಿವ್ ಇದ್ದ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಿರುವುದರಿಂದ ವಿದ್ಯಾರ್ಥಿಗಳು ಕೋವಿಡ್ ಟೆಸ್ಟಗಾಗಿ ಅಲೆದಾಡುತ್ತಿದ್ದಾರೆ. ಟೆಸ್ಟ್ ಮಾಡಿಸಲು ಸೂಕ್ತ ಸ್ಥಳದ ಮಾಹಿತಿ ದೊರಕದೆ ಇಡಿ ಜಿಲ್ಲಾಸ್ಪತ್ರೆ ಸುತ್ತುತ್ತಿದ್ದಾರೆ. ಹೀಗೆ ಬಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನನ …
Read More »ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ
ಗದಗ: ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ ನಡೆದಿದೆ. ಬೆಟಗೇರಿ ಸಿಪಿಐ ಭೀಮನಗೌಡ ಬಿರಾದಾರ ಹಾಗೂ ಪಿಎಸ್‍ಐ ಗಿರಿಜಾ ಜಕ್ಕಲಿ ನೇತೃತ್ವದಲ್ಲಿ ದಾಳಿಯಾಗಿದೆ. ಈ ವೇಳೆ ಇಸ್ಪೀಟು ಆಡುತ್ತಿದ್ದ ಸುಮಾರು 25 ಜನರ ಬಂಧಿಸಲಾಗಿದೆ. ಬಂಧಿತರಿಂದ ಲಕ್ಷಾಂತರ ರೂ. ಹಣ, ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರಿಗೆ ಬೇಕಾದವರನ್ನು ಬಿಟ್ಟಿರುವ ಹಾಗೂ ಇಸ್ಪೀಟ್ ನೋಡಲು ಬಂದವರ ಬಂಧನ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. …
Read More »ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ತಕ್ಷಣ ಆರಂಭ:B.S.Y.
ಬೆಂಗಳೂರು: ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸಿಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಬೆನ್ನಲ್ಲೇ ಲಿಂಗಾಯತ ಸಮುದಾಯದ ಸಚಿವರು ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗವೂ ಸಹ ತಮ್ಮ ಸಮುದಾಯಕ್ಕೆ ಶೇ.16 ರಷ್ಟು ಮೀಸಲು ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …
Read More »ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯದಿದ್ದರೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್
ಬೆಂಗಳೂರು : ಸರ್ಕಾರದಿಂಧ ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ. ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹ ಮಾಡಿದ್ದಾರೆ. ಜೊತೆಗೆ ಮರಾಠಿ ಪ್ರಾಧಿಕಾರ ರಚನೆಯ ಹಿಂದೆ ಭಾರಿ ಪಿತೂರಿ …
Read More »
Laxmi News 24×7