Breaking News

Laxminews 24x7

ರಾಜ್ಯ ಸರ್ಕಾರ ದಿಢೀರನೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡ ಪರ ಸಂಘಟನೆಗಳಿಂದಲ್ಲದೇ ವಿವಿಧ ಸ್ತರಗಳಿಂದಲೂ ತೀವ್ರ ವಿರೋಧ

ಬೆಂಗಳೂರು, : ರಾಜ್ಯ ಸರ್ಕಾರ ದಿಢೀರನೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಇದಕ್ಕೆ ರಾಜ್ಯದ ನಾನಾ ಭಾಗಗಳಲ್ಲಿ ಅಪಸ್ವರ ಕೇಳಿ ಬಂದಿದೆ.ಯಾವುದೇ ಮಾಹಿತಿಯನ್ನು ಕೊಡದೆ ಏಕಾಏಕಿ ಪ್ರಾಧಿಕಾರ ರಚನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಬಸವ ಕಲ್ಯಾಣದ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿರುವ ಸರ್ಕಾರದ ಧೋರಣೆಗೆ ಕನ್ನಡ ಪರ ಸಂಘಟನೆಗಳಿಂದಲ್ಲದೇ ವಿವಿಧ ಸ್ತರಗಳಿಂದಲೂ …

Read More »

ಭಾರತೀಯ ಚಿತ್ರರಂಗದ ಅಭಿನೇತ್ರ ಮತ್ತು ನಾಟಕಕಾರ ಸೌಮಿತ್ರ ಚಟರ್ಜಿ (85) ಇನ್ನಿಲ್ಲ.

ಭಾರತೀಯ ಚಿತ್ರರಂಗದ ಹಿರಿಯ ಅಭಿನೇತ್ರ ಮತ್ತು ನಾಟಕಕಾರ ಸೌಮಿತ್ರ ಚಟರ್ಜಿ (85) ಇನ್ನಿಲ್ಲ. ಒಂದು ತಿಂಗಳಿಗೂ ಹೆಚ್ಚು ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಚಟರ್ಜಿ ಇಂದು ಮಧ್ಯಾಹ್ನ 12.15ರ ಸಮಯದಲ್ಲಿ ವಯೋಸಹಜ ಬಹು ಅನಾರೋಗ್ಯದಿಂದ ಕೊನೆಯುಸಿರೆಳದರು. ಪತ್ನಿ, ಪುತ್ರ, ಪುತ್ರಿ ಮತ್ತು ಅಪಾರ ಅಭಿಮಾನಿಗಳನ್ನು ಸೌಮಿತ್ರ ಚಟರ್ಜಿ ಅಗಲಿದ್ದಾರೆ. ಕೋವಿಡ್ ವೈರಸ್ ಸೋಂಕಿನಿಂದಾಗಿ ಒಂದೂವರೆ ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸೌಮಿತ್ರ ನಂತರ ಚೇತರಿಸಿಕೊಂಡರೂ ವಿವಿಧ ಅಂಗಾಂಗಗಳ ವೈಫಲ್ಯದಿಂದ ಕೊನೆಯುಸಿರೆಳೆದರು.

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತೀಶ್ ಸಾಹುಕಾರರ ಹವಾ ಫುಲ್ ಜೋರು…

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರು, ಉಡುಪಿ  ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು.  ಆ ಕೋಟೆಯನ್ನು ಮತ್ತೊಮ್ಮೆ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸುವ ಕಾಲ ಸನ್ನದವಾಗಿದೆ ಎಂದರು. ಕಾಂಗ್ರೆಸ್ ಪಕ್ಷವನ್ನು ಕೇಡರ್ ಮಾದರಿಯಲ್ಲಿ ಒಗ್ಗಟ್ಟಾಗಿ  ಬೂತ್ ಮಟ್ಟದಿಂದ ಸಂಘಟಿಸಲು ಈಗಾಗಲೇ ರಾಜ್ಯಾದ್ಯಂತ …

Read More »

R.S.S. ಅಂದ್ರೆ. ಸುಳ್ಳು ಸುಳ್ಳು ಅಂದ್ರೆ R.S.S. ಸಿದ್ದರಾಮಯ್ಯ

ಬೆಂಗಳೂರು: ಸುಳ್ಳು ಹುಟ್ಟಿದ್ದೇ ಆರ್ ಎಸ್ ಎಸ್ ನಿಂದ, ಸುಳ್ಳು ಹೇಳುವುದೇ ಆರ್ ಎಸ್‍ಎಸ್‍ನ ಅಜೆಂಡವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಆರ್ ಎಸ್‍ಎಸ್‍ನ ಪಾತ್ರವೇನಿದೆ ಅವರ ಬಲಿದಾನವೇನಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ  ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನೆಹರು ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಆರ್ ಎಸ್‍ಎಸ್‍ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದರು. ನೆಹರು ನಿಧನರಾದಾಗ ಇಡೀ ವಿಶ್ವವೇ ಸಂತಾಪ ವ್ಯಕ್ತಪಡಿಸಿತ್ತು. ನ್ಯೂಯಾರ್ಕ್ ಟೈಮ್ಸ್ ಆಧುನಿಕ …

Read More »

ಪಟಾಕಿ ನಿಷೇಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ಬೆಳಕಿನ ಹಬ್ಬದ ಮೊದಲ ದಿನವೇ ಪಟಾಕಿ ಸದ್ದು ಜೋರಾಗಿತ್ತು.

ಬೆಂಗಳೂರು, ನ.15- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪಟಾಕಿ ನಿಷೇಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ಬೆಳಕಿನ ಹಬ್ಬದ ಮೊದಲ ದಿನವೇ ಪಟಾಕಿ ಸದ್ದು ಜೋರಾಗಿತ್ತು. ಪಟಾಕಿ ಮಾರಾಟ ಮತ್ತು ಸಿಡಿಸುವುದರ ಮೇಲೆ ರಾಜ್ಯ ಸರ್ಕಾರ ನಿಷೇಧ ವಿಸಿತ್ತು. ರಾಸಾಯನಿಕ ಮಿಶ್ರಣದ ಪಟಾಕಿಗಳ ಬದಲಾಗಿ ಪರಿಸರಕ್ಕೆ ಹೆಚ್ಚಿನ ಹಾನಿಯಾಗದ ಹಸಿರು ಪಟಾಕಿಗಳನ್ನು ಬಳಸಲು ಸಲಹೆ ನೀಡಲಾಗಿತ್ತು. ದೀಪಾವಳಿಯ ಮೊದಲ ದಿನ ವಾದ ನಿನ್ನೆ ಸಂಜೆ ಪಟಾಕಿಯ ಸದ್ದು …

Read More »

ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ

ಮುಂಬೈ, :- ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ ಸುರಕ್ಷತೆ ದೃಷ್ಟಿಯಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ಬಳಸಬೇಕು. ದೇವರ ಪ್ರತಿಮೆ, ಪವಿತ್ರ ಗ್ರಂಥಗಳು ಸೇರಿದಂತೆ ಯಾವುದೇ ವಸ್ತುಗಳನ್ನು ಮುಟ್ಟುವಂತಿಲ್ಲ. ತೀರ್ಥ, ಪ್ರಸಾದ ವಿತರಣೆಯನ್ನು ನಿಷೇಸಲಾಗಿದೆ. ಪಾದರಕ್ಷೆಗಳನ್ನು ಧಾರ್ಮಿಕ ಕೇಂದ್ರಗಳಿಂದ …

Read More »

ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್

ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶೀ ಕ್ಷೇತ್ರವೆಂದೇ ಪ್ರತೀತಿಯಾಗಿರೋ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇಗುಲ ಹಾಗೂ ಆವರಣದಲ್ಲಿ ಈ ಬಾರಿ ದೀಪ ಹಚ್ಚುವಂತಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ. ನಾಳೆ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಶ್ರೀಭೋಗನಂದೀಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಲಿವೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕೊರೊನಾ ಭೀತಿ ಆತಂಕದಿಂದ …

Read More »

ಹಿಂಡಲಗಾ ಜೈಲಿನಲ್ಲಿ ನಾಳೆ ದೀಪಾವಳಿಯ ವಿಶೇಷ ಪೂಜೆ ಜೈಲಿನಿಂದಲೇ ಸಾರ್ವಜನಿಕರಿಗೆ ಶುಭಾಶಯ: ವಿನಯ್ ಕುಲಕರ್ಣಿ

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ದೀಪಾವಳಿ ಹಬ್ಬದ ಸಂಭ್ರಮವಿಲ್ಲ. ಆದರೂ ಜೈಲಿನಿಂದಲೇ ಸಾರ್ವಜನಿಕರಿಗೆ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಶನಿವಾರ ಬರೆದುಕೊಂಡಿರುವ ಅವರು, ದೀಪಾವಳಿಯ ದೀಪವು ನಮ್ಮೆಲ್ಲಾ ತೊಂದರೆಗಳನ್ನು, ಸಮಸ್ಯೆಗಳನ್ನು ಮತ್ತು ದುಃಖಗಳನ್ನು ಸುಡಲಿ. ಈ ಅದ್ಭುತ ದೀಪಾವಳಿಯಿಂದ ನಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಂಭ್ರಮ, ಸಡಗರ ಮನೆ ಮಾಡಲಿ. …

Read More »

ಬಾಲಕಿ- ಕಂದಮ್ಮಗಳಿಗೆ ದೀಪಾವಳಿ ಗಿಫ್ಟ್ ಕೊಟ್ಟ ಸಿಎಂ

ಲಕ್ನೋ: ಕಂದಮ್ಮನ ಆಕ್ರಂದನವನ್ನು ನೋಡಲಾರದೆ ಬಡ ಪಟಾಕಿ ವ್ಯಾಪಾರಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಬಂಧನದಿಂದ ಬಿಡುಗಡೆಗೊಳಿಸಿ ಬಾಲಕಿಗೆ ದೀಪಾವಳಿ ಗಿಫ್ಟ್ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಉತ್ತರ ಪ್ರದೇಶದ ಬುಲಾಂದ್‍ಶಹರ್ ನ ಖುರ್ಜಾದಲ್ಲಿ ಈ ಘಟನೆ ನಡೆದಿದ್ದು, ರಾಜ್ಯದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಮಾರುವಂತಿಲ್ಲ. ಆದರೆ ಈ ಮಾರುಕಟ್ಟೆಯಲ್ಲಿ ಕದ್ದು ಮುಚ್ಚಿ ಪಟಾಕಿ ಮಾರಲಾಗುತ್ತಿತ್ತು. ಅಂತಹವರನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಬಾಲಕಿಯ ತಂದೆಯನ್ನೂ ಬಂಧಿಸಲಾಗಿದೆ. ಅಪ್ಪನನ್ನು ಎಳೆದುಕೊಂಡು ಹೋಗುವುದನ್ನು ನೋಡಲಾಗದೆ …

Read More »

ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ?

ದೇವನಹಳ್ಳಿ: ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ? ಅದು ನಿಮ್ಮ ಬಳಿಯೇ ಇದೆ ಅಂತ ನೀವು ನೆಮ್ಮದಿಯಾಗಿದ್ದೀರಾ? ಹಾಗಾದ್ರೆ ನಿಮ್ಮ ನೆಮ್ಮದಿಗೆ ದಿಢೀರ್ ಭಂಗ ಬಂದರೂ ಬರಬಹುದು. ಅದಕ್ಕೂ ಮುನ್ನ ನೀವು ಬೆಚ್ಚಿಬೀಳುವ ಸಂಗತಿಯೊಂದು ಇಲ್ಲಿದೆ ನೋಡಿ. ಬಸವರಾಜ್, ಪ್ರಸನ್ನಕುಮಾರ್ ಮತ್ತು ಉಮೇಶ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಲೂಕು ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ಸ್. ಇವರು ಸುಲಭವಾಗಿ ಹಣ ಮಾಡಿ ಕೋಟಿ ಕೋಟಿ ಸಂಪಾದನೆ ಮಾಡೋದಕ್ಕೆ …

Read More »