Breaking News

Laxminews 24x7

ಮನವೊಲಿಸಿ, ಒಪ್ಪದಿದ್ರೆ ರಾಜೀನಾಮೆ ಅಂಗೀಕರಿಸಿ – ಒಂದು ಸಾಲಿನ ಸಂದೇಶ ಕೊಟ್ಟ ರಾಹುಲ್‌ ಗಾಂಧಿ

ಬೆಂಗಳೂರು: ʻಬೆಂಗಳೂರು ಅಭಿವೃದ್ಧಿʼ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾರೆಡ್ಡಿ  ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೋರಮಂಗಲದ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನ ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಯಾರ ಮನವೊಲಿಕೆಗೂ ಬಗ್ಗದ ರಾಮಲಿಂಗಾರೆಡ್ಡಿ, ʻನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲʼ ಎಂದು ಹಠ ಹಿಡಿದಿರುವುದು ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಮಧ್ಯೆ ಲೋಕಸಭೆ …

Read More »

ನಾನ್‌ ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗ್ಳೂರು ಅಭಿವೃದ್ಧಿ ಖಾತೆ‌ ಕೊಡ್ತೀನಿ ಅಂದ್ದಿದ್ದು ನಿಜ: ಡಿಕೆಶಿ

ಬೆಂಗಳೂರು: ನಾನು ಸಿಎಂ ಆದ್ಮೇಲೆ ರಾಮಲಿಂಗಾ ರೆಡ್ಡಿ  ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂತ ಮಾತುಕೊಟ್ಟಿದ್ದು ನಿಜ ಎಂದು ಸಿಎಂ ಡಿಕೆ ಶಿವಕುಮಾರ್‌  ಒಪ್ಪಿಕೊಂಡಿದ್ದಾರೆ. ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ವಿಚಾರ ‌ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಅವರು ಬೇರೆ ಕಡೆ ಹೋಗಿದ್ದರು, ಈಗ ಬರ್ತಿದ್ದಾರೆ. ನಾನು ಅವರನ್ನ ಭೇಟಿಯಾಗುತ್ತೇನೆ ಎಂದಿದ್ದಾರೆ. ನಾನು ಸಿಎಂ ಆದ್ಮೇಲೆ ನಿನಗೆ ಈ ಖಾತೆ ಕೊಡ್ತೀನಿ ಅಂತ ಹೇಳಿದ್ದು ನಿಜ. ಸಾರಿಗೆ …

Read More »

ಚಿಕ್ಕಬಳ್ಳಾಪುರ | KIADB ಯಿಂದ 13 ಹಳ್ಳಿಗಳ 2,800 ಎಕ್ರೆ ಭೂಸ್ವಾಧೀನ ವಿರೋಧಿಸಿ ಬೈಕ್ ರ‍್ಯಾಲಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2,800 ಎಕರೆ ಜಮೀನನ್ನ ಕೆಐಎಡಿಬಿ ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ರೈತರು ಚಿಕ್ಕಬಳ್ಳಾಪುರದಿಂದ  ಬೆಂಗಳೂರಿನ ವಿಧಾನಸೌಧಕ್ಕೆ ಬೈಕ್ ರ‍್ಯಾಲಿ  ನಡೆಸಿದರು. ಕಳೆದ 81 ದಿನಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತರು  ಇಂದು ಬೆಂಗಳೂರಿಗೆ ಬೈಕ್ ರಾಲಿ ನಡೆಸಿದ್ದರು. ಸಾವಿರಾರು ಮಂದಿ ರೈತರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡರು. ಈ ಹಿನ್ನೆಲೆ ಚಿಕ್ಕಬಳ್ಳಾಪುರ ಪೊಲೀಸರು 500 ಕ್ಕೂ …

Read More »

ರಾಜ್ಯಕ್ಕೆ ಮುಂಗಾರು ಪ್ರವೇಶ – ರೈತರಿಗೆ ಬಿತ್ತನೆ ಕಾರ್ಯಕ್ಕೆ ಸೂಚನೆ

ಧಾರವಾಡ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ರೈತರು  ಬಿತ್ತನೆ ಕಾರ್ಯ ಮಾಡಲು ಹವಾಮಾನ ಇಲಾಖೆ ವಿಜ್ಞಾನಿಗಳು ಸೂಚನೆ ನೀಡಿದ್ದಾರೆ. ಕೇರಳಕ್ಕೆ ಮುಂಗಾರು ಮಳೆ  ತಡವಾಗಿ ಪ್ರವೇಶವಾದರೂ, ರಾಜ್ಯಕ್ಕೆ ಸಮಯಕ್ಕೆ ಸರಿಯಾಗಿ ಪ್ರವೇಶವಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾದ್ಯತೆ ಇದೆ. ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿವಿಯ ಹವಾಮಾನ ಇಲಾಖೆ ವರದಿ ಮಾಡಿದೆ.

Read More »

ಕಾಂಗ್ರೆಸ್‌ ವಿರುದ್ಧದ ಜನಾಕ್ರೋಶಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ – ಮೋದಿ

ಗಾಂಧೀನಗರ: ಕರ್ನಾಟಕದಲ್ಲಿ  ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಇದರಿಂದ ಕಾಂಗ್ರೆಸ್ ವಿರುದ್ಧವೂ ಸಾರ್ವಜನಿಕರ ತೀವ್ರ ಆಕ್ರೋಶವಿದೆ ಎಂದು ಪ್ರಧಾನಿ ಮೋದಿ  ಹೇಳಿದ್ದಾರೆ. ಗುಜರಾತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ `ಸ್ವಾವಲಂಬಿ ಭಾರತ’ ಅಭಿಯಾನದಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು. ಕಾಂಗ್ರೆಸ್ ಅಥವಾ ರಾಹುಲ್ ಗಾಂಧಿಯ ಹೆಸರನ್ನು ಉಲ್ಲೇಖಿಸದೇ, ಕೆಲವರು ಭಾರತವನ್ನು ಕೆಣಕಲು ಬಯಸುತ್ತಾರೆ. ಬಿಜೆಪಿಯ ರಾಜಕೀಯ ಯಶಸ್ಸನ್ನು ಉಲ್ಲೇಖಿಸಿದ ಅವರು, ದೇಶವು ಅವ್ಯವಸ್ಥೆ, ಅನಿಶ್ಚಿತತೆ ಮತ್ತು ಹತಾಶೆಯನ್ನು ಮೆಚ್ಚುವುದಿಲ್ಲ. ಕಳೆದ …

Read More »

ಪರಿಷತ್‌ ಚುನಾವಣೆ; 5ನೇ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ 5 ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 5 ನೇ ಅಭ್ಯರ್ಥಿಯಾಗಿ ವಿನಯ್ ಕಾರ್ತಿಕ್ ಹೆಸರು ಘೋಷಣೆ ಮಾಡಿದೆ. ಈಚೆಗೆ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಘೋಷಿಸಿತ್ತು. ವಿಧಾನಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಂದು ಸ್ಥಾನ ಗೆಲ್ಲಲು 28 ಮತಗಳ ಅಗತ್ಯವಿದೆ. ಒಟ್ಟು 135 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ 112 ಮತಗಳೊಂದಿಗೆ ತನ್ನ ನಾಲ್ವರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಬಹುದು. ಕಾಂಗ್ರೆಸ್‌ನಿಂದ ಐದನೇ ಅಭ್ಯರ್ಥಿ ಘೋಷಿಸಲಾಗುವುದು …

Read More »

ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ ಭೇಟಿಯಾದ ಸಿಎಂ – ಮನವೊಲಿಕೆಗೆ ಯತ್ನ

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿದ್ದಾರೆ. ಕೋರಮಂಗಲದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿಯನ್ನು ಸಿಎಂ ಭೇಟಿ ಮಾಡಿದ್ದಾರೆ. ಖುದ್ದು ಮನವೊಲಿಕೆಗೆ ಪ್ರಯತ್ನಿದ್ದಾರೆ. ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಹೈಕಮಾಂಡ್ ಅವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನಾನು ಸಿಗೋಕೆ ಊರಲ್ಲಿ ಇರಲಿಲ್ಲ. ತಮಿಳುನಾಡಿನ ಧರ್ಮಪುರಿಗೆ ಸಮಾರಂಭಕ್ಕೆ ಹೋಗಿದ್ದೆ. ಖಾತೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ತಾವು ಬಯಸಿದ ಖಾತೆಯನ್ನು ಬಿಟ್ಟು ಬೇರೆ …

Read More »

ಯುದ್ಧದ ಮಧ್ಯೆಯೂ ಶೇ.7.7ಕ್ಕೆ ತಲುಪಿದ ಭಾರತದ ಜಿಡಿಪಿ

ನವದೆಹಲಿ: ಯುದ್ಧ ಹಾಗೂ ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ ಭಾರತದ ಆರ್ಥಿಕತೆಯ ಬೆಳವಣಿಗೆ ಕಳೆದ ವರ್ಷಕ್ಕಿಂತ ಉತ್ತಮ ರೀತಿಯಲ್ಲಿದೆ. ದೇಶದ 2026ರ ವಾರ್ಷಿಕ ಜಿಡಿಪಿ ಬೆಳವಣಿಗೆ ಶೇಕಡಾ 7.7ಕ್ಕೆ ತಲುಪಿದೆ. ಕಳೆದ ವರ್ಷ ಜಿಡಿಪಿ ಪ್ರಮಾಣ ಶೇಕಡ 7.1ರಷ್ಟಿತ್ತು. ಯುದ್ಧ ಹಾಗೂ ಜಾಗತಿಕ ಅಸ್ಥಿರತೆಯ ನಡುವೆಯೂ ಭಾರತ ತನ್ನ ಆರ್ಥಿಕ ಚೈತನ್ಯವನ್ನು ಗಟ್ಟಿಯಾಗಿ ಉಳಿಸಿಕೊಂಡಿದೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ತಿಳಿಸುತ್ತಿವೆ. ಅಂಕಿ ಅಂಶ ಮತ್ತು ಕಾರ್ಯಕ್ರಮ …

Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಬಸವರಾಜ್ ಬೊಮ್ಮಾಯಿ

ನವದೆಹಲಿ: ಸಂಸದ, ಕರ್ನಾಟಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದು (ಜೂ.5) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್  ಅವರನ್ನು ಭೇಟಿಯಾಗಿದ್ದಾರೆ. ಇಂದು ದೆಹಲಿಯ  ಬಿಜೆಪಿ ಕೇಂದ್ರ ಕಚೇರಿಯಲ್ಲಿ  ಬೊಮ್ಮಾಯಿ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ …

Read More »

ಜೂ.7ಕ್ಕೆ ಕನಕಪುರಕ್ಕೆ ಡಿಕೆಶಿ, ಗ್ರಾಮಸ್ಥರ ಭೇಟಿಯಾಗಲಿರುವ ಸಿಎಂ

ಬೆಂಗಳೂರು: ಭಾನುವಾರ (ಜೂ.5) ಸಿಎಂ ಡಿಕೆಶಿ ಅವರು ಕನಕಪುರ ತಾಲೂಕು ಪ್ರವಾಸ ಹಮ್ಮಿಕೊಂಡಿದ್ದು, ಕುಲದೇವರಿಗೆ ವಿಶೇಪ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಗ್ರಾಮಸ್ಥರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಸ್ವಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಜೊತೆಗೆ ಮನೆದೇವತೆ ಕೆಂಕೇರಮ್ಮ ಹಾಗೂ ಕುಲದೇವತೆ ಕಬ್ಬಾಳಮ್ಮ ದೇವಾಲಯಗಳಿಗೂ ಭೇಟಿ ನೀಡಿ, ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ಹುಟ್ಟೂರು ದೊಡ್ಡಾಲಹಳ್ಳಿಯಲ್ಲಿರುವ ತಂದೆ ಕೆಂಪೇಗೌಡ ಸಮಾಧಿಗೂ ಪೂಜೆ ಸಲ್ಲಿಸಲಿರುವ ಡಿಕೆಶಿ ಹುಟ್ಟೂರಿನ ಗ್ರಾಮಸ್ಥರನ್ನೂ ಭೇಟಿ ಮಾಡಲಿದ್ದಾರೆ.  …

Read More »