ಬೆಂಗಳೂರು: ಜನಪ್ರಿಯ ಹಾಸನ್ಯ ನಟ ಬುಲೆಟ್ ಪ್ರಕಾಶ್(44) ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರಿನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಅಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಏ.4 …
Read More »ರಾಯಬಾಗ:ಒಂದೇ ಪಟ್ಟಣದಲ್ಲಿ 4 ಜನರಿಗೆ ಕೊರೊನಾ ಪಾಸಿಟಿವ್ – ಹೈ ಅಲರ್ಟ್
ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಕುಡಚಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಣೆಯಾಗಿದ್ದು, ಕುಡಚಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಲಾಕ್‍ಡೌನ್ ಆದಗಿನಿಂದ ಜನರು ಹೊರ ಬರದೆ ಮನೆಯಲ್ಲಿಯೇ ಇದ್ದಾರೆ. ಆದರೂ ಕುಡಚಿ ಪಟ್ಟಣದ ಮೂವರು ಮಹಿಳೆಯರಿಗೆ ಹಾಗೂ ಓರ್ವ ಪುರುಷನಿಗೆ ಕೊರೊನಾ ಧೃಡವಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಸೋಂಕಿತರಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ …
Read More »ದೀಪ ಹಚ್ಚುವ ಬದಲು ಸಿಗರೇಟ್ ಹಚ್ಚಿಫೋಟೋ ಟ್ವೀಟ್: ರಾಮ್ ಗೋಪಾಲ್ ವರ್ಮಾ
ಬೆಂಗಳೂರು: ಕೊರೊನಾ ಮಹಾಮಾರಿ ಪ್ರಪಂಚವನ್ನೇ ವ್ಯಾಪಿಸಿದ್ದು, ಭಾರತದಲ್ಲೂ ದಿನೇ ದಿನೇ ಆತಂಕ ಹೆಚ್ಚು ಮಾಡುತ್ತಿದೆ. ಸರ್ಕಾರ ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ದೀಪ ಬೆಳಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದಕ್ಕೆ ಹಲವು ನಟ, ನಟಿಯರು ಸಾಥ್ ನೀಡಿ, ದೀಪ ಬೆಳಗಿ ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡೋಣ ಎಂಬ ಸಂದೇಶ ನೀಡಿದ್ದಾರೆ. ಆದರೆ ಟಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ …
Read More »ಕೊರೊನಾ ನಿಯಂತ್ರಣಕ್ಕೆ ಬಂದರೆ 14ರ ನಂತರ ಆರ್ಥಿಕ ಚಟುವಟಿಕೆಗಳು ಆರಂಭ ಕೈಮುಗಿದು ಲಾಕ್‍ಡೌನ್ ನಿಯಮಗಳನ್ನು ಪಾಲಿಸಿ:B.S.Y
ಬೆಂಗಳೂರು: ಕೊರೊನಾ ವೈರಸ್‍ನಿಂದ ಆಗುತ್ತಿರುವ ಆರ್ಥಿಕ ಸಮಸ್ಯೆಯನ್ನು ಸರಿದೂಗಿಸಲು ಸರ್ಕಾರಿ ನೌಕರರ ಸಂಬಳ ಕಡಿತವಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಗೆ ಸಂಬಂಧಿಸಿದಂತೆ ಸಿಎಂ ಸದ್ಯಕ್ಕೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಉತ್ತರಿಸಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ಹಣಕಾಸು ಪರಿಸ್ಥಿತಿ ಸರಿ ಇಲ್ಲ. ಆದರೂ ಸರ್ಕಾರಿ ನೌಕರರ ಏಪ್ರಿಲ್ ತಿಂಗಳ ಸಂಬಳ ನಿಲ್ಲಿಸಬೇಡಿ ಎಂದು ಸೂಚಿಸಿದ್ದೇನೆ. ಆದರೆ ಆ ನಂತರದ ತಿಂಗಳ ಬಗ್ಗೆ …
Read More »ಏ.14ಕ್ಕೆ ಲಾಕ್‍ಡೌನ್ ಮುಗಿಯುತ್ತೆ ಅಂತಾ ಭಾವಿಸಬೇಡಿ: ಸಿಎಂ
ಬೆಂಗಳೂರು: ಏಪ್ರಿಲ್ 14ಕ್ಕೆ ಲಾಕ್ ಡೌನ್ ಮುಗಿಯುತ್ತೆ ಅಂತಾ ಭಾವಿಸಬೇಡಿ. ಲಾಕ್ ಡೌನ್ ಎಷ್ಟು ದಿನ ಮುಂದುವರಿಯುತ್ತದೆ ಎನ್ನುವುದು ಜನರ ಜವಾಬ್ದಾರಿ ಮೇಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ತಿಂಗಳೇ ಲಾಕ್‍ಡೌನ್ ಮುಗಿಯುತ್ತದೆ ಎನ್ನುವಂತಿಲ್ಲ. ದಯಮಾಡಿ ಮನೆಯೊಳಗೆ ಇರಿ. ಹೊರಗಡೆ ಬಂದರೆ ಮತ್ತಷ್ಟು ದಿನ ಲಾಕ್ ಡೌನ್ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು. ಶೇ.75 ರಷ್ಟು ಈಗ ಲಾಕ್ ಡೌನ್ …
Read More »ಲೈಟ್ ಆಫ್ ಮಾಡದ್ದಕ್ಕೆ ಮಸೀದಿಗೆ ನುಗ್ಗಿ ಗಲಾಟೆ – 22 ಮಂದಿ ಬಂಧನ
ಚಿಕ್ಕೋಡಿ: ನಿನ್ನೆ ರಾತ್ರಿ ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದರೂ ಲೈಟ್ ಆಫ್ ಮಾಡದ್ದಕ್ಕೆ ಮಸೀದಿಗೆ ನುಗ್ಗಿ ಗಲಾಟೆ ಮಾಡಿದ ಘಟನೆ ಯಮಕನಮರಡಿ ಹಾಗೂ ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಲೈಟ್ ಆನ್ ಇದೆ ಎಂದು ಮಸೀದಿಗೆ ನುಗ್ಗಿ ಗಲಾಟೆ ಮಾಡಿದ್ದ 9 ಜನರ ಗುಂಪನ್ನ ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿ ಮಸೀದಿಯಲ್ಲಿ …
Read More »ನೀವು ನಾನಿದ್ದಲ್ಲಿ ಬರುವುದು ಬೇಡ, ನಾನೇ ನೀವಿದ್ದಲ್ಲಿಗೆ ಬರುತ್ತೇನೆ -ಕ್ಷೇತ್ರದ ಜವರಿಗೆ ಭರವಸೆ
ಬೆಳಗಾವಿ – ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಸಾಮಾಜಿಕ ಕಳಕಳಿ ತೋರಿಸಿದ್ದಾರೆ. ಪ್ರತಿ ನಿತ್ಯ ಶಾಸಕರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಅವರ ಗೃಹ ಕಚೇರಿಗೆ ಜನರು ಬುರುವುದು ವಾಡಿಕೆ. ದಿನವೂ ನೂರಾರು ಜನರು ಅಹವಾಲು ಸಲ್ಲಿಸಲು ಬರುತ್ತಿರುತ್ತಾರೆ. ಅವರೆಲ್ಲರ ಅಹವಾಲು ಆಲಿಸಿ, ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸವನ್ನು ಲಕ್ಷ್ಮಿ ಹೆಬ್ಬಾಳಕರ್ ಮಾಡುತ್ತ ಬಂದಿದ್ದಾರೆ. …
Read More »ಯಾರ ಹೆಗಲಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ? ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ
ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಹುಬ್ಬಳ್ಳಿಯ ಜಗದೀಶ ಶೆಟ್ಟರ್ಅವರು ಬೆಳಗಾವಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ ಬೆಳಗಾವಿ – ಇನ್ನು ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿರುವುದರಿಂದ ರಾಜ್ಯ ರಾಜಕೀಯ ಮತ್ತೆ ಕುತೂಹಲ ಮೂಡಿಸಿದೆ. ಕೊರೋನಾ ಗದ್ದಲದಿಂದಾಗಿ ಕಳೆದ ಕೆಲವು …
Read More »ನಮ್ಮ ಸರಕಾರದ ಮರ್ಯಾದೆ ಉಳಿದಿದ್ದರೆ ಡಿಸಿ, ಎಸ್ಪಿಗಳಿಂದಲೇ ಹೊರತು ಮಂತ್ರಿಗಳಿಂದಲ್:ಬಿ.ಎಸ್.ಯಡಿಯೂರಪ್ಪ
ಬೆಂಗಳೂರು – ಕೆಲಸ ಮಾಡದೆ ಮನೆಯಲ್ಲೇ ಕುಳಿತಿರುವ ಮಂತ್ರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನು ಒಂದೆರೆಡು ದಿನದಲ್ಲೇ ಮಂತ್ರಿಗಳ ಉಸ್ತುವಾರಿ ಬದಲಾವಣೆ ಮಾಡುವುದಾಗಿ ಘೋಷಿಸಿದ್ದಾರೆ. ಖಾಸಗಿ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಯಡಿಯೂರಪ್ಪ, ಇಂತಹ ಸಂದರ್ಭದಲ್ಲಿ ಮಂತ್ರಿಗಳು ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳ ಜೊತೆ ಕುಳಿತು ಆಟ ಆಡುವುದಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ. ಕೊರೋನಾ ತಡೆಯಲು ಏನೇನು ಬೇಕೋ ಅದನ್ನು ಮಾಡಿ ಎಂದು ಕರೆ …
Read More »ಚೀಲವನ್ನು ಸಾಲಗಿ ಇಟ್ಟು ಗುಂಪು ಗುಂಪಾಗಿ ನಿಂತ ಜನ
ಹಾವೇರಿ: ಕೊರೊನಾ ಸೋಂಕು ತಡೆಗೆ ಲಾಕ್‍ಡೌನ್ ಇದ್ದರೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಗುಂಪು ಗುಂಪಾಗಿ ಪಡಿತರ ಪಡೆಯಲು ಸೇರಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾರಾಯಣಪುರ ದೊಡ್ಡಪ್ರಮಾಣದ ವ್ಯವಸಾಯ ಸಹಕಾರಿ ಸಂಘದ ವಿತರಣಾ ಕೇಂದ್ರದ ಮುಂದೆ ಜನರು ಪಡಿತರ ಪಡೆಯಲು ಜಮಾಯಿಸಿದ್ದಾರೆ. ಪಡಿತರ ವಿತರಣಾ ಕೇಂದ್ರದ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿಲಾಗಿತ್ತು. ಆದರೆ ಜನರು ಮಾತ್ರ ಗುಂಪು ಗುಂಪಾಗಿ ನಿಂತು …
Read More »