Breaking News

Laxminews 24x7

ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಹೋಗಿ ಬಂದಿದ್ದರೆ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ

ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಂದ ಯಾರಾದರೂ ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆ ಸೇರಿದಂತೆ ಅನ್ಯ ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಿ ಬಂದಿದ್ದರೆ ಅಂತವರು ತಾವಾಗಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ   ಮಾಡಿಕೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈಗಾಗಲೇ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಗೂ ಲಗ್ಗೆ ಇಟ್ಟಿದೆ. ಮೂರು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ದೆಹಲಿಯ …

Read More »

ಸಿದ್ದಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ

ತುಮಕೂರು: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಿದ್ದಗಂಗಾ ಮಠ ಹಾಗೂ ಸಿದ್ದಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ.ವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಗಿದೆ. ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಇಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು. ಈ …

Read More »

ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು

ಗೋಕಾಕ: ತೋಟದಲ್ಲಿ ಆಟವಾಡುತ್ತಾ ಹೊಂಡಕ್ಕೆ ಬಿದ್ದು ನಾಲ್ಕು ಮಕ್ಕಳು ಮೃತರಾದ ಮನಕಲುಕುವ ಘಟನೆ ಸಮೀಪದ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ. ಭಾಗವ್ವಾ ಜಕ್ಕನ್ನವರ(6), ತಾಯಮ್ಮ ಜಕ್ಕನ್ನವರ(5),ಮಾಳಪ್ಪ ಜಕ್ಕನ್ನವರ(4),ರಾಜಶ್ರೀ ಜಕ್ಕನ್ನವರ(3) ಮೃತ ಮಕ್ಕಳು ಎಂದು‌ ಗುರುತಿಸಲಾಗಿದೆ. ಕರೆಪ್ಪಾ ಜಕ್ಕನ್ನವರ ಎಂಬುವರ ನಾಲ್ಕು ಮಕ್ಕಳು.ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆ ಕರೆಪ್ಪ ಮತ್ತು ತಾಯಿ ಸಮಯದಲ್ಲಿ ಮಕ್ಕಳು ಆಟವಾಡುತ್ತಾ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ನೀರು ತರಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. …

Read More »

ಜಮಾತ್‍ಗೆ ಹೋದವರಿಂದಲೇ ದೇಶಾದ್ಯಂತ ಕೊರೊನಾ ಹಬ್ಬಿಸುವ ದುಷ್ಕೃತ್ಯ: ಕರಂದ್ಲಾಜೆ

ಚಿಕ್ಕಮಗಳೂರು: ದೆಹಲಿಯ ನಿಜಾಮುದ್ದೀನ್ ತಬ್ಲಿಘಿ  ಸಭೆಯಲ್ಲಿ ಭಾಗವಹಿಸಿದ್ದವರಿಂದ ದೇಶಾದ್ಯಂತ ಕೊರೊನಾ ವೈರಸ್ ಹಬ್ಬಿಸುವ ದುಷ್ಕೃತ್ಯ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರಿನ ನಗರಸಭೆಯಲ್ಲಿ ಮಾತನಾಡಿದ ಅವರು, ಜಮಾತ್ ಸಭೆಗೆ ಹೋದ ಹಲವರು ನಾಪತ್ತೆಯಾಗಿದ್ದಾರೆ. ಇದರ ಹಿಂದೆ ಕೊರೊನಾ ಜಿಹಾದಿಯ ವಾಸನೆ ಕೂಡ ಬಡಿಯುತ್ತಿದೆ. ದೇಶವನ್ನು ಕೊರೊನಾ ಮುಕ್ತ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೋರಾಡುತ್ತಿವೆ. ಯಾರು ದೆಹಲಿಗೆ ಹೋಗಿದ್ದರೋ ಅವರನ್ನ ಪತ್ತೆ ಹಚ್ಚುವ …

Read More »

ಗ್ರಾಹಕನ ಸೋಗಿನಲ್ಲಿ ಹೋಗಿ ಬಂಧಿಸಿದ ಪೊಲೀಸರು – 100 ರೂ. ಮೌಲ್ಯದ ಮದ್ಯ 400 ರೂ. ಗೆ ಮಾರಾಟ

ಚೆನ್ನೈ: ಲಾಕ್‍ಡೌನ್ ಮಧ್ಯೆಯೂ ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚೆನ್ನೈನ ಹಮ್ಸಾ ಪಾರ್ಕ್ ನಿವಾಸಿ ಅಯ್ಯಪ್ಪನ್ ಎಂದು ಗುರುತಿಸಲಾಗಿದೆ. ಈತ ಲಾಕ್‍ಡೌನ್ ಆಗಿರುವುದನ್ನೇ ಬಂಡವಾಳ ಮಾಡಿಕೊಂಡು ಮದ್ಯವನ್ನು ಸಂಗ್ರಹಿಸಿ ಅದನ್ನು ವಾಟ್ಸಪ್ ಮೂಲಕ ಗ್ರಾಹಕರಿಗೆ ದುಬಾರಿ ಬೆಲೆಯಲ್ಲಿ ಮಾರುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗ್ರಾಹಕರ ಸೋಗಿನಲ್ಲಿ ಹೋಗಿ ಆತನನ್ನು ಬಂಧಿಸಿದ್ದಾರೆ. ಕೊರೊನಾ ಭಯದಿಂದ ಇಡೀ …

Read More »

ಸ್ಯಾನಿಟೈಜರ್ ವಿತರಿಸಿದ ಕೆಪಿಸಿಸಿ ಕಾರ್ಯಾಅಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ‌ ಕಾರ್ಯಾಧ್ಯಕ್ಷ‌ ಮತ್ತು         ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಮಾಲೀಕತ್ವದ ಸತೀಶ ಶುಗರ್ಸ್ ವತಿಯಿಂದ ಸ್ಯಾನಿಟೈಜರ್ ಬಾಟಲಗಳನ್ನು ವಿತರಿಸಲಾಯಿತು. ಗೋಕಾಕ ಮತ್ತು ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಈ ಬಾಟಲಗಳ‌ನ್ನು ವಿತರಿಸಲಾಗುವುದು. ಶಾಸಕ‌ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೌರ ಕಾರ್ಮಿಕರು‌ ಮತ್ತು ಪೊಲಿಸ್ ಸಿಬ್ಬಂದಿಗಳ …

Read More »

ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್,ಪೊಲೀಸ್ ವಾಹನದ ದುರ್ಬಳಕೆ

ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್ ಪೊಲೀಸ್ ವಾಹನದ ದುರ್ಬಳಕೆ ಸರ್ಕಾರ ಇವರಿಗೆ ವಾಹನ ಕೊಟ್ಟಿದ್ದು ಸಂತೆ ಮಾಡೋಕಾ…? ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ಸಿಪಿಐ ವಾಹನ ದುರ್ಬಳಕೆ ತರಕಾರಿ, ದಿನಬಳಕೆ ವಸ್ತು ಖರೀದಿಗೆ ಸರ್ಕಾರಿ ವಾಹನ ಬಳಕೆ ಬೆಂಡಿಗೇರಿ ಠಾಣೆ ಸಿಪಿಐ ಅರುಣಕುಮಾರ ಸಾಳಂಖೆ ವಾಹನ ದುರ್ಬಳಕೆ ಅಧಿಕಾರಿಗಳಿಲ್ಲದಿದ್ರೂ ಮಕ್ಕಳನ್ನ ಕರೆತಂದು ಎಣ್ಣೆ ಖರೀದಿಗೆ ಮುಂದಾದ ಪೊಲೀಸರು‌ ಕಣ್ಮಚ್ಚಿ‌ ಕುಳಿತ ಹು-ಧಾ ಮಹಾನಗರ ಪೊಲೀಸ್ ಆಯುಕ್ತರು ಈ ರೀತಿ …

Read More »

ಆರೋಗ್ಯವಾದ ಮಗುವಿಗೆ ಜನ್ಮ ನೀಡಿದ ಕೊರೊನಾ ಪಾಸಿಟಿವ್ ಗರ್ಭಿಣಿ……..

ನವದೆಹಲಿ: ಏಮ್ಸ್ ವೈದ್ಯನ ಪತ್ನಿ ತುಂಬು ಗರ್ಭಿಣಿಯಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಹೀಗಾಗಿ ಅವರನ್ನು ಪ್ರತ್ಯೇಕ ವಾರ್ಡಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ವೈದ್ಯನ ಪತ್ನಿ ಆರೋಗ್ಯಯುತವಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಅವರಿಗೆ ಸೋಂಕು ಬಂದಿರುವುದು ಧೃಡಪಟ್ಟಿತ್ತು. ನಂತರ ಅವರ ಮನೆಯವರನ್ನು ತಪಾಸಣೆ ಮಾಡಲಾಗಿತ್ತು. ಆಗ 39 ವಾರಗಳ ತುಂಬು ಗರ್ಭಿಣಿ ವೈದ್ಯನ ಪತ್ನಿಯಲ್ಲೂ ಕೊರೊನಾ ಪಾಸಿಟಿವ್ …

Read More »

ಬಳ್ಳಾರಿಯಲ್ಲಿ ಮತ್ತೊಬ್ಬರಿಗೆ ಕೊರೊನಾ – ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಮತ್ತೊಬ್ಬರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಈ ಮೊದಲು ಹೊಸಪೇಟೆ ಮೂಲದ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ಧೃಡವಾಗಿತ್ತು. ಇದೇ ಕುಟುಂಬದ ಸದಸ್ಯರಲ್ಲಿ ಒಬ್ಬರು 7 ಜನರ ಜೊತೆ ನೇರ ಸಂಪರ್ಕ ಹೊಂದಿದ್ದರು. ಹೀಗಾಗಿ ಆ ಏಳು ಜನರನ್ನು ಈಗಾಗಲೇ ಐಸೋಲೇಷನ್ ಮಾಡಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಏಳು ಜನರ ರಕ್ತ ಪರೀಕ್ಷೆ ವರದಿ …

Read More »

ದಯಾಸಾಗರ ಪಾಟೀಲ್ ಪೌಂಡೇಶನ್:ಬಡವರಿಗೆ ದಿನಸಿ ವಸ್ತುಗಳ ವಿತರಣೆ”

ದಯಾಸಾಗರ ಪಾಟೀಲ್ ಪೌಂಡೇಶನ್:ಬಡವರಿಗೆ ದಿನಸಿ ವಸ್ತುಗಳ ವಿತರಣೆ” ಇಂಡಿ: ಪಟ್ಟಣದ ದಯಾಸಾಗರ ಪಾಟೀಲ್ ಪೌಂಡೇಶನ್ ವತಿಯಿಂದ ತಾಲೂಕಿನ ಎಲ್ಲ ಗ್ರಾಮಗಳ ಬಡವರ ಮನೆಗಳಿಗೆ ತೆರಳಿ ಉಚಿತ ದಿನಸಿ ವಸ್ತುಗಳ ಕೀಟನ್ನು ವಿತರಿಸಲಾಯಿತು… ಕೊರೋನಾ ಕೋವಿಡ್-19 ವೈರಸ್ ನಿಂದ ಭಾರತ ಲಾಕ್ ಡೌನ್ ಆದಕಾರಣ ಬಡವರಿಗೆ ಕೆಲಸವಿಲ್ಲದೆ ತಿನ್ನಲು ಆಹಾರಕ್ಕಾಗಿ ಪರದಾಟ ನಡೆಸುವಂತಾಗಿದೆ. ಈ ಹಿನ್ನಲೆಯಲ್ಲಿ ಪಟ್ಟಣದ ಸಮಾಜ ಸೇವಕರಾದ ಹಾಗೂ ಬಿಜೆಪಿ ಮುಖಂಡರಾದ ದಯಾಸಾಗರ ಪಾಟೀಲ’ರವರ ದಯಾಸಾಗರ ಪಾಟೀಲ್ ಪೌಂಡೇಶನ್ …

Read More »