ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಜತೆಗೆ, ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ದೇಶದಲ್ಲಿ ಕೊರೊನಾ ಈಗಲೂ ಸ್ಥಳೀಯ ಹರಡುವಿಕೆ ಹಂತದಲ್ಲಿ ಇದೆಯಷ್ಟೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ …
Read More »ಕೇಂದ್ರ ಸರ್ಕಾರಕ್ಕೆ ಸವಾಲಾಗಿದೆ ವೆಂಟಿಲೇಟರ್‌ಗಳ ಸಮಸ್ಯೆ..!
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಚಿಕಿತ್ಸೆ ನೀಡಬೇಕಾದರೆ, ವೆಂಟಿಲೇಟರ್‌ಗಳ ಅಗತ್ಯವಿದೆ. ಆದರೆ, ಸದ್ಯ ವೆಂಟಿಲೇಟರ್‌ಗಳ ಸಂಖ್ಯೆ ಕಡಿಮೆ ಇರುವುದು ಇರುವುದು ತಲೆನೋವಾಗಿ ಪರಿಣಮಿಸಿದೆ. ಹೀಗಾಗಿಯೇ ಕೇಂದ್ರ ಸರ್ಕಾರ ದೇಶದಲ್ಲಿರುವ ಎಲ್ಲಾ ಆಟೋ ಮೇಕರ್ಸ್ ಕಂಪನಿಗಳಿಗೆ ಕೊರೊನಾ ವಿರುದ್ಧ ಹೋರಾಡಲು ಹೆಚ್ಚು ಹೆಚ್ಚು ವೆಂಟಿಲೇಟರ್‌ಗಳ ತಯಾರಿಕೆಗೆ ಮುಂದಾಗುವಂತೆ ಕೇಳಿಕೊಂಡಿದೆ. ಈಗಾಗಲೇ ಆನಂದ್ ಮಹಿಂದ್ರಾ ಮಾಲೀಕತ್ವದ ಮಹಿಂದ್ರಾ ಅಂಡ್ ಮಹಿಂದ್ರಾ ಕಂಪನಿ ಬೆಂಗಳೂರು ಮೂಲದ ವೆಂಟಿಲೇಟರ್ ರಫ್ತು ಮಾಡುವ …
Read More »ಕೊರೊನಾ ಎಫೆಕ್ಟ್: ತಂದೆಯ ಅಂತ್ಯಕ್ರಿಯೆಗೆ ಬಾರದ ಮಗ, ಮಗಳಿಂದ ಚಿತೆಗೆ ಬೆಂಕಿ
ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆ ಮಾಡಿದ್ದು, ತಂದೆಯ ಅಂತಿಮ ಸಂಸ್ಕಾರಕ್ಕೆ ಮಗನೇ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ಮೃತ ತಂದೆಯ ಅಂತ್ಯ ಸಂಸ್ಕಾರಕ್ಕೆ ಮಗ ಬಾರದಿರುವ ಹಿನ್ನೆಲೆಯಲ್ಲಿ ಚಿತೆಗೆ ಮಗಳೇ ಅಗ್ನಿ ಸ್ಪರ್ಶ ಮಾಡಿದ್ದಾರೆ. ತಂದೆಯ ಅಂತಿಮ ಸಂಸ್ಕಾರಕ್ಕೆ ಆಗಮಿಸಬೇಕಿದ್ದ ಮಗ ಲಾಕ್‍ಡೌನ್‍ನಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಸಿಲುಕಿದ್ದಾರೆ. ಹೀಗಾಗಿ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಂದೆ ಎನ್.ಎ. ಚವ್ಹಾನ್ ಅವರ ಅಂತಿಮ ಸಂಸ್ಕಾರವನ್ನು ಮಗನ ಅನುಪಸ್ಥಿತಿಯಲ್ಲಿ ಅವರ …
Read More »ಕೊರೊನಾಗೆ ಹೆದರಿದ ಕೈದಿಗಳು – ತಪಾಸಣೆ ಮಾಡುವಂತೆ ಆಗ್ರಹಿಸಿ ಉಪವಾಸ
ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೇ ಭಯಪಡಿಸಿದೆ. ಇದೀಗ ಜೈಲಿನಲ್ಲಿರುವ ಕೈದಿಗಳು ಕೂಡ ತಮಗೆಲ್ಲಿ ಕೊರೊನಾ ಬರುತ್ತೋ ಅಂತ ಹೆದರಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಪ್ರತಿದಿನ ಬರುವ ವಿಚಾರಾಣಾಧೀನ ಕೈದಿಗಳನ್ನು ತಪಾಸಣೆ ಮಾಡಿ ನಂತರ ಕಾರಾಗೃಹಕ್ಕೆ ಎಂಟ್ರಿ ನೀಡಬೇಕು. ಅಲ್ಲದೇ ಬ್ಯಾರಕ್‍ಗಳಲ್ಲಿ ಮಿತಿಗಿಂತ ಹೆಚ್ಚಿರುವ ಕೈದಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಉಪವಾಸ ಸತ್ಯಾಗ್ರಹ ಮಾಡಿ ಪ್ರತಿಭಟಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ …
Read More »2 ವರ್ಷದ ಮಗು ಸೇರಿ ಒಂದೇ ಕುಟುಂಬದ 25 ಮಂದಿಗೆ ಕೊರೊನಾ
ಮುಂಬೈ: 2 ವರ್ಷದ ಗಂಡು ಮಗು ಸೇರಿ ಒಂದೇ ಕುಟುಂಬದ 25 ಜನರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಈ ಕುಟುಂಬದ ನಾಲ್ಕು ಜನರು ಸೌದಿ ಅರೇಬಿಯಾದ ಹಜ್ ಯಾತ್ರೆಗೆ ಹೋಗಿ ವಾಪಸ್ ಆಗಿದ್ದರು. ಈ ನಾಲ್ವರಿಗೆ ಮಾರ್ಚ್ 19ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿತ್ತು. ಆಗ ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ನಾಲ್ವರನ್ನು ಮಾರ್ಚ್ 19ರಂದು …
Read More »ಹೋಮ್ ಕ್ವಾರಂಟೈನ್‍ನಲ್ಲಿರೋರು ಫೋಟೋ ಕಳಿಸಿಲ್ಲ ಅಂದ್ರೆ ಮನೆಗೆ ಬರ್ತಾರೆ ಅಧಿಕಾರಿಗಳು
ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಸರ್ಕಾರ ಏನೇ ಕಠಿಣ ಕ್ರಮ ತೆಗೆದುಕೊಂಡು ಜನರು ಮನೆಯಿಂದ ಹೊರ ಬಂದು ಓಡಾಡುತ್ತಿದ್ದಾರೆ. ಆದ್ದರಿಂದ ಕೊರೊನಾ ಹಬ್ಬುವಿಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೋಮ್ ಕ್ವಾರಂಟೈನ್‍ನಲ್ಲಿರುವವರ ಮೇಲೆ ನಿಗಾ ಬಿಗಿಗೊಳಿಸಿದೆ. ಈಗಾಗಲೇ ಕ್ವಾರಂಟೈನ್‍ನಲ್ಲಿರುವವರು ಕೊರೊನಾ ವಾಚ್ ಮೊಬೈಲ್ ಆಪ್ ಡೌನ್‍ಲೋಡ್ ಮಾಡಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಇದೀಗ ಪ್ರತಿ ಗಂಟೆಗೆ ಒಮ್ಮೆ ತಮ್ಮ ಫೋಟೋಗಳನ್ನು ಈ ಆಪ್‍ನಲ್ಲಿ ಅಪ್ಲೋಡ್ ಮಾಡುವಂತೆ ಸರ್ಕಾರ …
Read More »92 ಹೊಸ ಕೊರೊನಾ ಪ್ರಕರಣ, ಭಾರತದಲ್ಲಿ 1071ಕ್ಕೆ ಏರಿಕೆ
ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 92 ಪ್ರಕರಣಗಳು ಬಂದಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ 1071ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ಅಗರ್‍ವಾಲ್ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿಯವರೆಗೆ ಕೊರೊನಾ ಸ್ಥಳೀಯವಾಗಿ ಹರಡುತ್ತಿದೆಯೇ ಹೊರತು ಸಮುದಾಯಕ್ಕೆ ಬಂದಿಲ್ಲ ಎಂದು ತಿಳಿಸಿದರು. ಕರ್ನಾಟಕದಲ್ಲಿ ಇಂದು 5 ಪ್ರಕರಣ ಬಂದಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ …
Read More »ಲಾಠಿ ಬಿಟ್ಟ ಖಾಕಿ – ಮನೆ, ಮನೆಗೆ ತೆರಳಿ ಕೊರೊನಾ ಜಾಗೃತಿ
ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರಿಂದ ದೇಶವೇ ಲಾಕ್‍ಡೌನ್ ಆಯ್ತು. ಆದರೆ ಜನಸಾಮಾನ್ಯರು ಪರಿಸ್ಥಿತಿಯನ್ನ ಅವಲೋಕಿಸದೆ ಬೇಕಾಬಿಟ್ಟಿ ಮನೆಯಿಂದ ಹೊರಬಂದು ಓಡಾಡುತ್ತಿದ್ದಾರೆ. ಹೀಗಾಗಿ ಪೊಲೀಸರು ಮನೆ-ಮನೆಗೆ ತೆರಳಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮೊದಲಿಗೆ ಪೊಲೀಸರು ಎಲ್ಲಾ ರೀತಿಯಲ್ಲೂ ಮನವಿ ಮಾಡಿದ್ದರು. ಕೈಮುಗಿದು ಕೇಳಿಕೊಂಡಿದ್ದರು, ಕೊನೆಗೆ ಲಾಠಿಯಿಂದ ಹೊಡೆಯಲು ಶುರು ಮಾಡಿದ್ದರು. ಇದರಿಂದ ಪೊಲೀಸರ ವರ್ತನೆ ತೀವ್ರ ವಿರೋಧ ಹಾಗೂ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪೊಲೀಸರು …
Read More »ಕೊರೊನಾ ಎಫೆಕ್ಟ್ – ಸಿಇಟಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ದೇಶದಲ್ಲಿ ಕೊರೊನಾ ಎಫೆಕ್ಟ್ ಜಾಸ್ತಿಯಾದ ಕಾರಣ ಮುಂದಿನ ತಿಂಗಳು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್ 22 ರಿಂದ 24ವರೆಗೆ ಸಿಇಟಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದ ಪ್ರಧಾನಿ ಮೋದಿ ಅವರು ದೇಶವನ್ನು ಏಪ್ರಿಲ್ 14ವರೆಗೆ ಲಾಕ್‍ಡೌನ್ ಮಾಡಿದ್ದಾರೆ. ಕೊರೊನಾ ವೈರಸ್ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಇಂದು ಕರ್ನಾಟಕ ಪರೀಕ್ಷಾ …
Read More »100ಕ್ಕೂ ಹೆಚ್ಚು ಜನರಿಗೆ ಊಟ ಹಾಕಿದ ಧಾರವಾಡ ಎಸ್‍ಪಿ – ಸ್ವತಃ ನಿಂತು ಊಟ ಬಡಿಸಿದ್ರು
ಧಾರವಾಡ: ಕೊರೊನಾ ಭೀತಿಯಿಂದ ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಸೇರಿದಂತೆ ಕರ್ತವ್ಯದ ಮಧ್ಯೆಯೂ ಅನೇಕ ಪೊಲೀಸರು ಊಟ ಹಾಕಿ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ ರಾಜಸ್ಥಾನಕ್ಕೆ ನಡೆದುಕೊಂಡೇ ಹೊರಟಿದ್ದ ಅನೇಕ ಕಾರ್ಮಿಕರು ಹಾಗೂ ಕಾರಿನಲ್ಲಿ ಹೊರಟಿದ್ದ ರಾಜಸ್ಥಾನ ಮೂಲದ ಕುಟುಂಬಗಳಿಗೆ ತೆಗೂರ ಬಳಿ ಖುದ್ದು ಎಸ್‍ಪಿಯೇ ಊಟ ಬಡಿಸಿ ಎಲ್ಲರ ಉಪಚಾರ ಮಾಡಿದರು. ಬೆಳಗಾವಿ ರಸ್ತೆಗೆ ಸಂಪರ್ಕ ಕಲ್ಪಿಸುವ ಟೋಲ್ ಗೇಟ್‍ನಲ್ಲಿ ಕೂಲಿ …
Read More »