Breaking News

Laxminews 24x7

ಪುರೋಹಿತರ ಮಂತ್ರವಿಲ್ಲದೆ, ಶಾಸ್ತ್ರ-ಸಂಪ್ರದಾಯವಿಲ್ಲದೆ ನಡೀತು ಮದುವೆ..!

ಮಳವಳಿ, ಡಿ.8- ಮಂಗಳವಾದ್ಯದೊಡನೆ ಶಾಸ್ತ್ರೋಕ್ತವಾಗಿ ಮಾಂಗಲ್ಯ ಧಾರಣೆ ಮಾಡಿಸಿ ಸಿಹಿ ಊಟ ಹಾಕಿಸುವ ಮೂಲಕ ವಿವಾಹ ಮಾಡುವುದು ನಮ್ಮ ಹಿಂದು ಸಂಪ್ರದಾಯದ ವಾಡಿಕೆ. ಆದರೆ ಯಾವುದೇ ಮಂತ್ರ ಪಟಣವಿಲ್ಲದೇ ಹಿತೈಷಿಗಳ ಸಮ್ಮುಖದಲ್ಲಿ ಮಾಂಗಲ್ಯ ಕಟ್ಟುವುದರ ಜತೆಗೆ ಮಧುವೆಗೆ ಬಂದವರಿಗೆ ಬಾಡೂಟ ಉಣಬಡಿಸಿದ ವಿವಾಹ ಸಮಾರಂಭ ಪಟ್ಟಣದ ಪಟ್ಟಲದಮ್ಮ ದೇವಸ್ಥಾನದ ಆವರಣ ಜರುಗಿತು. ತಾಲೂಕಿನ ಹೊಸಹಳ್ಳಿ ಗ್ರಾಮದ ಚಂದ್ರಶೇಖರ ಎಂಬುವರ ಪುತ್ರ ಶಿವಲಿಂಗೇಗೌಡ ಹಾಗೂ ಕೋಡಿಪುರದ ಸಿದ್ದೇಗೌಡರ ಪುತ್ರಿ ಶೃತಿ ದಾಂಪತ್ಯ …

Read More »

ವಿಧಾನಸಭೆಯಲ್ಲಿ ಕರ್ನಾಟಕ ಸ್ಟಾಂಪ್ ವಿಧೇಯಕ ಮಂಡನೆ

ಬೆಂಗಳೂರು,ಡಿ.8- ರಾಜ್ಯ ಸರ್ಕಾರವು ಕರ್ನಾಟಕ ಕೈಗಾರಿಕಾ ನೀತಿ 2020-25ರಲ್ಲಿ ಪ್ರಸ್ತಾಪಿಸಿರುವ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದ ಕರ್ನಾಟಕ ಸ್ಟಾಂಪ್(2ನೇ ತಿದ್ದುಪಡಿ) ವಿಧೇಯಕ 2020ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಶಾಸನ ರಚನಾ ಕಲಾಪದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು. 2020-21ರ ಆಯವ್ಯಯ ಗಾತ್ರದಲ್ಲಿ ಪ್ರಸ್ತಾಪಿಸಿರುವ 35ಲಕ್ಷ ರು.ವರೆಗಿನ ಫ್ಲಾಟ್ ಅಥವಾ ಅಪಾರ್ಟ್‍ಮೆಂಟ್‍ನ ಮೊದಲ ಮಾರಾಟಕ್ಕೆ ಸ್ಟಾಂಪ್ ತೆರಿಗೆಯನ್ನು ಕಡಿಮೆ ಮಾಡುವ …

Read More »

ಕಾಯ್ದೆಯಿಂದ ರೈತರ ಆದಾಯ ಹೆಚ್ಚಳ – ಪ್ರತಿಪಕ್ಷಗಳ ವಿರುದ್ಧ ಬಿಎಸ್‍ವೈ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ಕರೆ ನೀಡಲಾಗಿದ್ದು, ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಈ ಸಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. …

Read More »

ಭಾರತ್ ಬಂದ್‌ಗೆ ಸೈನಿಕನ ಬೆಂಬಲ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಂದ್ ಬಹುತೇಕ ಯಶ್ವಸಿಯಾಗಿದೆ. ಚೆನ್ನಮ್ಮ ಸರ್ಕಲ್ ಬಳಿ ಮುಂಜಾನೆ ಹೋರಾಟಗಾರರು ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರೆ, ಇನ್ನೊಂದೆಡೆ ರೈತ ಮುಖಂಡರು ಹೊಸೂರು ಡಿಪೋ ಮುಂದೆ ಸಾರಿಗೆ ಬಸ್ ಗಳು ಹೊರಹೋಗದಂತೆ ತಡೆದು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಲವಂತವಾಗಿ ಬಂದ್ …

Read More »

ಛಲದಂಕ ಮಲ್ಲ” ರಮೇಶ ಜಾರಕಿಹೊಳಿ:ಅಶೋಕ ಚಂದರಗಿ

ಛಲದಂಕ ಮಲ್ಲ” ರಮೇಶ ಜಾರಕಿಹೊಳಿಯವರ ಕಿರೀಟಕ್ಕೆ ಮತ್ತೊಂದು ಗರಿ: ಭದ್ರಾ ಮೇಲ್ದಂಡೆ ಯೋಜನೆಗೆ ” ರಾಷ್ಟ್ರೀಯ ಯೋಜನೆ” ಪಟ್ಟ:ಕೃಷ್ಣಾ ಮೇಲ್ದಂಡೆ ಯೋಜನೆಗೂ ” ದಿಲ್ಲಿಯ ದಾರಿ” ಸುಗಮವಾಗುವದೆ? ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಶ್ರೀ ರಮೇಶ ಜಾರಕಿಹೊಳಿಯವರ ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ.ಆದರೆ ಅವರು ಈ ಖಾತೆಯನ್ನು ವಹಿಸಿಕೊಂಡ ನಂತರ ನೀರಾವರಿ ಯೋಜನೆಗಳಲ್ಲಿ ಲಾಟರಿ ಮೇಲೆ ಲಾಟರಿಯನ್ನು ಕರ್ನಾಟಕವು ಹೊಡೆದೇ ಹೊಡೆಯುತ್ತಿದೆ! ದೀರ್ಘ ಕಾಲದಿಂದ ಮುಂದೆ ಸಾಗದೇ ಬಸವಳಿಯುತ್ತಿದ್ದ …

Read More »

ಚಾಯ್ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ

ಬೆಳಗಾವಿ-/ಕೇಂದ್ರ ಸರ್ಕಾರದ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿದ್ದು, ಬೆಳಗಾವಿಯಲ್ಲಿ ಬೆಳಗಿನ ಜಾವವೇ ಪ್ರತಿಭಟನೆ ಶುರುವಾಗಿದೆ. ಬೆಳಗಾವಿ ಬಸ್ ನಿಲ್ದಾಣ ಎದುರು ರೈತ ಮುಖಂಡರ ವಿನೂತನವಾಗಿ ಧರಣಿ ಮಾಡುತ್ತಿದ್ದಾರೆ. ಒಲೆ ಸಿದ್ಧಪಡಿಸಿ ಚಹಾ ತಯಾರಿಸಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದು, ಚಾಯ್ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದಾರೆ. ಟೀ ಪೌಡರ್, ಹಾಲು ತಂದು ಚಹಾ ತಯಾರಿಸಿದ ರೈತ ಮಹಿಳೆ ಜಯಶ್ರೀ, ಶುಗರ್ …

Read More »

ರೈತ ಇದ್ರೆನೇ ದೇಶ- ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಬೆಂಬಲ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್‍ಗೆ ರಾಜ್ಯಾದ ಹಲವೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸ್ಯಾಂಡಲ್‍ವುಡ್ ಹ್ಯಾಟಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಬೆಂಬಲ ಸೂಚಿಸಿದ್ದಾರೆ. ಸಂಬಂಧ ಟ್ವೀಟ್ ಮಾಡಿರುವ ಶಿವಣ್ಣ, ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಬರೆದುಕೊಂಡಿದ್ದಾರೆ. …

Read More »

ಐನಾಪುರ: ನೇಣು ಹಾಕಿಕೊಂಡು ಅಕ್ಕ, ತಂಗಿ ಆತ್ಮಹತ್ಯೆ

ಚಿಂಚೋಳಿ: ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ಅಕ್ಕ, ತಂಗಿ ಇಬ್ಬರೂ ಏಕಕಾಲಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಶ್ವರ್ಯ ವಿಶ್ವನಾಥ ಸುತಾರ (20) ಹಾಗೂ ಸಾರಿಕಾ ವಿಶ್ವನಾಥ ಸುತಾರ (17) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕುಟುಂಬದ ಮುಖ್ಯಸ್ಥ ವಿಶ್ವನಾಥ ಸುತಾರ ಅವರು ಐನಾಪುರ ಗ್ರಾಮದಲ್ಲಿಯೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಅವರಿಗೆ ಒಟ್ಟು ಐವರವು ಹೆಣ್ಣುಮಕ್ಕಳಿದ್ದರು. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಆದರೆ, …

Read More »

ಭಾರತ್ ಬಂದ್; ಬೆಳಗಾವಿಯಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ

ಬೆಳಗಾವಿ : ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ಉಂಟಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.     ಬಸ್ …

Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ.   ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …

Read More »