ನವದೆಹಲಿ: ಕೆಲ ವರ್ಷಗಳ ಹಿಂದೆ ಅಂಬೆಗಾಲಿಡುತ್ತಿದ್ದ ಎಐ ಇದೀಗ ದಾಪುಗಾಲಿಡುತ್ತಾ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಂಡು, ನಿರುದ್ಯೋಗದ ಆತಂಕವನ್ನು ಹೆಚ್ಚಿಸಿರುವ ಹೊತ್ತಿನಲ್ಲಿ, ‘ಈ ಭಯಕ್ಕೆ ತಯಾರಿಯೊಂದೇ ಮದ್ದು. ಎಐನಿಂದ ಹೊಸ ಉದ್ಯೋಗಗಳು ಸೃಷ್ಟಿ ಆಗಲಿದ್ದು, ರೂಪಾಂತರಗೊಳ್ಳುವ ಕೆಲಸಗಳನ್ನು ಕಲಿತು ಅವನ್ನು ಬಾಚಿಕೊಳ್ಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆಯ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ‘ಇತಿಹಾಸವನ್ನು ನೋಡಿದರೆ, ತಂತ್ರಜ್ಞಾನವು ಕೆಲಸ ಕಸಿಯುವ ಬದಲು ಹೊಸ …
Read More »ಶಾಸಕರು ಕೃಷಿ ಅಧ್ಯಯನಕ್ಕೆ ವಿದೇಶಕ್ಕೆ ಹೋಗ್ತಿರಬಹುದು, ಗೊತ್ತಿಲ್ಲ: ಪರಮೇಶ್ವರ್
ಮಂಗಳೂರ: ಶಾಸಕರು ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗ್ತಿರಬಹುದು, ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಯಾಕೆ ಹೋಗ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆಸ್ಟ್ರೇಲಿಯಾ ಸೇರಿದಂತೆ ಎಲ್ಲಾ ಕಡೆ ಕೃಷಿ ಇದೆ. ಬಹುಶಃ ಕೃಷಿ ಅಧ್ಯಯನಕ್ಕೆ ಇರಬಹುದು. ಅವರ ಹಣದಲ್ಲಿ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಹಾಗಂತ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಯಾವ ಕದನವೂ …
Read More »ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸಲು ಡಿಕೆಶಿ ಟೀಂ ಮನವಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮಾಡಲಾಗುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮಂಗಳವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಅವರಿಗೆ ಮನವಿ ಸಲ್ಲಿಸಿತು. ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಆಯುಕ್ತರನ್ನು ಭೇಟಿಯಾದ ಮನವಿ ಸಲ್ಲಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯ ಚುನಾವಣಾ ಆಯೋಗವು ಜಿಬಿಎ ಅಡಿಯಲ್ಲಿನ 5 …
Read More »ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗೂ ಮೊದಲೇ ಪಲಿತಾಂಶ ಡೇಟ್ ಪ್ರಕಟಿಸಿದ ಶಿಕ್ಷಣ ಇಲಾಖೆ
ಬೆಂಗಳೂರು:2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಾಖಲೆಯ 9.02 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಫೆ.28ರಿಂದ ಮಾ.17ರವರೆಗೆ ದ್ವಿತೀಯ …
Read More »ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್
ಹಾಸನ: ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿವೇಕ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ, ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಮೃತದೇಹ ಸಂಪೂರ್ಣ ಸುಟ್ಟು …
Read More »ಸುವರ್ಣ ಸೌಧದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೈ-ವೋಲ್ಟೇಜ್ ಮೀಟಿಂಗ್
ಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸುವರ್ಣ ಸೌಧದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಸುದೀರ್ಘ ಪರಿಶೀಲನೆ ನಡೆಸಿದರು. ಗೋಕಾಕ್‌ನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಹೆಲಿಕಾಪ್ಟರ್ ಮೂಲಕ ಗೋಕಾಕ್‌ನಿಂದ ನೇರವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಆಗಮಿಸಿ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಗತಿಯಲ್ಲಿರುವ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ …
Read More »ಅಗ್ನಿಅವಘಡಕ್ಕೆ 4 ಕಾರುಗಳು ಭಸ್ಮ
ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ. ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ರಿಪೇರಿಗಾಗಿ ಗ್ಯಾರೇಜ್‌ಗೆ ಬಂದಿದ್ದ ಕಾರುಗಳನ್ನು ಹೊರಗಡೆ ನಿಲ್ಲಿಸಲಾಗಿತ್ತು. ಬೆಂಕಿ ಹೊತ್ತಿಕೊಂಡು ಅ ನಾಲ್ಕು ಕಾರುಗಳು ಸುಟ್ಟು ಹೋಗಿವೆ.
Read More »ಸರ್ಪ್ರೈಸ್ ಎಂದು ಪ್ರೇಯಸಿಯ ಕೈಕಾಲು ಕಟ್ಟಿ ಕೊಲೆ ಮಾಡಿದ ಯುವಕ
ಮುಂಬೈನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಪ್ರೇಮಿ ಪಿಯೂಷ್ ಧಮ್ಮೋಟಿಯಾ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ನಿರಾಕರಿಸಿದ ಯುವತಿಯನ್ನು ಬಟ್ಟೆಯಿಂದ ಬಾಯಿ ಮುಚ್ಚಿ, ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಚಾಕು ಮುರಿದುಹೋಗುವಷ್ಟು ಆಳವಾಗಿ ಇರಿದು, ಬಳಿಕ ಶವದ ಮೇಲೆ ಅತ್ಯಾಚಾರ ಎಸಗಿ, ಪರಾರಿಯಾಗಿದ್ದಾನೆ. ಕೊಲೆ ನಂತರ ಯುವತಿಯ ಆತ್ಮದೊಂದಿಗೆ ಮಾತನಾಡಲು ಧೂಪ ಬೆಳಗಿ ಪೂಜೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
Read More »ಕೋಟೂರ ಗ್ರಾಮದ ರಸ್ತೆ ಸುಧಾರಣೆ ಕಾಮಗಾರಿಗೆ ಅದ್ಧೂರಿ ಚಾಲನೆ!
ಕೋಟೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಪರಮಾನಂದವಾಡಿ ರಸ್ತೆ (0.00 ಕಿ.ಮೀ ದಿಂದ 1.80 ಕಿ.ಮೀ ವರೆಗೆ) ಸುಧಾರಣಾ ಕಾಮಗಾರಿಯ ಭೂಮಿ ಪೂಜೆಯನ್ನು ಇಂದು ನೆರವೇರಿಸಲಾಯಿತು. ಕಾಮಗಾರಿಯ ವಿವರಗಳು: ಇಲಾಖೆ: ಲೋಕೋಪಯೋಗಿ ಇಲಾಖೆ (PWD) ಯೋಜನೆ: ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ (ಶೀರ್ಷಿಕೆ: 4059 – ಇತರೆ ಬಂಡವಾಳ ವೆಚ್ಚಗಳು) ಅಂದಾಜು ವೆಚ್ಚ: ₹2 ಕೋಟಿ ಕ್ಷೇತ್ರದ ಕಟ್ಟಕಡೆಯ ಹಳ್ಳಿಗೂ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿಕಲಚೇತನರ ಕಲ್ಯಾಣಕ್ಕೆ ಹೊಸ ಭರವಸೆ!
ಬೆಳಗಾವಿ ಗ್ರಾಮೀಣ ಕ್ಷೇತ್ರದ ಒಟ್ಟು 7 ಗ್ರಾಮ ಪಂಚಾಯತಿಗಳ ‘ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ’ (VRWs) ನೇಮಕಾತಿ ಆದೇಶ ಪತ್ರಗಳನ್ನು ಇಂದು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ನೇಮಕಾತಿಯು ಗ್ರಾಮೀಣ ಭಾಗದ ವಿಕಲಚೇತನರ ಸಬಲೀಕರಣ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆಯ್ಕೆಯಾದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆಗಳು ಹಾಗೂ ನಿಮ್ಮ ಸೇವೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ ಎಂದು ಹಾರೈಸುತ್ತೇನೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ …
Read More »
Laxmi News 24×7