ಬೆಳಗಾವಿ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ, ಕೃಷಿ, ಬೆಳೆ ವಿಮೆ, ನೀರಾವರಿ, ಜಾನುವಾರುಗಳಿಗೆ ಮೇವು ಸಂಗ್ರಹಣೆ ಸಂಬಂಧಿಸಿದಂತೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಮಳೆ ಕೊರತೆಯಿಂದ ಬೆಳೆ ಹಾನಿಯಂತಹ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅರ್ಹ ರೈತರಿಗೆ ನಿಯಮಾನುಸಾರ ಪರಿಹಾರ ಒದಗಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ (ಸೆ.16) ನಡೆದ 2026-27ನೇ …
Read More »ಎಂಜಿನಿಯರ್ಸ್ ಡೇ–2026 ಕಾರ್ಯಕ್ರಮದಲ್ಲಿ ಶಾಸಕ ಆಸಿಫ್ (ರಾಜು) ಸೇಠ್ ಭಾಗಿ
ಬೆಳಗಾವಿ ಮತ್ತು ಚಿಕ್ಕೋಡಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಗಳ ವತಿಯಿಂದ ಆಯೋಜಿಸಲಾಗಿದ್ದ ಎಂಜಿನಿಯರ್ಸ್ ಡೇ–2026 ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅವರು ಭಾಗವಹಿಸಿದರು. ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಎಂಜಿನಿಯರ್‌ಗಳ ಸೇವೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅವರ ಮಹತ್ವದ ಪಾತ್ರವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜು ಸೇಠ್ ಅವರು, ಜನರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು …
Read More »ಎಫ್‌ಐಆರ್ ದಾಖಲಿಸಿದ ಪಿಎಸ್‌ಐ ಕಾರಿಗೆ ಬೆಂಕಿಯಿಟ್ಟ ಕಾನ್‌ಸ್ಟೇಬಲ್
ಕಲಬುರಗಿ: ಪೇದೆಯೋರ್ವ ಮಹಿಳೆಯ ಮೇಲೆ ಹಲ್ಲೆ ನಡೆಸಿ ಆಕೆಯ ಮನೆ ಜಖಂಗೊಳಿಸಿದ್ದಕ್ಕೆ ಪ್ರಕರಣ ದಾಖಲಿಸಿಕೊಂಡ ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ಮಹಾಗಾಂವ ಗ್ರಾಮದಲ್ಲಿ ನಡೆದಿದೆ. ಚಿಂಚೋಳಿ ಠಾಣೆಯ ಪೇದೆ ರಾಜಶೇಖರ್‌ಗೆ ಪರಿಚಯವಿರುವ ಮಹಿಳೆ ಹಾಗೂ ಪೇದೆ ನಡುವೆ ಜಗಳ ನಡೆದಿದ್ದು, ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಿ ಮನೆಗೆ ನುಗ್ಗಿ ಪೇದೆ ದಾಂಧಲೆ ನಡೆಸಿದ್ದಾರೆ. ಈ ಕುರಿತು ಮಹಾಗಾಂವ ಠಾಣೆಗೆ ಮಹಿಳೆ …
Read More »2,000 ರೂ. ಮೇಲ್ಪಟ್ಟ ಯುಪಿಐ ಪಾವತಿಗೆ 0.4% ಶುಲ್ಕ – ಅ.15 ರಿಂದ ಹೊಸ ನಿಯಮ
ನವದೆಹಲಿ: 2,000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ (ಏಕೀಕೃತ ಪಾವತಿ ವ್ಯವಸ್ಥೆ) ಪಾವತಿಗಳನ್ನ (UPI Payments) ಸ್ವೀಕರಿಸುವ ವ್ಯಾಪಾರಿಗಳಿಗೆ ಅ.15 ರಿಂದ ಶೇ.0.4 ರಷ್ಟು ಶುಲ್ಕ ವಿಧಿಸಲಾಗುವುದು ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಮಂಗಳವಾರ ತಿಳ 2,000 ರೂ.ವರೆಗಿನ ಸಣ್ಣ ಮೊತ್ತದ ಯುಪಿಐ ವಹಿವಾಟುಗಳಿಗೆ ಬ್ಯಾಂಕುಗಳು ಅಥವಾ ಸೇವಾ ಪೂರೈಕೆದಾರರು ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಎನ್‌ಪಿಸಿಐ ಮಹತ್ವದ ಘೋಷಣೆ …
Read More »ಬೆಟ್ಟದಲ್ಲಿ ಅಡಗಿದ್ದ `ಸುಡೋ ನಕ್ಸಲ್’ ಕನಕಲಬಂಡೆ ವೆಂಕಟೇಶ್ ಬಂಧನ
ತುಮಕೂರು: ಕಳೆದ ಹಲವು ತಿಂಗಳಿಂದ ಪಾವಗಡ ಜನತೆಗೆ ಹಾಗೂ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ, ನಕ್ಸಲ್ ಹೆಸರಿನಲ್ಲಿ ಕನಕಲಬಂಡೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಬೆದರಿಕೆ ಹಾಕುತ್ತಿದ್ದ ಕನಕಲಬಂಡೆ ವೆಂಕಟೇಶ್ ಅಲಿಯಾಸ್ `ಸುಡೋ ನಕ್ಸಲ್’ ವೆಂಕಟೇಶ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪಾವಗಡ ಸಮೀಪದ ಕಡಮಲಕುಂಟೆ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಅರೆಬೆತ್ತಲೆಯಾಗಿ ಎಣ್ಣೆ ಹೊಡೆಯುತ್ತಾ ಚಿಕನ್ ಸೇವಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ …
Read More »ರೇಣುಕಾಸ್ವಾಮಿ ಕೇಸ್ – ಮಾಫಿ ಸಾಕ್ಷಿ ಪ್ರದೋಷ್ ವಿರುದ್ಧ ದೂರು
ಆನೇಕಲ್: ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್‌ನಲ್ಲಿ ಮಾಫಿ ಸಾಕ್ಷಿಯಾಗಿ ಪ್ರಕರಣದಿಂದ ಪಾರಾಗಲು ಪ್ರಯತ್ನಿಸುತ್ತಿದ್ದ 14ನೇ ಆರೋಪಿ ಪ್ರದೋಷ್‌ನ ಕಳ್ಳಾಟವೊಂದು ಇದೀಗ ಬಯಲಾಗಿದ್ದು, ಕೇಸ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳಿಗೆ ವಕೀಲರ ಜೊತೆ ಹಾಗೂ ಕುಟುಂಬದವರ ಜೊತೆ ಮಾತನಾಡುವುದಕ್ಕೆ 3 ನಂಬರ್‌ಗಳನ್ನು ಕೊಡಲಾಗುತ್ತದೆ. ವಕೀಲರ ಜೊತೆ ಹಾಗೂ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಕೊಡುವ ನಂಬರ್ ಅನ್ನು ರಿಜಿಸ್ಟರ್ ಮಾಡಿಸಿಕೊಂಡಿರುತ್ತಾರೆ. ಈ ನಂಬರ್‌ಗಳನ್ನ ನಮೂದು ಮಾಡಿಸಿಕೊಳ್ಳುವ ಜವಾಬ್ದಾರಿಯನ್ನು ಮೌನೇಶ್.ಹೆಚ್.ಕೋರಿ ಎಂಬ ಸಿಬ್ಬಂದಿಗೆ …
Read More »ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL
ಬೆಂಗಳೂರು: ವಂದೇ ಮಾತರಂ ಹಾಡಿನ ವಿವಾದ ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು ಎಂಬ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತ್ತಾಸಕ್ತಿ ಮೊಕದ್ದಮೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಗಿರೀಶ್ ಭಾರಧ್ವಾಜ್ ಎಂಬುವವರು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣ ಮಾತ್ರ ಹಾಡಬೇಕು ಎಂಬ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು, ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿಯು …
Read More »ಶಾಲಾ ಬ್ಯಾಗ್‌ಗಳಿಂದ 38 ಕೆಜಿ ಗಾಂಜಾ ಸೀಜ್; ಮೂವರು ಅಪ್ರಾಪ್ತರು ಸೇರಿ ಐವರು ವಶಕ್ಕೆ
ಪಾಟ್ನಾ: ಬಿಹಾರದ ಹಾಜಿಪುರದಿಂದ ವಿದ್ಯಾರ್ಥಿಯೊಬ್ಬನ ಶಾಲಾ ಬ್ಯಾಗ್‌ನಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿದ್ದ 38 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರು ಅಪ್ರಾಪ್ತರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಳ್ಳಸಾಗಣೆದಾರರು ಪ್ರಯಾಣಿಸುತ್ತಿದ್ದ ಬಸ್ಸನ್ನು ತಡೆದು, 4 ಲಕ್ಷ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಎಂದು ವೈಶಾಲಿಯ ಹಿರಿಯ ಪೊಲೀಸ್ ಅಧೀಕ್ಷಕ ಶುಭಾಂಕ್ ಮಿಶ್ರಾ ತಿಳಿಸಿದ್ದಾರೆ. ಭಗವಾನ್‌ಪುರ ಪೊಲೀಸ್ ಮತ್ತು ಮದ್ಯಪಾನ ನಿಷೇಧ ಇಲಾಖೆಯ (ಪಾಟ್ನಾ) ಜಂಟಿ ತಂಡವು ಭಗವಾನ್‌ಪುರ …
Read More »ಮೋದಿ ದೇಶದ ರಾಜಕೀಯ ಸಂಸ್ಕೃತಿ ಬದಲಿಸಿದ್ದಾರೆ, ಆದ್ರೆ ಕಾಂಗ್ರೆಸ್ ಒಡೆದಾಳುವ ನೀತಿ ಪಾಲಿಸುತ್ತಿದೆ: ನಡ್ಡಾ ನಿಗಿನಿಗಿ
ಬೆಂಗಳೂರು: ಮೋದಿ ಜೀ ಅವರು ದೇಶದ ರಾಜಕೀಯ ಸಂಸ್ಕೃತಿಯನ್ನ ಬದಲಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಡೆದಾಳುವ ನೀತಿ ಪಾಲಿಸುತ್ತಿದೆ. ಓಲೈಕೆ ರಾಜಕಾರಣ ಮಾಡಿಕೊಂಡಿದೆ. ಭ್ರಷ್ಟಾಚಾರದಲ್ಲೇ ಮುಳುಗಿದೆ, ಇದನ್ನ ತೊಲಗಿಸಲು ನಾವು ಮುಂದಾಗಿದ್ದೇವೆ ಎಂದು ಕೇಂದ್ರ ಸಚಿವ ಜೆ.ಪಿ ನಡ್ಡಾ ಅವರು ಹೇಳಿದ್ದಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಐ) ಮತ್ತು ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ …
Read More »ಮಂಡ್ಯದಲ್ಲಿ ʻಮಾಯದಂಥ ಮಳೆʼ – ರಸ್ತೆಗಳು ಜಲಾವೃತ
ಮಂಡ್ಯ: ಹಲವು ತಿಂಗಳಿಂದ ಮಳೆಯಿಲ್ಲದೆ ಕಂಗಾಲಾಗಿದ್ದ ಮಂಡ್ಯದಲ್ಲಿ ಇದೀಗ ಧಾರಾಕಾರ ಮಳೆಯಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಭಾರೀ ಮಳೆಗೆ ನಗರದ ಮಹಾವೀರ ವೃತ್ತದ ರಸ್ತೆ ಜಲಾವೃತಗೊಂಡಿದೆ. ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ಹಲವು ಬೈಕ್‌ಗಳು ಮುಳುಗಡೆಯಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಚರಂಡಿಗಳು ಕಟ್ಟಿಕೊಂಡಿರುವುದರಿಂದ ಮಳೆ ನೀರು ರಸ್ತೆಯಲ್ಲೇ ನಿಂತು ಸಮಸ್ಯೆ ಉಂಟಾಗಿದೆ.
Read More »
Laxmi News 24×7