ನವದೆಹಲಿ : ಪ್ರಸಕ್ತ ಸಾಲಿನ ವೃತ್ತಪರ ಕೋರ್ಸ್ ಗಳಿಗೆ ನಡೆಯಲಿರುವ ನೀಟ್ ( ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಹಾಗೂ ಜೆಇಇ (ಜಂಟಿ ಪ್ರವೇಶ ಪರೀಕ್ಷೆ)ಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದ್ದು, ಸೆಪ್ಟೆಂಬರ್ 1 ರಿಂದ 6 ರವರೆಗೆ ಜೆಇಇ ಪರೀಕ್ಷೆ ನಡೆಯಲಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿ ನೀಡಿದೆ.
Read More »ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …
Read More »ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆ.
ಬೆಂಗಳೂರು: ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, …
Read More »ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ
ಭಾರತಕ್ಕೆ ಸದಾ ಹೊರೆಯಾಗಿರೋ ನೆರೆ ರಾಷ್ಟ್ರ ಅಂದ್ರೆ ಅದು ಪಾಕಿಸ್ತಾನ. ಭಾರತಕ್ಕೆ ಕಿರುಕುಳ ನೀಡೋದ್ರಲ್ಲಿ ಸದಾ ಮುಂದಿರೋ ಪಾಪಿ ಪಾಕಿಸ್ತಾನ ಜಗತ್ತಿನ ಮುಂದೆ ಮತ್ತೊಮ್ಮೆ ಬೆತ್ತಲಾಗಿದೆ. ಈ ಮೂಲಕ ತನ್ನ ನರಿಬುದ್ಧಿಯನ್ನ ವಿಶ್ವದ ಎದುರು ಬಯಲಾಗಿದೆ. ಭಾರತಕ್ಕೆ ಬೇಕಿರೋ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ಗಳಿಗೆ ಪಾಕಿಸ್ತಾನದ ನೆಲದಲ್ಲಿ ಜಾಗ ನೀಡಿರುವುದನ್ನ ಒಪ್ಪಿಕೊಂಡಿದೆ ಅಂತಾ ಪಾಕಿಸ್ತಾನದಿಂದ್ಲೇ ವರದಿ ಹೊರಬಿದ್ದಿದೆ. ದಾವೂದ್ ತನ್ನ ನೆಲದಲ್ಲಿರೋದಾಗಿ ಒಪ್ಪಿಕೊಂಡಿತಾ ಪಾಕ್? ಪಾಕಿಸ್ತಾನದ ಸ್ಥಳೀಯ ಮಾಧ್ಯಮದ ವರದಿಯನ್ನ ಆಧರಿಸಿ, …
Read More »ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ
ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …
Read More »ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿದ್ದಾರೆ
ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ವೈದ್ಯರ ಪ್ರತಿಭಟನೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ಮಾಡುವವರು ಇಷ್ಟವಿದ್ದರೆ ಕೆಲಸ ಮಾಡಲಿ, ಇಲ್ಲದಿದ್ದರೆ ಅವರ ದಾರಿ ನೋಡಿಕೊಳ್ಳಲಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯದ ಒತ್ತಡ ಸ್ವೀಕಾರ ಮಾಡಿ ಕೆಲಸ ಮಾಡುವವರು ಸರ್ಕಾರದಲ್ಲಿರಬೇಕು. ಇಲ್ಲದಿದ್ದರೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸಮಾಡಲಿ ಎಂದರು ಗರಂ ಆದರು ಪ್ರತಿಭಟನೆ ಕರೆ ಕೊಟ್ಟವರಿಗೆ ಗಣೇಶ ಹಬ್ಬದ ದಿನ ಆ ದೇವರು ಸದ್ಬುದ್ಧಿ ಕೊಡಲೆಂದು …
Read More »ರಾಜ್ಯದ ಇಬ್ಬರು ಕೈ ನಾಯಕರಿಗೆ `AICC’ಯಲ್ಲಿ ಉನ್ನತ ಹುದ್ದೆ?
ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಹಾಗೂ ಹೆಚ್.ಕೆ.ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಹೆಚ್.ಕೆ.ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಕೆ.ಹೆಚ್. ಮುನಿಯಪ್ಪ ಅವರಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ …
Read More »ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಮುಸ್ಲಿಂ ಮುಖಂಡ ಮೃತಪಟ್ಟವರ ಬೆನ್ನಿಗೆ ನಿಂತಿದ್ದಾರೆ. ಹೌದು. ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೋಲಿಬಾರ್ ನಲ್ಲಿ ಸತ್ತವರಿಗೆ ಎರಡು ಲಕ್ಷ ಘೋಷಣೆ ಮಾಡಿದ್ದಾರೆ. ಈ ಕುರಿತು ಫೇಸ್ ಬುಕ್‍ನಲ್ಲಿ ಬರೆದುಕೊಂಡಿರುವ ಇಮ್ರಾನ್ ಪಾಷಾ, ಮೃತರಿಗೆ 2 ಲಕ್ಷ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಈ ಹಿಂದೆ ಶಾಸಕ ಜಮೀರ್ ಗೋಲಿಬಾರ್ ನಲ್ಲಿ ಸತ್ತವರಿಗೆ 5 ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ …
Read More »ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ……….
ಯಾದಗಿರಿ: ಎಷ್ಟೋ ಜನ ಒಂದು ಮಗು ಆಗಲಿ ಅಂತ ಹತ್ತಾರು ದೇವರಿಗೆ ವರ ಬೇಡಿಕೊಳ್ಳತಾರೆ. ಇದರಲ್ಲಿ ಕೆಲವರಿಗೆ ದೇವರು ವರ ಕೊಟ್ಟ್ರೆ, ಇನ್ನೂ ಕೆಲವರಿಗೆ ಕೊನೆಯವರೆಗೂ ಮಕ್ಕಳ ಭಾಗ್ಯ ಕರುಣಿಸುವುದಿಲ್ಲ. ಆದರೆ ಇಲ್ಲೊಬ್ಬಳು ಮಹಾ ತಾಯಿ ಏಕಕಾಲದಲ್ಲಿ ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿ ಸುದ್ದಿಯಲ್ಲಿದ್ದಾಳೆ ಅದು ಮೊದಲನೆಯ ಹೆರಿಗೆಯಾಗಿ ಬರೊಬ್ಬರಿ 8 ವರ್ಷದ ಬಳಿಕ ಮೂರು ಗಂಡು ಮಕ್ಕಳಿಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ಜಿಲ್ಲೆಯ ರಾಮಸಮುದ್ರದ ನಿವಾಸಿಯಾಗಿರುವ …
Read More »ಚತುರ್ಥಿ ಹಬ್ಬದಂದುಉಡುಪಿ ಡಿಸಿಐಬಿ ಪೊಲೀಸರು ಭರ್ಜರಿ ಬೇಟೆ
ಉಡುಪಿ: ಗಣೇಶ ಚತುರ್ಥಿ ಹಬ್ಬದಂದು ಕಡುಬು ತಿಂದು ವಿರಮಿಸದೆ, ಉಡುಪಿ ಡಿಸಿಐಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.ಉತ್ತರಪ್ರದೇಶ ರೆಜಿಸ್ಟ್ರೇಷನ್ ಲಾರಿಯಲ್ಲಿ ಕರಾವಳಿಗೆ ಬರುತ್ತಿದ್ದ ಅಪಾರ ಪ್ರಮಾಣದ ಗಾಂಜಾ ವಶಪಡಿಸಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಉತ್ತರಪ್ರದೇಶ ರಿಜಿಸ್ಟ್ರೇಷನ್ ಲಾರಿ ಬಂದಿದೆ. ಕಂಟೇನರ್ ಲಾರಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಬಿದಿರಿನ ಕೋಲುಗಳು ಸಿಕ್ಕಿದೆ. ಕಂಟೇನರ್ ನಲ್ಲಿ ಬಿದಿರಾ ಅಂತ ಸಂಶಯಗೊಂಡ ಪೊಲೀಸರು …
Read More »
Laxmi News 24×7