ಬೆಳಗಾವಿ: ಸಮುದಾಯ ಮತ್ತು ಕಾಪೋರೇಟ್ ಸಾಮಾಜಿಕ ಜವಾಬ್ದಾರಿಯೊಂದಿಗೆ ಉತ್ತಮ ಕಲಿಕೆ-ಉಜ್ವಲ ಭವಿಷ್ಯ ಘೋಷಣೆಯಡಿ ಕೆ.ಪಿ.ಎಸ್. ಶಾಲೆಗಳನ್ನು ಅಭಿವೃದ್ಧಿ ಪಡಿಸಲು ರಾಜ್ಯ ಸರಕಾರ ಮುಂದಾಗಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಅಭಿವೃದ್ಧಿ ಪಡಿಸಲು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ.ಎಸ್.ಆರ್) ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ (ಜು.23) ಜರುಗಿದ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ …
Read More »ಜಂತರ್ ಮಂತರ್ ಹೋರಾಟ ಬೆಂಬಲಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
ಬೆಳಗಾವಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಮತ್ತು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರ ಪ್ರತಿಭಟನೆಗೆ ದೇಶಾಧ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಯುವ ಮುಖಂಡ ಅಮನ್ ಸೇಠ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಧರಣಿ ನಡೆಸಿದರು. ಗುರುವಾರ ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಐದನೂರಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ …
Read More »ಉತ್ತರ ಕರ್ನಾಟಕದ ದೇವಾಲಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು: ಕುಂಚಿಟಿಗರ ಶ್ರೀ
ಬೆಳಗಾವಿ: ದಕ್ಷಿಣ ಕರ್ನಾಟಕದ ದೇವಾಲಯಗಳ ಮಾದರಿಯಲ್ಲಿ ಉತ್ತರ ಕರ್ನಾಟಕದ ದೇವಾಲಯಗಳನ್ನೂ ಸ್ವಚ್ಛತೆ, ಶಿಸ್ತುಬದ್ಧ ಪೂಜಾ ಪದ್ಧತಿ ಹಾಗೂ ಭಕ್ತಸೇವೆಯ ಮೂಲಕ ಅಭಿವೃದ್ಧಿಪಡಿಸಬೇಕೆಂದು ಕುಂಚಿಟಿಗರ ಸಂಸ್ಥಾನ ಮಠದ ಜಗದ್ಗುರು ಶ್ರೀ ಹನುಮಂತನಾಥ ಮಹಾಸ್ವಾಮೀಜಿ ಹೇಳಿದರು. ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿ ಹಾಗೂ ಶ್ರೀ ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನ, ಹಿರೇಮಠ-ಹುಕ್ಕೇರಿ ಇವರ ಆಶ್ರಯದಲ್ಲಿ ಬೆಳಗಾವಿಯ ಲಕ್ಷ್ಮೀ ಟೆಕ್ಕಡಿಯಲ್ಲಿರುವ ಶ್ರೀ ಹಿರೇಮಠದಲ್ಲಿ ಜುಲೈ 21ರಿಂದ 28ರವರೆಗೆ ಆಯೋಜಿಸಿರುವ ಎಂಟು ದಿನಗಳ ಅರ್ಚಕರ ತರಬೇತಿ ಶಿಬಿರದ …
Read More »ಗಂಡನೊಂದಿಗೆ ಜಗಳ: ದೂದಗಂಗಾ ನದಿಗೆ ಹಾರಿದ ಗೃಹಿಣಿ
ಬೆಳಗಾವಿ: ಗಂಡ ಮತ್ತು ಹೆಂಡತಿ ನಡುವೆ ಉಂಟಾದ ಸಣ್ಣ ಮನಸ್ತಾಪ ವಿಕೋಪಕ್ಕೆ ತಿರುಗಿ, ಗೃಹಿಣಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದೂದಗಂಗಾ ನದಿ ತೀರದ ಸದಲಗಾ ಪಟ್ಟಣದಲ್ಲಿ ಘಟನೆ ನಡೆದಿದೆ. ಸದಲಗಾ ಪಟ್ಟಣದ ನಿವಾಸಿ ಮಂಜುಳಾ ವಂಜೀರೆ (25) ನದಿಗೆ ಹಾರಿ ನಾಪತ್ತೆಯಾಗಿರುವ ದುರ್ದೈವಿ ಗೃಹಿಣಿ. ಸ್ಥಳೀಯರ ಮಾಹಿತಿ ಪ್ರಕಾರ, ಜಾತ್ರೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುಳಾ ಹಾಗೂ ಅವರ ಪತಿ ಅನಿಲ್ …
Read More »ಸಾಧಕ ಬಿಎಲ್ಒಗಳ ಮನೆಗೆ ತೆರಳಿ ಗೌರವಿಸಿದ ಡಿಸಿ ಮೊಹಮ್ಮದ್ ರೋಷನ್
ಬೆಳಗಾವಿ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಎಸ್ ಐ ಆರ್ ಕಾರ್ಯದಲ್ಲಿ ಶೇ.ನೂರರಷ್ಟು ಪ್ರಗತಿ ಸಾಧಿಸಿರುವ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ, ಸತೀಶ ಢವಳೆ ಅವರ ಶಹಾಪೂರ ಬಸವಣ್ಣ ಗಲ್ಲಿಯ ಮನೆಗೆ ಗುರುವಾರ ಖುದ್ದು ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಢವಳೆ ಹಾಗೂ ಇತರ ಸಾಧಕ ಬಿಎಲ್ಓ ಗಳನ್ನು …
Read More »ಸಿಎ ವಿಭಾಗದ ವಿದ್ಯಾರ್ಥಿನಿಯರ ಅದ್ವಿತೀಯ ಸಾಧನೆ
ಬಾಗಲಕೋಟೆ, ಜು. 23: ಬಸವೇಶ್ವರ ಕಲಾ ಮಹಾವಿದ್ಯಾಲಯದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ವಿದ್ಯಾರ್ಥಿನಿಯರಾದ ಸನಾ ಬಾಳಿಕಾಯಿ ಹಾಗೂ ಸೃಷ್ಟಿ ಭೂಮನ್ನವರ ಅವರು ಬಾಗಲಕೋಟೆ ವಿಶ್ವವಿದ್ಯಾಲಯದ 2025–26ನೇ ಸಾಲಿನ ಬಿ.ಎ. 5ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ತಲಾ 99 ಅಂಕಗಳನ್ನು ಗಳಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯರ ಈ ಅತ್ಯುತ್ತಮ ಸಾಧನೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ್ ಎನ್. ಅಥಣಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ …
Read More »ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು …
Read More »ಯುವಕರ ಭವಿಷ್ಯ ಹಾಳು ಮಾಡಿದ್ದು ನೀವು: ಮೋದಿ ವಿರುದ್ಧ ರಾಗಾ ಆಕ್ರೋಶ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆ ಪ್ರಧಾನಿ ನರೇಂದ್ರ ಮೋದಿ (PM Modi) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ದೇಶದ ಯುವಕರ ಭವಿಷ್ಯಕ್ಕೆ ದೊಡ್ಡ ಹಾನಿ ಮಾಡಿದ್ದು ಕೇಂದ್ರ ಸರ್ಕಾರವೇ ಎಂದು ಅವರು ಆರೋಪಿಸಿದ್ದಾರೆ. ಪ್ರಧಾನಿ ಮೋದಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಖಚಿತಪಡಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಯುವಕರ ಭವಿಷ್ಯ ಸರ್ಕಾರದ ಮೊದಲ ಆದ್ಯತೆ …
Read More »ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನ
ಬೆಂಗಳೂರು: ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದು ಘಟನೆ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯದ ಹಿಂದೆ ಇನ್ನೂ ಕೆಲವರು ಇದ್ದಾರೆಯೇ ಎಂಬ ಅನುಮಾನವೂ ಪೊಲೀಸರಿಗೆ ಮೂಡಿದ್ದು, ಆ ದಿಕ್ಕಿನಲ್ಲೂ ತನಿಖೆ ಮುಂದುವರಿದಿದೆ. ಪ್ರಮುಖ ಅರೋಪಿ ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಟ್ಟೆಗಳನ್ನು ಎಲ್ಲಿಂದ …
Read More »ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ …
Read More »
Laxmi News 24×7