Breaking News

Laxminews 24x7

ಶಾಸಕ `ಹಾಲಪ್ಪ ಆಚಾರ್’ ಗೆ ಕೊರೊನಾ ಸೋಂಕು ದೃಢ

ಕೊಪ್ಪಳ : ಈಗಾಗಲೇ ಜಿಲ್ಲೆಯ ಶಾಸಕರಾದಂತ ರಾಘವೇಂದ್ರ ಹಿಟ್ನಾಳ್ ಹಾಗೂ ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದೀಗ ಇವರ ಬಳಿಕ ಶಾಸಕ ಹಾಲಪ್ಪ ಆಚಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.   ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆಯನ್ನು ಮಾಡಿಸಿಕೊಳ್ಳಲಾಗಿ, ವೈದ್ಯಕೀಯ ವರದಿಯ ಅನುಸಾರ ಕೊರೋನಾ …

Read More »

ಕೊರೋನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧತೆ ಸಾಲದು: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಷ್ಟು ದಿನ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆಂದು ಹೇಳುತ್ತಿದ್ದ ರಾಜಕೀಯ ಪಕ್ಷಗಳು ಇದೀಗ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದರು. ಇದೀಗ ಇವರೊಂದಿಗೆ ಹೆಚ್.ಡಿ.ದೇವೇಗೌಡ ಅವರೂ ಕೂಡ ದನಿಗೂಡಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸುತ್ತಿದ್ದಂತೆಯೇ ಪರಿಸ್ಥಿತಿ ಕುರಿತು ಅವಲೋಕನ …

Read More »

ಐವಾನ್ ಡಿಸೋಜಾಗೆ ಕೊರೊನಾ ಡಿಕೆಶಿ, ಖಾದರ್‌ಗೂ ಆತಂಕ

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಫೇಸ್ಬುಕ್‍ನಲ್ಲಿ ಪೋಸ್ಟ್ ಮಾಡಿದ್ದು, ನನಗೆ ಹಾಗೂ ನನ್ನ ಪತ್ನಿ ಡಾ.ಕವಿತಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಮಗೆ ಯಾವುದೇ ಲಕ್ಷಣಗಳು ಇರಲಿಲ್ಲ. ಆದರೂ ಸ್ವಯಂಪ್ರೇರಿತರಾಗಿ ಗಂಟಲು ದ್ರವದ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಸ್ನೇಹಿತರು ಹಾಗೂ ಬೆಂಬಲಿಗರು ನಮ್ಮನ್ನು …

Read More »

ಕೊರೊನಾ ಭಯ- ನೋಟ್‍ಗಳನ್ನು ವಾಶಿಂಗ್ ಮಶೀನ್‍ಗೆ ಹಾಕಿದ್ರು

ಸಿಯೋಲ್: ಕೊರೊನಾ ಜನರನ್ನು ಯಾವ ಮಟ್ಟಿಗೆ ಭಯಪಡಿಸಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದ್ದು, ಸೋಂಕು ತಗುಲುವ ಭಯದಲ್ಲಿ ಇಲ್ಲೊಬ್ಬರು ನೋಟುಗಳನ್ನೇ ವಾಶಿಂಗ್ ಮಶೀನ್‍ಗೆ ಹಾಕಿ ತೊಳೆದಿದ್ದಾರೆ.ದಕ್ಷಿಣ ಕೋರಿಯಾದ ಸಿಯೋಲ್‍ನಲ್ಲಿ ವ್ಯಕ್ತಿಯೊಬ್ಬರು ಈ ರೀತಿ ಮಾಡಿದ್ದು, ಅವರು ಪುರುಷನೋ ಮಹಿಳೆಯೋ ಎಂಬುದು ತಿಳಿದು ಬಂದಿಲ್ಲ. ಕೊರೊನಾ ವೈರಸ್ ತಗುಲುವುದರಿಂದ ತಪ್ಪಿಸಿಕೊಳ್ಳಲು 50,000 ವೋನ್(3,137 ರೂಪಾಯಿ)ನ್ನು ವಾಶಿಂಗ್ ಮಶೀನ್‍ಗೆ ಹಾಕಿ ತೊಳೆದಿದ್ದಾರೆ ಎಂದು ವರದಿಯಾಗಿದೆ. ಕುಟುಂಬದವರು ನಿಧನರಾಗಿದ್ದಾಗ ಸಂಬಂಧಿಕರು ಹಾಗೂ ಸ್ನೇಹಿತರು ವ್ಯಕ್ತಿಗೆ …

Read More »

ಅಯೋಧ್ಯೆ ಭೂಮಿ ಪೂಜೆಗೆ ತಯಾರಾಗ್ತಿದೆ 1.25 ಲಕ್ಷ ಮಣ್ಣಿನ ಹಣತೆಗಳು!

ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. …

Read More »

ಸಮುದ್ರಕ್ಕಿಳಿದ ಬೋಟುಗಳು ಮರಳಿ ದಡಕ್ಕೆ

ಕಾರವಾರ: ರಾಜ್ಯದ ಕರಾವಳಿಯಲ್ಲಿ ಅಗಸ್ಟ್ ತಿಂಗಳ ಮೊದಲ ದಿನ ಮೀನುಗಾರಿಕೆ ಪ್ರಾರಂಭಕ್ಕೆ ವಿದ್ಯುಕ್ತ ಚಾಲನೆ ಸಿಗುತ್ತದೆ. ಮಳೆಗಾಲದ ಎರಡು ತಿಂಗಳು ಬಂದ್ ಆಗುವ ಮೀನುಗಾರಿಕೆ, ಸರ್ಕಾರದ ಆದೇಶದಂತೆ ಇಂದಿನಿಂದ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಪ್ರತಿ ವರ್ಷ ಅಗಸ್ಟ್ ನಲ್ಲಿ ಮೀನುಗಾರಿಕೆಯನ್ನು ಹಬ್ಬದಂತೆ ಆಚರಿಸುತ್ತಿದ್ದ ಉತ್ತರ ಕನ್ನಡ ಮೀನುಗಾರರ ಸಂಭ್ರಮ ಕಳೆಗುಂದಿದೆ. ಸರ್ಕಾರದ ಆದೇಶದಂತೆ ಜೂನ್, ಜುಲೈ ತಿಂಗಳ ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆಗೆ ನಿಷೇಧ ಹೇರಿದ ಬಳಿಕ ಅಗಸ್ಟ್ 1 ರಿಂದ …

Read More »

ಆಗಸ್ಟ್​ ಬಂದರೂ ಸುರಿಯುತ್ತಿಲ್ಲ ಮಳೆ; ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಬೆಂಗಳೂರು : ಆಗಸ್ಟ್​ ತಿಂಗಳು ಆರಂಭಗೊಂಡಿದೆ. ಕಳೆದ ವರ್ಷ ಈ ಹೊತ್ತಿಗೆ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ , ಈ ಬಾರಿ ಮಳೆ ಇಲ್ಲದೆ ಜನ ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೇಸಿಗೆ ಸಮಯದಲ್ಲಿ ನೀರಿಗೆ ಹಾಹಾಕಾರ ಏಳುವುದು ಗ್ಯಾರಂಟಿ . ಏಕೆಂದರೆ ಈಗ ಅಂದುಕೊಂಡ ಮಟ್ಟಕ್ಕೆ ಜಲಾಶಯಗಳು ತುಂಬುತ್ತಿಲ್ಲ. ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್​ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ಆದರೆ, ನಂತರ ಮಳೆ ಆಗಲೇ ಇಲ್ಲ. …

Read More »

ಪಿಪಿಇ ಕಿಟ್​ ಧರಿಸದೇ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಗುಂಪಾಗಿ ಸೇರಿದ ಸಂಬಂಧಿಕರು

ಬೆಳಗಾವಿ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಸೋಂಕಿನ ಭಯ ಮೆರತು ‌ ಸ್ಮಶಾನದೊಳಗೆ‌ ನುಗ್ಗಿದ ಘಟನೆ ಜಿಲ್ಲೆಯ ಸದಾಶಿವ‌ನಗರದ ಸ್ಮಶಾನದಲ್ಲಿ ನಡೆದಿದೆ. ನಿನ್ನೆ ಸಂಜೆ ನಗರ ಪಾಲಿಕೆ ಸಿಬ್ಬಂದಿ ಕೊರೊನಾ ಸೋಂಕಿತರೊಬ್ಬರ ಅಂತ್ಯಕ್ರಿಯೆ ನಡೆಸಲು ಸದಾಶಿವ‌ನಗರದ ಸ್ಮಶಾನಕ್ಕೆ ಮೃತದೇಹ ತಂದಿದ್ದಾರೆ. ಈ ವೇಳೆ ಸೋಂಕಿತರ ಸಂಬಂಧಿಕರು ಪಿಪಿಇ‌ ಕಿಟ್ ಇಲ್ಲದೇ, ಶವದ ಅಕ್ಕಪಕ್ಕ ಓಡಾಡಿದ್ದಾರೆ. ಅಲ್ಲದೇ ಅಂತ್ಯಸಂಸ್ಕಾರದ ವೇಳೆ‌ ಬೆಂಕಿ‌ ಸರಿಪಡಿಸಲು ಪಾಲಿಕೆ ಸಿಬ್ಬಂದಿ ಕೂಡ ಪಿಪಿಇ‌ ಕಿಟ್ …

Read More »

ಬೆಳಗಾವಿ | ಕಾಣೆಯಾದ ಬೆಳಗಾವಿಯ ಜಡಿಮಳೆ..!

ಬೆಳಗಾವಿ: ಮಳೆಗಾಲ ಆರಂಭದ ಮೊದಲ ತಿಂಗಳು, ಕಳೆದ ಜೂನ್‌ನಲ್ಲಿ ಜಿಲ್ಲೆಯಲ್ಲಿ ಅಬ್ಬರಿಸಿದ್ದ ಮಳೆರಾಯ ಜುಲೈನಲ್ಲಿ ತಣ್ಣಗಾಗಿದ್ದಾನೆ. ಪ್ರತಿವರ್ಷ ಜೂನ್‌ಗಿಂತಲೂ ಜುಲೈನಲ್ಲಿಯೇ ಹೆಚ್ಚು ಮಳೆಯಾಗುತ್ತಿತ್ತು. ವಾರಗಟ್ಟಲೆ ಜಿಟಿಜಿಟಿ ಸುರಿಯುತ್ತಿತ್ತು. ಆದರೆ, ಈ ಸಲ ಬೆಳಗಾವಿಯ ಜಡಿಮಳೆ ಕಾಣೆಯಾಗಿದೆ. ವಾಡಿಕೆಗಿಂತ ಶೇ 20ರಷ್ಟು ಕಡಿಮೆ ಮಳೆಯಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ಜೂನ್‌ನಲ್ಲಿ 180.9 ಸೆಂ.ಮೀ ವಾಡಿಕೆ ಮಳೆಗೆ ಹೋಲಿಸಿದರೆ 228.4 ಸೆಂ.ಮೀ.ನಷ್ಟು (ಶೇ 25ರಷ್ಟು ಹೆಚ್ಚು) ಮಳೆಯಾಗಿತ್ತು. ಅದೇ ರಭಸ ಜುಲೈನಲ್ಲಿ ಕಂಡುಬರಲಿಲ್ಲ. ಮೊದಲ …

Read More »

63,922 ಪಡಿತರ ಕಾರ್ಡ್‌ ರದ್ದು: ಗಡಾದ

ಮೂಡಲಗಿ: ರಾಜ್ಯದಲ್ಲಿ ಒಟ್ಟು 1,27,00,451 ಪಡಿತರ ಕಾರ್ಡ್‌ಗಳು ಇದ್ದು ಇವುಗಳಲ್ಲಿ 63,922 ಕಾರ್ಡ್‌ಗಳನ್ನು ಅನರ್ಹ ಪಡಿತರ ಕಾರ್ಡ್‌ಗಳೆಂದು ಗುರುತಿಸಿ ರದ್ದು ಪಡಿಸಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, 43,138 ಕಾರ್ಡ್‌ಗಳನ್ನು ಬಿಪಿಎಲ್‌ದಿಂದ ಎಪಿಎಲ್‌ಗೆ ಪರಿವರ್ತಿಸಲಾಗಿದೆ ಮತ್ತು ಅಕ್ರಮ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್‌ ಪಡೆಯುವಾಗ ಕಾರ್ಡ್‌ದಾರರಿಂದ ದಂಡದ ರೂಪದಲ್ಲಿ ಒಟ್ಟು 96,27,961 ರೂ. ಖಜಾನೆಗೆ ಪಾವತಿಸಿಕೊಳ್ಳಲಾಗಿರುವ ಅಂಶವು ಮಾಹಿತಿ ಹಕ್ಕಿನಿಂದ ಬೆಳಕಿಗೆ …

Read More »