ಚಿಕ್ಕಮಗಳೂರು: ಕೊರೊನಾ ಸೋಂಕಿತೆ ಆಸ್ಪತ್ರೆಗೆ ದಾಖಲಾಗುವಾಗ ಕೊರಳಲ್ಲಿ ಮಾಂಗಲ್ಯ ಸರವಿತ್ತು. ಆದರೆ ಮೃತರಾದ ಬಳಿಕ ಮೃತದೇಹ ಹೊರ ತಂದಾಗ ಮಾಂಗಲ್ಯ ಸರ ಹಾಗೂ ಕೈಯಲ್ಲಿದ್ದ ಉಂಗುರ ಇಲ್ಲದಂತಾಗಿತ್ತು. ಈ ಕುರಿತು ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಿಸಿದಾಗ ಗೊತ್ತಿಲ್ಲ ಎಂದಿದ್ದರು. ಆದರೆ 13 ದಿನದ ಬಳಿಕ ಕಳ್ಳನೇ ಮಾಂಗಲ್ಯ ಸರ ಇಟ್ಟು ಹೋದನಂತೆ. ಈ ಘಟನೆ ಜಿಲ್ಲೆಯಲ್ಲಿ ಆಗಸ್ಟ್ 10ರಂದು ನಡೆದಿತ್ತು. ನಾಲ್ಕೈದು ತಿಂಗಳಿಂದ ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿರೋ ವೈದ್ಯರು, …
Read More »ನಾಲ್ಕು ತಿಂಗಳಲ್ಲಿ ಬಯಲುಸೀಮೆ ಕೋಲಾರ ಜನರ ದಾಹ ನೀಗಲಿದೆ.
ಕೋಲಾರ: ಮುಂದಿನ ನಾಲ್ಕು ತಿಂಗಳಲ್ಲಿ ಬಯಲುಸೀಮೆ ಕೋಲಾರ ಜನರ ದಾಹ ನೀಗಲಿದೆ. ಯರಗೋಳ್ ಯೋಜನೆ ಮೂಲಕ 4 ನಗರಗಳಿಗೆ ಕುಡಿಯುವ ನೀರು ಲಭ್ಯವಾಗಲಿದೆ.ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಗ್ರಾಮದಲ್ಲಿ ಬೃಹದಾಕಾರವಾಗಿ ಆಣೆಕಟ್ಟು ತಲೆ ಎತ್ತಿದೆ. ಕೋಲಾರ ಸೇರಿದಂತೆ ಮೂರು ತಾಲೂಕುಗಳಿಗೆ ಕುಡಿಯುವ ನೀರು ಒದಗಿಸಲು 2008 ರಲ್ಲಿ ಯರಗೋಳ್ ಯೋಜನೆ ಆರಂಭವಾಗಿತ್ತು. ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ಪಟ್ಟಣಗಳಿಗೆ ಹಾಗೂ 45 ಇನ್ನಿತರ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಂದಿನ …
Read More »ಫೈರಿಂಗ್ ಪ್ರಕರಣವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು
ಶಿವಮೊಗ್ಗ: ಫೈರಿಂಗ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಕ್ಸಲ್ ಶೋಭಾಳನ್ನು ಜಿಲ್ಲೆಯ ತೀರ್ಥಹಳ್ಳಿ ನ್ಯಾಯಾಲಯಕ್ಕೆ ಇಂದು ಹಾಜರು ಪಡಿಸಲಾಗಿದೆ. 2012ರಲ್ಲಿ ಬರ್ಕಣ ಫಾಲ್ಸ್ ಬಳಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ನಕ್ಸಲ್ ಶೋಭಾ ಭಾಗಿಯಾಗಿದ್ದಳು ಎಂದು ದೂರು ದಾಖಲಿಸಲಾಗಿತ್ತು. ಫೈರಿಂಗ್ ಪ್ರಕರಣದ ನಂತರ ಶೋಭಾ ತಲೆ ಮರೆಸಿಕೊಂಡಿದ್ದಳು. ಕಳೆದ ಮಾರ್ಚ್‍ನಲ್ಲಿ ಶೋಭಾಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿತ್ತು. ಶೋಭಾ 11 ನಕ್ಸಲ್ ಪ್ರಕರಣಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪವಿದ್ದು, ಇವಳ ವಿರುದ್ಧ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ವಿವಿಧ ಪೊಲೀಸ್ …
Read More »ಕ್ಲಬ್‍ಗಳಲ್ಲಿ ಎಣ್ಣೆ ಇಲ್ಲದೆ ಮೋಜು ಮಾಡಬಹುದು
ಬೆಂಗಳೂರು: ಸಾಮಾಜಿಕ ಕಬ್‍ಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದೆ.ಅಂತರಾಜ್ಯ ಪ್ರಯಾಣಿಕರು ರಾಜ್ಯಕ್ಕೆ ಪ್ರವೇಶಿಸಬೇಕಾದರೆ ಪಾಲಿಸಬೇಕಾದ ಕೊರೊನಾ ನಿಯಮಗಳಲ್ಲಿ ಸಹ ರಾಜ್ಯಸರ್ಕಾರ ಸಡಿಲಿಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಕ್ಲಬ್‍ಗಳನ್ನು ತೆರೆಯಲು ಸಹ ಅನುಮತಿ ನೀಡಿದೆ. ಕ್ಲಬ್ ಗಳಲ್ಲಿ ಮೇಜಿನ ಮೇಲೆ ಆಹಾರ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಕ್ಲಬ್ ಗಳಲ್ಲಿ ಮದ್ಯ ಸರಬರಾಜನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಲ್ಲದೆ …
Read More »ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ನೌಕರನೊಬ್ಬ ಬ್ಯಾಂಕ್‍ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆ
ಬಳ್ಳಾರಿ: ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಬಳಿಕ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ನೌಕರನೊಬ್ಬ ಬ್ಯಾಂಕ್‍ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸಪೇಟೆಯ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‍ನಲ್ಲಿ ನಡೆದಿದೆ. ಮೃತ ಬ್ಯಾಂಕ್ ನೌಕರ ಮಹೇಶ್ ಎಂದು ತಿಳಿದುಬಂದಿದೆ. ಮಹೇಶ್ ಬ್ಯಾಂಕ್‍ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಿಸಿನೆಸ್ ಇಲ್ಲದ ಕಾರಣ ಸರಿಯಾದ ದಾಖಲೆ ಇಲ್ಲದಿದ್ದರೂ ಲೋನ್ ನೀಡುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದರಂತೆ. ಈ ಹಿನ್ನೆಲೆಯಲ್ಲಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮ ಗೋಕಾಕ : ಸತತ ಪರಿಶ್ರಮ, ಸ್ಪಷ್ಟ ಗುರಿ ಮತ್ತು ಉತ್ತಮ ಮಾರ್ಗದರ್ಶನವಿದ್ದರೆ ಮಾತ್ರ ಉತ್ತಮ ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದು ಮೂಡಲಗಿ ತಹಶೀಲ್ದಾರ ದಿಲ್‍ಶಾದ್ ಮಹಾತ್ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕಳೆದ ಶನಿವಾರದಂದು ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಮ್ಮ ಮುಂದಿನ ಜೀವನ …
Read More »ಸೋಂಕಿತರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗಾಗಿ ಪ್ರತೀ ದಿನ ಯೋಗ ತರಬೇತಿ ನೀಡಲಾಗುತ್ತಿದೆ.
ರಾಯಚೂರು: ಕೋವಿಡ್ ಕೇರ್ ಸೆಂಟರ್ ಅಂದ್ರೆ ಅವ್ಯವಸ್ಥೆಗಳ ಆಗರ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಆದರೆ ರಾಯಚೂರಿನ ಸಿಂಧನೂರು ನಗರದ ಕೋವಿಡ್ ಕೇರ್ ಸೆಂಟರ್ ಇದಕ್ಕೆ ಅಪವಾದ ಎಂಬಂತೆ ಉತ್ತಮ ಸೇವೆ ನೀಡುತ್ತಿದೆ. ಕೇಂದ್ರದಲ್ಲಿರುವ ಸೋಂಕಿತರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗಾಗಿ ಪ್ರತೀ ದಿನ ಯೋಗ ತರಬೇತಿ ನೀಡಲಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ತರಬೇತಿಗಳನ್ನ ನೀಡಿರುವ ಸಿಂಧನೂರು ಮೂಲದ ಯೋಗಗುರು ಮಲ್ಲಣ್ಣ ಸೋಂಕಿತರಿಗೆ ಯೋಗ ಕಲಿಸುತ್ತಿದ್ದಾರೆ. ಕೋವಿಡ್ ಕೇರ್ …
Read More »ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸರಕುಗಳ ಅಂತರ-ರಾಜ್ಯ ಚಲನೆಗೆ ಯಾವುದೇ ನಿರ್ಬಂಧಗಳಿರುವದಿಲ್ಲ. ಅಂತರ-ರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ, ಗಡಿ ಭಾಗಗಳಲ್ಲಿ ವೈದ್ಯಕೀಯ ತಪಾಸಣೆ, ಜಿಲ್ಲೆಗಳಲ್ಲಿ ತಪಾಸಣೆ, ಪ್ರಯಾಣಿಕರ ವರ್ಗೀಕರಣ, ಕೈಗಳ ಮೇಲೆ ಮುದ್ರೆ, ಮನೆ ಬಾಗಿಲುಗಳಿಗೆ ಪೋಸ್ಟರ್ ಹಚ್ಚುವಿಕೆ ಈ ಎಲ್ಲ ಷರತ್ತುಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಸರ್ಕಾರ …
Read More »ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ರಮೇಶ್ ಜಾರಕಿಹೊಳಿ
ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ಜಾರಕಿಹೊಳಿ ಬೆಳಗಾವಿ, ಆ. 24(ಕರ್ನಾಟಕ ವಾರ್ತೆ): ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ …
Read More »ಕರ್ನಾಟಕ-ಮಹಾರಾಷ್ಟ್ರ-ಗೋವಾ ಮಧ್ಯಭಾಗದಲ್ಲಿರುವ ಅಂಬೋಲಿ ಫಾಲ್ಸ್ ಜಲವೈಭವ ನೋಡುಗರ ಕಣ್ಣಿಗೆ ಹಬ್ಬ.
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ-ಗೋವಾ ಮಧ್ಯಭಾಗದಲ್ಲಿರುವ ಅಂಬೋಲಿ ಫಾಲ್ಸ್ ಜಲವೈಭವ ನೋಡುಗರ ಕಣ್ಣಿಗೆ ಹಬ್ಬ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆ ಸಾವಂತವಾಡಿ ತಾಲೂಕಿನ ಅಂಬೋಲಿಯಲ್ಲಿರುವ ಈ ಜಲಪಾತ ಕಿಂಗಡಮ್ ಆಫ್ ಫಾಲ್ಸ್ ಅಂತಾನೇ ಫೇಮಸ್. ವರ್ಷಧಾರೆಗೆ ಮೈದುಂಬಿರುವ ಈ ಜಲಧಾರೆ ಪ್ರತಿವರ್ಷ ಪ್ರವಾಸಿಗರನ್ನು ಹರ್ಷದ ಹೊನಲಿನಲ್ಲಿ ಮಿಂದೇಳಿಸುತ್ತಿತ್ತು. ಆದರೆ ಈ ಬಾರಿ ಮಾತ್ರ ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶವಿಲ್ಲ. ಆದರೆ ಈ ಮಾರ್ಗವಾಗಿ ಸಂಚರಿಸುವ ಜನರು ಕೆಲವು ಕ್ಷಣಗಳ …
Read More »
Laxmi News 24×7