ಬೆಂಗಳೂರು: ಇಂದು ಲಾಕ್ ಫ್ರೀ ಎರಡನೇ ದಿನವಾಗಿದ್ದು, ಉತ್ತರ ಕರ್ನಾಟಕದ ಭಾಗಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮೆಜೆಸ್ಟಿಕ್ ನಿಲ್ದಾಣದತ್ತ ಪ್ರಯಾಣಿಕರು ಅಗಮಿಸುತ್ತಿದ್ದು, ಟಿಕೆಟ್‍ಗಾಗಿ ಸರತಿಯಲ್ಲಿ ನಿಂತಿದ್ದಾರೆ. ಸೋಮವಾರ ರಾತ್ರಿಯೇ ಬಸ್ ವ್ಯವಸ್ಥೆ ಇಂದು ಮೆಜೆಸ್ಟಿಕ್ ನಿಲ್ದಾಣಕ್ಕೆ ಹಲವರು ಬಂದಿದ್ದರು. ಆದ್ರೆ ಬಸ್ ಸಿಗದೇ ಇಡೀ ರಾತ್ರಿಯನ್ನು ಪ್ರಯಾಣಿಕರು ನಿಲ್ದಾಣದಲ್ಲಿಯೇ ಕಳೆಯುವಂತಾಗಿತ್ತು. ಇಂದು ಬಸ್ ಸಂಚಾರದಲ್ಲಿ ಕೆಲ ಬದಲಾವಣೆ ತರಲಾಗಿದ್ದು, ಸಂಜೆ 5 ಗಂಟೆ ಬದಲು 7 ಗಂಟೆವರೆಗೂ ಬಸ್‍ಗಳ ವ್ಯವಸ್ಥೆ …
Read More »20ಕ್ಕೂ ಹೆಚ್ಚು ಜಾನುವಾರು ಕೊಂದಿದ್ದ ವ್ಯಾಘ್ರ ಸೆರೆ- ನಿಟ್ಟುಸಿರು ಬಿಟ್ಟ ಕಾಡಂಚಿನ ಜನ…..
ಚಾಮರಾಜನಗರ: ಕಾಡಂಚಿನ ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ, ವಡ್ಡಗೆರೆ, ಚಿರಕನಹಳ್ಳಿ ಭಾಗದಲ್ಲಿ ಹೆಚ್ಚಾಗಿದ್ದ ಹುಲಿ ಭೀತಿ ಕಾಡುತ್ತಿತ್ತು. ಹುಲಿ 20ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿತ್ತು. ಕಳೆದ ಒಂದು ವಾರದಿಂದ ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಸಚಿವ ಆನಂದ್ ಸಿಂಗ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನರಿಗೆ ಕಂಟಕವಾಗಿರುವ ಹುಲಿ …
Read More »ಬೆಂಗಳೂರಿನಲ್ಲಿ ಮಧ್ಯಾಹ್ನವಾಗುತ್ತಿದ್ದಂತೆಯೇ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರ ಸಂಖ್ಯೆ ಇಳಿಮುಖ
ಬೆಂಗಳೂರು(ಮೇ.19): ದೇಶಾದ್ಯಂತ ನಾಲ್ಕನೇ ಹಂತದ ಲಾಕ್‍ಡೌನ್ ಮೇ 18ರಿಂದ ಜಾರಿಯಾಗಿದ್ದು, ಮೇ 31ರವರೆಗೂ ಇರಲಿದೆ. ಲಾಕ್‍ಡೌನ್ 4.0 ನಲ್ಲಿ ಭಾರಿ ಸಡಿಲಿಕೆ ನೀಡಲಾಗಿದ್ದು, ಬಹುತೇಕ ಎಲ್ಲ ವ್ಯಾಪಾರ- ವಹಿವಾಟು, ಸಂಚಾರ ವ್ಯವಸ್ಥೆ ಆರಂಭವಾಗಲಿದೆ. ಬಸ್ ಸಂಚಾರ ನಿರ್ಧಾರವನ್ನು ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಿದ್ದರಿಂದ ಸೋಮವಾರ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದಿನಿಂದ ಸಾರಿಗೆ ಸಂಚಾರ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಇಂದಿನಿಂದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ …
Read More »ರಾಯಚೂರು ಸಂಪೂರ್ಣ ಲಾಕ್‍ಡೌನ್ – ಊಟವಿಲ್ಲದೆ ಪರದಾಡುತ್ತಿರೋ ಭಿಕ್ಷುಕರು
ರಾಯಚೂರು: ಜಿಲ್ಲೆಯಲ್ಲಿ ಪತ್ತೆಯಾದ ಆರು ಜನ ಕೊರೊನಾ ಸೋಂಕಿತರ ಸಂಪರ್ಕದಲ್ಲಿರುವವರ ಪತ್ತೆಗಾಗಿ ಇಡೀ ನಗರವನ್ನ ಇಂದು ಬಂದ್ ಮಾಡಲಾಗಿದೆ. ಸಂಪೂರ್ಣ ಲಾಕ್‍ಡೌನ್ ಇರುವುದರಿಂದ ಹೋಟೆಲ್, ಬೇಕರಿ, ಅಂಗಡಿ ಮುಗ್ಗಟ್ಟು ಸಂಪೂರ್ಣ ಬಂದ್ ಆಗಿದ್ದು, ಜನರ ಓಡಾಟವೂ ವಿರಳವಾಗಿದೆ. ಇದರಿಂದ ರಸ್ತೆಯ ಬದಿಯ ಭಿಕ್ಷುಕರು ಊಟವಿಲ್ಲದೆ ಪರದಾಡುತ್ತಿದ್ದಾರೆ. ಮೂರನೇ ಹಂತದ ಲಾಕ್‍ಡೌನ್ ಆರಂಭವಾದ ನಂತರ ರಾಯಚೂರಿನಲ್ಲಿ ಲಾಕ್‍ಡೌನ್ ಸಡಲಿಕೆಯಾಗಿತ್ತು. ಭಿಕ್ಷೆ ಬೇಡಿ ಬದುಕುತ್ತಿದ್ದವರು ಕೂಡ ಈಗ ಊಟಕ್ಕಾಗಿ ಪರದಾಡುತ್ತಿದ್ದಾರೆ. ಸಂಪೂರ್ಣ ಲಾಕ್‍ಡೌನ್ …
Read More »ಎರಡು ವರ್ಷದ ಮಗುವಿಗೆ ಕೊರೊನಾ- ಯಾದಗಿರಿಯಲ್ಲಿ 11ಕ್ಕೇರಿದ ಸೋಂಕಿತರ ಸಂಖ್ಯೆ
ಯಾದಗಿರಿ: ತಾಲೂಕಿನಲ್ಲಿ ಇಂದು ಎರಡು ವರ್ಷದ ಗಂಡು ಮಗುವಿಗೂ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಜಿಲ್ಲೆಯ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 11ಕ್ಕೇರಿದೆ. ತಾಲೂಕಿನ ಚಿನ್ನಕಾರ ಗ್ರಾಮದ ಗುರುಮಿಠಕಲ್‍ನ ರೋಗಿ ನಂ.1,256 ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟದೆ. ಈ ಹಿನ್ನೆಲೆ ಮಗುವಿನ ತಂದೆ, ತಾಯಿಯರ ಸ್ಯಾಂಪಲ್ ಸಂಗ್ರಹಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಮೇ 14ರಂದು ತಂದೆ ತಾಯಿ ಮಗುವಿನೊಂದಿಗೆ ಖಾಸಗಿ ವಾಹನದ ಮೂಲಕ ಮುಂಬೈನಿಂದ ಯಾದಗಿರಿಗೆ ಬಂದಿದ್ದರು. ಇವರೊಟ್ಟಿಗೆ …
Read More »ಕೇಂದ್ರ ಸರ್ಕಾರ ಘೋಷಿಸಿರುವ 21 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಸಾಲಕೊಟ್ಟು ಜನರನ್ನು ಬಡ್ಡಿ ಮಕ್ಕಳನ್ನಾಗಿ ಮಾಡುವಂತಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು, ಮೇ 19- ಕೇಂದ್ರ ಸರ್ಕಾರ ಘೋಷಿಸಿರುವ 21 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಸಾಲಕೊಟ್ಟು ಜನರನ್ನು ಬಡ್ಡಿ ಮಕ್ಕಳನ್ನಾಗಿ ಮಾಡುವಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನರ ನೋವು ನಲಿವಿಗೆ ಸರ್ಕಾರ ಸ್ಪಂದಿಸಲಿಲ್ಲ. ತಮ್ಮ ಪಕ್ಷದ ಮತ ಬ್ಯಾಂಕ್ ಹೆಚ್ಚಿಸಿಕೊಳ್ಳಲು ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಕ್ರಮ ನಡೆಸಿವೆ …
Read More »ಬೆಂಗಳೂರು : 2 ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಲುಕಿ ಇಬ್ಬರ ಸಾವು……….
ಬೆಂಗಳೂರು, ಮೇ 19- ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಒಂದು ಪ್ರಕರಣದಲ್ಲಿ ಚಿಕ್ಕಬಾಣಾವಾರ- ಗೊಲ್ಲಹಳ್ಳಿ ರೈಲ್ವೆ ನಿಲ್ದಾಣಗಳ ಮಧ್ಯೆ ಹಾದು ಹೋಗುವ ರೈಲ್ವೆ ಹಳಿ ಬಳಿ ಸುಮಾರು 40 ವರ್ಷದಂತೆ ಕಾಣುವ ವ್ಯಕ್ತಿ ನಿನ್ನೆ ಮುಂಜಾನೆ ಯಾವುದೋ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿರುವ ಈ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಮೈಮೇಲೆ …
Read More »ಮದ್ಯಕ್ಕೆ ಮೊದಲಿದ್ದ ಬೇಡಿಕೆ ಈಗಿಲ್ಲ : ಸಚಿವ ನಾಗೇಶ್
ಕೋಲಾರ, ಮೇ 19- ರಾಜ್ಯದಲ್ಲಿ ಮದ್ಯಕ್ಕೆ ಮೊದಲು ಇದ್ದ ಬೇಡಿಕೆ ಸದ್ಯಕ್ಕಿಲ್ಲ ಹಾಗಾಗಿ ಆದಾಯ ಕಡಿಮೆಯಾಗಿದೆ ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ನಂತರ ಮದ್ಯ ಪೂರೈಕೆಗೆ ಅವಕಾಶ ನೀಡಿದ ಮೊದಲ ವಾರದಲ್ಲಿ ಕಲೆಕ್ಷನ್ ಚೆನ್ನಾಗಿ ಆಗಿತ್ತು. ಆದರೆ, ಈಗಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಲಾಡ್ಜ್‍ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಆದಾಯ ಕಡಿತವಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು
Read More »ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪಕ್ಷ ನನ್ನನ್ನ ನೇಮಿಸಿದೆ, ನಮ್ಮಲ್ಲಿ ಸಾಂಕೇತಿಕವಾಗಿ ಪದಗ್ರಹಣ
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪಕ್ಷ ನನ್ನನ್ನ ನೇಮಿಸಿದೆ, ನಮ್ಮಲ್ಲಿ ಸಾಂಕೇತಿಕವಾಗಿ ಪದಗ್ರಹಣ ಮಾಡುವುದಿದೆ ಕೋವಿಡ್-19ನಿಂದಾಗಿ ನಮಗೆ ಆ ಭಾಗ್ಯ ಸಿಕ್ಕಿರಲಿಲ್ಲ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಕೇತಿವಾಗಿ ಮಾಡಲಿಲ್ಲ ಅಂತ ಮನೆಯಲ್ಲಿ ಕೂರಲಿಲ್ಲ, ನಾವು ರಸ್ತೆಗಿಳಿದು ಪ್ರತಿಪಕ್ಷವಾಗಿ ವರ್ತಿಸಿದ್ದೇವೆ. ಜನರ ಮಧ್ಯೆಯಿದ್ದು ಪ್ರಾಮಾಣಿಕ ಸೇವೆ ಮಾಡಿದ್ದೇವೆ. ನಮ್ಮ ನಾಯಕರ ಜೊತೆ ಸೇರಿ ಸರ್ಕಾರ ಎಚ್ಚರಿಸಿದ್ದೇವೆ ಎಂದು …
Read More »ಬೆಳಗಾವಿ-ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ
ಬೆಳಗಾವಿ- ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ಗಣೇಶಪೂರದಲ್ಲಿ ನಡೆದಿದೆ. ಅಂಗನವಾಡಿ,ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ವರ್ಕರ್ಸ್ ಗಳು ಇಂದು ಗಣೇಶಪೂರದಲ್ಲಿ ಕೊರೋನಾ ಕುರಿತು ಸಾರ್ವಜನಿಕರು ವಹಿಸಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವಾಗ ರಿಕ್ಷಾ ಚಾಲಕನೊಬ್ಬ ಇವರ ಜೊತೆ ಅಸಭ್ತವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ ಹಲ್ಲೆ ಮಾಡಿದ ಆರೋಪದ ಮೇಲೆ ಓರ್ವನನ್ನು ಬಂಧಿಸಲಾಗಿದೆ.ಈ ಕುರಿತು ಕ್ಯಾಂಪ್ ಠಾಣೆಯಲ್ಲಿ …
Read More »
Laxmi News 24×7