Breaking News

Laxminews 24x7

ತುಮಕೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಮೂವರು ಅಕ್ರಮವಾಗಿ ನುಸುಳಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ತುಮಕೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಮೂವರು ಅಕ್ರಮವಾಗಿ ನುಸುಳಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಸರ್ಕಾರದ ಆದೇಶ ಮೀರಿ ಮೂರು ಜನ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದಾರೆ. ಅಶೋಕ ಹೆಚ್.ಬಿ, ಮಲ್ಲಿಕಾರ್ಜುನ ಮತ್ತು ಚಂದ್ರಮೌಳಿ ಜಿಲ್ಲಾಡಳಿಕ್ಕೆ ಮಾಹಿತಿ ನೀಡದೆ ಪ್ರವೇಶ ಮಾಡಿದ್ದಾರೆ. ಮೇ 14ರಂದು ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯ ಕನಕವಳ್ಳಿಯಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿಗೆ ಪ್ರವೇಶ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಬೆಳಗಾವಿಯ ನಿಪ್ಪಾಣಿಗೆ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ಬಂದಿಳಿದ ಇಬ್ಬರು ವ್ಯಕ್ಯಿಗಳು, ಅಲ್ಲಿಂದ …

Read More »

ಮಹಾರಾಷ್ಟ್ರದಿಂದ ಕಳ್ಳ ಮಾರ್ಗದ ಮೂಲಕ ಬಂದ ಮೂವರ ವಿರುದ್ಧ ಎಫ್‍ಐಆರ್

ಚಿಕ್ಕೋಡಿ: ಕಳ್ಳ ಮಾರ್ಗದಿಂದ ರಾಜ್ಯ ಪ್ರವೇಶಿಸಿದ ಮೂವರ ವಿರುದ್ಧ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಿಂದ ಪಾಸ್ ಇಲ್ಲದೇ ಕಳ್ಳ ಮಾರ್ಗದಿಂದ ಬಂದ ಮೂವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಮೀರಜ ನಗರದಿಂದ ಯಾವುದೇ ಪಾಸ್ ಇಲ್ಲದೇ ಬಂದಿದ್ದ ಆರೋಪಿಗಳನ್ನು ಹುಕ್ಕೇರಿ ಪಿಎಸ್‍ಐ ಶಿವಾನಂದ ಗುಡಗನಟ್ಟಿ ಅವರ ತಂಡ ಪತ್ತೆ ಹಚ್ಚಿದೆ. ಪತ್ನಿ ಹಾಗೂ ಮಗನನ್ನು ಕಳ್ಳ ಮಾರ್ಗದಿಂದ ಹುಕ್ಕೇರಿ ಪಟ್ಟಣದ ಕಲಾಲ್ ಗಲ್ಲಿಯ ಮನೆಗೆ …

Read More »

ಹಾಸನದಲ್ಲಿ ಕೊರೊನಾ ಭೀತಿ- ಸಾಮಾಜಿಕ ಅಂತರ ಮರೆತು ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ

ಹಾಸನ: ಹಾಸನದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಚೇರಿಯೊಳಗೆ ಜನಪ್ರತಿಗಳು, ಅಧಿಕಾರಿಗಳ ಜೊತೆ ಸಾರ್ವಜನಿಕರು ವಾಕ್ಸಮರ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ, ಕೆಂಬಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಕೆಂಬಾಳು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳಿಂದ ಶುಲ್ಕ ವಿಧಿಸುವ ಸಲುವಾಗಿ ತೀರ್ಮಾನ ತೆಗೆದುಕೊಳ್ಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಇದಕ್ಕೆ ಅಪಸ್ವರ ವ್ಯಕ್ತಪಡಿಸಿದ ಅಂಗಡಿ ಮಾಲೀಕರು, ಸ್ಥಳೀಯರು ಪಂಚಾಯಿತಿಯಲ್ಲಿ …

Read More »

ಚೆನ್ನೈನಿಂದ ಬಂದಿದ್ದ 17 ಜನರಲ್ಲಿ ಓರ್ವನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಇದೀಗ ಶಿರಹಟ್ಟಿ ಪಟ್ಟಣದ ಜನ ಆತಂಕಕ್ಕೆ

ಗದಗ: ಕೊರೊನಾ ಸೋಂಕಿತ (ರೋಗಿ 1178) ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಓಡಾಟ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚೆನ್ನೈನಿಂದ ಬಂದಿದ್ದ 17 ಜನರಲ್ಲಿ ಓರ್ವನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಇದೀಗ ಶಿರಹಟ್ಟಿ ಪಟ್ಟಣದ ಜನ ಆತಂಕಕ್ಕೆ ಒಳಗಾಗಿದ್ದಾರೆ. 17 ಜನರ ಕುಟುಂಬ ಚೆನ್ನೈನಿಂದ ಗದಗ ಜಿಲ್ಲೆಯ ಶಿರಹಟ್ಟಿಗೆ ಸ್ವಂತ ವಾಹನದಲ್ಲಿ ಬಂದಿದ್ದರು. ಈ ವೇಳೆ ಇವರನ್ನು ತಡೆದ ಅಧಿಕಾರಿಗಳು ಎಲ್ಲರನ್ನು ಶಿರಹಟ್ಟಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲಿ 17 ಜನರ …

Read More »

ಕ್ವಾರಂಟೈನ್ ನಲ್ಲಿರುವ ಮಹಾರಾಷ್ಟ್ರಕ್ಕೆ  ವಲಸೆ ಹೋಗಿದ್ದ ರಾಜ್ಯದ ಕಾರ್ಮಿಕರ ಮಕ್ಕಳಿಗೆ ಆಟಿಕೆಯ ಸಾಮಗ್ರಿಗಳನ್ನು ನೀಡಲಾಯಿತು.

ಯಮಕನಮರಡಿ: ಕ್ವಾರಂಟೈನ್ ನಲ್ಲಿರುವ ಮಹಾರಾಷ್ಟ್ರಕ್ಕೆ  ವಲಸೆ ಹೋಗಿದ್ದ ರಾಜ್ಯದ ಕಾರ್ಮಿಕರ ಮಕ್ಕಳಿಗೆ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಆಟಿಕೆಯ ಸಾಮಗ್ರಿಗಳನ್ನು ನೀಡಲಾಯಿತು. ಈ ಸಮಯದಲ್ಲಿ ಆಟಿಕೆ ಸಾಮಗ್ರಿಗಳನ್ನು ಪಡೆದ ಪುಟಾಣಿ ಮಕ್ಕಳ ಮೊಗದಲ್ಲಿ ಸಂತಸ ಕಂಡು ಅಲ್ಲಿದ್ದ ಜನರೆ ಬೆರಾಗಾಗಿದ್ದರು. ಕಳೆದ ಒಂದೂವರೆ ತಿಂಗಳಿಂದ ಲಾಕ್‌ಡೌನ್ ನಿಂದ ನರಕಯಾತನೆ ಅನುಭವಿಸಿದ್ದ ಮಕ್ಕಳು ಆಟಿಕೆ ಸಾಮಗ್ರಿಗಳನ್ನು ಪಡೆದು ಖುಷಿಪಟ್ಟಿದ್ದು ಅಷ್ಟಿಷ್ಟು ಅಲ್ಲ. ಯಮಕನಮರಡಿಯ ದಡ್ಡಿ …

Read More »

ಬೆಳಗಾವಿ:ನಾಳೆಯಿಂದ‌ ಕೇಂದ್ರ ಬಸ್ ನಿಲ್ದಾಣದಿಂದ 252 ಬಸ್ ಗಳು ಬೀದಿಗಿಳಿಯಲಿವೆ.

ಬೆಳಗಾವಿ: ರಾಜ್ಯ ಸರ್ಕಾರ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆಯಿಂದ‌ ಕೇಂದ್ರ ಬಸ್ ನಿಲ್ದಾಣದಿಂದ 252 ಬಸ್ ಗಳು ಬೀದಿಗಿಳಿಯಲಿವೆ. ಬಸ್ ಸಂಚಾರಕ್ಕಾಗಿ ನಿಲ್ದಾಣದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಯಾಣಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ನಿಲ್ದಾಣಕ್ಕೆ ಬರೋ‌ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವದು, ಬಸ್ ನಿಲ್ದಾಣಕ್ಕೆ ಆಗಮಿಸುವವರಿಗಾಗಿ ಸ್ಯಾನಿಟೈಸರ್ ಸ್ಪ್ರೆಯಿಂಗ್ ಮಷಿನ್ ಅಳವಡಿಕೆಗೆ ವ್ಯವಸ್ಥೆ ಮಾಡಲಾಗಿದೆ. ಒಂದು ಬಸ್ ನಲ್ಲಿ 30 ಜನ …

Read More »

ಇಂದು 99 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೇರಿಕೆ

ಬೆಂಗಳೂರು: ಮಹಾಮಾರಿ, ಡೆಡ್ಲಿ ವೈರಸ್ ಕೊರೊನಾ ಇಂದು 99 ಜನರಿಗೆ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೇರಿಕೆಯಾಗಿದೆ. ಇಂದು ಬೆಳಗ್ಗೆ ಬಿಡುಗಡೆಯಾದ ಬುಲೆಟಿನ್ ನಲ್ಲಿ 84 ಮಂದಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ಸಂಜೆಯ ಬುಲೆಟಿನ್ ನಲ್ಲಿ 15 ಜನರಿಗೆ ಸೋಂಕು ತಗುಲಿದೆ. ಗ್ರೀನ್‍ಝೋನ್ ನಲ್ಲಿದ್ದ ರಾಯಚೂರು ಮತ್ತು ಕೊಪ್ಪಳದಲ್ಲಿಯೂ ಕೊರೊನಾ ಪ್ರಕರಣಗಳ ಬೆಳಕಿಗೆ ಬಂದಿವೆ. ಇಂದು ಒಟ್ಟು 21 ಮಂದಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಒಟ್ಟು 530 …

Read More »

ನಾಳೆಯಿಂದ ಬೆಂಗ್ಳೂರಿನಲ್ಲಿ ಬಸ್ ಸೇವೆ ಲಭ್ಯ- ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ: ಬಿಎಂಟಿಸಿ ಎಂಡಿ ಶಿಖಾ

ಬೆಂಗಳೂರು: ಕೊರೊನಾ ಲಾಕ್‍ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಸೇವೆಯನ್ನು ನಾಳೆಯಿಂದ ಮತ್ತೆ ಆರಂಭ ಮಾಡುವುದಾಗಿ ಬಿಎಂಟಿಸಿ ಎಂಡಿ ಶಿಖಾ ಅವರು ಹೇಳಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ಬಸ್ ಆಪರೇಷನ್ ಆರಂಭಿಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. ಬಸ್ ಸೇವೆ ಆರಂಭದ ಕುರಿತು ಮಾತನಾಡಿದ ಅವರು, ಎಂಎಚ್‍ಎ ಸೂಚನೆ ಮೇರೆಗೆ ಸರ್ಕಾರ ಕೆಲ ನಿರ್ದೇಶನಗಳನ್ನು ನೀಡಿ ಬಸ್ ಸೇವೆ ಆರಂಭಿಸಲು ಸೂಚನೆ ನೀಡಿದ್ದಾರೆ. ಇದರ ಅನ್ವಯ ನಗರದಲ್ಲಿ ಗ್ರೇಡೆಡ್ ಮ್ಯಾನರ್ ನಲ್ಲಿ, …

Read More »

ಕಾಮಾಗಾರಿ ವೇಳೆ ಮಣ್ಣು ಕುಸಿತ – ಚರಂಡಿಯಲ್ಲಿ ಸಿಲುಕಿದ ಕಾರ್ಮಿಕ……..

ಹುಬ್ಬಳ್ಳಿ: ಒಳಚರಂಡಿ ಕಾಮಾಗಾರಿ ಮಾಡುತ್ತಿದ್ದಾಗ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಕಾರ್ಮಿಕನೋರ್ವ ಸಿಲುಕಿಕೊಂಡ ಘಟನೆ ಹುಬ್ಬಳ್ಳಿಯ ಬೈಲಪ್ಪನವರ ನಗರದ ನಡೆದಿದೆ. ಕಾರ್ಮಿಕ ಯಲ್ಲಪ್ಪ ಮಣ್ಣಿನಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಇಂದು ಬೆಳಗ್ಗೆ ಒಳಚರಂಡಿ ಒಳಗೆ ಇಳಿದು ಯಲ್ಲಪ್ಪ ಕೆಲಸ ಮಾಡುತ್ತಿದ್ದರು. ಈ ವೇಳೆ ಮೇಲಿಂದ ಮಣ್ಣು ಕುಸಿದು ಯಲ್ಲಪ್ಪ ಅವರ ಮೇಲೆ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರ ರಕ್ಷಣೆಗೆ ಧಾವಿಸಿದರು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು …

Read More »

ಭಾನುವಾರದಂದು ಮದ್ಯ ಮಾರಾಟ ಕೂಡ ಮಾಡುವಂತಿಲ್ಲ

ಬೆಂಗಳೂರು: ನಾಲ್ಕನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿದ್ದು, ರಾಜ್ಯ ಸರ್ಕಾರ ಕೆಲವು ನಿಯಮಗಳನ್ನು ಘೋಷಣೆ ಮಾಡಿದೆ.‌ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌ‌ನ್ ಇರಲಿದೆ ಎಂದು ತಿಳಿಸಿದ ಸರ್ಕಾರ ಭಾನುವಾರದಂದು ಯಾವುದೇ ವ್ಯಾಪಾರ, ವಹಿವಾಟು ನಡೆಯಲ್ಲ. ಭಾನುವಾರದಂದು ಮದ್ಯ ಮಾರಾಟ ಕೂಡ ಮಾಡುವಂತಿಲ್ಲ. ಹೀಗಾಗಿ ವಾರದ 6 ದಿನಗಳ ಕಾಲ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದೂ ಸಹ ಪಾರ್ಸೆಲ್ ಮಾತ್ರ ಅನುಮತಿ ಇರೋದು. 6 ದಿನ ಮಾರಾಟ ಮಾಡಿದರೂ, …

Read More »