Breaking News

Laxminews 24x7

ಉತ್ತಮ ಆಹಾರ, ಊಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ಕೊರೊನಾ ವಾರಿಯರ್ಸ್ ಆಕ್ರೋಶ

ಶಿವಮೊಗ್ಗ: ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಹಗಲು ರಾತ್ರಿ ಎನ್ನದೇ, ಮನೆಗೂ ಹೋಗದೆ ನರ್ಸ್ ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಊಟ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸದೆ ಗೋಳಾಡುವಂತೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಭೋಧನಾ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಮನೆಗೆ ಹೋಗುವಂತಿಲ್ಲ. ಕೊರೊನಾ ವಾರಿಯರ್ ಗಳು ಉಳಿದುಕೊಳ್ಳಲು ಜಿಲ್ಲಾಡಳಿತ ನಗರದ ವಿವಿಧ ಹೋಟೆಲ್ ಗಳಲ್ಲಿ ವ್ಯವಸ್ಥೆ ಮಾಡಿದೆ. ಆದರೆ ಹೋಟೆಲ್ ನಲ್ಲಿ ಕೊಠಡಿಗಳು …

Read More »

ಕೊರೊನಾ ನೆಪದಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಸಂಬಳ ಕೊಡದ ಕಾಲೇಜು!

ಬೆಂಗಳೂರು: ಕೊರೊನಾ ಸೃಷ್ಟಿಸಿದ ಅವಾಂತರಗಳಿಂದ ಒಂದೆಡೆ ಜನಸಾಮಾನ್ಯರು ಕೆಲಸವಿಲ್ಲದೇ ಪರದಾಡುತ್ತಿದ್ದರೆ, ಮತ್ತೊಂದೆಡೆ ದುಡಿದ ಕೆಲಸಕ್ಕೂ ಸಂಬಳ ಸಿಗದೇ ಕೆಲ ಜನ ಒದ್ದಾಡುತ್ತಿದ್ದಾರೆ. ಇದಕ್ಕೆ ನೈಜ ಉದಾಹರಣೆಯೆಂದರೆ ಸೆಕ್ಯೂರಿಟಿ ಗಾರ್ಡ್. ಖಾಸಗಿ ಕಾಲೇಜೊಂದು ಸೆಕ್ಯೂರಿಟಿ ಗಾರ್ಡ್ ಗಳಿಗೆ ಸಂಬಳವನ್ನು ನೀಡದೇ ಸತಾಯಿಸುತ್ತಿದೆ. ಹೌದು. ಕೊರೊನಾದಿಂದಾಗಿ ಬಡವರ ಬದುಕು ಬೀದಿಗೆ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಲಾಕ್ ಡೌನ್ ಆದ್ರೂ ಕೆಲವೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಎಂಎಸ್ ಪಾಳ್ಯದ …

Read More »

ಇದ್ದಕ್ಕಿದ್ದಂತೆ ಯಾದಗಿರಿಯಲ್ಲಿ ಲಾಕ್‍ಡೌನ್ ಬಿಗಿ………..

ಯಾದಗಿರಿ: ಗ್ರೀನ್ ಝೋನ್ ನಲ್ಲಿರುವ ಯಾದಗಿರಿಯಲ್ಲಿ ಸಡಿಲಿಕೆಯಾಗಿದ್ದ ಲಾಕ್ ಡೌನ್ ಅನ್ನು ದಿಢೀರ್ ಆಗಿ ಮತ್ತಷ್ಟು ಬಿಗಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೊಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೊದಲನೆಯ ಹಂತದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿವರೆಗೂ ಮತ್ತೆ ಬೀಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಕೇವಲ ತರಕಾರಿ ಮತ್ತು ಆಸ್ಪತ್ರೆ, ಮೆಡಿಕಲ್ ಶಾಪ್ ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಜೊತೆಗೆ ವೈನ್ ಶಾಪ್ ಸಹ ಬಂದ್ …

Read More »

ಸಿಎಂಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಅಂತ್ಯ:ಪ್ರಧಾನಿ ಮೋದಿ

ನವದೆಹಲಿ: ಸಿಎಂಗಳ ಜೊತೆಗಿನ ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ಅಂತ್ಯವಾಗಿದ್ದು, ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್‍ಡೌನ್ ಒಂದು ವೆಪನ್ ಅಷ್ಟೇ, ಅದನ್ನ ಜಾಸ್ತಿ ದಿನ ಬಳಸಲು ಆಗಲ್ಲ ಎಂಬ ಮಾತನ್ನು ಪ್ರಧಾನಿಗಳು ಹೇಳಿದ್ದಾರೆ.ಈಗಾಗಲೇ ಸಾಮಾಜಿಕ ಅಂತರವನ್ನು ಹೇಳಿಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಹೊಸ ತಂತ್ರಜ್ಞಾನದ ಮೊರೆ ಹೋಗಬೇಕಾಗುತ್ತದೆ. ಮೊದಲ ಮಹಾಯುದ್ಧ, ಎರಡನೇ ಮಹಾಯುದ್ಧದ ಬಳಿಕ ಸಾಕಷ್ಟು ತಂತ್ರಜ್ಞಾನ ಬಂತು. ಕೊರೊನಾದಿಂದ ತಂತ್ರಜ್ಞಾನ ಬೇರೆ ರೀತಿ ಅಭಿವೃದ್ಧಿ ಆಗುತ್ತೆ. ಹಾಗಾಗಿ ಹೊಸ ಹೊಸ ಟೆಕ್ನಿಕ್ …

Read More »

ಬೆಳಗಾವಿ: ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದ ವೃದ್ಧನಿಗೆ ಮತ್ತೆ ಕೊರೊನಾ ಸೋಂಕು

ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದ 60 ವರ್ಷದ ವೃದ್ಧನಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಎರಡಲೇ ಅಲೆ ಆರಂಭಗೊಳ್ತಾ ಅನ್ನೋ ಆತಂಕ ಶುರುವಾಗಿದೆ ಕುಡುಚಿ ಪಟ್ಟಣದ 60 ವರ್ಷದ ವೃದ್ಧ (ರೋಗಿ 298) 10 ದಿನಗಳ ಹಿಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದರು. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ವೃದ್ಧನಿಗೆ ಸೋಂಕು ಕಾಣಿಸಿಕೊಂಡಿರೋದು ದೃಢವಾಗಿದೆ. ಇದೀಗ ಮತ್ತೆ ವೃದ್ಧನನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ …

Read More »

ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದ ಕಾವೇರಿ ನದಿ ತಟ್ಟದಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ

ಮಡಿಕೇರಿ: ಕಳೆದ ಎರಡು ವರ್ಷಗಳಿಂದ ಮಹಾಮಳೆಗೆ ಕೊಡಗಿನ ಕಾವೇರಿ ನದಿ ತೀರದ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನದಿ ತಟದ ಬಡಾವಣೆಗಳಲ್ಲಿ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಕಾವೇರಿ ನದಿಯಲ್ಲಿ ಹೂಳೆತ್ತುವ ಕಾಮಗಾರಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಕೊಪ್ಪದ ಕಾವೇರಿ ಸೇತುವೆ ಕೆಳ ಭಾಗದಲ್ಲಿ ಗಣಪತಿ ಪೂಜೆ ಸಲ್ಲಿಸಿದ ಬಳಿಕ ಜೆಸಿಬಿಯಲ್ಲಿ ಕುಳಿತ ಶಾಸಕ ರಂಜನ್ …

Read More »

ವಿದೇಶಿಗರ ಕ್ವಾರಂಟೈನ್- ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿದ ಗ್ರಾಮಸ್ಥರು

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಬಾಣವಾಡಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದೇಶಿಗರ ಕ್ವಾರಂಟೈನ್ ವಿಚಾರವಾಗಿ, ಮಠದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಬೇಡ ಎಂದು ವಸತಿ ಶಾಲೆಗೆ ರಾತ್ರೋರಾತ್ರಿ ಕಟ್ಟಿಗೆ ಬೇಲಿ ಹಾಕಿ ಮುಚ್ಚಿ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದರು. ಇಂದು ಗ್ರಾಮಸ್ಥರ ಜೊತೆ ಜಂಟಿ ಸಭೆ ನಡೆಸಿದ ಅಧಿಕಾರಿಗಳು ಮತ್ತು …

Read More »

.ಬೆಂಗಳೂರಿಗೆ ವಿಮಾನ ಹಾರಾಟ ಬೇಡ- ಪ್ರಧಾನಿ ಮೋದಿಗೆ ಸಿಎಂ ಬಿಎಸ್‍ವೈ ಸಲಹೆ!

ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳಿಗಷ್ಟೇ ಲಾಕ್‍ಡೌನ್ ಸೀಮಿತ ಮಾಡಿ ಎಂದು ದೇಶದ ಬಹುತೇಕ ಮುಖ್ಯಮಂತ್ರಿಗಳು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದಾರೆ. ಇತ್ತ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಧಾನ ಮಂತ್ರಿಯವರ ವಿಡಿಯೋ ಕಾನ್ಫರೆನ್ಸ್  ನಲ್ಲಿ ಕರ್ನಾಟಕದ ಸಲಹೆಗಳನ್ನು ಮುಂದಿಟ್ಟಿದ್ದು, ಜಿಲ್ಲಾವಾರು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ಗುರುತಿಸಬಾರದು. ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು ಎಂಬ ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್‍ವೈ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು: …

Read More »

ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಮಹತ್ವದ ವಿಡಿಯೊ ಸಂವಾದ

ನವದೆಹಲಿ: ದೇಶಾದ್ಯಂತ ಕೊರೊನಾ ವೈರಸ್​ ವಿರುದ್ಧ ಹೋರಾಟ ಮುಂದುವರೆದಿದ್ದು, ಈಗಾಗಲೇ ದೇಶದಲ್ಲಿ ಹೇರಿಕೆ ಮಾಡಲಾಗಿರುವ ಲಾಕ್​ಡೌನ್​ 3.0 ಮೇ.17ರವರೆಗೆ ಮುಂದುವರಿಯಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಮಹತ್ವದ ವಿಡಿಯೊ ಸಂವಾದ​ ನಡೆಸುತ್ತಿದ್ದಾರೆ. ದೇಶದಲ್ಲಿ ಆರ್ಥಿಕ ಸಂಕಷ್ಟ, ವಲಸೆ ಕಾರ್ಮಿಕರ ಸಮಸ್ಯೆ, ಕೊರೊನಾ ಹತೋಟಿಗೆ ತರುವಲ್ಲಿ ತೆಗೆದುಕೊಂಡಿರುವ ನಿರ್ಧಾರಗಳು ಸೇರಿದಂತೆ ಲಾಕ್​ಡೌನ್​ ಮುಂದುವರಿಕೆ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ವಿಡಿಯೊ ಸಂವಾದದ ವೇಳೆ ಮಹಾರಾಷ್ಟ್ರ, ಗುಜರಾತ್​, ತಮಿಳುನಾಡು ಸಿಎಂಗಳು …

Read More »

ಮೈಸೂರಲ್ಲಿ ಅನಗತ್ಯವಾಗಿ ತಿರುಗಾಡಿದರೆ ಬೀಳುತ್ತೆ ದಂಡ; ಹೊರಗಿನಿಂದ ಬಂದವರಿಗೆ ಕಡ್ಡಾಯ ಕ್ವಾರಂಟೈನ್

ಮೈಸೂರು: ಮೈಸೂರಿನಲ್ಲಿ ಕೊರೋನಾ ಭೀತಿ ಕಡಿಮೆಯಾದ ಹಿನ್ನೆಲೆಯಲ್ಲಿ  ವಾಹನ ಸಂಚಾರ ಹೆಚ್ಚಾಗಿದ್ದು, ಅನಗತ್ಯವಾಗಿ ರಸ್ತೆಗೀಳಿದವರಿಗೆ ಜಿಲ್ಲಾಡಳಿತ ದಂಡ ವಿಧಿಸುತ್ತಿದೆ. ಮಧ್ಯಾಹ್ನ 12 ಗಂಟೆಯ ನಂತರ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕಲು ಜಿಲ್ಲಾಡಳಿತ ದಂಡ ವಿಧಿಸಲು ತೀರ್ಮಾನಿಸಿದೆ. ಆಸ್ಪತ್ರೆ, ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಉಳಿದ ವ್ಯವಹಾರಗಳಿಗೆ ನಿರ್ಬಂಧ ಹೇರಲಾಗಿದೆ. ನಿಯಮ ಉಲ್ಲಂಘಿಸಿ ವಾಹನ ಸಂಚಾರ ಮಾಡಿದರೆ 2 ಸಾವಿರ ದಂಡ ವಿಧಿಸಲಾಗುತ್ತಿದೆ. ಈಗಾಗಲೇ 5 ಸಾವಿರ ವಾಹನಗಳನ್ನು ಸೀಜ್ ಮಾಡಿರುವ ಮೈಸೂರು ನಗರ …

Read More »