ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಇಂಡ್ಲವಾಡಿ ರಸ್ತೆಯ ಸ್ಟ್ರೈಡ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಇಂಡ್ಲವಾಡಿ ಮೂಲದ ಮಂಜುಳಾ (26) ಮೃತ ಮಹಿಳೆ. ಮೃತ ಮಂಜುಳಾ ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಬಂದಿದ್ದು, ನಂತರ ಸಾವನ್ನಪ್ಪಿದ್ದಾಳೆಂದು ಸಹೋದ್ಯೋಗಿಗಳು ತಿಳಿಸಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹದಿನೈದು ದಿನ ವಿತರಣೆ ಪಾಳಿಯಂತೆ ರಜೆಯಲ್ಲಿದ್ದು, ಬುಧವಾರ ಕೆಲಸಕ್ಕೆ ಹಾಜರಾಗಿದ್ದಳು. ಎಂದಿನಂತೆ …
Read More »ಇಂದು 12 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ
– ಬಾಗಕೋಟೆಯ ರೋಗಿ-607ರಿಂದ ಮೂವರಿಗೆ ಕೊರೊನಾ – ದಾವಣಗೆರೆಯಲ್ಲಿ ಕೊರೊನಾಗೆ ಮತ್ತೊಂದು ಸಾವು – ಬೆಳಗಾವಿಯ 13ರ ಬಾಲಕಿಗೆ ಸೋಂಕು ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 12 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ-694) ಕೊರೊನಾಗೆ ಇಂದು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಈವರೆಗೂ ಕೊರೊನಾದಿಂದ ನಾಲ್ವರು …
Read More »ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ’
ಮಂಗಳೂರು: ಕೊರೊನಾ ವಿಶೇಷ ಪ್ಯಾಕೇಜ್ ಘೋಷಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೂವಿನ ಬೆಳೆಗೆ ಎಕರೆಗೆ 50 ಲಕ್ಷ ಎಲ್ಲಿ ಖರ್ಚು ಮಾಡಲಾಗುತ್ತೆ ಎಂಬ ಬಗ್ಗೆ ಸಿದ್ದರಾಮಯ್ಯ ಅಧ್ಯಯನ ಮಾಡಲಿ, ಸಿದ್ದರಾಮಯ್ಯನವರು ಯೋಚನೆ ಮಾಡಿ ಮಾತಾಡೋದು ಒಳ್ಳೆಯದು. ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ …
Read More »ನಿಯಮ ಉಲ್ಲಂಘಿಸಿ ರಸ್ತೆಗಿಳಿದ ಆಟೋಗಳು ಸೀಜ್………..
ಹುಬ್ಬಳ್ಳಿ: ಮೂರನೇ ಹಂತದ ಲಾಕ್‍ಡೌನ್ ವಿಸ್ತರಣೆಯಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿದ್ದು, ಆಟೋ ಸಂಚಾರಕ್ಕೆ ಮಾತ್ರ ಅನುಮತಿ ನೀಡಿಲ್ಲ. ಆದರೂ ಕೂಡ ಅನಗತ್ಯವಾಗಿ ರಸ್ತೆಗೆ ಇಳಿಯುವ ಆಟೋಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುರೇಂದ್ರ ಹೊಳೆಣ್ಣವರ ನೇತೃತ್ವದಲ್ಲಿಂದು ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ಆಟೋಗಳಿಗೆ ಸೀಜ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಈಗಾಗಲೇ ಸುಮಾರು ಆಟೋಗಳನ್ನು ಸೀಜ್ ಮಾಡಿ ಈದ್ಗಾ ಮೈದಾನದಲ್ಲಿ ನಿಲ್ಲಿಸಲಾಗಿದೆ. ಈಗಾಗಲೇ ಸರ್ಕಾರ …
Read More »ವಿಶಾಖಪಟ್ಟಣಂ ವಿಷಾನಿಲ ದುರಂತದ ಬೆನ್ನಲ್ಲೇ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್
ರಾಯಗಢ: ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿ, ಸಾವಿರಾರು ಮಂದಿ ಅಸ್ವಸ್ಥಗೊಂಡ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿ 7 ಮಂದಿ ಅಸ್ವಸ್ಥಗೊಂಡಿರುವ ದುರ್ಘಟನೆ ನಡೆದಿದೆ. ಛತ್ತೀಸಗಢದ ರಾಯಗಢ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೇಪರ್ ಮಿಲ್ ಅನ್ನು ಶುದ್ಧಿಕರಿಸುತ್ತಿದ್ದ ವೇಳೆ ವಿಷಾನಿಲ ಸೋರಿಕೆಯಾಗಿ ಏಳು ಮಂದಿ ಕಾರ್ಮಿಕರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ …
Read More »ಅನಿವಾಸಿ ಭಾರತೀಯರನ್ನ ಕರೆ ತರಲು ಮುಂದಾದ ಕೇಂದ್ರ- ಹೊರ ರಾಜ್ಯದ ಕನ್ನಡಿಗರನ್ನ ಮರೆತ ರಾಜ್ಯ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರವು ಇಂದಿನಿಂದ ಆಪರೇಷನ್ ಏರ್ ಲಿಫ್ಟ್ ಮತ್ತು ಸಮುದ್ರ ಸೇತು ಹೆಸರಿನಲ್ಲಿ ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರನ್ನು ಕರೆತರುವ ಕೆಲಸ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಹೊರ ರಾಜ್ಯಗಳಲ್ಲಿರುವ ಕನ್ನಡಗರನ್ನು ಮರೆತಂತೆ ಭಾಸವಾಗುತ್ತಿದೆ. ಕೊರೊನಾ ಲಾಕ್‍ಡೌನ್‍ನಿಂದ ಅನ್ಯ ರಾಜ್ಯಗಳಲ್ಲಿ ಕನ್ನಡಿಗರು ಸಂಕಷ್ಟದಲ್ಲಿದ್ದು ದೆಹಲಿ, ಪಂಜಾಬ್, ಚಂಡೀಗಢ್, ಹರ್ಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕನ್ನಡಿಗರು ಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರನ್ನು ವಾಪಸ್ ಕರೆತರುವ ಬಗ್ಗೆ …
Read More »ಮಾಸ್ಕ್ ಧರಿಸಿ ಮದುವೆ ಮಾಡಿಕೊಂಡ ವಧು-ವರ……..
ಹುಬ್ಬಳ್ಳಿ: ಲಾಕ್‍ಡೌನ್ ವೇಳೆ ಹುಬ್ಬಳ್ಳಿಯ ಹುಡುಗ ಸಿಂಧನೂರಿನ ಯುವತಿಯನ್ನು ಕೈ ಹಿಡಿಯುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು ಲಾಕ್‍ಡೌನ್ ಸಂದರ್ಭದಲ್ಲಿ ಮದುವೆಗಳಿಗೆ ಷರತ್ತುಬದ್ಧ ಅನುಮತಿ ನೀಡಿ, ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಆದರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿಕೊಂಡೆ ಸಿಂಧನೂರಿನ ವಧುವನ್ನು ಹುಬ್ಬಳ್ಳಿಯ ಹುಡುಗ ಮದುವೆಯಾಗಿದ್ದಾರೆ. ಸಿಂಧನೂರಿನಲ್ಲಿ ಸಚೇತಿಯವರ ಮನೆಯಲ್ಲಿ ಸರಳವಾಗಿ ಮದುವೆಯ ಸಮಾರಂಭ ಜರುಗಿದ್ದು, ವಧು ಪೂನಂ ಸಚೇತಿ, ವರ …
Read More »ಜಿಲ್ಲೆಯಲ್ಲಿ ಕೊರೊನಾ ಸೋಮಕು ತಗುಲಿದವರ ಪೈಕಿ ಮತ್ತಿಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಮಕು ತಗುಲಿದವರ ಪೈಕಿ ಮತ್ತಿಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಬಾಗೇವಾಡಿಯ ಪಿ-284 ಮತ್ತು ಪಿ-300 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿಇಲ್ಲಿಯವರೆಗೂ 74 ಜನರಲ್ಲಿ ಸೋಂಕು ಪೈಕಿ 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿರುತ್ತಾರೆ.
Read More »ವಿಷ ಹಾಕಿ ಮೀನುಗಳ ಮಾರಣ ಹೋಮ- ಇಬ್ಬರ ಬಂಧನ………..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಾಡೇಲು ಎಂಬಲ್ಲಿ ಫಲ್ಗುಣಿ ನದಿಗೆ ವಿಷ ಹಾಕಿ ಸಾವಿರಾರು ಮೀನುಗಳ ಮಾರಣ ಹೋಮ ಮಾಡಿದ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮೂಡುಕೋಡಿಯ ಇರ್ಷಾದ್ ಹಾಗೂ ಮಹಮ್ಮದ್ ಹನೀಫ್ ಬಂಧಿತ ಆರೋಪಿಗಳು. ಕಿಡಿಗೇಡಿಗಳು ನದಿಗೆ ವಿಷ ಹಾಕಿದ ಪರಿಣಾಮ ಬೆಳ್ತಂಗಡಿಯ ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಡ್ತಿಕಲ್ಲಿನ ದಾಡೇಲು ನದಿಯ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದು, ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ …
Read More »ಪೊಲೀಸ್ ಠಾಣೆಯಲ್ಲಿ ಸೀಜ್ ಮಾಡಿಟ್ಟಿದ್ದ ಎಣ್ಣೆಯನ್ನೇ ಕದ್ದ ಪೇದೆ…….
ಹೈದರಾಬಾದ್: ಲಾಕ್‍ಡೌನ್ ಅವಧಿಯಲ್ಲಿ ಮದ್ಯದಂಗಡಿಗಳಿಂದ ಸೀಜ್ ಮಾಡಿ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದ ಮದ್ಯವನ್ನ ಪೊಲೀಸ್ ಪೇದೆಯೇ ಕದ್ದು ಸಿಕ್ಕಿಬಿದ್ದ ಘಟನೆ ತೆಲಂಗಾಣದ ಕರೀಮ್‍ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕರೀಮ್‍ನಗರ ಜಿಲ್ಲೆಯ ಇರಡು ಟೌನ್ ಪೊಲೀಸ್ ಠಾಣೆಯಲ್ಲಿ ಮದ್ಯವನ್ನು ಸೀಜ್ ಮಾಡಿ ಇಡಲಾಗಿತ್ತು. ಲಾಕ್‍ಡೌನ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಮದ್ಯ ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಹಲವು ಮದ್ಯದಂಗಡಿಗಳನ್ನು ಸೀಜ್ ಮಾಡಿ, ಅಂಗಡಿಯಲ್ಲಿದ್ದ ಮದ್ಯವನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಆದರೆ …
Read More »
Laxmi News 24×7