Breaking News

Laxminews 24x7

ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ

ಬೆಳಗಾವಿ: ರಾಜ್ಯದಲ್ಲಿ ಇಂದಿನಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆದಿದ್ದು, ಈ ಹಂತದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದೆ. ಕಳೆದ ಒಂದುವರೆ ತಿಂಗಳ ಬಳಿಕ ಇಂದಿನಿಂದ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ. ಇಲ್ಲಿನ 10 ಪ್ರದೇಶಗಳನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಈ ಕಂಟೈನ್ಮೆಂಟ್ ಝೋನ್ ಗಳಲ್ಲಿ ಮದ್ಯ ಸಿಗಲಾರದು. ಬೆಳಗಾವಿ …

Read More »

ನವದೆಹಲಿ: ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ದೇಶದಲ್ಲಿ ಶೇಕಡಾ 3.2ರಷ್ಟಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ

ನವದೆಹಲಿ: ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ದೇಶದಲ್ಲಿ ಶೇಕಡಾ 3.2ರಷ್ಟಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ. ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದಿರುವ ಅವರು 14 ದಿನಗಳ ಹಿಂದೆ ಸೋಂಕಿತರು ದ್ವಿಗುಣಗೊಳ್ಳುವ ಪ್ರಮಾಣ 10.5ರಷ್ಟಿತ್ತು. ಈಗ ಸೋಂಕಿತರು ದ್ವಿಗುಣಗೊಳ್ಳಲು 12 ದಿನಗಳು ಬೇಕಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇಲ್ಲಿಯವರೆಗೆ ಸುಮಾರು 10 ಸಾವಿರ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಲ್ಲಿರುವ ಸೋಂಕಿತರೂ ಬೇಗನೇ ಚೇತರಿಕೆಗೊಳ್ಳುತ್ತಿದ್ದಾರೆ …

Read More »

ಹಲವು ವಿನಾಯಿತಿಗಳ ನಡುವೆ ಮೇ 17ರವರೆಗೆ ನಿಷೇಧಾಜ್ಞೆ ಮುಂದುವರಿಕೆ ……..

ಹಾವೇರಿ: ಹಲವು ವಿನಾಯಿತಿಗಳ ನಡುವೆ ಕರೋನಾವೈರಸ್ (Coronavirus) ಕೋವಿಡ್ ನಿರ್ಭಂಧ ಜಿಲ್ಲೆಯಲ್ಲಿ ಮುಂದುವರೆದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮೇ 17ರವರೆಗೆ ಮುಂದುವರಿಸಿ  ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆದೇಶ ಹೊರಡಿಸಿದ್ದಾರೆ. ಲಾಕ್‌ಡೌನ್ (Lockdown)ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಅದರಂತೆ ಈ ಕೆಳಕಂಡ ಚಟುವಟಿಕೆಗಳನ್ನು ನಿಯಂತ್ರಿಸಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಐದಕ್ಕಿಂತ ಹೆಚ್ಚು ಜನ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಅನುಮತಿ ಪಡೆದ ಬಸ್‍ಗಳನ್ನು ಹೊರತುಪಡಿಸಿ ಉಳಿದ ಯಾವುದೇ …

Read More »

ಊರಿಗೆ ತಲುಪಿದ ಕಾರ್ಮಿಕರು; ಪ್ರಯಾಣಿಸುವವರಿಗೆ ಸೂಚನೆಗಳು….

ಧಾರವಾಡ, ಮೇ 04: ಬೆಂಗಳೂರಿನಿಂದ ಹೊರಟಿದ್ದ ವಿಶೇಷ ಬಸ್‌ಗಳ ಮೂಲಕ ಕಾರ್ಮಿಕರು ಧಾರವಾಡಕ್ಕೆ ಆಗಮಿಸಿದರು. ಬೆಂಗಳೂರಿನಿಂದ ಆಗಮಿಸಿದ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಬಸ್‌ಗಳು ರಾತ್ರಿ ಧಾರವಾಡಕ್ಕೆ ತಲುಪಿದವು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಶಾಸಕರಾದ ಅರವಿಂದ ಬೆಲ್ಲದ್ ಹುಬ್ಬಳ್ಳಿ ಬಸ್ ನಿಲ್ದಾಣಣಕ್ಕೆ ಆಗಮಿಸಿ …

Read More »

ಕೊರೋನಾ ಜೊತೆ ಹೋರಾಡಿ ಸಾವು ಗೆದ್ದ ಬಂದ ಕ್ಷಣ ನೆನೆದು ಕಣ್ಣೀರಿಟ್ಟ ಬ್ರಿಟನ್ ಪ್ರಧಾನಿ..!

ಲಂಡನ್,ಮೇ4- ಕಾಯಿಲೆಯನ್ನು ಎದುರಿಸಿದ ಸನ್ನಿವೇಶ ಕಠಿಣ ಕ್ಷಣಗಳಾಗಿದ್ದವು.. ತಮಗೆ ಬರಬಹುದಾದ ಸಾವಿನ ಸಂಗತಿಯನ್ನು ಘೋಷಿಸಲು ವೈದ್ಯರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು. ಎಂದು ಕೊರೊನಾ ವೈರಸ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೊಂಡಿದ್ದಾರೆ. ಅಲ್ಲಿನ ಸ್ಥಳೀಯ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ಅದು ಕಠಿಣ ಕ್ಷಣಗಳಾಗಿದ್ದವು. ಪರಿಸ್ಥಿತಿ ಕೈ ಮೀರಿ ಹೋದರೆ ಏನು ಮಾಡಬೇಕು ಎಂಬುದರ ಬಗ್ಗೆ ವೈದ್ಯರು ಒಂದಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ನಾನು ಉತ್ತಮ ಸ್ಥಿತಿಯಲ್ಲಿರಲಿಲ್ಲ. …

Read More »

ಮಲೆನಾಡಲ್ಲಿ ಮಳೆಯ ಅಬ್ಬರ – 20 ಕಂಬ, 50 ಮರ ಧರೆಗೆ…………

ಚಿಕ್ಕಮಗಳೂರು: ಕಳೆದ ದಿನ ಅನೇಕ ಕಡೆ ಬಿರುಗಾಳಿ ಸಹಿತ ಜೋರಾಗಿ ಮಳೆಯಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದ್ದು, ಕೊಪ್ಪ, ಎನ್‍ಆರ್ ಪುರ, ಶೃಂಗೇರಿಯಲ್ಲಿ ಭಾರೀ ಗಾಳಿಯೊಂದಿಗೆ ವರುಣ ದೇವ ಅಬ್ಬರಿಸಿದ್ದಾನೆ. ಭಾನುವಾರ ರಾತ್ರಿ ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಕೊಪ್ಪದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಕೊಪ್ಪ ಅಕ್ಷರಶಃ ನಲುಗಿ ಹೋಗಿದೆ. ಕೊಪ್ಪದಲ್ಲಿ ಮಳೆ ಜೊತೆ ಬೀಸಿದ ರಣಗಾಳಿಗೆ ಸುಮಾರು …

Read More »

ಕೆರೆಗೆ ವಿಷ ಹಾಕಿದ ಕಿಡಿಗೇಡಿಗಳು – ಸಾವಿರಾರು ಮೀನುಗಳ ಮಾರಣಹೋಮ……….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಾಡೇಲು ಎಂಬಲ್ಲಿ ಕಿಡಿಗೇಡಿಗಳು ಫಲ್ಗುಣಿ ನದಿಗೆ ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ. ಬೆಳ್ತಂಗಡಿಯ ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಡ್ತಿಕಲ್ಲಿನ ದಾಡೇಲು ನದಿಯ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿದೆ. ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ರೋಗ ಹರಡುವ ಭೀತಿ ಎದುರಾಗಿದೆ. ಪ್ರಾಣಿ ಪಕ್ಷಿಗಳು ಈ ವಿಷ ನೀರನ್ನೇ ಕುಡಿಯುತ್ತಿದ್ದು, ಅವುಗಳು ಕೂಡ …

Read More »

ಇಂದಿನಿಂದ ರಾಜ್ಯದಲ್ಲಿ ಲಾಕ್‍ಡೌನ್ ರಿಲೀಫ್- ಒಂದೂವರೆ ತಿಂಗ್ಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆಗೊಂಡಿದ್ದು, ಇಂದಿನಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ರಿಲೀಫ್ ಸಿಗಲಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲವಾಗಿದ್ದು, ಒಂದೂವರೆ ತಿಂಗಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್ ಆಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತು ಪಡಿಸಿ ಉಳಿದ ಕಡೆ ರಿಲೀಫ್ ಸಿಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಬಿಟ್ಟು ಉಳಿದೆಡೆ ಅಗತ್ಯ ಸೇವೆಗಳು ಲಭ್ಯ ವಾಗಲಿದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮೂರು ವಲಯಗಳಲ್ಲೂ …

Read More »

ದಾವಣಗೆರೆ ಸಂಪೂರ್ಣ ಲಾಕ್‍ಡೌನ್- 21 ಕೊರೊನಾ ಸೋಂಕಿತರ ಮಾಹಿತಿ ಇಲ್ಲಿದೆ…….

ದಾವಣಗೆರೆ: ಆರೆಂಜ್ ಝೋನ್‍ನಲ್ಲಿದ್ದ ದಾವಣಗೆರೆಯಲ್ಲಿ ಒಮ್ಮಿಂದೊಮ್ಮಲೆ ಕೊರಾನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಇಂದು ಒಂದೇ ದಿನ 21 ಪ್ರಕರಣಗಳು ಹೆಚ್ಚಾಗುವ ಮೂಲಕ ರೆಡ್ ಝೋನ್‍ಗೆ ತಿರುಗುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟು 330 ಸ್ಯಾಂಪಲ್ ಗಳ ಪೈಕಿ 37ರ ವರದಿ ಬಂದಿದ್ದು, ಇದರಲ್ಲಿ ಬರೋಬ್ಬರಿ 21 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ. ಇನ್ನೂ 293 ಜನರ ವರದಿ ಬರುವುದು ಬಾಕಿ ಇದೆ. ಇವರ ವರದಿ ಏನಾಗುತ್ತದೋ …

Read More »

ಬೆಂಗ್ಳೂರಲ್ಲಿ ಮುಂಜಾನೆಯಿಂದ್ಲೇ ಕ್ಯೂ ನಿಂತ ಜನ,……ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಎಣ್ಣೆಪ್ರಿಯರು

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲಿ ದೇಶಾದ್ಯಂತ ಹೇರಲಾದ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಕರ್ನಾಟಕದಲ್ಲಿ ಇಂದಿನಿಂದ ಜನರಿಗೆ ಲಾಕ್ ಡೌನ್ ನಿಂದ ರಿಲೀಫ್ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಮುಂಜಾನೆಯಿಂದಲೇ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿರುವ ನವರಂಗ್ ಸಿಗ್ನಲ್ ಬಳಿಯ ಬಾರ್ ವೊಂದರ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಮಾಸ್ಕ್ ಧರಿಸಿ ಜನ ಕ್ಯೂನಲ್ಲಿ ನಿಂತಿದ್ದಾರೆ. ಬಾರ್ ಓಪನ್ ಆಗ್ತಿರೋದಕ್ಕೆ ಎಣ್ಣೆ ಪ್ರಿಯರು ಖುಷಿಯನ್ನ …

Read More »