Breaking News

Laxminews 24x7

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ಅವರನ್ನ ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅಲ್ಲದೇ ನಿರ್ಗಮಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕೊಡುಗೆಗಳನ್ನ …

Read More »

ಮಂತ್ರಿ ಆಗಿರೋದು ಖುಷಿ ತಂದಿದೆ, ತಂದೆ ಅವಧಿ ಪೂರೈಸದ್ದಕ್ಕೆ ದುಃಖವಿದೆ: ಯತೀಂದ್ರ

ಬೆಂಗಳೂರು: ಒಂದು ಕಡೆ ನನಗೆ ಮಂತ್ರಿಯಾಗಿ ಜವಾಬ್ದಾರಿ ಸಿಕ್ಕಿರುವುದಕ್ಕೆ ಖುಷಿಯಿದೆ. ಆದರೆ ಇನ್ನೊಂದೆಡೆ ಅಷ್ಟೇ ದುಃಖವೂ ಸಹ ಕಾಡುತ್ತಿದೆ ಎಂದು ಸಚಿವ ಯತೀಂದ್ರ  ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಕ್ಯಾಬಿನೆಟ್ ಸಭೆ  ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯವರು  ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅವಧಿ ಪೂರೈಸುತ್ತಾರೆ ಎಂದು ನಾನು ಅಂದುಕೊಂಡಿದ್ದೆ. ಆದರೆ ಅದು ಸಾಧ್ಯವಾಗದೇ ಇರುವುದು ನನಗೆ ವೈಯಕ್ತಿಕವಾಗಿ ತೀವ್ರ ದುಃಖ ತಂದಿದೆ. ಈಗ ಅವರ …

Read More »

ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವೆ – ಎಂ.ಬಿ ಪಾಟೀಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ತಮ್ಮನ್ನ ಮರು ಆಯ್ಕೆ ಮಾಡಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿರುವ ಸಚಿವ ಎಂ.ಬಿ ಪಾಟೀಲ್ , ಪಕ್ಷ ನೀಡುವ ಯಾವುದೇ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದ್ದಾರೆ. ಸಚಿವ ಸ್ಥಾನಕ್ಕೆ ಈ ಬಾರಿಯೂ ನನ್ನನ್ನ ಪರಿಗಣಿಸಿರುವುದಕ್ಕೆ ಹೈಕಮಾಂಡ್‌ಗೆ ಧನ್ಯವಾದಗಳು. ನನಗೆ ಇಂತಹದ್ದೇ ಖಾತೆಬೇಕು ಎಂದು ನಾನು ಕೇಳುವುದಿಲ್ಲ. ನಮ್ಮ ನಾಯಕರು ಯಾವ ಖಾತೆಯನ್ನ ನೀಡುತ್ತಾರೋ ಅದನ್ನ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ​ತಮ್ಮ ಹಿಂದಿನ ಆಡಳಿತಾವಧಿಯನ್ನು …

Read More »

ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ, ಹೆಚ್‌ಡಿಕೆ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌  ಅವರಿಗೆ ಪ್ರಧಾನಿ ನರೇಂದ್ರ ಮೋದಿ  ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು …

Read More »

ಈಗ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿದೆ – ಯು.ಟಿ ಖಾದರ್

ಬೆಂಗಳೂರು: ಈ ಹಿಂದೆ ನಾನು ಸ್ಪೀಕರ್ ಆಗಿದ್ದಾಗ ಕೆಲವು ಸಾಂವಿಧಾನಿಕ ಮಿತಿಗಳಿದ್ದವು. ಆ ಸ್ಥಾನದಲ್ಲಿದ್ದಾಗ ಮುಕ್ತವಾಗಿ ಮಾತನಾಡಲು ಆಗುತ್ತಿರಲಿಲ್ಲ. ಆದರೆ ಈಗ ಸಚಿವನಾಗಿ ಮುಕ್ತವಾಗಿ ಮಾತನಾಡಲು ಸಾಧ್ಯವಾಗುತ್ತಿದೆ. ಸದ್ಯಕ್ಕೆ ನನಗೆ ಖುಷಿಯಾಗುತ್ತಿದೆ ಸಚಿವ ಯು.ಟಿ ಖಾದರ್ ಎಂದು ಹೇಳಿದ್ದಾರೆ. ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಯು.ಟಿ ಖಾದರ್ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ​ತಮಗೆ ಸಿಗಲಿರುವ ಸಚಿವ ಸ್ಥಾನದ ಜವಾಬ್ದಾರಿಯ ಬಗ್ಗೆ ಮಾತನಾಡಿದ …

Read More »

ವಿಧಾನಸೌಧದ ಮೆಟ್ಟಿಲುಗಳಿಗೆ ಅಡ್ಡಬಿದ್ದು ಪ್ರಜಾ ದೇಗುಲ ಪ್ರವೇಶಿಸಿದ ಸಿಎಂ ಡಿಕೆಶಿ

ಬೆಂಗಳೂರು: ಕರ್ನಾಟಕದ 34ನೇ ಅವಧಿಯ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಡಿಕೆಶಿ, ಅಂಬೇಡ್ಕರ್, ಬಸವಣ್ಣ, ಗಾಂಧಿ ಸೇರಿದಂತೆ ಎಲ್ಲಾ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ರು. ನಂತರ ವಿಧಾನಸೌಧ ಆವರಣದಲ್ಲಿರುವ ಮುನೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ರು. ಬಳಿಕ ವಿಧಾನಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ದೀರ್ಘದಂಡ ನಮಸ್ಕಾರ ಹಾಕಿದ ಡಿಕೆಶಿ ಉತ್ತರದ ನಂದಿ ದ್ವಾರದ ಮೂಲಕ ಪ್ರಜಾ ದೇಗುಲ ಪ್ರವೇಶಿಸಿದರು. ಬಳಿಕ …

Read More »

ಕರ್ನಾಟಕ ಹೈಕೋರ್ಟ್‌ಗೆ 6 ಹೊಸ ನ್ಯಾಯಾಧೀಶರ ನೇಮಕಕ್ಕೆ ಸುಪ್ರೀಂ ಅಸ್ತು

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ  6 ವಕೀಲರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್  ಕೊಲಿಜಿಯಂ ಅನುಮೋದನೆ ನೀಡಿದೆ. ಈ ಕುರಿತು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಹೇಳಿಕೆ ಬಿಡುಗಡೆ ಮಾಡಿದೆ. ಜೂ.2ರಂದು ನಡೆದ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ನ ಪೀಠಕ್ಕೆ ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್, ಹೊಂಬೆ ಗೌಡ ಶಾಂತಿಭೂಷಣ್ ಹೆಸರುಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಮತ್ತು ಸುಪ್ರೀಂ ಕೋರ್ಟ್‌ನ ಇಬ್ಬರು ಹಿರಿಯ …

Read More »

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್‌ ಪಾಸ್‌ – ಸಿಎಂ ಆಗಿ ಡಿಕೆಶಿ ಮೊದಲ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಸಿಎಂ ಡಿಕೆ ಶಿವಕುಮಾರ್‌  ಸಿಹಿ ಸುದ್ದಿ ಕೊಟ್ಟಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿಂದು ಮೊದಲ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ವಿದ್ಯಾರ್ಥಿನಿಯರಿಗೆ ಮಾತ್ರ ನೀಡುತ್ತಿದ್ದ ಬಸ್‌ ಪಾಸ್‌ಗಳನ್ನ ಶಾಲಾ ಬಾಲಕರು, ಕಾಲೇಜು ಯುವಕರಿಗೂ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ. ಆದ್ರೆ ಅವರು ವಿದ್ಯಾರ್ಥಿಗಳು ಅಂತ ತಿಳಿಯೋಕೆ ಅರ್ಜಿ ಸಲ್ಲಿಕೆ …

Read More »

ಡಿಕೆಶಿ ಜೊತೆ 13 ಮಂದಿ ಪ್ರಮಾಣವಚನ – ಯಾರಿಗೆ ಯಾವ ಖಾತೆ?

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ (DCM) ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದ. ಆ ಮೂಲಕ ಹೈಕಮಾಂಡ್ ಹಿರಿಯ ನಾಯಕನ ಅನುಭವಕ್ಕೆ ದೊಡ್ಡ ಮನ್ನಣೆ ನೀಡಿದೆ. ಈ ಬಾರಿಯ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ (Congress High Command) ಅತ್ಯಂತ …

Read More »

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.  ಸಂವಿಧಾನ ಪುಸ್ತಕ ಹಿಡಿದ  ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ …

Read More »