Breaking News

Laxminews 24x7

ದಂಪತಿ ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು; ಮನೆ, ಮೈಮೇಲಿದ್ದ ಚಿನ್ನಾಭರಣ ಕಳವು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿ ನಿವಾಸಿಗಳಾದ ಚಂದ್ರಪ್ಪ(80) ಹಾಗೂ ಪತ್ನಿ ಜಯಮ್ಮ(70) ದಂಪತಿಗಳಿಬ್ಬರು ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚಂದ್ರಪ್ಪ‌ ಮನೆಯ ಬೆಡ್ ರೂಂನಲ್ಲಿ ಮಂಚದ ಮೇಲೆ ಹಾಗೂ ಜಯಮ್ಮ ಅವರು ಹಾಲ್​ನ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದವರು. ಈ ದಂಪತಿ ಅನ್ಯೋನ್ಯವಾಗಿದ್ದರು, ಇಬ್ಬರು ಒಟ್ಟಿಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತು ಭದ್ರಾವತಿಯ ಹಳೇನಗರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೃದ್ಧ ದಂಪತಿಗೆ ಮೂವರು …

Read More »

ಯಾವ ಇಲಾಖೆಯಲ್ಲೂ ಇಂಥ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ: ಗೃಹ ಸಚಿವ ಪರಮೇಶ್ವರ್​

ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯ ವಿಡಿಯೋ ವೈರಲ್ ಆದ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಕೆ.ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಲಾಗಿದೆ. ಯಾವುದೇ ಇಲಾಖೆಯಲ್ಲಿಯೂ ಈ ರೀತಿಯ ಘಟನೆಗಳನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಇಂದು ಗೃಹ ಸಚಿವರು ಪ್ರತಿಕ್ರಿಯಿಸಿದರು. ಈ ರೀತಿ ವಿಡಿಯೋ ವೈರಲ್ ಆಗುತ್ತಿರುವುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಇಂಥದ್ದೆಲ್ಲ ಯಾವುದೇ ಇಲಾಖೆಯಲ್ಲಿಯೂ ಆಗಬಾರದು, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ ಹಿನ್ನೆಲೆಯಲ್ಲಿ …

Read More »

ಪೊಲೀಸರು ಕಾರ್ಯಾಚರಣೆ ನಡೆಸಿ 106 ಕೆ.ಜಿ ಗಾಂಜಾ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

ಪುತ್ತೂರು(ದಕ್ಷಿಣ ಕನ್ನಡ): ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕೆ.ಜಿ ಗಾಂಜಾ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ. ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ(37), ಅಬ್ದುಲ್ ಸಾದಿಕ್ (37) ಬಂಧಿತರು. ಜ.19ರ ಸಂಜೆ ಕಾರು ಮತ್ತು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್‌ ಉಪ ನಿರೀಕ್ಷಕರು, ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ …

Read More »

5.15 ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ; ನೈಜೀರಿಯಾ ಮೂಲದ ಆರೋಪಿ ಬಂಧನ

ಬೆಂಗಳೂರು: ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯನ್ನ ಸಿಸಿಬಿಯ ಪೊಲೀಸರು ಬಂಧಿಸಿದ್ದಾರೆ. ಅರ್ನೆಸ್ಟ್ ಯುಗಾಹ್ಸ್ (45) ಬಂಧಿತ ಆರೋಪಿ. ಆತನಿಂದ 2.5 ಕೆ.ಜಿ ಎಂಡಿಎಂಎ, 300 ಎಕ್ಸ್‌ಟಸಿ ಮಾತ್ರೆಗಳ ಸಹಿತ ಒಟ್ಟು 5.15 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಕಾಡುಗೋಡಿ, ಹೆಣ್ಣೂರು ಠಾಣೆಗಳಲ್ಲಿ ಅರ್ನೆಸ್ಟ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಇತ್ತೀಚಿಗೆ ಜೈಲಿನಿಂದ‌ ಬಿಡುಗಡೆಯಾಗಿದ್ದ ಆರೋಪಿ ಪುನಃ ಮಾದಕ ದಂಧೆ‌ …

Read More »

ಜನವರಿ 22ರಿಂದ ಜನವರಿ 31ರವರೆಗೆ ಜಂಟಿ ಅಧಿವೇಶನ, ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿಎಂ

ಬೆಂಗಳೂರು: ಜನವರಿ 22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಅಧಿವೇಶನದ ವೇಳೆ ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ನವದೆಹಲಿಗೆ ಭೇಟಿ ನೀಡುವ ಬಗ್ಗೆ …

Read More »

ಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ: ₹20 ಕೋಟಿ ಮಾನನಷ್ಟ ಕೇಸ್‌

ಬೆಳಗಾವಿ: ಅಸ್ತಿತ್ವದಲ್ಲಿ ಇಲ್ಲದ ಖಾಸಗಿ ಮಾಧ್ಯಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಯನ್ನು ಅಪಪ್ರಚಾರ ಮಾಡಿದ್ದು, ಅವರ ಮೇಲೆ ₹ 20ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿರುವುದಾಗಿ ಸಾಹುಕಾರ ಅಭಿಮಾನಿಗಳ ಒಕ್ಕೂಟದ ಕಾನೂನು ಸಲಹೆಗಾರ್ತಿ ರಂಜಿತಾ ರೆಡ್ಡಿ ತಿಳಿಸಿದರು. ವೈಯಕ್ತಿಕವಾಗಿ ತೆಜೋವಧೆ ನಗರದ ಪ್ರವಾಸಿ ಮಂದಿರದಲ್ಲಿ ಸಾಹುಕಾರ ಅಭಿಮಾನಿಗಳ ಒಕ್ಕೂಟದಿಂದ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯದಲ್ಲಿ ಮಾಧ್ಯಮಗಳ ಮುಂದೆ ಕೆಸರೆರಚಾಟ ಮಾಡುವುದು ಸಾಮಾನ್ಯ. ವೈಯಕ್ತಿಕವಾಗಿ ತೆಜೋವಧೆ ಮಾಡುತ್ತಿರುವುದು …

Read More »

ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ

ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ ಭಾರತದ ಆಹಾರ ಸಂಸ್ಕರಣಾ ವಲಯಕ್ಕೆ ಕೋಕಾ-ಕೋಲಾ ಸಂಸ್ಥೆ ₹25,760 ಕೋಟಿ ಹೂಡಿಕೆ ಯೋಜನೆಯನ್ನು ಪ್ರಕಟಿಸಿದ್ದು, ಈ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಅವರ ಕಾರ್ಯಾಚರಣೆಗಳನ್ನು ವಿಸ್ತರಿಸುವ ಕುರಿತು ಕಂಪೆನಿಯ ಹಿರಿಯ ಉಪಾಧ್ಯಕ್ಷರೊಂದಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು. ಪಾನೀಯ ಉತ್ಪಾದನೆಗೆ ಅತ್ಯವಶ್ಯಕವಾದ ಸಮೃದ್ಧ ಹಾಗೂ ಸ್ಥಿರ ಜಲ ಲಭ್ಯತೆಯನ್ನು ಉಲ್ಲೇಖಿಸಿ, ವಿಜಯಪುರವನ್ನು ಪ್ರಮುಖ ಕೈಗಾರಿಕಾ …

Read More »

ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದಿಂದ ಹರಿಶಿನ ಕುಂಕುಮ ಕಾರ್ಯಕ್ರಮ ಭೂತಾಯಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ ಸಂಕ್ರಾಂತಿ: ಪ್ರೇಮಾ ದೇವಿ

ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದಿಂದ ಹರಿಶಿನ ಕುಂಕುಮ ಕಾರ್ಯಕ್ರಮ ಭೂತಾಯಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ ಸಂಕ್ರಾಂತಿ: ಪ್ರೇಮಾ ದೇವಿ ಬೆಳಗಾವಿ ನಗರದ ಹಿಂದವಾಡಿಯಲ್ಲಿ ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನ ವತಿಯಿಂದ ಆಯೋಜಿಸಲಾದ ಹರಿಶಿನ ಕುಂಕುಮ ಕಾರ್ಯಕ್ರಮವನ್ನು ಪ್ರೇಮಾ ದೇವಿ ನಿಂಗಪ್ಪ ಅಣ್ಣಿಗೇರಿ ಮತ್ತು ಇಂದಿರಾ ಮಾಣಿಕ್ ಶಂಕರ್ ಗೌಡ ಇವರು ಭತ್ತದ ರಾಶಿಗೆ ಪೂಜೆ ಸಲ್ಲಿಸುವುದರ ಮೂಲಕ ಉದ್ಘಾಟಿಸಿದರು. ಈ ವೇಳೆ …

Read More »

ಅವರು ಭಾಷಣದಲ್ಲಿ ಹಿಂದೂ ಹಿಂದೂ ಎನ್ನುತ್ತಿರುತ್ತಾರೆ, ನಾನು 152 ದೇವಸ್ಥಾನ ಕಟ್ಟಿ ಹಿಂದೂ ಸಂಸ್ಕೃತಿ ಉಳಿಸುತ್ತಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಅವರು ಭಾಷಣದಲ್ಲಿ ಹಿಂದೂ ಹಿಂದೂ ಎನ್ನುತ್ತಿರುತ್ತಾರೆ, ನಾನು 152 ದೇವಸ್ಥಾನ ಕಟ್ಟಿ ಹಿಂದೂ ಸಂಸ್ಕೃತಿ ಉಳಿಸುತ್ತಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕೇವಲ ಭಾಷಣದಲ್ಲಿ ಹಿಂದೂ ಹಿಂದೂ ಎನ್ನುತ್ತಿರುತ್ತಾರೆ, ಆದರೆ ಹಿಂದೂಗಳಿಗೆ ಏನೂ ಮಾಡುವುದಿಲ್ಲ. ನಾನು ಕೇವಲ ಭಾಷಣ ಮಾಡದೆ, ಹಿಂದೂ ಸಂಸ್ಕೃತಿ ಉಳಿಸುತ್ತಿದ್ದೇನೆ, ಕ್ಷೇತ್ರದಲ್ಲಿ 152 ದೇವಸ್ಥಾನ ಕಟ್ಟಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳ್ಳಿ ಗ್ರಾಮದಲ್ಲಿ …

Read More »

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ* *ಮೂಡಲಗಿ-* ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಸಾರಾಯಿಯನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

Read More »