Breaking News

Laxminews 24x7

ಮೃತ ಯುವತಿಯ ಮನೆಗೆ ಸಂಸದ ಬಸವರಾಜ ಬೊಮ್ಮಾಯಿ ಭೇಟಿ

ಹಾವೇರಿ : ಇದೇ ತಿಂಗಳ 3 ರಂದು ಮೂವರು ಯುವಕರಿಂದ ಕೊಲೆಯಾದ ಯುವತಿ ಸ್ವಾತಿ ಮನೆಗೆ ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿದ್ದರು. ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದಲ್ಲಿರುವ ಸ್ವಾತಿ ಬ್ಯಾಡಗಿ ನಿವಾಸಕ್ಕೆ ಭೇಟಿ ನೀಡಿದ ಬೊಮ್ಮಾಯಿ ಅವರು ಸ್ವಾತಿ ತಾಯಿ ಮತ್ತು ಸಂಬಂಧಿಕರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು, ಸ್ವಾತಿ ಬ್ಯಾಡಗಿ ಹತ್ಯೆ ಆಘಾತ ಉಂಟು ಮಾಡಿದೆ. ಸ್ವಾತಿ ತಾಯಿ …

Read More »

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಂದರಲ್ಲೇ 150ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳವರದಿ

ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ …

Read More »

ವಶಕ್ಕೆ ಪಡೆದ ಕಾರುಗಳು, ಗುಂಡೇಟು ತಿಂದ ಆರೋಪಿ

ದಾವಣಗೆರೆ : ಸಿನಿಮೀಯ ರೀತಿಯಲ್ಲಿ ದರೋಡೆಗೆ ಬಂದಿದ್ದ ಉತ್ತರ ಪ್ರದೇಶದ ದರೋಡೆಕೋರರ ತಂಡದ ನಾಲ್ವರನ್ನು ದಾವಣಗೆರೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್​ ಮಾತನಾಡಿ, “ನ್ಯಾಮತಿ ಕಡೆಗೆ ಎರಡು ವಾಹನಗಳಲ್ಲಿ ದರೋಡೆ ಮಾಡುವುದಕ್ಕೆ ಬರುತ್ತಿದ್ದಾರೆ ಎಂಬ ಮಾಹಿತಿ ಶನಿವಾರ ನಮಗೆ ಬಂದಿತ್ತು. ಇದರಿಂದ ಎಚ್ಚೆತ್ತುಕೊಂಡು ಎಲ್ಲೆಡೆ ಚೆಕ್​ಪೋಸ್ಟ್​ಗಳನ್ನು ಹಾಕಿದ್ದೆವು. ಉತ್ತರ ಪ್ರದೇಶ ನಂಬರ್​ ಪ್ಲೇಟ್​ ಹೊಂದಿರುವ ಎರಡು ಕಾರುಗಳಲ್ಲಿದ್ದ ದರೋಡೆಕೋರರು ಹರಿಹರದಿಂದ ಕಡದಕಟ್ಟೆ ಕಡೆಗೆ …

Read More »

ಕಾಂಗ್ರೆಸ್ ಗ್ಯಾರಂಟಿಗಳಿಗೆ ಯಾವುದೇ ಅರ್ಥ ಇಲ್ಲ : ಮಾಜಿ ಸಿಎಂ ಯಡಿಯೂರಪ್ಪ

ಬೆಳಗಾವಿ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವೂ ಕಾರ್ಯರೂಪಕ್ಕೆ ಬರುತ್ತಿಲ್ಲ‌. ಒಂದು ರೀತಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಎಷ್ಟು ದಿವಸ ಮಾಡ್ತಾರೆ ಮಾಡಲಿ ಎನ್ನುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ. ಎಸ್​ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಬೆಳಗಾವಿಗೆ ವಿಶೇಷವಾದ ಕಾರ್ಯಕ್ರಮಕ್ಕೆ …

Read More »

ಸಿದ್ದರಾಮಯ್ಯ ಜಾತಿ-ಜಾತಿಗಳ ಮಧ್ಯ ಜಗಳ ತಂದಿಡುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ : ವಿಜಯೇಂದ್ರ

ಬೆಳಗಾವಿ : ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಮೂಲಕ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ, ಒಡಕು ಮೂಡಿಸುವ ದುಸ್ಸಾಹಸ ಮತ್ತು ಷಡ್ಯಂತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕಿದ್ದಾರೆ. ಮುಸ್ಲಿಂರ ಓಲೈಕೆ ದುರ್ದೈವದ ಸಂಗತಿ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಎಚ್ಚರಿಸಿದರು. ಇಂದು ನಗರದ ಸಾಂಬ್ರಾ ವಿಮಾನ …

Read More »

ಜಮೀನುಗಳಿಗೆ ನುಗ್ಗಿ ಬೆಳೆ ನೆಲಸಮಗೊಳಿಸಿದ ಕಾಡಾನೆಗಳು

ಹಾವೇರಿ : ಜಿಲ್ಲೆಯ ಶಿಗ್ಗಾಂವಿ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಇದೀಗ ಆನೆಗಳ ಕಾಟ ಶುರುವಾಗಿದೆ. ರೈತರ ಜಮೀನುಗಳಿಗೆ ನುಗ್ಗಿ ಸಾಕಷ್ಟು ಪ್ರಮಾಣದ ಬೆಳೆ ನಷ್ಟ ಮಾಡಿವೆ. ವೀಳ್ಯದೆಲೆ, ಅಡಿಕೆ, ಬಾಳೆ ತೋಟಗಳತ್ತ ನುಗ್ಗಿ ಕಾಡಾನೆಗಳು ಬೆಳೆಗಳನ್ನು ನೆಲಸಮ ಮಾಡಿವೆ. ಇದರಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಶಿಗ್ಗಾಂವಿ ಪಟ್ಟಣಕ್ಕೆ ನೀರು ಪೂರೈಸುವ ನಾಗನೂರು ಕೆರೆಯಲ್ಲಿ ಎರಡು ಕಾಡಾನೆಗಳು ಜಲಕ್ರೀಡೆಯಾಡಿರುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. …

Read More »

ಮೊ ರಾರ್ಜಿ ದೇಶಯಿವಸತಿ ಶಾಲೆ ಪರೀಕ್ಷೆ ಯಲ್ಲಿ 100ಕ್ಕೆ 97 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾ ನ ಪಡೆದ ಬಾಲಕ

ಬೆಳಗಾವಿ:2025ನೇ ಸಾಲಿ ನಲ್ಲಿ ನಡೆದ ಮೊರಾರ್ಜಿ ದೇಸಾಯಿಪರೀಕ್ಷೆ ಯಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ನಮ್ಮ ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನ ಸಿಕ್ಕಿದೆ ಅದಕ್ಕೆ ಕಾರಣ ಗುರು ಬಸವಕನ್ನಡ ಹಿರಿಯ ಪ್ರಾ ಥ ಮಿಕ ಶಾಲೆವೀರನ ಗಡ್ಡಿ ಶಾಲೆಯ ಬಾಲಕವಿನಾಯಕ ಸಿದ್ದಪ್ಪ ಪೋಟಿ ಇವನ್ ಸಾಧನೆ ಅಪಾರ್ ಹಾಗೂ ಇಂಥ ಬೆಳೆಯುವ ಹಾ ಹಾಗೂ ಶಿಕ್ಷಣದ ಬಗ್ಗೆ ಆಸಕ್ತ ತೆ ಹೊಂದಿರುವ ಮಕ್ಕಳಿಗೆ ಜಾರಕಿ ಹೊಳಿ ಕುಟುಂಬ ಸದಾ ಬೆಂಬಲ ವಾಗಿರುತ್ತೇ …

Read More »

ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ, ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಇಂದು ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿಮ್ಮೆಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ನೆಹರೂ ಅವರು ಒಂದು ಮಾತು …

Read More »

ಹಾಸನದಲ್ಲಿ ದೈತ್ಯ ಒಂಟಿಸಲಗ ಅನುಮಾನಾಸ್ಪದ ಸಾವು

ಹಾಸನ : ಅರಕಲಗೂಡು ತಾಲೂಕಿನ ನೆಲಬಳ್ಳಿ ಗ್ರಾಮದಲ್ಲಿ ದೈತ್ಯಾಕಾರದ ಒಂಟಿಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ಮಾ.15) ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಗಂಡಾನೆಯ ಕಳೇಬರ ರೈತರ ಜಮೀನಿನಲ್ಲಿ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ವಿದ್ಯುತ್ ಶಾಕ್ ಅಥವಾ ಗುಂಡೇಟಿನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ರೈತರು ಬೆಳಗ್ಗೆ ತಮ್ಮ ಜಮೀನಿಗೆ ತೆರಳಿದಾಗ ಆನೆ ಕಳೇಬರ ಪತ್ತೆಯಾಗಿದೆ. ನಂತರ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …

Read More »

ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರದ 40ನೇ ವಾರ್ಷಿಕೋತ್ಸವ

ಬೆಂಗಳೂರು : ಜಪಾನ್ ದೇಶದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಕೆಯಲ್ಲಿದ್ದರೂ ಉದ್ಯೋಗಾವಕಾಶಗಳು ವಿಕಾಸಗೊಳ್ಳುತ್ತಿದ್ದು, ಆಡಳಿತಾತ್ಮಕ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಭಾರತೀಯರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ ಎಂದು ಜಪಾನ್ ವಿದೇಶಾಂಗ ಸಚಿವಾಲಯದ ಸಲಹೆಗಾರ ಅಶೋಕ್ ಕುಮಾರ್ ಚಾವ್ಲಾ ತಿಳಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ಜಪಾನ್ ಕಾನ್ಸುಲೇಟ್ ಜನರಲ್ ಸಹಯೋಗದಲ್ಲಿ ಶನಿವಾರ ನಡೆದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರದ 40ನೇ ವಾರ್ಷಿಕೋತ್ಸವ ಹಾಗೂ ಜಪಾನ್​ನಲ್ಲಿ ಇಂದಿನ ಉದ್ಯೋಗಾವಕಾಶಗಳ ಕುರಿತಾದ ವಿಚಾರ ಸಂಕಿರಣದಲ್ಲಿ …

Read More »