Breaking News

Laxminews 24x7

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಮುಂದುವರಿದಿದೆ. ಇಂದು ಮುಂಜಾನೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು: ನಗರದ ವಿವಿಧ ಬಡಾವಣೆಗಳಲ್ಲಿರುವ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ. ಮೈಸೂರು: ಸಾಂಸ್ಕೃತಿಕ ನಗರಿಯಲ್ಲೂ ಲೋಕಾಯುಕ್ತ ಬಲೆ ಬೀಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬಾಗಲಕೋಟೆ: ಉತ್ತರ ಕರ್ನಾಟಕದ ಬಾಗಲಕೋಟೆಯಲ್ಲೂ ಅಧಿಕಾರಿಗಳ ತಂಡ ಬೀಡುಬಿಟ್ಟಿದೆ. ಇದರ ಜೊತೆಗೆ ರಾಜ್ಯದ ಇತರೆ …

Read More »

4110 ಪೊಲೀಸ್ ಹುದ್ದೆ ಸೇರಿ ಗೃಹ ಇಲಾಖೆಯ 8176 ಹುದ್ದೆಗಳ ನೇರ ನೇಮಕಾತಿಗೆ ಚಾಲನೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಖಾಲಿ ಇರುವ 8176 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನಾಗರಿಕ ಪೊಲೀಸ್ ಕಾನ್ಸ್ ಟೆಬಲ್(ಸಿವಿಲ್) 4110, ವಿಶೇಷ ಸಶಸ್ತ್ರ ಮೀಸಲು ಪೊಲೀಸ್ ಪಡೆ(KSRP) 2032, ಪೊಲೀಸ್ ಕಾನ್ಸ್ ಟೆಬಲ್(KSISF) 364, ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ 20 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೆರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ …

Read More »

ಊಹಾಪೋಹ ಸುದ್ದಿಗಳಿಗೆ ಉತ್ತರಿಸಲ್ಲ: ಸಚಿವ ದಿನೇಶ್

ಬೆಳ್ತಂಗಡಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉತ್ತಮವಾಗಿ ಕೆಲಸ ಮಾಡಿ ಅವರ ನೇತೃತ್ವದಲ್ಲಿ ನಾವು ಚುನಾವಣೆ ಗೆದ್ದಿದ್ದೇವೆ. ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರಕ್ಕೆ ಸಂಬಂಧಿಸಿ ಊಹಾಪೋಹಗಳಿಗೆ ಉತ್ತರ ನೀಡುವುದಿಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Read More »

ಅಂಕಿ ಅಂಶ ಸರ್ಕಾರದ ಅಂದಾಜಿಗಿಂತ ಭಿನ್ನ: ರಾಜ್ಯದ ಒಟ್ಟು ಸಾಲ 8.14 ಲಕ್ಷ ಕೋಟಿ ರೂ.ಗೆ ಏರಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಭಾರತೀಯ ರಿಸರ್ವ್ ಬ್ಯಾಂಕ್ (RBI) ವರದಿಯನ್ನು ಉಲ್ಲೇಖಿಸಿ, ಕರ್ನಾಟಕದ ಒಟ್ಟು ಸಾಲಗಳು 2025-26ರಲ್ಲಿ ₹8.14 ಲಕ್ಷ ಕೋಟಿ ತಲುಪುತ್ತವೆ ಎಂದು ಪತ್ರಿಕೆಯ ವರದಿಯೊಂದು ಹೇಳಿದೆ. ಆದಾಗ್ಯೂ, ಈ ಅಂಕಿ ಅಂಶವು ರಾಜ್ಯ ಸರ್ಕಾರದ ಅಧಿಕೃತ ಅಂದಾಜಿಗಿಂತ ಭಿನ್ನವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. 2025-26ರ ಬಜೆಟ್ ಅಂದಾಜಿನ ಪ್ರಕಾರ, ಮಾರ್ಚ್ 2026 ರ ವೇಳೆಗೆ ಕರ್ನಾಟಕದ ಒಟ್ಟು ಸಾಲಗಳು ₹7,64,655 ಕೋಟಿಗಳಷ್ಟಿವೆ ಎಂದು ಅಂದಾಜಿಸಲಾಗಿದೆ, ಇದು GSDP ಯ 24.91% …

Read More »

ಸಿಎಂ, ಡಿಸಿಎಂ ಹಾಲು ಜೇನಲ್ಲ, ಅಲ್ಕೋಹಾಲ್ ಜೇನು: ಸಚಿವ ಜೋಶಿ

ಹುಬ್ಬಳ್ಳಿ: ನಾನು ಮತ್ತು ಡಿ.ಕೆ. ಶಿವಕುಮಾರ್‌ ಇಬ್ಬರೂ ಹಾಲು ಜೇನು ಇದ್ದಂತೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಇವರದ್ದು ಹಾಲು ಜೇನಲ್ಲ, ಅಲ್ಕೋಹಾಲ್ ಮತ್ತು ಲಿಂಬೆಹಣ್ಣಿನ ಸಂಬಂಧ. ಇವರಿಬ್ಬರ ನಡುವೆ ಅಧಿಕಾರಕ್ಕಾಗಿ ನಡೆದಿರುವ ಆಂತರಿಕ ಕಚ್ಚಾಟದಿಂದ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ್ ರಾಜ್ಯಕ್ಕೆ ಬರುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು. ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ಇವರಿಗೆ ರಾಹುಲ್ …

Read More »

ನಾಳೆ ಸಿದ್ದರಾಮಯ್ಯ ಬಜೆಟ್‌ : ವಲಯವಾರು ನಿರೀಕ್ಷೆಗಳೇನು?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿಸಲಿದ್ದು, ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ, ಸಾರಿಗೆ ಸೇರಿ ವಿವಿಧ ವಲಯಗಳ ಸಮುದಾಯದಿಂದ ಭಾರೀ ನಿರೀಕ್ಷೆಗಳಿವೆ. ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಈಗಾಗಲೇ ಆಯಾ ವಲಯದ ಸಂಘ-ಸಂಸ್ಥೆಗಳು, ಕೈಗಾರಿಕೆಗಳು, ತಜ್ಞರು, ಭಾಗೀದಾರರು ಮುಖ್ಯಮಂತ್ರಿ ಅವರಿಗೆ ತಮ್ಮ ಬೇಡಿಕೆಗಳೇನು? ನಿರೀಕ್ಷೆಗಳೇನು ಎನ್ನುವ ಪಟ್ಟಿ ಸಲ್ಲಿಸಿದ್ದಾರೆ. ಇವುಗಳಲ್ಲಿ ಮುಖ್ಯಮಂತ್ರಿ ಯಾವ ವಲಯಕ್ಕೆ ಹೆಚ್ಚು ಒತ್ತು ನೀಡುತ್ತಾರೆ, ಯಾವ ಬೇಡಿಕೆಗಳನ್ನು ಪರಿಗಣಿಸಿ ಬಜೆಟ್‌ನಲ್ಲಿ …

Read More »

ನಗಲೇ ಇಲ್ಲ ರತಿ ಮನ್ಮಥರು- ಮೌನ ಶಪಥ, ಯಾರಿಗೂ ಸಿಗದ ₹ 13 ಲಕ್ಷ ಬಹುಮಾನ

ರಾಣಿಬೆನ್ನೂರು: ಇಲ್ಲಿನ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ನಗರದ ಶ್ರೀ ರಾಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಭೀಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಶಕ್ತಿ ಯುವಕ ಸಂಘ ಹಾಗೂ ಜೆಬಿಸಿಸಿ ಯುವಕ ಮಂಡಳಿ ವತಿಯಿಂದ ಕುಳ್ಳರಿಸಿದ್ದ ಜೀವಂತ ರತಿ-ಮನ್ಮಥರು ಈ ಬಾರಿಯೂ ನಗು ಚಿಮ್ಮಿಸದೇ ತಮ್ಮ ದಾಖಲೆ ಮುಂದುವರಿಸಿಕೊಂಡು ಬಂದಿದ್ದಾರೆ.

Read More »

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ  ನೆಲೆಸಿದ್ದಳು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶವವನ್ನು ನದಿಯಿಂದ ಪೊಲೀಸರು ಮೇಲೆತ್ತಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ …

Read More »

ಸಂಪರ್ಕಕ್ಕೇ ಸಿಗುತ್ತಿಲ್ಲ ಇರಾನ್‌ನಲ್ಲಿ ಕೆಲಸಕ್ಕೆ ಹೋದ ಕಾಫಿನಾಡ ಯುವಕ – ಕುಟುಂಬದಲ್ಲಿ ಆತಂಕ

ಚಿಕ್ಕಮಗಳೂರು: ಇರಾನ್ ಯುದ್ಧದ ಕೆನ್ನಾಲಗೆಗೆ ಸಿಲುಕಿರುವ ಚಿಕ್ಕಮಗಳೂರು  ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಸಂಪರ್ಕಕ್ಕೆ ಸಿಗದ ಕಾರಣ ಕುಟುಂಬಸ್ಥರು ಆತಂಕಕ್ಕೀಡಾಗಿರುವ ಘಟನೆ ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮದಲ್ಲಿ ನಡೆದಿದೆ. ಸಂಪರ್ಕಕ್ಕೆ ಸಿಗದ ಮಗನ ಪತ್ತೆಗೆ ಪೋಷಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ  ಕದ ಬಡಿದಿದ್ದಾರೆ. ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಯುದ್ಧದ ಸುಳಿಯಲ್ಲಿ ಸಿಲುಕಿರುವ ಆತಂಕಕಾರಿ ವರದಿ ಲಭ್ಯವಾಗಿದೆ. …

Read More »

ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್

ಬೆಂಗಳೂರು: ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಪ್ರವಾಸಕ್ಕೆ  ತೆರಳಿದ್ದ ಕಾಂಗ್ರೆಸ್ ಶಾಸಕರು  ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ವಿದೇಶ ಪ್ರವಾಸದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿರಗುಪ್ಪ ಶಾಸಕ ಬಿಎಂ ನಾಗರಾಜ್, ಆಸ್ಟ್ರೇಲಿಯಾ ನ್ಯೂಜಿಲೆಂಡ್ ಹೋಗಿ ಬಂದೆವು. ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ನಾವು ಯಾವುದೇ ಅಧ್ಯಯನ ಮಾಡಿಲ್ಲ. ಫ್ಯಾಮಿಲಿ ಟ್ರಿಪ್ ಹೋಗಿದ್ದೆವು. ನಮ್ಮ ಯಾವ ರಾಜಕೀಯ ನಾಯಕರೂ ಕರೆ ಮಾಡಿಲ್ಲ. ಅಲ್ಲಿನ ಕೆಲ ತೋಟಗಳಿಗೆ ಹೋಗಿದ್ದೆವು. ಕೆಲವು ಕಡೆ ನಮಗೆ ಹೋಗೋದಕ್ಕೆ ಅವಕಾಶ …

Read More »