ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದ ಶ್ರೀ ಬ್ರಹ್ಮಲಿಂಗ ಮಂದಿರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಬಡ್ಡಿ ಸ್ಪರ್ಧೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿ, ಚಾಲನೆ ನೀಡಿದರು. ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಲಾಗುತ್ತಿದೆ. ಸರಕಾರದಿಂದಷ್ಟೇ ಅಲ್ಲ, ವಯಕ್ತಿಕವಾಗಿ ಹಾಗೂ ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಸಹ ಸಾಕಷ್ಟು ಸಹಾಯ ಮಾಡಲಾಗುತ್ತಿದೆ. ಯುವಕರು ಹಾಗೂ ಮಕ್ಕಳು ಸರ್ವಾಂಗೀಣ ಅಭಿವೃದ್ಧಿಯಾಗಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ …
Read More »ಬಿಮ್ಸನಲ್ಲಿ ಆತಂಕ ಸೃಷ್ಠಿಸಿದ ನಕಲಿ ವಿದ್ಯಾರ್ಥಿ ಓಡಾಟ…!!! ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…
ಪಿಜಿ ವಿದ್ಯಾರ್ಥಿ ಎಂದು ಹೇಳಿ ಬಿಮ್ಸ್ ಆಸ್ಪತ್ರೆಯಲ್ಲಿ ಯುವಕನೊಬ್ಬ ಹುಚ್ಚಾಟ ನಡೆಸಿದ್ದಾನೆ. ಈತನ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ವೇಷ ಧರಿಸಿ ಬೀಮ್ಸ್ ಆಸ್ಪತ್ರೆಯ ಈತ, ಕ್ಲಾಸ್ ರೂಂ, ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಓಡಾಟ ನಡೆಸಿದ್ದಾನೆ. ಬಿಮ್ಸ್ ನಲ್ಲಿ ಬಂದು ಕುಳಿತು ವಿದ್ಯಾರ್ಥಿಗಳಿಗೆ ಆತಂಕ ಸೃಷ್ಟಿಸಿದ ಘಟನೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಮ್ಸ್ ನಲ್ಲಿ ನರ್ಸಿಂಗ್ ಸ್ಟಾಪ್, ವಿದ್ಯಾರ್ಥಿಗಳ ಜೊತೆಗೆ …
Read More »ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರೇ ಹುಷಾರ್: 10 ವರ್ಷದವರೆಗೆ ಶಿಕ್ಷೆ
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡುವ ಕಸರತ್ತು ನಡೆಸುವ ಮಧ್ಯೆಯೇ ಇತ್ತ ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರ ಮೇಲೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನಿನ ತಿದ್ದುಪಡಿಗೆ ಸಹಕಾರ ಇಲಾಖೆಯೂ ಸಿದ್ಧತೆ ನಡೆಸಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿಗಾರರ ವಿರುದ್ಧ ನಿಯಂತ್ರಣ ಹೇರಲು ಇರುವ ಕಾನೂನನ್ನೇ ಪ್ರಯೋಗ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುಗ್ರೀವಾಜ್ಞೆ …
Read More »ವೇಶ್ಯಾವಾಟಿಕೆ ದಂಧೆ: ಲಾಡ್ಜ್ ಮೇಲೆ ಪೊಲೀಸ್ ದಾಳಿ –
ಚಾಮರಾಜನಗರ: ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೊಳ್ಳೇಗಾಲ ಪೊಲೀಸರು ಶನಿವಾರ ರಾತ್ರಿ ಇಲ್ಲಿನ ಲಾಡ್ಜ್‌ವೊಂದರ ಮೇಲೆ ಮಾಡಿದ್ದು ನಾಲ್ವರು ಮಹಿಳೆಯರು, ನಾಲ್ವರು ಪುರುಷರು ಹಾಗೂ ಲಾಡ್ಜ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ಪಟ್ಟಣದ ಹೃದಯಭಾಗದಲ್ಲಿರುವ ಶೆಟ್ಟೀಸ್ ಫೋರಂನ ಜಶ್ವಂತ್ ರೆಸಿಡೆನ್ಸಿ ಲಾಡ್ಜ್ ಮೇಲೆ ಪೊಲೀಸ್ ವೃತ್ತ ನಿರೀಕ್ಷಕ ಶಿವಮಾದಯ್ಯ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
Read More »ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಆರಂಭದಲ್ಲೇ ವಿಘ್ನ
ಧಾರವಾಡ: ಸುದೀರ್ಘ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯ ಸರ್ಕಾರ ಅಸ್ತು ಅಂದಿದೆ. ಇನ್ನೇನು ಕಾರ್ಯಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವಷ್ಟರಲ್ಲಿ ಹೊಸ ಪಾಲಿಕೆ ಸೇರಲು ಕೆಲ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್ಗಳನ್ನು ವಿಂಗಡಿಸಿ, 26 ವಾರ್ಡ್ ಧಾರವಾಡಕ್ಕೆ ನೀಡಿ ಪ್ರತ್ಯೇಕ ಪಾಲಿಕೆ ಘೋಷಿಸಲಾಗಿದೆ. ಈ ಕುರಿತು ಸರ್ಕಾರ ಇತ್ತೀಚೆಗೆ ಗೆಜೆಟ್ ನೋಟಿಪಿಕೇಷನ್ ಸಹ ಮಾಡಿದೆ. ಇದರ ನಡುವೆ ಧಾರವಾಡ ಸುತ್ತಮುತ್ತಲಿನ ಗ್ರಾಮಗಳನ್ನೂ …
Read More »ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ : ಸಚಿವ ಪ್ರಿಯಾಂಕಾ ಖರ್ಗೆ
ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ. ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ. ಬಜೆಟ್ ಮೇಲೆ ನಮಗೆ ನಿರೀಕ್ಷೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಮೋದಿಯವರ ಮಾಸ್ಟರ್ ಸ್ಟ್ರೋಕ್ ನಿಂದ ನಿರುದ್ಯೋಗ ತಾಂಡವ ಆಡ್ತಾ ಇದೆ. ಮಧ್ಯಮ ವರ್ಗ ನಿರ್ನಾಮವಾಗಿದೆ. ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಾ ಇದ್ದಾರೆ. ಕರ್ನಾಟಕ ಎರಡನೇ ಹೆಚ್ಚು …
Read More »ಕಾಗವಾಡ ಸದಸ್ಯರು ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ.
ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮ ಪಂಚಾಯಿತಿಯ ಸದಸ್ಯರು ಪಿಡಿಒ ಇವರನ್ನು ವರ್ಗಾಯಿಸಲು ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ಕೈಗೊಂಡಿದ್ದಾರೆ. ಉಗಾರ ಬುದ್ರುಕ ಗ್ರಾಮ ಪಂಚಾಯತಿಯ ಸದಸ್ಯರು ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಈ ಘಟನೆ ಸಂಬAಧ ಸ್ಥಳಕ್ಕೆ ತಲುಪಿದ ತಾಲೂಕಾ ಪಂಚಾಯತಿ ಅಧಿಕಾರಿಗಳು ಸದಸ್ಯರೊಂದಿಗೆ ಚರ್ಚೆ ನಡೆಸಿ ನಿಯಂತ್ರಿಸಲು ಪ್ರಯತ್ನಿಸಿದರೂ, ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. ಶನಿವಾರ ರಂದು ಉಗಾರ …
Read More »ಕೇಂದ್ರ ಬಜೆಟ್ ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್: ಹೆಬ್ಬಾಳಕರ್ ಕಿಡಿ
ಬೆಳಗಾವಿ: ಕರ್ನಾಟಕದಿಂದ ನಿರ್ಮಲಾ ಸೀತರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್. ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ …
Read More »ಶೇಡಬಾಳ ಪಟ್ಟಣದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹಣ ವಿತರಣೆ.
ಶೇಡಬಾಳ ಪಟ್ಟಣ ಪಂಚಾಯಿತಿಯಲ್ಲಿ ೨೦೨೧-೨೨ ಮತ್ತು ೨೦೨೨-೨೩ ಸಾಲಿನಲ್ಲಿ ಐದು ಅಂಗವಿಕಲರಿಗೆ ತ್ರೀಚಕ್ರವಾಹಣಗಳನ್ನು ವಿತರಿಸುವ ಕಾರ್ಯಕ್ರಮ ಕಾಗವಾಡ ಶಾಸಕ ರಾಜು ಕಾಗೆಯವರ ಹಸ್ತೆಯಿಂದ ನೆರವೇರಿತು. ಶನಿವಾರ ಬೆಳಗ್ಗೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉತ್ಕರ್ಶ ಪಾಟೀಲ ಇವರ ಅಧ್ಯಕ್ಷತೆಯಲ್ಲಿ ತ್ರೀಚಕ್ರವಾಹಣ ವಿತರಿಸುವ ಕಾರ್ಯಕ್ರಮ ನೆರವೇರಿತು.ಫಲಾನುಭವಿಗಳಾದ ಸೊಬಣ್ಣ ಹೊನಕಾಂಬಳೆ, ಸನ್ಮತಿ ಪಾಟೀಲ, ಸುನಿತಾ ನಾಂದ್ರೆ, ವಿರುಪಾಕ್ಷ ಮಾಳಿ, ಈರಣ್ಣ ಅಡಹಳ್ಳಿ ಇವರಿಗೆ ಶಾಸಕರ ಹಸ್ತೆಯಿಂದ ತ್ರೀಚಕ್ರವಾಹಣ ವಿತರಿಸಲಾಯಿತು. ಶಾಸಕ ರಾಜು ಕಾಗೆ ಅವರು …
Read More »‘ವೇದಾಂತ ಎಕ್ಸ್‌ಲೆನ್ಸ್ ಅವಾರ್ಡ್’ ಪಡೆದ 9 ಸಾಧಕರು;‘ಪುರಸ್ಕಾರದಿಂದ ಕ್ರಿಯಾಶೀಲತೆ ಹೆಚ್ಚಳ’
ಬೆಳಗಾವಿ: ‘ವಿವಿಧ ರಂಗಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ಪುರಸ್ಕಾರ ನೀಡಿರುವ ಕಾರ್ಯ ಶ್ಲಾಘನೀಯ. ಇದರಿಂದ ತಮ್ಮ ಜವಾಬ್ದಾರಿ ಹೆಚ್ಚಿದ್ದು, ಇನ್ನಷ್ಟು ಕ್ರಿಯಾಶೀಲ, ಪ್ರಾಮಾಣಿಕವಾಗಿ ತಾವು ಸೇವೆ ಸಲ್ಲಿಸಲು ಉತ್ಸಾಹ ಬರುತ್ತದೆ’ ಎಂದು ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಜೆ.ಭಜಂತ್ರಿ ಹೇಳಿದರು. ಇಲ್ಲಿನ ಮಹಿಳಾ ವಿದ್ಯಾಲಯದಲ್ಲಿ ವೇದಾಂತ ಫೌಂಡೇಷನ್ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರಿಗೆ 2025ನೇ ಸಾಲಿನ ‘ವೇದಾಂತ ಎಕ್ಸ್‌ಲೆನ್ಸ್ ಅವಾರ್ಡ್’ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. …
Read More »