Breaking News

Laxminews 24x7

ಸಿದ್ದರಾಮಯ್ಯ ರಾಜೀನಾಮೆಗೆ ಎಂ.ಸಿ ಸುಧಾಕರ್ ಕಣ್ಣೀರು

ದಾವಣಗೆರೆ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದನ್ನು ನೆನೆದು ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಎಂ.ಸಿ ಸುಧಾಕರ್  ಭಾವುಕರಾದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ನೆನೆದು ಭಾವುಕರಾದರು. ಸಿದ್ದರಾಮಯ್ಯನವರನ್ನು ಕಳೆದ ಎರಡು, ಮೂರು ದಿನಗಳಿಂದ ನೋಡಲಾಗುತ್ತಿಲ್ಲ. ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋಗಿ, ಒಂದು ಜಾತಿಗೆ ಸೀಮಿತವಾಗದೇ ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ ಎಂದರೆ ಅದು ಸಿದ್ದರಾಮಯ್ಯನವರು. ಆದರೆ ಅಂತಹ …

Read More »

ಮೂರು ದಿನಗಳ ಬಳಿಕ ಮೌನ ಮುರಿದ ಡಿಕೆ ಶಿವಕುಮಾರ್‌

ನವದೆಹಲಿ: ಕಳೆದ ಮೂರು ದಿನಗಳಿಂದಲೂ ಮೌನವಾಗಿದ್ದ ಡಿಕೆ ಶಿವಕುಮಾರ್‌ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್‌ ನಾಯಕರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ನಾಳೆ ಸಂಜೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಶಾಸಕರಿಗೂ ಬೆಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ. ಹೈಕಮಾಂಡ್ ನಾಯಕರ ಸೂಚನೆಯ ಮೇರೆಗೆ ಈ ಸಭೆಯ ಸಮಯವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು. ಮೊದಲಿಗೆ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು, …

Read More »

ಡಿಕೆಶಿ ಪಟ್ಟಾಭಿಷೇಕಕ್ಕೆ ರಾಮನಗರದಿಂದ 50 ಸಾವಿರ ಜನ!

ರಾಮನಗರ: ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವರ ತವರು ಜಿಲ್ಲೆ ರಾಮನಗರದಲ್ಲಿ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಹೈಕಮಾಂಡ್ ಮಟ್ಟದಲ್ಲಿ ಪ್ರಕ್ರಿಯೆಗಳು ಚುರುಕಾಗಿರುವ ಬೆನ್ನಲ್ಲೇ, ಪದಗ್ರಹಣ ಕಾರ್ಯಕ್ರಮಕ್ಕೆ ರಾಮನಗರ ಜಿಲ್ಲೆಯಿಂದಲೇ ಬರೋಬ್ಬರಿ 40 ರಿಂದ 50 ಸಾವಿರ ಜನರನ್ನು ಬೆಂಗಳೂರಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆ. ಡಿಕೆಶಿ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಸಂಬಂಧ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ …

Read More »

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಣಿ ಚನ್ನಮ್ಮ ಮ್ಯೂಸಿಯಂ

ಬೆಳಗಾವಿಗೆ ಕಮಲ ಬಸದಿ  ಮಾದರಿಯಲ್ಲೇ ಇಲ್ಲಿನ ವಿಮಾನ ನಿಲ್ದಾಣದ ಟರ್ಮಿನಲ್-2 ಕಟ್ಟಡ ತಲೆಎತ್ತಲಿದೆ. ಐತಿಹಾಸಿಕ ಬಸದಿಗಿಂತ ಈ ಕಟ್ಟಡ ನಾಲ್ಕು ಪಟ್ಟು ದೊಡ್ಡದಾಗಿರಲಿದೆ. ಸದ್ಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಉದ್ದೇಶದಿಂದ 223 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಟರ್ಮಿನಲ್-2ರಲ್ಲಿ ಜಿಲ್ಲೆಯ ಇತಿಹಾಸ, ಕಲೆ, ಸಂಸ್ಕೃತಿ ಮತ್ತು ಪರಂಪರೆ ಪರಿಚಯಿಸುವ ಪ್ರಯತ್ನ ಮಾಡಲಾಗುತ್ತಿದೆ. ಅದರ ಭಾಗವಾಗಿ ಟರ್ಮಿನಲ್‌ನ ಇಡೀ ಕಟ್ಟಡವೇ ಕಮಲ ಬಸದಿ ವಿನ್ಯಾಸದಲ್ಲಿರಲಿದೆ. ಈಗಾಗಲೇ ಶೇ.87ರಷ್ಟು ಕಾಮಗಾರಿ ಪೂರ್ಣಗೊಂಡಿದೆ. …

Read More »

ಉತ್ತರ ವಲಯ ಐಜಿಪಿಯಾಗಿ ಸಂದೀಪ ಪಾಟೀಲ ಅಧಿಕಾರ ಸ್ವೀಕಾರ

ಬೆಳಗಾವಿ : ಉತ್ತರ ವಲಯ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ ಪಾಟೀಲ ಗುರುವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈವರೆಗಿನ ಉತ್ತರ ವಲಯ ಐಜಿಪಿ ಡಾ.ಚೇತನಸಿಂಗ್ ರಾಥೋರ್, ಪಾಟೀಲರಿಗೆ  ಅಧಿಕಾರ ಹಸ್ತಾಂತರಿಸಿದರು. ಬಳಿಕ ಉತ್ತರ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಕಾನೂನು-ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಗಡಿ ಭಾಗದ ಭದ್ರತಾ ವ್ಯವಸ್ಥೆ ಹಾಗೂ ಪ್ರಮುಖ ಪ್ರಕರಣಗಳ ಕುರಿತು ಪ್ರಾಥಮಿಕ ಮಾಹಿತಿ ಪಡೆದುಕೊಂಡ ಸಂದೀಪ ಪಾಟೀಲ, ಅಧೀನ ಅಧಿಕಾರಿ …

Read More »

ಸಿದ್ದರಾಮಯ್ಯನವರ ಈಗಿನ ಕಣ್ಣೀರು 2028ಕ್ಕೆ ಜ್ವಾಲಾಮುಖಿಯಾಗಲಿದೆ

 ಬೆಳಗಾವಿ : ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಕಾಂಗ್ರೆಸ್ ಇನ್ನು ಮುಂದೆ ಅಧಃಪತನಕ್ಕೆ ಹೋಗುತ್ತದೆ. ಸಿದ್ದರಾಮಯ್ಯನವರ ಈಗಿನ ಕಣ್ಣೀರು 2028ಕ್ಕೆ ಜ್ವಾಲಾಮುಖಿಯಾಗಿ ಸ್ಪೋಟಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ವರ್ಷ ಸಿದ್ದರಾಮಯ್ಯ ಆರ್ಥಿಕ ಪರಿಸ್ಥಿತಿಯನ್ನು ಯಾರಿಗೂ ಸಮಸ್ಯೆಯಾಗದಂತೆ ನಿಭಾಯಿಸಿದ್ದಾರೆ. ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಸಿದ್ದರಾಮಯ್ಯ ಇದ್ದಿದ್ದರಿಂದ ಯಾವುದೇ ಸಮಸ್ಯೆ ಇಲ್ಲದಂತೆ ಜಾರಿಯಾಗಿದ್ದವು. …

Read More »

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಲೋಕಭವನದಿಂದ ಆದೇಶವೂ ಹೊರಬೀಳುವ ಸಾಧ್ಯತೆಗಳಿವೆ.  

Read More »

ಚಲಿಸುತ್ತಿದ್ದ ಕಾರಿನ ಟೈಯರ್‌ ಬ್ಲಾಸ್ಟ್‌ – ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಐವರು ದುರ್ಮರಣ

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ  ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ. ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಸ್ಥಳದಲ್ಲೇ‌ ಮೃತಪಟ್ಟವರು.ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಆಗಮಿಸ್ತಿದ್ದು, ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಐವರು ಬಳ್ಳಾರಿಗೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಅತಿ ವೇಗದಿಂದಾಗಿ ಕಾರಿನ ಟೈಯರ್‌ ಸ್ಫೋಟಗೊಂಡ …

Read More »

ಟ್ರೇಡಿಂಗ್ ಹೆಸರಿನಲ್ಲಿ ರೈತನಿಗೆ 9.91 ಲಕ್ಷ ರೂ. ವಂಚನೆ – ಕೇಸ್ ದಾಖಲು

ಶಿವಮೊಗ್ಗ: ಷೇರು ಮಾರುಕಟ್ಟೆ ಟ್ರೇಡಿಂಗ್‌ನಲ್ಲಿ  ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ, ಕೃಷಿಕರೊಬ್ಬರಿಂದ 9.91 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಕಳೆದ ಮಾರ್ಚ್‌ನಲ್ಲಿ ವಾಟ್ಸಪ್ ನೋಡುತ್ತಿದ್ದಾಗ, ಅಪರಿಚಿತರು ಇವರ ಮೊಬೈಲ್ ಸಂಖ್ಯೆಯನ್ನು ವಿಐಪಿ ಹೆಸರಿನ ವಾಟ್ಸಪ್ ಗ್ರೂಪ್‌ವೊಂದಕ್ಕೆ ಸೇರಿಸಿದ್ದರು. ಆ ಗ್ರೂಪ್‌ನಲ್ಲಿ ಟ್ರೇಡಿಂಗ್ ಕಂಪನಿಯೊಂದರ ಹೆಸರಿನಲ್ಲಿ ಮೆಸೇಜ್‌ಗಳನ್ನು ಕಳುಹಿಸಲಾಗಿತ್ತು. ಕಂಪನಿಯ ಪ್ರತಿನಿಧಿಗಳಂತೆ ನಟಿಸಿದ ವಂಚಕರು, ತಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಅತಿಹೆಚ್ಚು …

Read More »

ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ

ಹಾಸನ: ಜಿಲ್ಲೆಯ ವಿವಿಧೆಡೆ ಇಂದು ಕೂಡ ಬಾರಿ ಮಳೆಯಾಗಿದೆ. ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ ತಾಲ್ಲೂಕಿನ ವಿವಿಧೆಡೆ ವರುಣ ಅಬ್ಬರಿಸಿದ್ದು, ಗುಡುಗು, ಸಿಡಿಲು ಸಹಿತ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದಾರೆ. ಮಳೆಗೆ ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಪರದಾಡುವಂತಾಗಿತ್ತು. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಕೃಷಿ …

Read More »