Breaking News

Laxminews 24x7

ಅ.31ಕ್ಕೆ ಮಂಡ್ಯಕ್ಕೆ ಸಿಎಂ ಡಿಕೆಶಿ ಭೇಟಿ – ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಭರ್ಜರಿ ಸಿದ್ಧತೆ

ಮಂಡ್ಯ: ನಗರಕ್ಕೆ ಅಕ್ಟೋಬರ್ 31ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ಅಧಿಕೃತವಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ. ಕಾರ್ಯಕ್ರಮದ ಯಶಸ್ಸಿಗಾಗಿ ಮಂಡ್ಯ  ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗೌಡ ಗಣಿಗ  ಅವರು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ತಲೆ ಎತ್ತಲಿರುವ ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಿದ್ಧತಾ ಕಾರ್ಯಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಮಂಡ್ಯ …

Read More »

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಲ್ಯಾಬ್ ಟೆಕ್ನಿಷಿಯನ್ ಬಲಿ

ಹುಬ್ಬಳ್ಳಿ: ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ  ಸಿಲುಕಿ ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ, ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತಪಟ್ಟಿರುವ ಘಟನೆ ನಗರದ ಶಿವಶಂಕರ ಕಾಲೋನಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹುಬ್ಬಳ್ಳಿಯ ಭರತ್ ನಗರದ ನಿವಾಸಿ, 38 ವರ್ಷದ ವಿದ್ಯಾ ಮಂಜುನಾಥ ಗೌಡ ಎಂದು ಗುರುತಿಸಲಾಗಿದೆ. ವಿದ್ಯಾ ಲ್ಯಾಬ್ ಟೆಕ್ನಿಷಿಯನ್  ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಸುಮಾರು 1 …

Read More »

ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವಿಳಂಬ – BMRCL ಎಂಡಿಗೆ ಕೃಷ್ಣ ಬೈರೇಗೌಡ ಕ್ಲಾಸ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಮೆಟ್ರೋ ಅತ್ಯಗತ್ಯ. ಆದರೆ ಇದೇ ಮೆಟ್ರೋ ಕಾಮಗಾರಿ  ಈಗ ಜನರ ಪಾಲಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಕೆ.ಆರ್.ಪುರಂನಿಂದ ಹೆಬ್ಬಾಳ, ಏರ್‌ಪೋರ್ಟ್ ರಸ್ತೆವರೆಗಿನ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಇಳಿದ ಸಚಿವ ಕೃಷ್ಣಬೈರೇಗೌಡರಿಗೆ  ಕಂಡಿದ್ದು ಅಸಮರ್ಪಕ ಕಾಮಗಾರಿ ನಿರ್ವಹಣೆ. ಮಾನ್ಯತಾ ಟೆಕ್ ಪಾರ್ಕ್ ಮುಂಭಾಗದಲ್ಲಿ ಕಾಮಗಾರಿ ನಡೆಯುತ್ತಿರುವ ವೇಗ ಕಂಡು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಮುಗಿಸೋದು ಯಾವಾಗ ಅಂತ ಅಧಿಕಾರಿಗಳನ್ನೇ ಪ್ರಶ್ನಿಸಿದ್ದಾರೆ. ವರ್ಷಗಳು ಕಳೆದರೂ ಕಾಮಗಾರಿ ವೇಗ …

Read More »

ಗಡಿಯಾರ, ಕನ್ನಡಕ, ಉಂಗುರಗಳಲ್ಲೂ ಕ್ಯಾಮೆರಾ ಇಟ್ಟು ಟ್ರ್ಯಾಪ್ : ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ!

ಗಡಿಯಾರ, ಕನ್ನಡಕ ಮತ್ತು ಉಂಗುರಗಳಲ್ಲಿ ಕ್ಯಾಮೆರಾ ಅಳವಡಿಸಿ ಸಚಿವರು ಹಾಗೂ ಶಾಸಕರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಲುಕಿಸಲು ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಜನಪ್ರತಿನಿಧಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಸ್ಟಿಂಗ್ ಕಾರ್ಯಾಚರಣೆಗಳ ಬಗ್ಗೆ ಮುಖ್ಯಮಂತ್ರಿಗಳೇ ಎಚ್ಚರಿಕೆ ನೀಡಿದ್ದಾರೆ . ಇದೇ ವೇಳೆ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಚಿವರು ಮತ್ತು ಶಾಸಕರನ್ನು …

Read More »

ಬಟ್ಟೆ ಒಣಗಿಸುವಾಗ ಕರೆಂಟ್ ಶಾಕ್: ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ವಿದ್ಯುತ್‌ ಅವಘಡಕ್ಕೆ ತಾಯಿ, ಮಗ ಇಬ್ಬರೂ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಬಟ್ಟೆ ಒಣಗಿಸಲು ಹೋಗಿ ಈ ದುರಂತ ಸಂಭವಿಸಿದೆ. ತಾಯಿ ಮರ್ಸಿ ಮಸ್ಕರೇನಸ್ (45), ಪುತ್ರ ಶೋನ್ ಮಸ್ಕರೇನಸ್ (18) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿಯ ವರ್ಣಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 7 ರಿಂದ 8 ಗಂಟೆ ನಡುವೆ …

Read More »

ಅಕ್ರಮ ಸಂಬಂಧದ ಅನುಮಾನಕ್ಕೆ ಪತ್ನಿಯನ್ನೇ ಕೊಂದ ಪತಿ: 9 ದಿನಗಳ ಬಳಿಕ ಪ್ರಕರಣ ಬಯಲು

ಸುದ್ದಿ: ಬೆಂಗಳೂರಿನ ಮಾಗಡಿ ರಸ್ತೆ ವ್ಯಾಪ್ತಿಯ ರಾಜಕಾಲುವೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿ ರುಕ್ಸಾನಾಳನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿ ಮೊಹಮ್ಮದ್ ಇರ್ಫಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ 25 ವರ್ಷದ ರುಕ್ಸಾನಾ ಕೊಲೆಯಾದ ಮಹಿಳೆ. ಅಕ್ಟೋಬರ್ 13ರಂದು ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಬಳಿಕ ಹಲವು …

Read More »

ಬೀದಿನಾಯಿಯನ್ನು ಮರಕ್ಕೆ ನೇತುಹಾಕಿ ಹೊಡೆದು ಕೊಂದ ದುಷ್ಕರ್ಮಿಗಳು: ವಿಡಿಯೋ ವೈರಲ್

ಇದೆಂತಹ ವಿಲಕ್ಷಣ ಕೃತ್ಯ. ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಕ್ರೂರವಾಗಿ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ. ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಶ್ವಾನ ಪ್ರಿಯೆ ನಿಶ್ಚಿಂತ ನರೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪುನೀತ್, ಮುರಳಿ ಹಾಗೂ ಮುನಿಯಪ್ಪ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಗುಂಜೂರಿನ ಗ್ರೀನ್ ವುಡ್ ಹೈಸ್ಕೂಲ್ ಬಳಿ ಇರುತ್ತಿದ್ದ ಬೀದಿನಾಯಿಯನ್ನು …

Read More »

ಬೆಳಗಾವಿ ಚಳಿಗಾಲ ಅಧಿವೇಶನ -ಸಿದ್ಧತೆ ಆರಂಭ

 ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ವಿಧಾನ ಮಂಡಳ ಚಳಿಗಾಲ ಅಧಿವೇಶನವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಅ.೨೨) ಜರುಗಿದ ಚಳಿಗಾಲ ಅಧಿವೇಶನ-೨೦೨೬ ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಸಮಯಾವಕಾಶವಿದ್ದು, ಅಧಿವೇಶನ …

Read More »

ಪ್ರತಿ ಜಿಲ್ಲೆಯಿಂದ ನಾಲ್ಕು ರೈತರಿಗೆ ಮಾತ್ರ ಅವಕಾಶ!

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ದಿನಾಂಕ ೨೬.೧೦.೨೦೨೬ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಭೆ ಜರುಗಲಿದೆ ಸಭೆಗೆ ಬೆಳಗಾವಿ ವಿಭಾಗ ಸೇರಿದಂತೆ ಸಂಬಂಧಪಟ್ಟ ೧೫ ಜಿಲ್ಲೆಗಳಿಂದ ರೈತರು ಆಗಮಿಸುವ ಹಿನ್ನೆಲೆಯಲ್ಲಿ, ಸಭೆಯ ವ್ಯವಸ್ಥಿತ ನಿರ್ವಹಣೆ, ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ, ಆಯುಕ್ತರು, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು, ಬೆಂಗಳೂರು …

Read More »

ಅಕ್ಟೋಬರ್ 23 ರಿಂದ 25 ರವರೆಗೆ ಅದ್ಧೂರಿ ಉತ್ಸವ ಆಚರಣೆ

ಬೆಳಗಾವಿ : ಜಿಲ್ಲಾ ಆಡಳಿತ ಬೆಳಗಾವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮನವರ ಕಿತ್ತೂರು ಉತ್ಸವದ ೨೦೨ನೇ ವರ್ಷದ ಸಂಭ್ರಮಾಚರಣೆ ಉದ್ಘಾಟನಾ ಸಮಾರಂಭವು ಅಕ್ಟೋಬರ್ ೨೩, ೨೦೨೬ ರಂದು (ಶುಕ್ರವಾರ) ಸಂಜೆ ೭ ಗಂಟೆಗೆ ಕಿತ್ತೂರಿನ, ಕಿತ್ತೂರು ಕೋಟೆ ಆವರಣದ ರಾಣಿ ಚನ್ನಮ್ಮ ವೇದಿಕೆಯಲ್ಲಿ ಜರುಗಲಿದೆ. ಚನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮ.ನಿ.ಪ್ರ. ಸ್ವಾಮೀಜಿ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ …

Read More »