ಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್‌ಐಎ ಕೋರ್ಟ್ ತೀರ್ಪು ನೀಡಿದೆ. ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್‌ಗೆ ಕೋರ್ಟ್ ಶಿಕ್ಷೆ ವಿಧಿಸಿದೆ. 2020 ರಂದು ರಾಜ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಎನ್‌ಐಎ ಎಂಟ್ರಿಯಾಗಿ ಒಟ್ಟು 20 ಆರೋಪಿಗಳನ್ನು ಬಂಧಿಸಿತ್ತು. ಬಂಧನ ಮಾಡಿ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿತ್ತು. ಇದರಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್ ಜೀವಾವಧಿ …
Read More »ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವು
ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42), ಪತ್ನಿ ರಾಜಶ್ರೀ ಮುಗೋಳಖೋಡ (36) ಮೃತ ದುರ್ದೈವಿಗಳು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೂಡಲಗಿ ಪೊಲೀಸ್ …
Read More »ಮನೆ ಮನೆಗೆ ಹೋಗದೆ ಒಂದೇ ಕಡೆ ಕುಳಿತು SIR ಪ್ರಕ್ರಿಯೆ; BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಚಿಕ್ಕೋಡಿ: ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ. ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆ ಮನೆಗೆ ತೆರಳದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸರ್ಕಾರದ ನಿಯಮದಂತೆ ಮಾಹಿತಿ ಸಂಗ್ರಹಿಸದೆ, ಫೋನ್ ಕರೆ ಮೂಲಕ ಮಾಹಿತಿ ಪಡೆದು ಫಾರ್ಮ್ ಭರ್ತಿ ಮಾಡಲಾಗುತ್ತಿದೆ …
Read More »ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಜೀವ ಉಳಿಸಿಕೊಳ್ಳಲು ವಾರ್ಡ್‌ನಿಂದ ಓಡಿದ ರೋಗಿಗಳು
ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸುತ್ತಿದ್ದಂತೆ ಜೀವ ಉಳಿಸಿಕೊಳ್ಳಲು ರೋಗಿಗಳು ಆಸ್ಪತ್ರೆಯಿಂದ ಹೊರಗೆ ಓಡಿಬಂದಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೊಗೆ ಕಾಣಿಸುತ್ತಿದ್ದಂತೆಯೇ ಆಸ್ಪತ್ರೆ ಸಿಬ್ಬಂದಿ ಕೆಳ ಮಹಡಿಯಲ್ಲಿದ್ದ ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. …
Read More »ಕಸ ವಿಲೇವಾರಿ ವಾಹನಗಳ ಮಧ್ಯೆ ಅಪಘಾತ – ಪೌರ ಕಾರ್ಮಿಕ ಸಾವು
ಕೋಲಾರ: ಕಸ ವಿಲೇವಾರಿ ಕಾರ್ಯ ನಡೆಸುತ್ತಿದ್ದ ವೇಳೆ ಪುರಸಭೆಯ ಕಸ ವಿಲೇವಾರಿ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಪೌರಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಮಹಿಳಾ ಪೌರಕಾರ್ಮಿಕರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಇಂದಿರಾನಗರದಲ್ಲಿ ಅಪಘಾತದಲ್ಲಿ ಪೌರ ಕಾರ್ಮಿಕರಾದ ಸಂಪತ್ (35) ಹಾಗೂ ಭೂಲಕ್ಷ್ಮಿ ಗಾಯಗೊಂಡಿದ್ದು, ಇಬ್ಬರನ್ನೂ ತಕ್ಷಣ ಶ್ರೀನಿವಾಸಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಸಂಪತ್ ಅವರ ಸ್ಥಿತಿ ಗಂಭೀರವಾಗಿದ್ದ …
Read More »ಜಿಬಿಎ ಚುನಾವಣೆ ಮುಂದೂಡಿಕೆ ಅರ್ಜಿ – ಜು.17ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ
ನವದೆಹಲಿ: ಜಿಬಿಎ ಚುನಾವಣೆ ನಡೆಸಲು ಡಿ.31ರವರೆಗೆ ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ಜಿಬಿಎ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅರ್ಜಿಯನ್ನು ಉಲ್ಲೇಖಿಸಿ, ಜುಲೈ 17ರಂದು ನಿಗದಿಯಾಗಿರುವ ವಿಚಾರಣೆಯನ್ನು ಪಟ್ಟಿಯಿಂದ ಕೈಬಿಡದಂತೆ ಮನವಿ ಮಾಡಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ …
Read More »ಆಸ್ತಿ ತೆರಿಗೆ ಹೆಚ್ಚಿಸಲ್ಲ: ಕೃಷ್ಣ ಬೈರೇಗೌಡ
ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಗುಡ್‌ನ್ಯೂಸ್ ನೀಡಿದ್ದು, ಆಸ್ತಿ ತೆರಿಗೆ ಹೆಚ್ಚಿಸಲ್ಲ ಎಂದಿದ್ದಾರೆ. ಜಿಬಿಎ ಅಧಿಕಾರಿಗಳೊಂದಿಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಆಸ್ತಿ ತೆರಿಗೆ ಹೆಚ್ಚಳ ಮಾಡಲ್ಲ. ಬೆಂಗಳೂರಿನಲ್ಲಿ ಒಟ್ಟು 36 ಲಕ್ಷ ಆಸ್ತಿದಾರರು ಇದ್ದು, ಅದರಲ್ಲಿ 16 ಲಕ್ಷ ಆಸ್ತಿದಾರರು ತೆರಿಗೆ ಕಟ್ಟುತ್ತಿದ್ದಾರೆ. ಉಳಿದ ಅರ್ಧದಷ್ಟು ಮಂದಿ ಆಸ್ತಿ ತೆರಿಗೆ ಕಟ್ಟುತ್ತಿಲ್ಲ. ಹೀಗಾಗಿ ತೆರಿಗೆ ಕಟ್ಟದೇ ಸರ್ಕಾರಕ್ಕೆ ವಂಚಿಸುತ್ತಿರುವ 16 ಲಕ್ಷ …
Read More »ಜಮೀರ್ ಅಹ್ಮದ್ ಆಸ್ತಿ ಪ್ರಕರಣ – ರಾಜ್ಯಪಾಲರ ನಿರ್ಧಾರ ಕಾದು ನೋಡಬೇಕು: ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ
ರಾಯಚೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಪ್ರಕರಣದ ದೂರು ನಮ್ಮಲ್ಲಿ ದಾಖಲಾಗಿದೆ. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೇಳಬೇಕಾಗಿದೆ. ಅನುಮತಿ ಕೇಳಿದ್ದೇವೆ. ರಾಜ್ಯಪಾಲರ ನಿರ್ಧಾರ ಏನು ಎಂದು ಕಾದು ನೋಡೋಣ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ದೂರು ದಾಖಲಾಗಿದ್ದು, ತನಿಖೆ ಆಗಿದೆ. ಚಾರ್ಜ್ಶೀಟ್ ಸಲ್ಲಿಸಲು ಲೋಕಾಯುಕ್ತ ಪೊಲೀಸರು ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದೇವೆ. …
Read More »ಸಚಿವ ಸಂಪುಟ ವಿಸ್ತರಣೆ; ಜುಲೈ 19ಕ್ಕೆ ದೆಹಲಿಯಲ್ಲಿ ಹೈಕಮಾಂಡ್ ಸಭೆ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಯಾವಗ ಎನ್ನುವ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಿದೆ. ಆಷಾಢದಲ್ಲಿ ಸಂಪುಟ ವಿಸ್ತರಣೆಗೆ ನಿರ್ಧರಿಸಿರುವ ಹೈಕಮಾಂಡ್ ಜುಲೈ 19 ರಂದು ರಾಜ್ಯ ನಾಯಕರಿಗೆ ಬುಲಾವ್ ನೀಡುವ ಸಾಧ್ಯತೆ ಇದೆ. ಈ ಬಾರಿಯ ಸಂಪುಟದಲ್ಲಿ ಹೈಕಮಾಂಡ್ ಟ್ವಿಸ್ಟ್‌ವೊಂದು ಕೊಡುವ ಸಾಧ್ಯತೆಯೂ ಇದೆ. ರಾಜ್ಯ ಕಾಂಗ್ರೆಸ್ ಶಾಸಕರು ಕುತೂಹಲದಿಂದ ಎದುರು ನೋಡುತ್ತಿರುವ ಆ ದಿನ ಕಡೆಗೂ ಬಂದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಈ …
Read More »ಬೆಳಗಾವಿಯ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್
ಬೆಳಗಾವಿ: ನಗರದ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್ ನಡೆದಿದ್ದು, ವ್ಯಕ್ತಿ ಕೂದಲೆಳೆ ಅಂತರದಿಂದ ಪಾರಾಗಿದ್ದಾನೆ. ನಗರದ ಜಿಮಖಾನ್ ಕ್ಲಬ್‌ನಲ್ಲಿ ಫೈರಿಂಗ್ ಮಾಡಿ ವ್ಯಕ್ತಿಯ ಹತ್ಯೆಗೆ ಯತ್ನ ನಡೆದಿತ್ತು. ಸುರೇಶ್ ಜಾಲಗಾರ ಎಂಬಾತನ ತಲೆಗೆ ಗನ್‌ನಿಂದ ಕುಕ್ಕಿ ದುಷ್ಕರ್ಮಿಗಳು ಬಳಿಕ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ಮುನ್ನವೇ ತಳ್ಳಿ ಸುರೇಶ್ ಎಸ್ಕೇಪ್ ಆಗಿದ್ದಾರೆ. ಸುರೇಶ್ ಪರಾರಿಯಾದ ಬಳಿಕ ಹೊರ ಬಂದು ಮತ್ತೆ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಐದು …
Read More »
Laxmi News 24×7