ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಕೊಠಡಿಯಲ್ಲಿ ವರದಿ ಸ್ವೀಕರಿಸಿದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್, ಆಯೋಗದ ಸದಸ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಸಿಎಂಗೆ ವರದಿ ಸಲ್ಲಿಸಿದರು. ವರದಿಯಲ್ಲಿ ಜನಸಂಖ್ಯೆ ಉಲ್ಲೇಖ ಮುಸ್ಲಿಂ ಶೇ.14 – 75 ರಿಂದ 80 ಲಕ್ಷ ವೀರಶೈವ ಲಿಂಗಾಯತ ಶೇ.11- …
Read More »ಮದುವೆ ಆಗ್ತೀನಿ ಅಂತ ನಂಬಿಸಿ ಯುವತಿಗೆ ವಂಚನೆ ಆರೋಪ – ಎಫ್‌ಐಆರ್ ಆದ್ರೂ ಪೊಲೀಸರು ಸೈಲೆಂಟ್
ದಾವಣಗೆರೆ: ಪ್ರೀತಿ ಪ್ರೇಮದ ಹೆಸರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಯುವಕನೊಬ್ಬ ವಂಚಿಸಿದ ಪ್ರಕರಣ ಹರಿಹರದಲ್ಲಿ ನಡೆದಿದೆ. ಮಲೆಬೆನ್ನೂರು ಮೂಲದ ಮುಷ್ರಫ್ ಖಾನ್ ಎಂಬಾತನ ವಿರುದ್ಧ ದಾವಣಗೆರೆಯ ಯುವತಿ ವಂಚನೆ ಆರೋಪ ಮಾಡಿದ್ದಾಳೆ. ಮುಷ್ರಫ್ ಮದುವೆ ಆಗುವುದಾಗಿ ಮುಚ್ಚಳಿಕೆ ಬರೆದುಕೊಟ್ಟು ಈಗ ನಾಪತ್ತೆಯಾಗಿದ್ದಾನೆ. ಅಲ್ಲದೇ ಪ್ರಭಾವಿ ನಾಯಕರ ಸಂಬಂಧಿ ಎಂದು ಬೆದರಿಕೆ ಹಾಕುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆ ಆಗಲು 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನ್ಯಾಯಕ್ಕಾಗಿ ಯುವತಿ ಹೋರಾಟ ಮಾಡುತ್ತಿದ್ದಾಳೆ. …
Read More »ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯ ಪ್ರತಿಯೊಬ್ಬ ಕನ್ನಡಿಗನಿಗೆ ಅರ್ಪಣೆ: ಸಿದ್ದರಾಮಯ್ಯ
ಬೆಂಗಳೂರು: ಪದತ್ಯಾಗದ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ 3 ವರ್ಷದ ಸಾಧನೆಯನ್ನು ಮೆಲುಕು ಹಾಕಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ …
Read More »ಪವರ್ ಶೇರಿಂಗ್ ಆ ರೀತಿ ಏನೂ ಇಲ್ಲ, ಸಿದ್ದರಾಮಯ್ಯರಿಗೆ ಅವರದ್ದೇ ವರ್ಚಸ್ಸಿದೆ: ಸುರ್ಜೇವಾಲ
ಬೆಂಗಳೂರು: ಪವರ್ ಶೇರಿಂಗ್ ಆ ರೀತಿಯದ್ದು ಏನೂ ಇಲ್ಲ. ಸಿದ್ದರಾಮಯ್ಯ ಅವರಿಗೆ ಅವರದ್ದೇ ಆದ ವರ್ಚಸ್ಸು ಇದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ಎಲ್ಲೂ ಕೂಡ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಗುಟ್ಟನ್ನು ಸುರ್ಜೇವಾಲ ಬಿಟ್ಟುಕೊಟ್ಟಿಲ್ಲ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ನಿನ್ನೆ ಸಭೆ ನಡೆಸಲಾಗಿತ್ತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಭಾಗಿಯಾಗಿದ್ರು. ರಾಜ್ಯಸಭಾ ಮತ್ತು ವಿಧಾನ ಪರಿಷತ್ …
Read More »ನಾವು ಕಳವಳ ವ್ಯಕ್ತಪಡಿಸಿದೆವು, ಸಿಎಂ ಸಿದ್ದರಾಮಯ್ಯ ಸೈಲೆಂಟ್ ಆಗಿದ್ರು: ಹೆಚ್.ಕೆ.ಪಾಟೀಲ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಕೇಳಿ ಆಪ್ತ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ವಿಚಾರವಾಗಿ ಕೇಳಿದರೆ ಸಿದ್ದರಾಮಯ್ಯ ಅವರು ಮೌನ ವಹಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಸಿಎಂ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಡಿ.ಪಾಟೀಲ್ , ಮಾಧ್ಯಮಗಳಲ್ಲಿ ಸುದ್ದಿ ಬಂದಿದೆ ಎಂದು ನಾನು ನಮ್ಮ ಕಳವಳ ವ್ಯಕ್ತಪಡಿಸಿದ್ದೇವೆ. ಆದರೆ, ಸಿಎಂ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು ಎಂದು ತಿಳಿಸಿದ್ದಾರೆ. ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಹೈಕಮಾಂಡ್ ಹೇಳಿದಂತೆ …
Read More »ಗೋಕಾಕ:ಮದುವೆಯಾದ 18 ದಿನಗಳಲ್ಲೇ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ
ಶಿವಮೊಗ್ಗ : ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯ ಕಾನ್ಸ್‌ಟೇಬಲ್ ಈರಣ್ಣ ಗುಡಾದಾರ್ (26) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಈರಣ್ಣ ಗುಡಾದಾರ್ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್‌ಆರ್‌ಪಿ 8ನೇ ಪಡೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಕರ್ತವ್ಯದ ಅವಧಿಯಲ್ಲೇ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತ ಸಂಭವಿಸಿದೆ. ಇದನ್ನು ಗಮನಿಸಿದ ಸಹೋದ್ಯೋಗಿಗಳು …
Read More »ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಬೆಂಗಳೂರು: ಸಿದ್ದರಾಮಯ್ಯ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವುದು ಅಧಿಕೃತವಾಗಿದ್ದರೂ ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಳೆ ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬ್ರೇಕ್‌ಫಾಸ್ಟ್ ಸಭೆಯ ಬಳಿಕ …
Read More »ಏನೇ ಇದ್ದರೂ ನಾಳೆ ಮಾತನಾಡುತ್ತೇನೆ – 1 ಸಾಲಿನ ಉತ್ತರ ನೀಡಿ ತೆರಳಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಹೈಕಮಾಂಡ್ ನಿರ್ಧಾರಗಳ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಪ್ರಶ್ನೆಗಳಿಗೆ ನಾಳೆ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ. ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದರು. ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ನೆಹರು ಅವರು ದೇಶಕ್ಕೆ …
Read More »ಬೆಳಗಾವಿ: ಹೋಟೆಲ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರ ಮೇಲೆ ಗ್ರಾಮೀಣ ಪೊಲೀಸರ ಭರ್ಜರಿ ದಾಳಿ; ಪ್ರಕರಣ ದಾಖಲು!
ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಾವಗಾಂವ್ ರಸ್ತೆಯ ಹೊಟೇಲ್ ಒಂದರ ಮೇಲೆ ಪಿಎಸ್‌ಐ ನೇತೃತ್ವದ ತಂಡ ಸಿನೆಮಾ ಶೈಲಿಯಲ್ಲಿ ದಾಳಿ ನಡೆಸಿ, ಆರೋಪಿಗಳ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಬೆಳಗಾವಿಯ ಸಾವಗಾಂವ್ ಅಂಗಡಿ ಕಾಲೇಜ್ ಹತ್ತಿರವಿರುವ ಸನ್‌ಫ್ಲಾವರ್ ಹೋಟೆಲ್‌ನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮದ್ಯ ಸೇವನೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆಯ ಪಿಎಸ್‌ಐ …
Read More »4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಕೆ
ಬೆಳಗಾವಿ: 4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಸಲಾಗಿದೆ ಎಂದು ಅವರ ಪರ ವಕೀಲ ಆರ್.ಪಿ. ಪಾಟೀಲ್ ತಿಳಿಸಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮೀನು ಅರ್ಜಿ ವಿಚಾರಣೆ ಜೂನ್ 1ರಂದು ನಡೆಯಲಿದ್ದು, ನ್ಯಾಯಾಲಯವು ನೀಲಣ್ಣವರ್ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಹೇಳಿದರು. ಇಲ್ಲಿಯವರೆಗೆ ನೀಲಣ್ಣವರ್ ವಿರುದ್ಧ ಯಾರೂ ನೇರವಾಗಿ ದೂರು ನೀಡಿಲ್ಲ. ಕಾಗವಾಡದಲ್ಲಿ ಒಬ್ಬರು …
Read More »
Laxmi News 24×7