ನವದೆಹಲಿ: ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತುಕತೆ ನಡೆಸಿದರು. ಗುರುವಾರ ಮಧ್ಯಾಹ್ನ ಸಂಸತ್ ಭವನದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ರೈಲ್ವೆ ಸಚಿವರ ಜೊತೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರು ಮುಖ್ಯವಾಗಿ ಬೆಂಗಳೂರು ನಗರದಿಂದ ಮೈಸೂರು ನಡುವೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಾರ್ವಜನಿಕರ …
Read More »2ನೇ ಬಾರಿಗೆ ಚಾಂಪಿಯನ್ ಕಿರೀಟ; RCB ಹ್ಯಾಟ್ರಿಕ್ ಸಾಧನೆ!
ವಡೋದರಾ: ಇಂಡಿಯನ್ ಪ್ರೀಮಿಯರ್‌ಲೀಗ್‌ನಲ್ಲಿ 17 ವರ್ಷಗಳ ಕಾಲ ಟ್ರೋಫಿಗಾಗಿ ಸೆಣಸಾಡಿದ್ದ ಆರ್‌ಸಿಬಿ ಪುರುಷರ ತಂಡ ಕಳೆದ ವರ್ಷ ತನ್ನ 18ನೇ ಆವೃತ್ತಿಯಲ್ಲಿ ಟ್ರೋಫಿಗೆ ಮುತ್ತಿಟ್ಟಿತ್ತು. ಅದರ ಹಿಂದಿನ ವರ್ಷವೇ ಆರ್‌ಸಿಬಿ ಮಹಿಳಾ ತಂಡ ತನ್ನ 2ನೇ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಮಾದರಿಯಾಗಿತ್ತು. ಇದೀಗ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿರುವ ಬೆಂಗಳೂರು ಮಹಿಳಾ ತಂಡ ಹೆಣ್ಮಕ್ಕಳೇ ಸ್ಟ್ರಾಂಗು ಗುರು ಅನ್ನೋ ಮಾತನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಈ ಮೂಲಕ ಆರ್‌ಸಿಬಿ ಫ್ರಾಂಚೈಸಿ …
Read More »ಖಾಸಗಿ ಆಸ್ಪತ್ರೆ ಮುಂದೆ ಕಸ ಸುರಿದು ಬಿಸಿ ಮುಟ್ಟಿಸಿದ ಬಳ್ಳಾರಿ ಪಾಲಿಕೆ ಸಿಬ್ಬಂದಿ
ಬಳ್ಳಾರಿ: ಖಾಸಗಿ ಅಸ್ಪತ್ರೆಯವರಿಗೆ ಬುದ್ದಿ ಕಲಿಸಲು ಮಹಾನಗರ ಬಳ್ಳಾರಿ ಪಾಲಿಕೆ ಸಿಬ್ಬಂದಿ ಕಸವನ್ನು ತಂದು ಅಸ್ಪತ್ರೆ ಮುಂದೆ ಸುರಿದು ಬಿಸಿ ಮುಟ್ಟಿಸಿದ್ದಾರೆ. ಬಳ್ಳಾರಿಯ ಪಾರ್ವತಿ ನಗರದ ಪದ್ಮಾವತಿ ಕಿಡ್ನಿಕೇರ್ ಸೆಂಟರ್ ಮತ್ತು ಮೋಕಾ ರಸ್ತೆಯ ದ್ವಾರಕಾ ಆಸ್ಪತ್ರೆ ಮುಂದೆ ಪಾಲಿಕೆ ಸಿಬ್ಬಂದಿ ವಾಹನದಲ್ಲಿ ಕಸ ತಂದು ಸುರಿದಿದ್ದಾರೆ. ಪದ್ಮಾವತಿ ಕಿಡ್ನಿಕೇರ್ ಆಸ್ಪತ್ರೆ ಮತ್ತು ದ್ವಾರಕ ಅಸ್ಪತ್ರೆ ಸಿಬ್ಬಂದಿ ಮೆಡಿಕಲ್ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಕುತ್ತಿದ್ದರು. ಈ ಎರಡು ಅಸ್ಪತ್ರೆಗೆ ಪಾಲಿಕೆ ನೋಟಿಸ್ …
Read More »ಮುಸ್ಲಿಂ ಮಹಿಳೆ ಜೊತೆ ಇದ್ದಿದ್ದಕ್ಕೆ ಹಿಂದೂ ಯುವಕನಿಗೆ ಥಳಿತ
ಕೊಪ್ಪಳ: ಮುಸ್ಲಿಂ ಮಹಿಳೆ ಜೊತೆ ಹಿಂದೂ ಯುವಕನನ್ನು ನೋಡಿದ ಮುಸ್ಲಿಂ ಯುವಕರು ಹಿಂದೂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ವೆಂಕಟೇಶ್ ಎನ್ನುವ ಯುವಕನ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿದೆ. ಬಸಾಪಟ್ಟಣ ಗ್ರಾಮದ ಅಜ್ಮೀರ್, ಆಫೀಯಾ ದಂಪತಿ ಜಗಳ ಮಾಡುತ್ತಿದ್ದರು. ಈ ವೇಳೆ ಪಕ್ಕದ ಮನೆಯಲ್ಲಿ ವಾಸವಿದ್ದ ವೆಂಕಟೇಶ್ ಇಬ್ಬರ ಜಗಳ ಬಿಡಿಸಲು ಹೋಗಿದ್ದಾರೆ. ಗಂಡನ ಜೊತೆ ಜಗಳವಾಡಿ …
Read More »ತತ್ವ ಶ್ರೀಮಂತಿಕೆ ವೀರಶೈವ ಸಮಾಜದ ಶಕ್ತಿ : ಅನ್ನದಾನೀಶ್ವರ ಮಹಾಸ್ವಾಮಿಗಳು
ಬಾಗಲಕೋಟೆ: ವೀರಶೈವ-ಲಿಂಗಾಯತ ಎರಡು ಒಂದೆಯಾಗಿದ್ದು ತತ್ವ ಶ್ರೀಮಂತಿಕೆ ವೀರಶೈವ ಸಮಾಜದ ಶಕ್ತಿಯಾಗಿದೆ,ಲಿಂಗದ ಪ್ರಾಣವೇ ಜಂಗಮರು ಎಂದು ಸಾರುವ ಮೂಲಕ ಎಲ್ಲರನ್ನು ಏಕತೆಯಿಂದ ನೋಡುವ ಏಕೈಕ ಧರ್ಮವಾಗಿದೆ ಎಂದು ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನಮಠದ ಮನ್ನಿರಂಜನ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಸಮಾರಂಭ ನಿಮಿತ್ಯ ಚರಂತಿಮಠದ ಶಿವಾನುಭವ ಮಂಟಪದಲ್ಲಿ ಗುರುವಾರ ನಡೆದ ಕಾರಣಿಕ ಯುಗಪುರುಷ ಲಿಂ.ಹಾನಗಲ್ಲ ಶ್ರೀ ಕುಮಾರ ಮಹಾಸ್ವಾಮಿಗಳವರ 159 ನೆಯ …
Read More »ಬೆಳಗಾವಿ : ಪತ್ರಕರ್ತರ ಸೋಗಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲ್ಯಾಕ್ ಮೇಲ್ ; ಮೂವರ ಹೆಡೆಮುರಿ ಕಟ್ಟಿದ ಪೊಲೀಸ್…!
ಬೆಳಗಾವಿ : ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳ ವೀಡಿಯೋ ಮಾಡಿಕೊಂಡು ಸಮಾಜಿಕ ಜಾಲತಾಣ ಸೇರಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡುವುದಾಗಿ ಹೆದರಿಸಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದ್ದು ಈ ಕುರಿತು ಮೂವರು ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸರಕಾರಿ ಮಹಿಳಾ ಅಧಿಕಾರಿಯ ಮನೆಯ ಕೊಠಡಿಯಲ್ಲಿ ಹಿಡನ್ ಕ್ಯಾಮರಾ ಬಳಸಿ ಬ್ಲ್ಯಾಕ್ ಮೇಲೆ ಮಾಡಿದ್ದ ಮೂವರು ಪತ್ರಕರ್ತರ ಸೋಗಿನಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. …
Read More »ಬೆಳಗಾವಿ:ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಹತ್ಯೆ
ಬೆಳಗಾವಿ : ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನನ್ನು ಥಳಿಸಿರುವುದರಿಂದ ಗಂಭೀರವಾಗಿ ಗಾಯಗೊಂಡ ಅಂಗಡಿ ಮಾಲೀಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೊಡಕೆನಟ್ಟಿ ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಿಕ (48) ಕೊಲೆಯಾದ ವ್ಯಕ್ತಿ. ಕಡೋಲಿ ಗ್ರಾಮದ ಪ್ರಜ್ವಲ್ ರಾಮಚಂದ್ರ ಪಾಟೀಲ್ (22) ನಿಖಿಲ್ ಮಹೇಶ್ ಚೌಗಲೆ (22) ವಿವೇಕ್ ರಾಜೇಂದ್ರ ಚೌಗುಲೆ (22) ಮತ್ತು ಶ್ರೀಧರ್ ರತನ ಪಾಟಿಲ್ (21) ಹಲ್ಲೆ ಮಾಡಿದ ಆರೋಪಿಗಳು. …
Read More »ತಾಯಿ ಜೊತೆ ಅಕ್ರಮ ಸಂಭಂಧ… ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ
ತಾಯಿ ಜೊತೆ ಅನೈತಿಕ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಬರೋಬ್ಬರಿ 16 ಬಾರಿ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದಾನೆ. ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ.ನಿನ್ನೆ ಸಂಜೆ ರಸ್ತೆ ಮಧ್ಯೆ ಬರುತ್ತಿದ್ದ ಬಸಪ್ಪ ಹೊಸಮನಿಯನ್ನ …
Read More »ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡಿ : ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ
ಬೆಂಗಳೂರು:ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,674 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ …
Read More »ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್ 6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದಕ್ಕೆ ಪೂರ್ವ ಭಾವಿಯಾಗಿ ಇಂದಿನಿಂದ ಬಜೆಟ್ ತಯಾರಿಕೆಗೆ ಚಾಲನೆ ನೀಡಿದ್ದಾರೆ. ಅರಣ್ಯ-ಪರಿಸರ-ಜೀವಿ ಶಾಸ್ತ್ರ, ಕಾನೂನು-ನ್ಯಾಯ-ಮಾನವ ಹಕ್ಕುಗಳು-ಸಂಸದೀಯ ವ್ಯವಹಾರಗಳು-ಶಾಸನ ರಚನೆ-ಪ್ರವಾಸೋದ್ಯಮ, ತೋಟಗಾರಿಕೆ-ಗಣಿ-ಭೂ ವಿಜ್ಞಾನ, ಕಾರ್ಮಿಕ, ಒಳಾಡಳಿತ, ಕನ್ನಡ-ಸಂಸ್ಕೃತಿ-ಹಿಂದುಳಿದ ವರ್ಗಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಜೊತೆ …
Read More »
Laxmi News 24×7