ಮಂಗಳೂರು: ಜನರಿಗೆ, ಶಾಸಕರಿಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತೆ. ಅವರವರ ಅಭಿಮಾನಿಗಳು ಏನ್ ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ ಎಂದು ತಿಳಿಸಿದರು. ಬಜೆಟ್ ಬಳಿಕ ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಪ್ರತಿಕ್ರಿಯಿಸಿದರು. ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ …
Read More »ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು
ಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ ದಂಡೇ ಹರಿದು ಬರಲಿದೆ. ಭಕ್ತರ ಸುರಕ್ಷತೆಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಜ್ಜಾಗಿದೆ. ಕಾರಣ ಮಲೆಹದೇಶ್ವರ ಬೆಟ್ಟದ ಸುತ್ತಮುತ್ತ ಚಿರತೆ ಆತಂಕ ಮನೆ ಮಾಡಿದೆ. ಚಿರತೆ ಆತಂಕ ಮಧ್ಯೆ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ. ಇಂದಿನಿಂದ 20ರವರೆಗೆ ನಡೆಯಲಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ …
Read More »ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ
ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ 5,000 ವರ್ಷಗಳಷ್ಟು ಹಳೆಯದಾದ ಮಾನವನ ಪಳೆಯುಳಿಕೆ ಪತ್ತೆಯಾಗಿದೆ. ಸುಮಾರು 3,000 ವರ್ಷದಿಂದ 5,000 ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ ಇದಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ ಎಸ್ ಸುಗಂಧಿ ಅವರಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ವಾರದ ಹಿಂದೆ ಉತ್ಪನನದ ವೇಳೆ ಮಾನವನ ಮೂಳೆಯೊಂದು ಸಿಕ್ಕಿತ್ತು. ಮಣ್ಣನ್ನು …
Read More »ಬೆಕ್ಕಿನಕೆರೆಯಲ್ಲಿ 66 ವರ್ಷಗಳ ಬಳಿಕ ಇತಿಹಾಸ: ಮಹಾಲಕ್ಷ್ಮೀ ಜಾತ್ರಾ ಮಹೋತ್ಸವಕ್ಕೆ ಹರಿದುಬಂದ ಭಕ್ತ ಸಾಗರ!
“ಬರೋಬ್ಬರಿ ಆರು ದಶಕಗಳ ಸುದೀರ್ಘ ಕಾಯುವಿಕೆಗೆ ಇಂದು ತೆರೆ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಬೆಕ್ಕಿನಕೆರೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿಯ ಐತಿಹಾಸಿಕ ಜಾತ್ರೆ ಭಕ್ತಿ-ಭಾವದೊಂದಿಗೆ ಜರುಗುತ್ತಿದೆ. ಅಜ್ಜಂದಿರ ಕಾಲದ ಸಂಕಲ್ಪವನ್ನು ಮೊಮ್ಮಕ್ಕಳ ಪೀಳಿಗೆ ಈಡೇರಿಸುತ್ತಿದ್ದು, ಮೂರನೇ ದಿನವಾದ ಇಂದು ದೇವಿಯ ದರ್ಶನಕ್ಕೆ ಭಕ್ತ ಸಮೂಹವೇ ಲಗ್ಗೆ ಇಟ್ಟಿದೆ.” ಬೆಳಗಾವಿ ನಗರದ ಸಮೀಪವಿರುವ ಬೆಕ್ಕಿನಕೆರೆ ಗ್ರಾಮದಲ್ಲಿ ಸದ್ಯ ಸಂಭ್ರಮ ಮುಗಿಲು ಮುಟ್ಟಿದೆ. ಬರೋಬ್ಬರಿ 66 ವರ್ಷಗಳ ಬಳಿಕ ನಡೆಯುತ್ತಿರುವ ಶ್ರೀ ಮಹಾಲಕ್ಷ್ಮೀ …
Read More »ಭವ್ಯ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ: ರೈತ ಮುಖಂಡ ಶಶಿಕಾಂತ್ ಗುರೂಜಿ
ಕಾಗವಾಡ:”ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬಿನ ದರಕ್ಕಾಗಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ಹಳಿಂಗಳಿಯ ಜೈನಮಠದ ಪರಮಪೂಜ್ಯ ಕುಲಭೂಷಣ ಮುನಿ ಮಹಾರಾಜರ ಆಶೀರ್ವಾದವೇ ಶ್ರೀರಕ್ಷೆಯಾಯಿತು. ನಾನು ಅವರ ಆಶೀರ್ವಾದ ಪಡೆಯಲು ಹೋದಾಗ, ‘ನಿನ್ನಿಂದ ನಾಡಿನ ಸೇವೆಯಾಗಲಿದೆ’ ಎಂದು ಅವರು ಹರಸಿದ್ದರು. ಅದರ ಫಲಶೃತಿಯಾಗಿಯೇ ಇಂದು ರೈತರ ಹೋರಾಟ ಯಶಸ್ವಿಯಾಗಿದೆ,” ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ್ ಗುರೂಜಿ ಹೇಳಿದರು. ಶೇಡಬಾಳದ ಆಚಾರ್ಯ ಶಾಂತಿಸಾಗರ ಜೈನ ಆಶ್ರಮದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಶಾಂತಿಸಾಗರ ಪ್ರಾಥಮಿಕ, …
Read More »ಬಾಗಲಕೋಟೆಯಲ್ಲಿ ಖಾಕಿ ಇಲಾಖೆಗೆ ಸರ್ಜರಿ: ಬನಹಟ್ಟಿ ಸಿಪಿಐ ಹೆಚ್.ಆರ್. ಪಾಟೀಲ್ ಅಮಾನತ್ತು
ಬಾಗಲಕೋಟೆ: ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದೆ. ಕರ್ತವ್ಯ ಲೋಪದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಬನಹಟ್ಟಿ ಸಿಪಿಐ ಅವರನ್ನು ಅಮಾನತ್ತುಗೊಳಿಸಿ ಉತ್ತರ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ. ಇಲಾಖೆಯ ಒಳಗಿನ ಈ ಹಠಾತ್ ಕ್ರಮ ಈಗ ಜಿಲ್ಲೆಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.” ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪೊಲೀಸ್ ಠಾಣೆಯ ಸಿಪಿಐ ಹೆಚ್.ಆರ್. ಪಾಟೀಲ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಐಜಿಪಿ ಆದೇಶಿಸಿದ್ದಾರೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಶಿಸ್ತು ಉಲ್ಲಂಘನೆಯ …
Read More »ಧರ್ಮವೆಂದರೆ ಮೀಸಲಾತಿ ಹೋರಾಟವಲ್ಲ : ಬಸವಲಿಂಗಮಹಾಸ್ವಾಮಿಗಳು
ಬಾಗಲಕೋಟೆ: ಧರ್ಮ ಎಂದರೆ ಮೀಸಲಾತಿ ಹೋರಾಟಗಳಲ್ಲ ಅದೊಂದು ಸಾಮಾಜಮುಖಿ ಚಿಂತನೆಯ ನಡೆಯಾಗಿದ್ದು ಇತ್ತೀಚೆಗೆ ಧರ್ಮದ ಮೂಲ ಪರಿಕಲ್ಪನೆಯ ಅರಿವು ಕಡಿಮೆಯಾಗುತ್ತಿದೆ ಎಂದು ಕೊಟ್ಟೂರೇಶ್ವರ.ಹೊಸಪೇಟೆ-ಅನ್ನದಾನೀಶ್ವರ ಸಂಸ್ಥಾನಮಠದ ಹಾಲಕೆರೆಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವ ನಿಮಿತ್ಯ ಚರಂತಿಮಠದ ಆವರಣದಲ್ಲಿ ಶನಿವಾರ ನಡೆದ ಸಮಾಜ ಚಿಂತನ ಸಮಾರಂಭದ ದಿವ್ಯ ಸಾನಿದ್ಯವನ್ನು ವಹಿಸಿ ಹಾನಗಲ್ ಶ್ರೀಕುಮಾರ ಶಿವಯೋಗಿಗಳ ಭಾವ ಚಿತ್ರಕ್ಕೆ ಪುಷ್ಪಾಂಜಲಿ ಮೂಲಕ ಗೌರವ ನಮನಗಳನ್ನು …
Read More »ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್.ವಿಶ್ವನಾಥ್
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರೋದು ರಾಜ್ಯ ಸರ್ಕಾರ. ಸುಮ್ಮನೆ ಕೇಂದ್ರದ ಮೇಲೆ ಆರೋಪ ಮಾಡೋದು ಬಿಟ್ಟು ದರ ಕಡಿಮೆ ಮಾಡಬೇಕು ಅಂತ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರ ಕಾರಣ. ಈಗಾಗಲೇ ನಮ್ಮ ಸಂಸದರು ಇದರ ಬಗ್ಗೆ ಹೇಳಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಬೇಕು ಅಂತ ಆಗ್ರಹಿಸಿದರು. ಮೆಟ್ರೋ …
Read More »ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ
ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮೆಟ್ರೋ ದರ ಏರಿಕೆ ಕುರಿತು ಬಿಜೆಪಿ ಹೋರಾಟ ಮಾಡಲಿದೆ ಅಂತ ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ. ಮೆಟ್ರೋ ದರ ಏರಿಕೆ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖ. ಸುಳ್ಳು ಬೆಳಗ್ಗೆ ಪ್ರಾರಂಭ ಮಾಡಿ ಅಂತ್ಯ ಮಾಡೋದು ಸುಳ್ಳಿನಿಂದಲೇ ಅಂತ …
Read More »ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ – ಮಾಲೀಕ ವಶಕ್ಕೆ
ಬಳ್ಳಾರಿ: ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್‌ನಲ್ಲಿ ಸುಮಾರು …
Read More »
Laxmi News 24×7