Breaking News

Laxminews 24x7

ರಾಜ್ಯದ 8 ಮಂದಿ ಸೇರಿ 131 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ ಗೌರವ

ನವದೆಹಲಿ: ಕರ್ನಾಟಕದ 8 ಸಾಧಕರು ಸೇರಿ 2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 131 ಮಂದಿಗೆ ನಾಳೆ (ಮೇ 25) ರಾಷ್ಟ್ರಪತಿ ದ್ರೌದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೋಮವಾರ (ಮೇ 25) ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿಗಳು ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನ ಸಾಧಕರಿಗೆ ಪ್ರದಾನ ಮಾಡಲಿದ್ದಾರೆ. ಈ ವರ್ಷ ಒಟ್ಟು 131 ಸಾಧಕರು ಪದ್ಮ ಪ್ರಶಸ್ತಿ ಗೌರವಕ್ಕೆ …

Read More »

ಕ್ರಿಕೆಟ್ ಆಡುವಾಗಲೇ ಹೃದಯಾಘಾತ – ಮಾಜಿ ರಣಜಿ ಆಟಗಾರ ಎಸ್‌.ಎಲ್ ಅಕ್ಷಯ್ ನಿಧನ

ಬೆಂಗಳೂರು: ಕ್ರಿಕೆಟ್  ಪಂದ್ಯವಾಡುತ್ತಿದ್ದ ವೇಳೆ ಹೃದಯಾಘಾತದಿಂದ  ಕರ್ನಾಟಕದ ಮಾಜಿ ರಣಜಿ ಆಟಗಾರ  ಎಸ್‌. ಎಲ್‌ ಅಕ್ಷಯ್‌ ಸಾವನ್ನಪ್ಪಿದ್ದಾರೆ. ಶಿವಮೊಗ್ಗ  ಮೂಲದ ಅಕ್ಷಯ್ (39),  ಬೆಂಗಳೂರಿನ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯದ ವೇಳೆ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ರಣಜಿ ತಂಡದ ಪರ ಆಡಿದ್ದ ಅಕ್ಷಯ್, ತಮ್ಮ ಕರಾರುವಕ್ಕಾದ ಬೌಲಿಂಗ್ ಮೂಲಕ ಗಮನ ಸೆಳೆದಿದ್ದರು. ರಣಜಿ ಮಾತ್ರವಲ್ಲದೇ ಕೆಪಿಎಲ್ ಟೂರ್ನಿಗಳಲ್ಲೂ ಉತ್ತಮ ಪ್ರದರ್ಶನ ನೀಡಿ ಹೆಸರು ಮಾಡಿದ್ದರು. ಕರ್ನಾಟಕ ಪರ ಅವರು 6 …

Read More »

ಅಕ್ರಮ ದಾಸ್ತಾನು ಮಾಡಿದ್ದ 600 ಬ್ಯಾಗ್ ಯೂರಿಯಾ ರಸಗೊಬ್ಬರ ಜಪ್ತಿ

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದಲ್ಲಿರುವ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನ  ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ರಸಗೊಬ್ಬರದ  ಅಂದಾಜು ಮೌಲ್ಯ ಸುಮಾರು 14,40,000 ರೂ. ಎಂದು ಅಂದಾಜಿಸಲಾಗಿದೆ. ರೈತರಿಗೆ ವಿತರಿಸಬೇಕಾದ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಲು ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದರು. …

Read More »

ಪತಿಯ ಸ್ನೇಹಿತ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ!

ಶಿವಮೊಗ್ಗ: ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲರೊಬ್ಬರ ವಿರುದ್ಧ ಅತ್ಯಾಚಾರ ಮತ್ತು ಬ್ಲ್ಯಾಕ್‍ಮೇಲ್ ಆರೋಪ ಕೇಳಿಬಂದಿದ್ದು, ಸಂತ್ರಸ್ತೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಬಿಜೆಪಿ ಮುಖಂಡ, ವಕೀಲ ಭರತ್ ಬಿ.ಎಸ್. ಎಂಬುವವರ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಭರತ್, 23 ವರ್ಷದ ವಿವಾಹಿತ ಮಹಿಳೆಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ. ತಾನು ಆಕೆಯ ಪತಿಯ ಸ್ನೇಹಿತ …

Read More »

ಬ್ಯಾಂಕಿನಿಂದ ಪಿಂಚಣಿ ಪಡೆಯಲು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ಸಾಗಿದ ಮಹಿಳೆ

ಬ್ಯಾಂಕಿನಿಂದ ಪಿಂಚಣಿ ಪಡೆಯಲು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ಸಾಗಿದ ಮಹಿಳೆ ಅಂಬಿಕಾಪುರ: ಬ್ಯಾಂಕಿನಿಂದ ಪಿಂಚಣಿ ಪಡೆಯಲು ಮಹಿಳೆಯೊಬ್ಬರು 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು 9 ಕಿ.ಮೀ. ದೂರ ಸಾಗಿದ್ದಾರೆ. 90 ವರ್ಷದ ಅತ್ತೆಯ ಭಾರಕ್ಕೆ ಬಾಗಿ, ಸುಡುವ ಸೂರ್ಯನ ಕೆಳಗೆ ಕಾಡಿನ ಹಾದಿಗಳು, ಕಲ್ಲು ಬಂಡೆಗಳು ಮತ್ತು ಹೊಳೆಗಳ ಮೂಲಕ ಮಹಿಳೆಯೊಬ್ಬರು ನಡೆದಿದ್ದಾರೆ. ದೃಶ್ಯಗಳು ಹಳೆಯ ವಿಕ್ರಮ್-ಬೇತಾಲ್ ಕಥೆಗಳನ್ನು ನೆನಪಿಸುತ್ತವೆ. …

Read More »

ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ: ಮೃತಳ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದೊಯ್ದ ಕಳ್ಳರು

ಉಡುಪಿ: ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಕಳ್ಳರು ಮೃತ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ. ಮೇ 17ರಂದು ತಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕೊಲ್ಲೂರಿನ ದಳಿ ಎಂಬಲ್ಲಿ ಕೇರಳಂ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟ ಇನ್ಸುಲೇಟರ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಜ್ಯೋತಿ ಹಾಗೂ ಅರಿಯಾ ಅನೂಫ್ ​ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. …

Read More »

ಕಪ್ಪೆ ಚಿಪ್ಪಿಗಾಗಿ ಸಾಗರಕ್ಕಿಳಿದ 8 ಮಂದಿ ಸಾವು; 5 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಪ್ಪೆ ಚಿಪ್ಪುಗಳ ತರಲು ಸಮುದ್ರಕ್ಕೆ ಇಳಿದಿದ್ದ ಒಂದೇ ಕುಟುಂಬದ 08 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ತಟ್ಟೆಹಕ್ಕಲು ಕಡಲ ತೀರದಲ್ಲಿ ಜರುಗಿದೆ. ಸಾಗರ ಅಲೆಗೆ ಕೊಚ್ಚಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನುಳಿದವರಿಗಾಗಿ ಹುಟುಕಾಟ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಮುದ್ರ ಮಟ್ಟದಲ್ಲಿ ನಿರಂತರ ಬಿರುಗಾಳಿ, ಹವಾಮಾನ ಬದಲಾವಣೆಗಳು ಸಂಭವಿಸುತ್ತಿದ್ದು, …

Read More »

ಅಥಣಿ : ಈಜಲು ಹೋದ ಬಾಲಕ ನೀರುಪಾಲು, ಮುಂದುವರಿದ ಶೋಧಕಾರ್ಯ..!

ಅಥಣಿ : ಕಲ್ಲಿನ ‌ಕಣಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ಅಥಣಿ ಪಟ್ಟಣದ ಸುಣಗಾರ ಭಟಿ ಹತ್ತಿರ ಶನಿವಾರ ಮುಂಜಾನೆ ನಡೆದಿದೆ. ಸಮರ್ಥ ಅಮೃತ ಪನಾಳಕರ (16) ನೀರುಪಾಲಾದ ಬಾಲಕ. ಗಡದೆ ಎಂಬವರ ಒಡೆತನದ ಕಲ್ಲಿನ ಕಣಿಯಲ್ಲಿ ಸಂಗ್ರಹವಾಗಿದ್ದು ನೀರಿನ ಆಳವನ್ನು ಅರಿಯದೆ ಈಜಲು ಹೋದ ಸಮರ್ಥ ಕಾಲು ಜಾರಿ ನೀರಿಗೆ ಬಿದ್ದು ಅಲ್ಲಿಗೆ ಮುಳುಗಿದ್ದಾನೆ. ಇದನ್ನು ಕಂಡು ಇನ್ನಿಬ್ಬರು ಬಾಲಕರು ಅಲ್ಲಿಂದ ಓಡಿ ಹೋಗಿ ತಮ್ಮ ಸಂಬಂಧಿಕರಿಗೆ …

Read More »

ಮುಂಗಾರು ಆಗಮನಕ್ಕೆ ದಿನಗಣನೆ : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು-ನೈಋತ್ಯ ಮುಂಗಾರು ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಆರೇಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಮೇ 26 ಮತ್ತು 27ರಂದು ಯೆಲ್ಲೋ …

Read More »

ಬಾಂಗ್ಲಾ ವಲಸಿಗರು ಎಂಬ ಶಂಕೆ: ತನಿಖೆ ನಡೆಸಿ 20 ಜನರನ್ನು ಬಿಟ್ಟು ಕಳುಹಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ: ಬೆಳಗಾವಿ ನಗರದಲ್ಲಿ ಬಾಂಗ್ಲಾ ಅಕ್ರಮ ನಿವಾಸಿಗಳು ಬಂದಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು 20 ಜನರ ವಿಚಾರಣೆ ನಡೆಸಿದ್ದಾರೆ. ಹುಬ್ಬಳ್ಳಿಯ ಮಾರ್ಗವಾಗಿ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಾರೆ ಎಂಬ ಮಾಹಿತಿ ಮೇರೆಗೆ 20 ಜನರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ. ಕಾರ್ಮಿಕರು ತಾವು ಬಾಂಗ್ಲಾದೇಶದವರಲ್ಲ ಎಂದು ಸ್ಪಷ್ಟಪಡಿಸಿದ್ದು, ಭಾರತದ ಪಶ್ಚಿಮ ಬಂಗಾಳದ ನಿವಾಸಿಗಳಾಗಿದ್ದು ಇಲ್ಲಿನ ಶಹಾಪುರದಲ್ಲಿ ಚಿನ್ನದ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ. …

Read More »