Breaking News

Laxminews 24x7

ಭಾರತದ ವಿರುದ್ಧ ಪಾಕ್‌ ಪಂದ್ಯವಾಡಲ್ಲ: ಶೆಹಾಬಾಜ್ ಷರೀಫ್

ಇಸ್ಲಾಮಾಬಾದ್‌: ಭಾರತದ  ವಿರುದ್ಧ ಟಿ20 ವಿಶ್ವಕಪ್‌ ಕ್ರಿಕೆಟ್‌  ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶೆಹಾಬಾಜ್ ಷರೀಫ್ ಹೇಳಿದ್ದಾರೆ. ಕ್ಯಾಬಿನೆಟ್‌ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು; ಇದು ನಮ್ಮ ಸ್ಪಷ್ಟ ನಿಲುವು. ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಈ ನಿಲುವನ್ನು ತೆಗೆದುಕೊಂಡಿದ್ದೇವೆ. ನಾವು ಬಾಂಗ್ಲಾದೇಶದೊಂದಿಗೆ …

Read More »

ಕೇರಳದ ಮೆಡಿಕಲ್‌ ಕಾಲೇಜು ಬಳಿ ಸ್ಫೋಟಕ ತುಂಬಿದ‌ 100 ಕ್ಕೂ ಹೆಚ್ಚು ಬಾಕ್ಸ್‌ ವಶಕ್ಕೆ – ಬೆಚ್ಚಿಬಿದ್ದ ಜನ

ತಿರುವನಂತಪುರಂ: ಕೇರಳದ ಪಾಲಕ್ಕಾಡ್‌  ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯಕೀಯ ಕಾಲೇಜು ಬಳಿಯ ವ್ಯಾನ್‌ನಿಂದ ಜಿಲೆಟಿನ್‌ ಕಡ್ಡಿಗಳು  ಸೇರಿದಂತೆ ಸ್ಫೋಟಕ ತುಂಬಿದ 100ಕ್ಕೂ ಹೆಚ್ಚು ಬಾಕ್ಸ್‌ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಸ್ಫೋಟಕ ತಿಂಬಿದ ಪೆಟ್ಟಿಗೆಗಳನ್ನ ಪಿಕಪ್‌ ವಾಹನದಲ್ಲಿ ರಹಸ್ಯವಾಗಿ ಸಾಗಿಸಲಾಗುತ್ತಿತ್ತು. ಆದ್ರೆ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಸಿಕ್ಕಿಬಿದ್ದಿದ್ದು, ಇಡೀ ಕೇರಳದಾದ್ಯಂತ ಕಳವಳಕ್ಕೆ ಕಾರಣವಾಗಿದೆ. ಪಾಲಕ್ಕಾಡ್ ಟೌನ್ ಸೌತ್ ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ, ಪಾಲಕ್ಕಾಡ್ ವೈದ್ಯಕೀಯ ಕಾಲೇಜು  …

Read More »

ಸೈನಿಕರ ಅನುಕೂಲಕ್ಕೆ ಘಟಪ್ರಭಾದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ, ಕರಾವಳಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳಿಗೆ ಸೇರಿದ ನೂರಾರು ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸೈನಿಕರು ರಜೆ ಸಂದರ್ಭಗಳಲ್ಲಿ ತಮ್ಮ ಸ್ವಗ್ರಾಮಗಳಿಗೆ ಆಗಮಿಸಲು ಹಾಗೂ ಸೇವಾ ಸ್ಥಳಗಳಿಗೆ ಮರಳಲು ರೈಲು ಪ್ರಯಾಣವೇ ಪ್ರಮುಖ ಅವಲಂಬನೆಯಾಗಿದೆ. ಆದರೆ, ಈ ಭಾಗದ ಸೈನಿಕರಿಗೆ ಅನುಕೂಲವಾಗುವಂತೆ ಘಟಪ್ರಭಾ ರೈಲು ನಿಲ್ದಾಣದಲ್ಲಿ ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಇಲ್ಲದಿರುವುದು ದೀರ್ಘಕಾಲದ ಸಮಸ್ಯೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ, ರಾಜ್ಯಸಭಾ …

Read More »

2000 ಬೋಧಕ ಹುದ್ದೆ ಭರ್ತಿಗೆ ಅಸ್ತು : ನೇರ ನೇಮಕಾತಿ ಮೂಲಕ ಭರ್ತಿ

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್‌ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲನ ಬಜೆಟ್‌ನಲ್ಲಿ ಘೋಷಿಸಿರುವಂತೆ …

Read More »

ಕರ್ನಾಟಕ ರಾಜ್ಯಪಾಲರ ಸಹಿ ದುರ್ಬಳಕೆ, ಸುಳ್ಳು ನೇಮಕಾತಿ ಆದೇಶ!

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ಸಹಿ ನಕಲು ಮಾಡಿ ಖೊಟ್ಟಿ ಲೆಟರ್‌ಹೆಡ್‌ ಬಳಸುತ್ತಿದ್ದ ನಕಲಿ ಐಪಿಎಸ್‌, ಐಎಎಸ್‌ ಅಧಿಕಾರಿ ಎಚ್‌.ಎನ್‌. ಸುಜಯೇಂದ್ರ (45) ಎಂಬಾತನ ವಿರುದ್ಧ ವಿಜಯನಗರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್‌ ನೀಡಿದ ದೂರಿನನ್ವಯ ಸುಜಯೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ರಾಜ್ಯಪಾಲರ ಹೆಸರಿನ ಲೆಟರ್‌ಹೆಡ್‌ ಬಳಸಿರುವ ಸುಜಯೇಂದ್ರ, ರಾಜ್ಯಪಾಲರ ಸಹಿ ನಕಲು ಮಾಡಿ ವೆಲ್ಲೂರ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ …

Read More »

ಸ್ವ ಉದ್ಯೋಗ ಒದಗಿಸಲು ಒತ್ತು ನೀಡಿ

ಬೆಳಗಾವಿ: ಗ್ರಾಮೀಣ ಭಾಗದ ಸ್ವಸಹಾಯ ಸಂಘದ ಮಹಿಳೆಯರಿಗೆ ಸ್ವ ಉದ್ಯೋಗ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಅಲ್ಲದೆ, ಹೊಸ ಕಾರ್ಯಕ್ರಮ ರೂಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಏಳ್ಗೆಗೆ ನೆರವಾಗುವ ನಿಟ್ಟಿನಲ್ಲಿ ಕುಕ್ಕುಟ ಸಂಜೀವಿನಿ ಯೋಜನೆಯಡಿ ಸ್ವಸಹಾಯ ಸಂಘದ ಮಹಿಳೆಯರಿಂದ ಪ್ರತಿ ತಾಲೂಕಿಗೆ …

Read More »

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು

ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. …

Read More »

ಸಮುದಾಯದ ಹಿತಕ್ಕಾಗಿ ಲಿಂಗಾಯತ ಕಾಂಗ್ರೆಸ್ ಪಕ್ಷದ ಶಾಸಕರ ಸಭೆ: ಎಂ‌.ಬಿ.ಪಾಟೀಲ್

ಬೆಂಗಳೂರು: ಸಮುದಾಯದ ಹಿತಾಸಕ್ತಿ ರಕ್ಷಣೆಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವುದು ನಿಜ. ಇದರಲ್ಲಿ ನಾಯಕತ್ವದ ವಿಚಾರವಾಗಲಿ, ವೈಯಕ್ತಿಕ ಅಜೆಂಡಾಗಳಾಗಲಿ ಇರಲಿಲ್ಲ. ಎಲ್ಲಾ ಸಮುದಾಯಗಳ ಶಾಸಕರೂ ಹೀಗೆ ಆಗಿಂದಾಗ್ಗೆ ಸಭೆ ಸೇರುವುದು ಸರ್ವೇ ಸಾಮಾನ್ಯ ಎಂದು ಲಿಂಗಾಯತ ಸಮುದಾಯದ ಮುಖಂಡರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್  ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸೌಧದ ಆವರಣದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. …

Read More »

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ ನೀಡಿದರು. ಬೈಕ್​ಗಳಲ್ಲಿ ಬಂದಿದ್ದ ಸವಾರರಿಗೆ ಹೆಲ್ಮೆಟ್ ವಿತರಿಸಲು 16 ಕೌಂಟರ್ ಓಪನ್ …

Read More »

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

ಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ ಇದೆ. ಮೆಟ್ರೋ ದರ ಏರಿಕೆಗೆ ಸರ್ಕಾರ ಅನುಮೋದನೆ ನೀಡಿದೆ ಎನ್ನಲಾಗಿದೆ. ಬಿಎಂಆರ್‌ಸಿಎಲ್  ಬೋರ್ಡ್ ಮೀಟಿಂಗ್‌ನಲ್ಲಿ ಶೇ.5 ರಷ್ಟು ದರ ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ದರ ಏರಿಕೆ ಸಮಿತಿಯ ಶಿಫಾರಸ್ಸಿನಂತೆ ಪ್ರತಿ ವರ್ಷ ಫೆಬ್ರವರಿಯಲ್ಲಿ ದರ ಏರಿಕೆ ಮಾಡಬೇಕು. ಕಳೆದ ವರ್ಷ ಫೆಬ್ರವರಿ 9ರಂದು 100%ರಷ್ಟು ಟಿಕೆಟ್ ದರ ಏರಿಕೆ ಆಗಿತ್ತು. ಪ್ರಯಾಣಿಕರ …

Read More »